Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 7:10 - ಕನ್ನಡ ಸತ್ಯವೇದವು J.V. (BSI)

10 ಆಹಾ, [ದಂಡನೆಯ] ದಿನವು, ಇಗೋ ಬಂತು! ನಿನಗೆ ದುರ್ಗತಿಯು ಅಂಕುರಿಸಿದೆ, ಕೋಲು ಹೂಬಿಟ್ಟಿದೆ, ಹೆಮ್ಮೆಯು ಚಿಗುರಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 “ಆಹಾ, ದಂಡನೆಯ ದಿನವು, ಇಗೋ ಬಂತು! ನಿನಗೆ ದುರ್ಗತಿಯು ಅಂಕುರಿಸಿದೆ, ಕೋಲು ಹೂಬಿಟ್ಟಿದೆ, ಹೆಮ್ಮೆಯು ಚಿಗುರಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 “ಇಗೋ, ದಂಡನೆಯ ದಿನ ಬಂದೆಬಿಟ್ಟಿತು; ನಿನಗೆ ದುರ್ಗತಿ ಅಂಕುರಿಸಿದೆ, ಕೋಲು ಹೂಬಿಟ್ಟಿದೆ, ಹೆಮ್ಮೆ ಚಿಗುರಿದೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 “ಆ ಶಿಕ್ಷೆಯ ಸಮಯವು ಬಂದಿದೆ. ಆಪತ್ತು ಬರುತ್ತಿದೆ. ಹಿಂಸೆಯು ಅರಳಿದೆ. ದುರಹಂಕಾರವು ಮೊಗ್ಗು ಬಿಟ್ಟಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 “ ‘ಇಗೋ ಆ ದಿನವು ಬಂತು, ನೋಡು ವಿನಾಶದ ದಿನ ಹೊರಟುಹೋಯಿತು, ಕೋಲು ಚಿಗುರಿತು, ಅಹಂಕಾರವು ಅರಳಿತು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 7:10
19 ತಿಳಿವುಗಳ ಹೋಲಿಕೆ  

ಆಹಾ, ಅಶ್ಶೂರವೇ, ನೀನು ನನ್ನ ಕೋಪವೆಂಬ ಕೋಲು, ನಿನ್ನ ಕೈಯಲ್ಲಿರುವ ದೊಣ್ಣೆಯು ನನ್ನ ರೋಷವೇ!


ಆತನು ನಮ್ಮ ಮೇಲೆ ಅತಿಶಯವಾದ ಕೃಪೆಯನ್ನು ಇಡುತ್ತಾನೆ. ಆದುದರಿಂದ - ದೇವರು ಅಹಂಕಾರಿಗಳನ್ನು ಎದುರಿಸುತ್ತಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ ಎಂದು ಶಾಸ್ತ್ರವು ಹೇಳುತ್ತದೆ.


ಸಮಾಧಾನವಾಗಿಯೂ ನಿರ್ಭಯವಾಗಿಯೂ ಇರುತ್ತೇವೆಂದು ಜನರು ಹೇಳುತ್ತಿರುವಾಗಲೇ ಅವರ ಮೇಲೆ ನಾಶನವು ಗರ್ಭಿಣಿಗೆ ಪ್ರಸವವೇದನೆ ಬರುವ ಪ್ರಕಾರ ಬರುವದು; ಅವರು ಹೇಗೂ ತಪ್ಪಿಸಿಕೊಳ್ಳಲಾರರು.


ಮೂರ್ಖನ ಬಾಯಲ್ಲಿ ಗರ್ವವು ಅಂಕುರಿಸುವದು; ಜ್ಞಾನಿಗಳ ತುಟಿಗಳು ಅವರನ್ನು ಕಾಯುವವು.


ಮರುದಿನ ಮೋಶೆ ಗುಡಾರದಲ್ಲಿ ಹೋಗಿ ನೋಡಲಾಗಿ ಆಹಾ, ಲೇವಿಕುಲಕ್ಕೋಸ್ಕರ ಆರೋನನು ಕೊಟ್ಟಿದ್ದ ಕೋಲು ಚಿಗುರಿ ಮೊಗ್ಗೆ ಬಿಟ್ಟು ಹೂವರಳಿ ಬಾದಾವಿು ಹಣ್ಣುಗಳನ್ನು ಫಲಿಸಿತ್ತು.


ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕರಾಜನನ್ನು ಹೊಗಳಿ ಕೊಂಡಾಡಿ ಕೀರ್ತಿಸುತ್ತೇನೆ; ಆತನ ಕಾರ್ಯಗಳೆಲ್ಲಾ ಸತ್ಯ, ಆತನ ಮಾರ್ಗಗಳೆಲ್ಲಾ ನ್ಯಾಯ; ಸೊಕ್ಕಿನಿಂದ ನಡೆಯುವವರನ್ನು ತಗ್ಗಿಸಬಲ್ಲನು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಶೋಧನೆಯು ಸಂಭವಿಸಿತು; ತಿರಸ್ಕರಿಸುತ್ತಿದ್ದ ರಾಜದಂಡವೇ ನಾಶವಾದರೆ ಗತಿಯೇನು?


ಸಂಹರಿಸುವಂತೆ ಸಾಣೆಹಿಡಿದಿದೆ, ವಿುಂಚುವಂತೆ ತಿಕ್ಕಿದೆ. ನಮ್ಮ ಕುಮಾರನ ರಾಜದಂಡವು ವಿುಕ್ಕ ಎಲ್ಲಾ ದಂಡಗಳನ್ನು ತಿರಸ್ಕರಿಸುತ್ತದಲ್ಲಾ ಎಂಬದಾಗಿ ನಾವು ಸಂಭ್ರಮಪಡಬಹುದೇ?


ಬೆಂಕಿಯು ದಂಡರೂಪವಾದ ಅದರ ಶಾಖೆಗಳಿಂದ ಹೊರಟು ಅದರ ಫಲವನ್ನು ನುಂಗಿಬಿಟ್ಟದ್ದರಿಂದ ರಾಜದಂಡಕ್ಕೆ ಯೋಗ್ಯವಾದ ಯಾವ ಗಟ್ಟಿಕೊಂಬೆಯೂ ಅದರಲ್ಲಿ ಉಳಿದಿಲ್ಲ. ಇದು ಶೋಕಗೀತ, ಶೋಕಗೀತವಾಗಿ ವಾಡಿಕೆಯಲ್ಲಿದೆ.


ಪ್ರಳಯವು ಬಂತು, ಪೂರ್ಣಪ್ರಳಯವು ಬಂತು, ನಿನ್ನನ್ನು ಚಚ್ಚುವದಕ್ಕೆ ಚಚ್ಚರಗೊಂಡಿದೆ, ಇಗೋ ಬಂದೇ ಬಂತು!


ಅಯ್ಯೋ, ಕುಡುಕರಾದ ಎಫ್ರಾಯೀಮ್ಯರ ಮಹಿಮೆಯ ಕಿರೀಟದ ಗತಿಯೇ! ದ್ರಾಕ್ಷಾರಸಕ್ಕೆ ಸೋತುಹೋದವರ ಫಲವತ್ತಾದ ತಗ್ಗಿಗೆ ಶ್ರೇಷ್ಠ ಶಿರೋಭೂಷಣವಾಗಿದ್ದು ಬಾಡುತ್ತಿರುವ ಹೂವಿನ ಪಾಡೇ!


ಗರ್ವದಿಂದ ಭಂಗ; ಉಬ್ಬಿನಿಂದ ದೊಬ್ಬು.


ನಾನು ಅವರ ದ್ರೋಹಕ್ಕಾಗಿ ಅವರನ್ನು ಬೆತ್ತದಿಂದ ಹೊಡೆಯುವೆನು; ಅವರ ಅಪರಾಧಕ್ಕಾಗಿ ಪೆಟ್ಟುಕೊಡುವೆನು.


ನಿನ್ನನ್ನು ಕಟಾಕ್ಷಿಸೆನು, ಉಳಿಸೆನು, ನಿನ್ನ ದುರ್ಮಾರ್ಗಗಳಿಗೆ ತಕ್ಕ ಗತಿಯನ್ನು ಕೊಡುವೆನು, ನಿನ್ನ ಅಸಹ್ಯ ಕಾರ್ಯಗಳು ನಿನ್ನ ಅನುಭವಕ್ಕೆ ಬರುವವು; ಯೆಹೋವನಾದ ನಾನು ದಂಡಿಸುವವನು ಎಂಬದು ನಿನಗೆ ಗೊತ್ತೇ ಆಗುವದು.


ಸಮಯ ಬಂತು, ದಿನ ಹತ್ತರಿಸಿತು; ಕೊಂಡುಕೊಳ್ಳುವವನು ಹರ್ಷಿಸದಿರಲಿ, ಮಾರುವವನು ದುಃಖಿಸದಿರಲಿ; ರೋಷಾಗ್ನಿಯು ಆ ಸಮೂಹದವರೆಲ್ಲರ ಮೇಲೆ ಹತ್ತಿದೆ.


ಉದಯವು ಬರುತ್ತದೆ, ರಾತ್ರಿಯೂ ಬರುತ್ತದೆ; ವಿಚಾರಿಸಬೇಕಾದರೆ ವಿಚಾರಿಸಿರಿ, ತಿರಿಗಿ ಬನ್ನಿರಿ ಎಂದು ಕಾವಲುಗಾರನು ಹೇಳಿದನು.


ಅವರಿಗೆ ಹೀಗೆ ಹೇಳು - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನಾನು ಈ ಗಾದೆಯನ್ನು ನಿಲ್ಲಿಸಿ ಬಿಡುವೆನು, ಅದು ಇಸ್ರಾಯೇಲಿನಲ್ಲಿ ಇನ್ನು ಸಲ್ಲದು; ನಾನು ನುಡಿಯುವ ಈ ಮಾತನ್ನು ಕೇಳಿರಿ - ಕ್ಲುಪ್ತಕಾಲವು ಹತ್ತಿರಿಸಿದೆ, ದಿವ್ಯದರ್ಶನಗಳೆಲ್ಲಾ ಸಾರ್ಥಕವಾಗುವದು ಸಮೀಪ.


ದಿನವು ಹತ್ತಿರವಾಯಿತು; ಹೌದು, ಯೆಹೋವನ ದಿನ, ಕಾರ್ಮುಗಿಲಿನ ದಿನ ಸಮೀಪಿಸಿತು; ಅದು ಜನಾಂಗಗಳಿಗೆ ನ್ಯಾಯ ತೀರಿಸತಕ್ಕ ಕಾಲ.


ಯೆಹೋವನ ದಿನವು ಸಮೀಪಿಸಿತು; ಅಯ್ಯೋ, ದಿನವೇ! ಅದು ಸರ್ವಶಕ್ತನಿಂದ ನಾಶನದಿನವಾಗಿಯೇ ಬರುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು