Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 5:7 - ಕನ್ನಡ ಸತ್ಯವೇದವು J.V. (BSI)

7 ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನೀವು ನನ್ನ ನಿಯಮಗಳನ್ನು ಅನುಸರಿಸದೆ ನನ್ನ ವಿಧಿಗಳನ್ನು ಕೈಕೊಳ್ಳದೆ ನಿಮ್ಮ ಸುತ್ತಲಿನ ಜನಾಂಗಗಳ ಧರ್ಮವಿಧಿಗಳನ್ನು ಆಚರಿಸದೆ ಆ ಜನಾಂಗಗಳಿಗಿಂತ ಹೆಚ್ಚು ದೊಂಬಿಮಾಡುವವರಾಗಿರುವದರಿಂದ [ಯೆರೂಸಲೇಮೇ,]

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನೀವು ನನ್ನ ನಿಯಮಗಳನ್ನು ಅನುಸರಿಸದೆ, ನನ್ನ ವಿಧಿಗಳನ್ನು ಕೈಕೊಳ್ಳದೆ, ನಿಮ್ಮ ಸುತ್ತಲಿನ ಜನಾಂಗಗಳ ಧರ್ಮವಿಧಿಗಳನ್ನು ಆಚರಿಸಿ, ಆ ಜನಾಂಗಗಳಿಗಿಂತ ಹೆಚ್ಚು ದಂಗೆಕೋರರಾಗಿ ವರ್ತಿಸಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಹೀಗಿರಲು ಸರ್ವೇಶ್ವರ ಸ್ವಾಮಿಯಾದ ನಾನು ಹೇಳುವುದಿದು: ‘ನೀವು ನನ್ನ ನಿಯಮಗಳನ್ನು ಅನುಸರಿಸದೆ, ನನ್ನ ವಿಧಿಗಳನ್ನು ಕೈಗೊಳ್ಳದೆ, ನಿಮ್ಮ ಸುತ್ತಲಿನ ಜನಾಂಗಗಳ ಧರ್ಮವಿಧಿಗಳನ್ನು ಆಚರಿಸಿ, ಆ ಜನಾಂಗಗಳಿಗಿಂತ ಹೆಚ್ಚು ದಂಗೆಕೋರರಾಗಿ ವರ್ತಿಸಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆದ್ದರಿಂದ ನನ್ನ ಒಡೆಯನಾದ ಯೆಹೋವನು ಹೇಳಿದ್ದೇನೆಂದರೆ: “ನೀವು ಸುತ್ತಲಿರುವ ಜನಾಂಗಗಳಿಗಿಂತ ಹೆಚ್ಚು ಕೆಡುಕನ್ನು ಮಾಡಿದ್ದೀರಿ. ನೀವು ನನ್ನ ಆಜ್ಞೆಗಳಿಗೆ ವಿಧೇಯರಾಗಲಿಲ್ಲ; ನನ್ನ ಕಟ್ಟಳೆಗಳನ್ನು ಅನುಸರಿಸಲಿಲ್ಲ. ನಿಮ್ಮ ಸುತ್ತಲಿರುವ ಜನಾಂಗಗಳ ನಿಯಮಗಳನ್ನೂ ಅನುಸರಿಸಲಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 “ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನೀವು ನಿಮ್ಮ ಸುತ್ತಲಿರುವ ಜನಾಂಗಗಳಿಗಿಂತ ಅಧಿಕವಾದುದರಿಂದ ನನ್ನ ನಿಯಮಗಳಲ್ಲಿ ನಡೆಯದೇ ಹೋದದ್ದರಿಂದಲೂ, ನನ್ನ ನ್ಯಾಯಗಳನ್ನು ಪಾಲಿಸದೇ ಇದ್ದುದರಿಂದಲೂ, ನಿಮ್ಮ ಸುತ್ತಲಿರುವ ಜನಾಂಗಗಳ ನ್ಯಾಯಗಳ ಪ್ರಕಾರ ಮಾಡಿದ್ದರಿಂದಲೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 5:7
6 ತಿಳಿವುಗಳ ಹೋಲಿಕೆ  

ಆದರೆ ಯೆಹೂದ್ಯರೂ ಯೆರೂಸಲೇವಿುನವರೂ ಮನಸ್ಸೆಯಿಂದ ಪ್ರೇರಿತರಾಗಿ ಇಸ್ರಾಯೇಲ್ಯರ ಮುಂದೆಯೇ ಯೆಹೋವನಿಂದ ನಾಶಹೊಂದಿದ ಅನ್ಯಜನಾಂಗಗಳಿಗಿಂತಲೂ ದುಷ್ಟರಾದರು.


ಹೀಗಿರಲು ನೀನು ನಿನ್ನ ಲೆಕ್ಕವಿಲ್ಲದ ದುಷ್ಕೃತ್ಯಗಳ ಮೂಲಕ ಅವರನ್ನು ಸಂತೈಸಿದ್ದರಿಂದ ಲಜ್ಜೆಪಡುವಿ, ನಾಚಿಕೆಗೊಳ್ಳುವಿ.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನನ್ನ ಜೀವದಾಣೆ, ನೀನು ನಿನ್ನ ಹೇರಳವಾದ ಹೇಯ ವಿಗ್ರಹಗಳಿಂದಲೂ ಅಸಹ್ಯವಸ್ತುಗಳಿಂದಲೂ ನನ್ನ ಪವಿತ್ರಾಲಯವನ್ನು ಹೊಲಸು ಮಾಡಿದ್ದರಿಂದ ಖಂಡಿತವಾಗಿ ನಾನು ಸಹಿಸೆನು, ಕಟಾಕ್ಷಿಸೆನು, ಕ್ಷವಿುಸೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು