Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 6:7 - ಕನ್ನಡ ಸತ್ಯವೇದವು J.V. (BSI)

7 ಹತರಾದವರು ನಿಮ್ಮ ಮಧ್ಯದಲ್ಲಿ ಬೀಳುವರು; ಆಗ ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನೀವು ರೂಪಿಸಿದ ವಿಗ್ರಹಗಳು ಅಳಿದುಹೋಗುವುವು; ಹತರಾದವರು ನಿಮ್ಮ ಮಧ್ಯದಲ್ಲಿ ಬೀಳುವರು; ಆಗ ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಹತರಾದವರು ನಿಮ್ಮ ಮಧ್ಯದಲ್ಲಿ ಬೀಳುವರು; ಆಗ ನಾನೇ ಸರ್ವೇಶ್ವರ ಎಂದು ನಿಮಗೆ ಗೊತ್ತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಜನರು ನಿಮ್ಮ ಮಧ್ಯದಲ್ಲಿ ಕೊಲ್ಲಲ್ಪಟ್ಟು ಬೀಳುವರು. ಆಗ ನೀನು, ನಾನು ಯೆಹೋವನೆಂದು ತಿಳಿಯುವಿ.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಹತರಾದವರು ನಿಮ್ಮ ಮಧ್ಯದಲ್ಲಿ ಬೀಳುವರು. ಆಗ ನೀವು ನಾನೇ ಯೆಹೋವ ದೇವರೆಂದು ತಿಳಿಯುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 6:7
43 ತಿಳಿವುಗಳ ಹೋಲಿಕೆ  

ಹೀಗೆ ನಾನು ನನ್ನ ಮಹಿಮೆಯನ್ನು ತೋರ್ಪಡಿಸಿ ನನ್ನ ಗೌರವವನ್ನು ಕಾಪಾಡಿಕೊಂಡು ಬಹುಜನಾಂಗಳು ನಾನೇ ಯೆಹೋವನು ಎಂದು ತಿಳಿದುಕೊಳ್ಳುವಂತೆ ಅವುಗಳ ಕಣ್ಣೆದುರಿಗೆ ವ್ಯಕ್ತನಾಗುವೆನು.


ಇಸ್ರಾಯೇಲ್ಯರ ಸ್ವಾಸ್ತ್ಯದ ನಾಶನಕ್ಕೆ ನೀನು ಹೇಗೆ ಸಂತೋಷಪಟ್ಟಿಯೋ ಹಾಗೆಯೇ ನಿನ್ನ ನಾಶನಕ್ಕೆ ಲೋಕವೆಲ್ಲಾ ಸಂತೋಷಪಡುವಂತೆ ಮಾಡುವೆನು; ಸೇಯೀರ್ ಬೆಟ್ಟವೇ, ನೀನು ಹಾಳಾಗುವಿ; ಹೌದು, ಎದೋಮ್ ಸೀಮೆಯೆಲ್ಲಾ ತೀರಾ ಹಾಳಾಗುವದು; ಆಗ ನಾನೇ ಯೆಹೋವನು ಎಂದು ವ್ಯಕ್ತವಾಗುವದು.


ನಾನು ಐಗುಪ್ತ್ಯರನ್ನು ಜನಾಂಗಗಳಲ್ಲಿ ಚದರಿಸಿ ದೇಶದೇಶಗಳಿಗೆ ತೂರಿಬಿಡುವಾಗ ನಾನೇ ಯೆಹೋವನು ಎಂದು ಅವರಿಗೆ ತಿಳಿದುಬರುವದು.


ನಾನು ಅದರಲ್ಲಿ ವ್ಯಾಧಿಯನ್ನೂ ಅದರ ಚೌಕಗಳಲ್ಲಿ ಸಂಹಾರವನ್ನೂ ಉಂಟುಮಾಡುವೆನು; ಖಡ್ಗವು ಸುತ್ತುಮುತ್ತಲು ಅದರ ಮೇಲೆ ಬೀಸುತ್ತಿರಲು ಪ್ರಜೆಗಳು ಅದರ ನಡುವೆ ಹತರಾಗಿ ಬೀಳುವರು; ಆಗ ನಾನೇ ಯೆಹೋವನು ಎಂದು ಅವರಿಗೆ ತಿಳಿದುಬರುವದು.


ಬೈಲುಭೂವಿುಯಲ್ಲಿನ ಅದರ ಕುಮಾರ್ತೆಯರು ಖಡ್ಗದಿಂದ ಹತರಾಗುವರು; ನಾನೇ ಯೆಹೋವನು ಎಂದು ಎಲ್ಲರಿಗೂ ಗೊತ್ತಾಗುವದು.


ಅವರೆಲ್ಲರನ್ನು ಬಲವಾಗಿ ಖಂಡಿಸಿ ಮುಯ್ಯಿಗೆ ಮುಯ್ಯಿತೀರಿಸುವೆನು; ಹೀಗೆ ಪ್ರತೀಕಾರಮಾಡಲು ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವದು.


ಆ ದಿನದಲ್ಲಿ ತಪ್ಪಿಸಿಕೊಂಡವನಿಗಾಗಿ ನೀನು ಬಾಯಿಬಿಡುವಿ, ನಿನ್ನ ಮೂಕತನವನ್ನು ಕಳಕೊಂಡು ಮಾತಾಡುವಿ; ಹೀಗೆ ನೀನು ಅವರಿಗೆ ಗುರುತಾಗಲು ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವದು.


[ಯೆಹೋವನ ಈ ಮಾತನ್ನು ಕೇಳಿರಿ -] ಈ ವಿಷಯದಲ್ಲಿ ಯೆಹೆಜ್ಕೇಲನು ನಿಮಗೆ ಮುಂಗುರುತಾಗಿರುವನು, ಅವನು ಮಾಡಿದಂತೆಯೇ ಎಲ್ಲವನ್ನು ಮಾಡುವಿರಿ; ಇದು ಸಂಭವಿಸುವಾಗ ನಾನೇ ಕರ್ತನಾದ ಯೆಹೋವನು ಎಂದು ನಿಮಗೆ ಗೊತ್ತಾಗುವದು.


ನಿಮ್ಮ ಬೊಂಬೆಗಳಿಂದಾದ ನಿಮ್ಮ ಪಾಪವನ್ನು ನೀವು ಅನುಭವಿಸಿ ನಾನೇ ಕರ್ತನಾದ ಯೆಹೋವನು ಎಂದು ತಿಳಿದುಕೊಳ್ಳುವಿರಿ.


ಇಸ್ರಾಯೇಲ್ ವಂಶದವರೇ, ನಿಮ್ಮ ದುರ್ನಡತೆಗೂ ದುಷ್ಕೃತ್ಯಗಳಿಗೂ ತಕ್ಕ ಹಾಗೆ ನಾನು ನಿಮ್ಮನ್ನು ದಂಡಿಸದೆ ನನ್ನ ಹೆಸರಿನ ನಿವಿುತ್ತವೇ ನಾನು ನಿಮ್ಮನ್ನು ಸಹಿಸಿಕೊಂಡಿರುವಾಗ ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವದು; ಇದು ಕರ್ತನಾದ ಯೆಹೋವನ ನುಡಿ.


ನಾನು ಪ್ರಮಾಣಮಾಡಿ ನಿಮ್ಮ ಪಿತೃಗಳಿಗೆ ಯಾವ ದೇಶವನ್ನು ಕೊಟ್ಟೆನೋ ಆ ಇಸ್ರಾಯೇಲ್ ದೇಶಕ್ಕೆ ನಿಮ್ಮನ್ನು ಬರಮಾಡುವಾಗ ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವದು.


ದ್ರೋಹಿಗಳಾದವರನ್ನು ನಿಮ್ಮೊಳಗಿಂದ ಗುಡಿಸಿಬಿಡುವೆನು; ಅವರು ಪ್ರವಾಸಿಗಳಾಗಿದ್ದ ದೇಶದಿಂದ ನಾನು ಅವರನ್ನು ಪಾರುಮಾಡಿದರೂ ಅವರು ಇಸ್ರಾಯೇಲ್ ದೇಶಕ್ಕೆ ಸೇರುವದೇ ಇಲ್ಲ ; ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವದು.


ಅವರ ಮೇಲೆ ಕೋಪದೃಷ್ಟಿಯನ್ನಿಡುವೆನು; ಅವರು ಬೆಂಕಿಯೊಳಗಿಂದ ತಪ್ಪಿಸಿಕೊಂಡರೂ ಬೆಂಕಿಯು ಅವರನ್ನು ನುಂಗಿಬಿಡುವದು; ನಾನು ಅವರ ಮೇಲೆ ಕೋಪದೃಷ್ಟಿಯನ್ನಿಡುವಾಗ ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವದು.


ಅವನ ಮೇಲೆ ಉಗ್ರಕೋಪಗೊಂಡು ಅವನ ಗತಿಯನ್ನು ಬೆರಗಿಗೂ ಎಚ್ಚರಿಕೆಯ ಮಾತುಗಳಿಗೂ ಕಟ್ಟುಗಾದೆಗಳಿಗೂ ಈಡುಮಾಡಿ ಅವನನ್ನು ನನ್ನ ಜನರೊಳಗಿಂದ ಕಿತ್ತುಹಾಕುವೆನು; ಹೀಗೆ ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವದು.


ನೀವು ವಿುಥ್ಯಾದರ್ಶನವನ್ನು ಹೊಂದಿ ಕಣಿಹೇಳುವ ಕೆಲಸವು ಇನ್ನು ನಡಿಯುವದೇ ಇಲ್ಲ; ನನ್ನ ಜನರನ್ನು ನಿಮ್ಮ ಕೈಯೊಳಗಿಂದ ತಪ್ಪಿಸುವೆನು; ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವದು.


ನಾನು ನಿಮ್ಮ ಮುಸುಕುಗಳನ್ನೂ ಹರಿದು ನನ್ನ ಜನರನ್ನು ನಿಮ್ಮ ಕೈಯೊಳಗಿಂದ ತಪ್ಪಿಸುವೆನು; ಅವರು ಇನ್ನು ಮೇಲೆ ನಿಮ್ಮ ಕೈಗೆ ಬೇಟೆಯಾಗಿ ಸಿಕ್ಕುವದಿಲ್ಲ; ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವದು.


ನೀವು ಸುಣ್ಣ ಬಳಿದ ಗೋಡೆಯನ್ನು ನಾನು ಹೀಗೆ ಕೆಡವಿ ನೆಲಸಮಮಾಡಿ ಅದರ ಅಸ್ತಿವಾರವನ್ನು ಬೈಲುಪಡಿಸುವೆನು; ಅದು ಬಿದ್ದು ಹೋಗುವದು, ಮತ್ತು ನೀವು ಅದರೊಳಗೆ ಸಿಕ್ಕಿಕೊಂಡು ನಾಶವಾಗುವಿರಿ; ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವದು.


ವಿುಥ್ಯಾದರ್ಶನ ಹೊಂದಿ ಸುಳ್ಳು ಕಣಿ ಹೇಳುವ ಪ್ರವಾದಿಗಳ ಮೇಲೆ ನಾನು ಕೈ ಮಾಡುವೆನು; ಅವರು ನನ್ನ ಜನರ ಹಿರೀ ಸಭೆಯಲ್ಲಿ ಸೇರಕೂಡದು, ಇಸ್ರಾಯೇಲ್ ವಂಶದವರ ಪಟ್ಟಿಯಲ್ಲಿ ಅವರ ಹೆಸರುಗಳು ಲಿಖಿತವಾಗವು, ಅವರು ಇಸ್ರಾಯೇಲ್ ದೇಶದಲ್ಲಿ ಪ್ರವೇಶಿಸಲೂಬಾರದು; ನಾನೇ ಕರ್ತನಾದ ಯೆಹೋವನು ಎಂದು ನಿಮಗೆ ಗೊತ್ತಾಗುವದು.


ನಾನು ಅವರನ್ನು ಜನಾಂಗಗಳೊಳಗೆ ಚದರಿಸಿಬಿಟ್ಟು ಅನ್ಯದೇಶಗಳಲ್ಲಿ ಚಲ್ಲಾಪಿಲ್ಲಿಮಾಡುವಾಗ ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವದು.


ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವದು; ನೀವು ನನ್ನ ವಿಧಿಗಳನ್ನು ಕೈಕೊಳ್ಳದೆ ನನ್ನ ನಿಯಮಗಳನ್ನು ಅನುಸರಿಸದೆ ನಿಮ್ಮ ಸುತ್ತಲಿನ ಜನಾಂಗಗಳ ಆಚಾರಗಳನ್ನೇ ಅನುಸರಿಸಿದ್ದರಿಂದ ಇದೆಲ್ಲಾ ಆಗುವದು.


ಇಸ್ರಾಯೇಲಿನ ಮೇರೆಯಲ್ಲಿ ನಿಮಗೆ ದಂಡನೆಯನ್ನು ವಿಧಿಸುವೆನು, ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವದು.


ಆತನು ಅವರಿಗೆ - ಹೊರಡಿರಿ, ಪ್ರಾಕಾರಗಳನ್ನು ಶವಗಳಿಂದ ತುಂಬಿಸಿ ದೇವಾಲಯವನ್ನು ಹೊಲೆಗೆಡಿಸಿರಿ ಎಂದು ಅಪ್ಪಣೆಕೊಡಲು ಅವರು ಹೊರಟು ಪಟ್ಟಣದಲ್ಲಿದ್ದವರನ್ನು ಹತಿಸಿದರು.


ನಿನ್ನನ್ನು ಕಟಾಕ್ಷಿಸೆನು, ಉಳಿಸೆನು, ನಿನ್ನ ದುರ್ಮಾರ್ಗಗಳಿಗೆ ತಕ್ಕ ಗತಿಯನ್ನು ಕೊಡುವೆನು, ನಿನ್ನ ಅಸಹ್ಯ ಕಾರ್ಯಗಳು ನಿನ್ನ ಅನುಭವಕ್ಕೆ ಬರುವವು; ಯೆಹೋವನಾದ ನಾನು ದಂಡಿಸುವವನು ಎಂಬದು ನಿನಗೆ ಗೊತ್ತೇ ಆಗುವದು.


ನಿನ್ನನ್ನು ಕಟಾಕ್ಷಿಸೆನು, ಉಳಿಸೆನು; ನಿನ್ನ ದುರ್ಮಾರ್ಗಗಳ ಫಲವನ್ನು ನಿನಗೆ ತಿನ್ನಿಸುವೆನು; ನಿನ್ನ ಅಸಹ್ಯ ಕಾರ್ಯಗಳು ನಿನ್ನ ಅನುಭವಕ್ಕೆ ಬರುವವು; ಆಗ ನಾನೇ ಯೆಹೋವನು ಎಂದು ನಿನಗೆ ಗೊತ್ತಾಗುವದು.


ಆ ವಂಶದವರು ಎತ್ತರವಾದ ಎಲ್ಲಾ ಗುಡ್ಡಗಳ ಮೇಲೂ ಎಲ್ಲಾ ಬೆಟ್ಟಗಳ ತುದಿಗಳಲ್ಲಿಯೂ ಸೊಂಪಾದ ಎಲ್ಲಾ ಮರಗಳ ಕೆಳಗೂ ತಮ್ಮ ಸಮಸ್ತ ವಿಗ್ರಹಗಳಿಗೆ ಸುಗಂಧಹೋಮಮಾಡುತ್ತಿದ್ದ ದಟ್ಟವಾದ ಎಲ್ಲಾ ಏಲಾ ಮರಗಳ ಕೆಳಗೂ ಹತರಾಗಿ ತಮ್ಮ ಯಜ್ಞವೇದಿಗಳ ಸುತ್ತಲು ತಮ್ಮ ಬೊಂಬೆಗಳ ನಡುವೆ ಬಿದ್ದಿರುವಾಗ ನಾನೇ ಯೆಹೋವನು ಎಂದು ಗೊತ್ತಾಗುವದು.


ಹಸಿವೆಯಿಂದ ಹತರಾದವರ ಗತಿಗಿಂತಲೂ ಖಡ್ಗದಿಂದ ಹತರಾದವರ ಗತಿಯೇ ಲೇಸು; ಭೂಫಲಗಳಿಲ್ಲದೆ ಕ್ಷಾಮದ ಪೆಟ್ಟನ್ನು ತಿಂದವರು ಕ್ಷಯಿಸುತ್ತಾ ಬರುತ್ತಾರಲ್ಲಾ.


ಆ ದಿನದಲ್ಲಿ ಯೆಹೋವನಿಂದ ಹತರಾದವರು ಲೋಕದ ಒಂದು ಕಡೆಯಿಂದ ಇನ್ನೊಂದು ಕಡೆಯವರೆಗೂ ಬಿದ್ದಿರುವರು; ಅವರಿಗಾಗಿ ಯಾರೂ ಗೋಳಾಡರು, ಅವರನ್ನು ಯಾರೂ ಒಟ್ಟುಗೂಡಿಸರು, ಯಾರೂ ಹೂಣಿಡರು, ಭೂವಿುಯ ಮೇಲೆ ಗೊಬ್ಬರವಾಗುವರು.


ಆದಕಾರಣ ಅವರ ಮಕ್ಕಳನ್ನು ಕ್ಷಾಮಕ್ಕೆ ಗುರಿಮಾಡಿ ಕತ್ತಿಯ ಬಾಯಿಗೆ ಒಪ್ಪಿಸು; ಅವರ ಹೆಂಡಿರು ಮಕ್ಕಳನ್ನು ನೀಗಿಕೊಂಡು ವಿಧವೆಯರಾಗಲಿ; ಮೃತ್ಯುವು ಅವರ ಗಂಡಂದಿರನ್ನು ಸಂಹರಿಸಲಿ;


ನಾನು ಊರಹೊರಗೆ ಹೋದರೆ ಇಗೋ, ಖಡ್ಗದಿಂದ ಹತರಾದವರು; ಊರೊಳಗೆ ಬಂದರೆ ಇಗೋ, ಕ್ಷಾಮದಿಂದ ಕೊರಗುವವರು! ಪ್ರವಾದಿಗಳೂ ಯಾಜಕರೂ ತಮಗೆ ಗೊತ್ತಿಲ್ಲದ ದೇಶಕ್ಕೆ ಗಡೀಪಾರಾಗಿದ್ದಾರೆ.


ಯೆಹೋವನೇ, ನಮ್ಮ ದೇವರೇ, ನೀನೊಬ್ಬನೇ ದೇವರೆಂಬದನ್ನು ಭೂರಾಜ್ಯಗಳೆಲ್ಲವೂ ತಿಳಿದುಕೊಳ್ಳುವಂತೆ ನಮ್ಮನ್ನು ಇವನ ಕೈಯಿಂದ ಬಿಡಿಸು ಎಂದು ಪ್ರಾರ್ಥಿಸಿದನು.


ನಾನು ಫರೋಹನಲ್ಲಿಯೂ ಅವನ ರಥಗಳಲ್ಲಿಯೂ ಕುದುರೆಗಳಲ್ಲಿಯೂ ಪ್ರಖ್ಯಾತಿಹೊಂದಿದ ನಂತರ ನಾನು ಯೆಹೋವನು ಎಂಬದನ್ನು ಐಗುಪ್ತ್ಯರು ತಿಳುಕೊಳ್ಳುವರು ಅಂದನು.


ನಾನು ಫರೋಹನ ಹೃದಯವನ್ನು ಕಠಿಣಪಡಿಸುವೆನಾದದರಿಂದ ಅವನು ಅವರನ್ನು ಬೆನ್ನಟ್ಟಿ ಬರುವನು; ಆಗ ನಾನು ಫರೋಹನಲ್ಲಿಯೂ ಅವನ ಸೈನ್ಯದಲ್ಲಿಯೂ ಪ್ರಖ್ಯಾತಿಗೊಳ್ಳುವೆನು. ನಾನೇ ಯೆಹೋವನೆಂಬದು ಐಗುಪ್ತ್ಯರಿಗೆ ತಿಳಿದುಬರುವದು ಎಂದು ಹೇಳಿದನು. ಯೆಹೋವನು ಆಜ್ಞಾಪಿಸಿದಂತೆಯೇ ಇಸ್ರಾಯೇಲ್ಯರು ನಡೆದರು.


ನಾನು ಐಗುಪ್ತ್ಯರಿಗೆ ವಿರೋಧವಾಗಿ ಕೈಚಾಚಿ ಅವರ ಮಧ್ಯದಿಂದ ಇಸ್ರಾಯೇಲ್ಯರನ್ನು ಹೊರತಂದಾಗ ನಾನು ಯೆಹೋವನೆಂಬದನ್ನು ಐಗುಪ್ತ್ಯರು ತಿಳಿದುಕೊಳ್ಳುವರು ಅಂದನು.


ನೀವು ವಾಸಿಸುವ ದೇಶದಲ್ಲೆಲ್ಲಾ ಊರುಗಳು ಹಾಳಾಗುವದರಿಂದಲೂ ಪೂಜಾಸ್ಥಳಗಳು ಪಾಳು ಬೀಳುವದರಿಂದಲೂ ನಿಮ್ಮ ಯಜ್ಞವೇದಿಗಳು ಹಾಳುಪಾಳಾಗುವವು, ನಿಮ್ಮ ಬೊಂಬೆಗಳು ಒಡೆಯಲ್ಪಟ್ಟು ಇಲ್ಲವಾಗುವವು, ನಿಮ್ಮಸೂರ್ಯಸ್ತಂಭಗಳು ಕಡಿಯಲ್ಪಡುವವು, ನೀವು ರೂಪಿಸಿದ ವಿಗ್ರಹಗಳು ಅಳಿದುಹೋಗುವವು,


ಆದರೂ ನಾನು ಜನಶೇಷವನ್ನು ಉಳಿಸುವೆನು; ಹೇಗಂದರೆ ನೀವು ಅನ್ಯದೇಶಗಳಿಗೆ ಚದರಿಹೋಗುವಾಗ ನಿಮ್ಮಲ್ಲಿ ಕೆಲವರು ಆ ಜನಾಂಗಗಳ ಮಧ್ಯೆ ಕತ್ತಿಗೆ ತಪ್ಪಿಸಿಕೊಳ್ಳುವರು.


ಈ ದೇಶದಲ್ಲಿರುವ ಜನರಿಗೆ ಹೀಗೆ ಹೇಳು - ಕರ್ತನಾದ ಯೆಹೋವನು ಇಸ್ರಾಯೇಲ್ ದೇಶದ ಯೆರೂಸಲೇವಿುನ ನಿವಾಸಿಗಳ ವಿಷಯವಾಗಿ ಇಂತೆನ್ನುತ್ತಾನೆ - ಅವರು ಅನ್ನವನ್ನು ಬೆದರಿನಿಂದ ತಿಂದು ನೀರನ್ನು ಬೆರಗಿನಿಂದ ಕುಡಿಯುವರು; ಏಕಂದರೆ ಆ ದೇಶದವರೆಲ್ಲರು ಬಲಾತ್ಕಾರಿಗಳಾಗಿರುವದರಿಂದ ಅಲ್ಲಿನ ಸೊತ್ತೆಲ್ಲಾ ಸೂರೆಯಾಗಿ ದೇಶವು ಬರಿದಾಗುವದು.


ಅವರು ತಮ್ಮ ಚೊಚ್ಚಲು ಮಕ್ಕಳನ್ನು ಆಹುತಿಕೊಟ್ಟು ಅರ್ಪಿಸುತ್ತಿದ್ದ ಬಲಿಗಳಿಂದಲೇ ಅವರನ್ನು ಹೊಲೆಗೆಡಿಸಿ ಕೇವಲ ದುರವಸ್ಥೆಗೆ ತಂದೆನು.


ಜನಾಂಗಗಳ ಕಣ್ಣೆದುರಿಗೆ ನಿನ್ನಷ್ಟಕ್ಕೆ ನೀನೇ ಅಪಕೀರ್ತಿಗೆ ಗುರಿಯಾಗುವಿ; ನಾನೇ ಯೆಹೋವನು ಎಂದು ನಿನಗೆ ಗೊತ್ತಾಗುವದು.


ಐಗುಪ್ತದಲ್ಲಿ ತುಂಬಿದ್ದ ಸೊತ್ತನ್ನೆಲ್ಲಾ ನಾನು ನೀಗಿಸಿ ಆ ದೇಶವನ್ನು ಹಾಳುಪಾಳುಮಾಡಿ ಅಲ್ಲಿನ ಸಕಲ ನಿವಾಸಿಗಳನ್ನು ಸಂಹರಿಸಿದಾಗ ನಾನೇ ಯೆಹೋವನು ಎಂದು ಗೊತ್ತಾಗುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು