ಯೆಹೆಜ್ಕೇಲನು 6:3 - ಕನ್ನಡ ಸತ್ಯವೇದವು J.V. (BSI)3 ಇಸ್ರಾಯೇಲಿನ ಬೆಟ್ಟಗಳೇ, ಕರ್ತನಾದ ಯೆಹೋವನ ಈ ಮಾತನ್ನು ಕೇಳಿರಿ - ಕರ್ತನಾದ ಯೆಹೋವನು ಬೆಟ್ಟಗುಡ್ಡಗಳಿಗೂ ತೊರೆ ತಗ್ಗುಗಳಿಗೂ ಹೀಗೆ ಹೇಳುತ್ತಾನೆ - ಇಗೋ, ನಾನೇ ನಿಮ್ಮ ಮೇಲೆ ಖಡ್ಗವನ್ನು ಬರಮಾಡಿ ನಿಮ್ಮ ಪೂಜಾಸ್ಥಳಗಳನ್ನು ನಾಶಪಡಿಸುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ‘ಇಸ್ರಾಯೇಲಿನ ಬೆಟ್ಟಗಳೇ, ಕರ್ತನಾದ ಯೆಹೋವನ ಈ ಮಾತನ್ನು ಕೇಳಿರಿ; ಕರ್ತನಾದ ಯೆಹೋವನು ಬೆಟ್ಟಗುಡ್ಡಗಳಿಗೂ, ತೊರೆತಗ್ಗುಗಳಿಗೂ ಹೀಗೆ ಹೇಳುತ್ತಾನೆ: ಇಗೋ, ನಾನೇ ನಿಮ್ಮ ಮೇಲೆ ಖಡ್ಗವನ್ನು ಬರಮಾಡಿ ನಿಮ್ಮ ಪೂಜಾಸ್ಥಳಗಳನ್ನು ನಾಶಪಡಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ‘ಇಸ್ರಯೇಲಿನ ಬೆಟ್ಟಗಳೇ, ಸರ್ವೇಶ್ವರನಾದ ದೇವರ ಈ ಮಾತನ್ನು ಕೇಳಿರಿ; ಸರ್ವೇಶ್ವರನಾದ ದೇವರು ಬೆಟ್ಟಗುಡ್ಡಗಳಿಗೂ ತೊರೆತಗ್ಗುಗಳಿಗೂ ಹೀಗೆ ಹೇಳುತ್ತಾರೆ: ಇಗೋ, ನಾನೇ ನಿಮ್ಮ ಮೇಲೆ ಖಡ್ಗವನ್ನು ಬರಮಾಡಿ ನಿಮ್ಮ ಪೂಜಾಸ್ಥಳಗಳನ್ನು ನಾಶಪಡಿಸುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ‘ಇಸ್ರೇಲಿನ ಪರ್ವತಗಳೇ, ನನ್ನ ಒಡೆಯನಾದ ಯೆಹೋವನ ಸಂದೇಶಕ್ಕೆ ಕಿವಿಗೊಡಿರಿ. ಬೆಟ್ಟಗಳಿಗೂ ಪರ್ವತಗಳಿಗೂ ಕೊರಕಲುಗಳಿಗೂ ಕಣಿವೆಗಳಿಗೂ ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ, ನಾನು ವೈರಿಯನ್ನು ನಿಮ್ಮ ವಿರುದ್ಧ ಯುದ್ಧ ಮಾಡಲು ಕಳುಹಿಸುವೆನು. ನಿಮ್ಮ ಎಲ್ಲಾ ಉನ್ನತ ಸ್ಥಳಗಳನ್ನು ನಾಶಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ‘ಇಸ್ರಾಯೇಲಿನ ಪರ್ವತಗಳೇ, ಸಾರ್ವಭೌಮ ಯೆಹೋವ ದೇವರ ವಾಕ್ಯವನ್ನು ಕೇಳಿರಿ. ಹೌದು, ಸಾರ್ವಭೌಮ ಯೆಹೋವ ದೇವರು ಪರ್ವತಗಳಿಗೂ ಗುಡ್ಡಗಳಿಗೂ ನದಿಗಳಿಗೂ ಕಣಿವೆಗಳಿಗೂ ಹೀಗೆ ಹೇಳುತ್ತಾರೆ, ನಾನೇ ನಿಮ್ಮ ಮೇಲೆ ಖಡ್ಗವನ್ನು ಹಿಡಿದು, ನಿಮ್ಮ ಪೂಜಾಸ್ಥಳಗಳನ್ನು ನಾಶಮಾಡುತ್ತೇನೆ. ಅಧ್ಯಾಯವನ್ನು ನೋಡಿ |