Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 6:9 - ಕನ್ನಡ ಸತ್ಯವೇದವು J.V. (BSI)

9 ಆಗ ತಪ್ಪಿಸಿಕೊಂಡು ಸೆರೆಗೆ ಒಯ್ಯಲ್ಪಟ್ಟು ಜನಾಂಗಗಳ ಮಧ್ಯೆ ವಾಸಿಸುವ ನಿಮ್ಮವರು ಅನ್ಯದೇವತೆಗಳಲ್ಲಿನ ಮೋಹದಿಂದ ನನ್ನನ್ನು ತೊರೆದ ತಮ್ಮ ಹೃದಯವನ್ನೂ ತಮ್ಮ ಬೊಂಬೆಗಳ ಮೇಲಣ ಕಾಮದಿಂದ ದೇವದ್ರೋಹಮಾಡಿದ ತಮ್ಮ ಕಣ್ಣುಗಳನ್ನೂ ಭಂಗಪಡಿಸಿದವನು ನಾನೇ ಎಂಬದಾಗಿ ನನ್ನನ್ನು ಜ್ಞಾಪಕಮಾಡಿಕೊಂಡು ತಾವು ಬಹಳ ಅಸಹ್ಯಕಾರ್ಯಗಳನ್ನು ನಡಿಸಿ ಕೆಟ್ಟತನವನ್ನು ಮಾಡಿದ್ದೇವೆಂದು ತಮ್ಮನ್ನು ತಾವೇ ಹೇಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಹೀಗೆ ತಪ್ಪಿಸಿಕೊಂಡು ಸೆರೆಗೆ ಒಯ್ಯಲ್ಪಟ್ಟು ಜನಾಂಗಗಳ ಮಧ್ಯೆ ವಾಸಿಸುವ ನಿಮ್ಮವರು ನನ್ನನ್ನು ಸ್ಮರಿಸಿಕೊಳ್ಳುವರು. ನಿಮ್ಮವರು ಅನ್ಯದೇವತೆಗಳಲ್ಲಿನ ಮೋಹದಿಂದ ನನ್ನನ್ನು ತೊರೆದು ತಮ್ಮ ಹೃದಯವನ್ನೂ, ತಮ್ಮ ವಿಗ್ರಹಗಳ ಮೇಲಣ ಕಾಮದಿಂದ ದೇವದ್ರೋಹಮಾಡಿದ ತಮ್ಮ ಕಣ್ಣುಗಳನ್ನೂ ಭಂಗಪಡಿಸಿದವನು ನಾನೇ ಎಂಬುದಾಗಿ ನನ್ನನ್ನು ಜ್ಞಾಪಕಮಾಡಿಕೊಂಡು, ತಾವು ಬಹಳ ಅಸಹ್ಯಕಾರ್ಯಗಳನ್ನು ನಡೆಸಿ ಕೆಟ್ಟತನವನ್ನು ಮಾಡಿದ್ದೇವೆಂದು ತಮ್ಮ ಬಗ್ಗೆ ತಾವೇ ಅಸಹ್ಯಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಹೀಗೆ ಅಳಿದುಳಿದು ಸೆರೆಗೆ ಒಯ್ಯಲ್ಪಟ್ಟು ಜನಾಂಗಗಳ ಮಧ್ಯೆ ವಾಸಿಸುವ ನಿಮ್ಮವರು ನನ್ನನ್ನು ಸ್ಮರಿಸಿಕೊಳ್ಳುವರು. ಅನ್ಯದೇವತೆಗಳಲ್ಲಿನ ಮೋಹದಿಂದ ನನ್ನನ್ನು ತೊರೆದು ತಮ್ಮ ಹೃದಯವನ್ನು ಹಾಗು ತಮ್ಮ ವಿಗ್ರಹಗಳ ಮೇಲಣ ಕಾಮದಿಂದ ದೇವದ್ರೋಹ ಮಾಡಿದ ತಮ್ಮ ಕಣ್ಣುಗಳನ್ನು ಭಂಗಪಡಿಸಿದವನು ನಾನೇ ಎಂಬುದಾಗಿ ನನ್ನನ್ನು ಜ್ಞಾಪಕಮಾಡಿಕೊಳ್ಳುವರು. ತಾವು ಬಹಳ ಅಸಹ್ಯಕಾರ್ಯಗಳನ್ನು ನಡೆಸಿ ಕೆಟ್ಟತನವನ್ನು ಮಾಡಿದ್ದೇವೆಂದು ತಮ್ಮನ್ನು ತಾವೇ ಹೇಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆಗ ಉಳಿದವರು ಸೆರೆಹಿಡಿಯಲ್ಪಡುವರು. ಅವರು ಪರದೇಶಕ್ಕೆ ಒಯ್ಯಲ್ಪಟ್ಟು ಅಲ್ಲಿ ವಾಸಿಸುವರು. ಅಲ್ಲಿ ಅಳಿದುಳಿದ ಜನರು ನನ್ನನ್ನು ಜ್ಞಾಪಿಸಿಕೊಳ್ಳುವರು ಮತ್ತು ಅವರ ಅಪನಂಬಿಗಸ್ತಿಕೆಯ ಹೃದಯವನ್ನು ನಾನು ಜಜ್ಜಿದೆನು. ತಾವು ಮಾಡಿದ ಕೆಟ್ಟ ಕೆಲಸಗಳಿಗಾಗಿ ತಮ್ಮನ್ನು ತಾವೇ ದ್ವೇಷಿಸುವರು. ಹಿಂದಿನ ಕಾಲದಲ್ಲಿ ಅವರು ನನ್ನಿಂದ ದೂರವಾಗಿ ನನ್ನನ್ನು ತ್ಯಜಿಸಿದರು. ತಮ್ಮ ಹೊಲಸು ವಿಗ್ರಹಗಳ ಹಿಂದೆ ಹೋದರು. ಗಂಡನನ್ನು ಬಿಟ್ಟು ಬೇರೆ ಪುರುಷನ ಸಂಗಡ ಓಡುವ ಸ್ತ್ರೀಯಂತೆ ಅವರಿದ್ದರು. ಅವರು ಇನ್ನೂ ಅನೇಕ ಅಸಹ್ಯಕರವಾದ ಕಾರ್ಯಗಳನ್ನು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನಿಮ್ಮಲ್ಲಿ ತಪ್ಪಿಸಿಕೊಂಡವರು, ತಾವು ಸೆರೆಯಾಗಿ ಹೋಗುವಾಗ ಜನಾಂಗಗಳಲ್ಲಿ ನನ್ನನ್ನು ಜ್ಞಾಪಕಮಾಡಿಕೊಳ್ಳುವರು. ಅನ್ಯದೇವತೆಗಳಲ್ಲಿ ವಿಶ್ವಾಸವಿಟ್ಟು, ನನ್ನನ್ನೂ ತೊರೆದ ತಮ್ಮ ಹೃದಯವನ್ನು ಮತ್ತು ಅನ್ಯ ದೇವರ ವಿಗ್ರಹಗಳಲ್ಲಿ ಮೋಹಗೊಂಡ ತಮ್ಮ ಕಣ್ಣುಗಳನ್ನು ಮುರಿದವನು ನಾನೇ ಎಂಬುದಾಗಿ ಜ್ಞಾಪಕಮಾಡಿಕೊಳ್ಳುವರು. ಅವರು ತಮ್ಮ ಅಸಹ್ಯ ಕಾರ್ಯಗಳನ್ನು ಮಾಡುವ ಕೇಡುಗಳ ನಿಮಿತ್ತ ತಮ್ಮ ಬಗ್ಗೆ ತಾವೇ ಅಸಹ್ಯಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 6:9
37 ತಿಳಿವುಗಳ ಹೋಲಿಕೆ  

ನೀವು ನಿಮ್ಮನ್ನು ಹೊಲಸುಮಾಡಿಕೊಂಡಿರುವ ನಿಮ್ಮ ನಡತೆಯನ್ನೂ ನಿಮ್ಮ ಎಲ್ಲಾ ಕಾರ್ಯಗಳನ್ನೂ ಅಲ್ಲಿ ಜ್ಞಾಪಕಕ್ಕೆ ತಂದುಕೊಂಡು ನೀವು ನಡಿಸಿರುವ ಸಕಲ ದುಷ್ಕೃತ್ಯಗಳ ನಿವಿುತ್ತ ನಿಮ್ಮನ್ನು ನೋಡಿ ನೀವೇ ಅಸಹ್ಯಪಡುವಿರಿ.


ಅದಕ್ಕೆ [ಯೆಶಾಯನು] ಹೀಗೆ ಹೇಳಿದನು - ದಾವೀದನ ಮನೆತನದವರೇ, ಕೇಳಿರಿ! ಮನುಷ್ಯರನ್ನು ಬೇಸರಗೊಳಿಸುವದು ಅಷ್ಟು ದೊಡ್ಡದಲ್ಲವೆಂದೆಣಿಸಿ ನನ್ನ ದೇವರನ್ನೂ ಬೇಸರಗೊಳಿಸುವಿರಾ?


ಅರಣ್ಯದಲ್ಲಿ ಅವರು ಎಷ್ಟೋ ಸಾರಿ ಅವಿಧೇಯರಾಗಿ ಅಲ್ಲಿ ಆತನನ್ನು ನೋಯಿಸಿದರು.


ಆದಕಾರಣ [ನಾನು ಆಡಿದ್ದನ್ನು] ತಿರಸ್ಕರಿಸಿ ಧೂಳಿಯಲ್ಲಿಯೂ ಬೂದಿಯಲ್ಲಿಯೂ ಕುಳಿತು ಪಶ್ಚಾತ್ತಾಪಪಡುತ್ತೇನೆ.


ನಾನು ಅವರನ್ನು ಜನಾಂಗಗಳೊಳಗೆ ಚೆಲ್ಲಿದರೂ ಅವರು ದೂರದೇಶಗಳಲ್ಲಿ ನನ್ನನ್ನು ಸ್ಮರಿಸಿಕೊಂಡು ಸಂತಾನಸಮೇತವಾಗಿ ಬದುಕಿ ಬಾಳಿ ಹಿಂದಿರುಗಿ ಬರುವರು.


ನೀವೆಲ್ಲರೂ ನಿಮ್ಮ ಕಣ್ಣಿಗೆ ಇಷ್ಟವಾದ ಅಸಹ್ಯವಸ್ತುಗಳನ್ನು ಬಿಸಾಟುಬಿಡಿರಿ, ಐಗುಪ್ತದ ವಿಗ್ರಹಗಳಿಂದ ನಿಮ್ಮನ್ನು ಹೊಲಸು ಮಾಡಿಕೊಳ್ಳಬೇಡಿರಿ; ನಾನು ನಿಮ್ಮ ದೇವರಾದ ಯೆಹೋವನು ಎಂಬದಾಗಿ ಅವರನ್ನು ಎಚ್ಚರಿಸಿದೆನು.


ನೀನು ನನಗೋಸ್ಕರ ಹಣಕೊಟ್ಟು ಬಜೆಯನ್ನು ತರಲಿಲ್ಲ, ಯಜ್ಞಪಶುಗಳ ವಪೆಯಿಂದ ನನ್ನನ್ನು ತೃಪ್ತಿಪಡಿಸಲಿಲ್ಲ; ಆದರೆ ನಿನ್ನ ಪಾಪಗಳಿಂದ ನನ್ನನ್ನು ನೀನು ತೊಂದರೆಪಡಿಸಿದ್ದೀ, ನಿನ್ನ ದೋಷಗಳಿಂದ ನನ್ನನ್ನು ಬೇಸರಗೊಳಿಸಿದ್ದೀ.


ನಾನು ನಿಮ್ಮನ್ನು ಜನಾಂಗಗಳಲ್ಲಿ ಚದರಿಸಿ ದೇಶದೇಶಗಳಿಗೆ ತೂರಿಬಿಡುವೆನು ಎಂದು ಅರಣ್ಯದಲ್ಲಿ ಅವರಿಗೆ ಪ್ರಮಾಣಮಾಡಿದೆನು.


ಖಡ್ಗಕ್ಕೆ ತಪ್ಪಿಸಿಕೊಂಡವರೇ, ಸುಮ್ಮನೆ ನಿಂತುಕೊಳ್ಳದೆ ನಡೆಯಿರಿ; ದೂರದಲ್ಲಿಯೂ ಯೆಹೋವನನ್ನು ಸ್ಮರಿಸಿರಿ, ಯೆರೂಸಲೇವಿುನ ಹಂಬಲು ನಿಮ್ಮ ಮನಸ್ಸಿನಲ್ಲಿ ಹುಟ್ಟಲಿ.


ಇವರು ಜಾರತ್ವದಿಂದ ತುಂಬಿದ ಮತ್ತು ಪಾಪವನ್ನು ಬಿಡಲೊಲ್ಲದ ಕಣ್ಣುಳ್ಳವರೂ ಚಪಲಚಿತ್ತರನ್ನು ಮರುಳುಗೊಳಿಸುವವರೂ ಲೋಭದಲ್ಲಿ ತೇರ್ಗಡೆಹೊಂದಿದ ಮನಸ್ಸುಳ್ಳವರೂ ಶಾಪಕ್ಕೆ ಪಾತ್ರರೂ ಆಗಿದ್ದಾರೆ.


ನಾನು ಪ್ರಮಾಣಪೂರ್ವಕವಾಗಿ ಅವರಿಗೆ ವಾಗ್ದಾನಮಾಡಿದ ದೇಶಕ್ಕೆ ಅವರನ್ನು ಸೇರಿಸಿದ ಮೇಲೆ ಅವರು ಎತ್ತರವಾದ ಎಲ್ಲಾ ಗುಡ್ಡಗಳನ್ನೂ ಸೊಂಪಾಗಿ ಬೆಳೆದಿರುವ ಎಲ್ಲಾ ಮರಗಳನ್ನೂ ನೋಡಿ ಅಲ್ಲಿ ಯಜ್ಞಪಶುಗಳನ್ನು ವಧಿಸಿ ನನ್ನನ್ನು ರೇಗಿಸುವ ನೈವೇದ್ಯವನ್ನವರ್ಪಿಸಿ ಸುಗಂಧಹೋಮಮಾಡಿ ಪಾನದ್ರವ್ಯವನ್ನು ಸುರಿದು ಒಪ್ಪಿಸುತ್ತಿದ್ದರು.


ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷವಿುಸಿಬಿಟ್ಟ ಮೇಲೆ ನೀನು ಅವುಗಳನ್ನು ಜ್ಞಾಪಕಕ್ಕೆ ತಂದು ನಾಚಿಕೆಪಟ್ಟು ನಿನ್ನ ಅವಮಾನದ ನಿವಿುತ್ತ ಇನ್ನು ಬಾಯಿ ತೆರೆಯದಿರುವಿ. ಇದು ಕರ್ತನಾದ ಯೆಹೋವನ ನುಡಿ.


ನೀನು ನಿನ್ನ ಯೌವನಕಾಲವನ್ನು ಜ್ಞಾಪಕಮಾಡಿಕೊಳ್ಳದೆ ಈ ದುಷ್ಕೃತ್ಯಗಳನ್ನೆಲ್ಲಾ ನಡಿಸಿ ನನ್ನನ್ನು ರೇಗಿಸಿದ್ದರಿಂದ ಇಗೋ, ನಾನು ನಿನ್ನ ದುರ್ಮಾರ್ಗದ ಫಲವನ್ನು ನಿನ್ನ ತಲೆಗೆ ಕಟ್ಟುವೆನು; ನೀನು ಲೆಕ್ಕವಿಲ್ಲದ ದುರಾಚಾರಗಳನ್ನು ನಡಿಸಿದ್ದಲ್ಲದೆ ಈ ಅಸಹ್ಯ ಕಾರ್ಯವನ್ನೂ ಮಾಡಿದ್ದೀಯಲ್ಲಾ. ಇದು ಕರ್ತನಾದ ಯೆಹೋವನ ನುಡಿ.


ಇಗೋ, ನೀವು ನಿಂತಿರುವಲ್ಲಿಯೇ ನಿಮ್ಮನ್ನು ಸಿವುಡು ತುಂಬಿದ ಗಾಡಿಯಷ್ಟು ಭಾರವಾಗಿ ಅಮುಕಿಬಿಡುವೆನು.


ಆ ಗೊಂಡೆಗಳ ಉಪಯೋಗವೇನಂದರೆ - ನೀವು ಅವುಗಳನ್ನು ನೋಡುವಾಗ ಯೆಹೋವನ ಆಜ್ಞೆಗಳನ್ನೆಲ್ಲಾ ನೆನಪಿಗೆ ತಂದುಕೊಂಡು ನಡಿಸಬೇಕು, ಮತ್ತು ನೀವು ಪೂರ್ವದಲ್ಲಿ ನನಗೆ ದ್ರೋಹಿಗಳಾಗಿ ಮನಸ್ಸಿಗೂ ಕಣ್ಣಿಗೂ ತೋರಿದಂತೆ ದಾರಿತಪ್ಪಿ ನಡೆದ ಪ್ರಕಾರ ಇನ್ನು ನಡೆಯದೆ


ನಾನು ಕೆಲವರನ್ನು ಖಡ್ಗ ಕ್ಷಾಮವ್ಯಾಧಿಗಳಿಂದ ಉಳಿಸಿ ಅವರು ತಮ್ಮ ಅಸಹ್ಯಕಾರ್ಯಗಳ ವಿಷಯವನ್ನು ತಾವು ಸೇರಿದ ಜನಾಂಗಗಳಲ್ಲಿ ತಿಳಿಸುವದಕ್ಕೆ ಅವಕಾಶಮಾಡುವೆನು; ನಾನೇ ಯೆಹೋವನು ಎಂದು ಆ ಜನಾಂಗಗಳಿಗೂ ಗೊತ್ತಾಗುವದು.


ಅವರಲ್ಲಿ ಪಲಾಯನ ಮಾಡಿದವರು ತಪ್ಪಿಸಿಕೊಂಡು ತಮ್ಮ ಅಧರ್ಮದಲ್ಲಿಯೇ ಇದ್ದು ಡೊಂಗರಗಳಲ್ಲಿನ ಪಾರಿವಾಳಗಳಂತೆ ಬೆಟ್ಟಗಳ ಮೇಲೆ ಮೊರೆಯಿಡುತ್ತಿರುವರು.


ಹೀಗೆ ನನ್ನ ಸಿಟ್ಟನ್ನು ತೀರಿಸಿಕೊಳ್ಳುವೆನು, ನನ್ನ ರೋಷವನ್ನು ಅವರ ಮೇಲೆ ಸುರಿದು ಶಾಂತನಾಗುವೆನು; ಆಗ್ರಹದಿಂದ ಮಾತಾಡಿದವನು ಯೆಹೋವನಾದ ನಾನೇ ಎಂಬದು ನನ್ನ ಕೋಪವನ್ನು ಅವರ ಮೇಲೆ ಹೊಯ್ದುಬಿಟ್ಟ ಬಳಿಕ ಅವರಿಗೆ ಗೊತ್ತಾಗುವದು.


ಇದೊಂದನ್ನು ಮಾಡು, ನೀನು ಕಂಡಕಡೆಯೆಲ್ಲ ತಿರುಗುತ್ತಾ ಸೊಂಪಾಗಿ ಬೆಳೆದಿರುವ ಪ್ರತಿಯೊಂದು ಮರದ ಕೆಳಗೆ ಅನ್ಯರನ್ನು ಸೇರಿ ನನ್ನ ಮಾತನ್ನು ಕೇಳದೆ ನಿನ್ನ ದೇವರಾದ ಯೆಹೋವನೆಂಬ ನನಗೆ ದ್ರೋಹಮಾಡಿದ್ದೀ ಎಂಬದಕ್ಕೆ ಒಪ್ಪಿಕೋ.


ಮತ್ತೆ ಅರಸನಾದ ಯೋಷೀಯನ ಕಾಲದಲ್ಲಿ ಯೆಹೋವನು ನನಗೆ ಹೀಗೆ ಹೇಳಿದನು - ಭ್ರಷ್ಟಳಾದ ಇಸ್ರಾಯೇಲು ಮಾಡಿದ್ದನ್ನು ನೋಡಿದಿಯಾ? ಅವಳು ಎತ್ತರವಾದ ಎಲ್ಲಾ ಗುಡ್ಡಗಳನ್ನು ಹತ್ತಿ ಸೊಂಪಾಗಿ ಬೆಳೆದಿರುವ ಎಲ್ಲಾ ಮರಗಳ ಕೆಳಗೆ ಹೋಗಿ ಸೂಳೆಯಾಗಿ ನಡೆದಳಷ್ಟೆ.


ನಾವೆಲ್ಲರು ಅಶುದ್ಧನ ಹಾಗಿದ್ದೇವೆ, ನಮ್ಮ ಧರ್ಮಕಾರ್ಯಗಳೆಲ್ಲಾ ಹೊಲೆಯ ಬಟ್ಟೆಯಂತಿವೆ; ನಾವೆಲ್ಲರೂ ತರಗೆಲೆಯೋಪಾದಿಯಲ್ಲಿ ಒಣಗಿ ಹೋಗಿದ್ದೇವೆ; ನಮ್ಮ ಅಪರಾಧಗಳು ಬಿರುಗಾಳಿಯ ಪ್ರಕಾರ ನಮ್ಮನ್ನು ಬಡಿದುಕೊಂಡು ಹೋಗಿವೆ.


ಅವರಾದರೋ ಎದುರುಬಿದ್ದು ಆತನ ಪವಿತ್ರಾತ್ಮನನ್ನು ದುಃಖಪಡಿಸಿದರು; ಆದದರಿಂದ ಆತನು ಮಾರ್ಪಟ್ಟು ಅವರಿಗೆ ಶತ್ರುವಾಗಿ ತಾನೇ ಅವರೊಡನೆ ಹೋರಾಡಿದನು.


ನಾವು ಬಾಬೆಲ್ ದೇಶದ ನದಿಗಳ ಬಳಿಯಲ್ಲಿ ಕೂತುಕೊಂಡು ಚೀಯೋನನ್ನು ನೆನಸಿ ಅತ್ತೆವು.


ಅರಸನಾದ ಆಹಾಜನು ಅಶ್ಶೂರದ ಅರಸನಾದ ತಿಗ್ಲತ್ಪಿಲೆಸೆರನ ದರ್ಶನಕ್ಕಾಗಿ ದಮಸ್ಕಕ್ಕೆ ಹೋದನು. ಅವನು ಅಲ್ಲಿದ್ದ ಯಜ್ಞವೇದಿಯನ್ನು ಕಂಡು ಅದರ ಒಂದು ಚಿತ್ರವನ್ನೂ ಅದರ ಎಲ್ಲಾ ಅಲಂಕಾರದ ನಕ್ಷೆಯನ್ನೂ ಬರೆಯಿಸಿ ಯಾಜಕನಾದ ಊರೀಯನಿಗೆ ಕಳುಹಿಸಿದನು.


ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವದು; ಈ ಕೇಡನ್ನು ಅವರಿಗೆ ಮಾಡುವೆನು ಎಂದು ನಾನು ಹೇಳಿದ್ದು ಬರೀ ಮಾತಲ್ಲ.


ಇದಕ್ಕನುಸಾರ ನಾನು ಕುಮಾರ್ತೆಯರನ್ನೋ ಎಂಬಂತೆ ನಿನಗೆ ದಯಪಾಲಿಸುವ ನಿನ್ನ ಅಕ್ಕಂದಿರೂ ತಂಗಿಯರೂ ನಿನ್ನಲ್ಲಿ ಸೇರಿಕೊಳ್ಳುವಾಗ ನೀನು ನಿನ್ನ ದುರ್ಮಾರ್ಗಗಳನ್ನು ನೆನಸಿಕೊಂಡು ನಾಚಿಕೆಪಡುವಿ; ಈ ನನ್ನ ದಯೆ ನಿನ್ನ [ಹಿಂದಿನ] ಒಡಂಬಡಿಕೆಯ ಫಲವಲ್ಲ.


ಈ ವಿಪತ್ತುಗಳು ನಿನಗೆ ಸಂಭವಿಸುವದಕ್ಕೆ ನೀನು ಜನಾಂಗಗಳನ್ನು ಮೋಹಿಸಿ ಅವರ ಬೊಂಬೆಗಳಿಂದ ನಿನ್ನನ್ನು ಹೊಲಸು ಮಾಡಿಕೊಂಡದ್ದೇ ಕಾರಣ.


ಎಫ್ರಾಯೀಮೇ, ನಾನು ನಿನ್ನನ್ನು ಹೇಗೆ ತ್ಯಜಿಸಲಿ! ಇಸ್ರಾಯೇಲೇ, ಹೇಗೆ ನಿನ್ನನ್ನು ಕೈಬಿಡಲಿ! ಅಯ್ಯೋ, ನಿನ್ನನ್ನು ಅದ್ಮದ ಗತಿಗೆ ಹೇಗೆ ತರಲಿ! ಚೆಬೋಯೀವಿುನಂತೆ ಹೇಗೆ ನಾಶಮಾಡಲಿ! ನನ್ನೊಳಗೆ ಮನಸ್ಸು ತಿರುಗಿತು, ಕರುಳು ತೀರಾ ಮರುಗಿತು.


ನಿನ್ನ ಮೂರ್ತಿಗಳನ್ನೂ ಕಲ್ಲುಕಂಬಗಳನ್ನೂ ನಿನ್ನಲ್ಲಿ ನಿಲ್ಲದಂತೆ ಒಡೆದುಹಾಕುವೆನು, ನಿನ್ನ ಕೈ ರೂಪಿಸಿದ್ದನ್ನು ಇನ್ನು ಪೂಜಿಸದಿರುವಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು