Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 7:16 - ಕನ್ನಡ ಸತ್ಯವೇದವು J.V. (BSI)

16 ಅವರಲ್ಲಿ ಪಲಾಯನ ಮಾಡಿದವರು ತಪ್ಪಿಸಿಕೊಂಡು ತಮ್ಮ ಅಧರ್ಮದಲ್ಲಿಯೇ ಇದ್ದು ಡೊಂಗರಗಳಲ್ಲಿನ ಪಾರಿವಾಳಗಳಂತೆ ಬೆಟ್ಟಗಳ ಮೇಲೆ ಮೊರೆಯಿಡುತ್ತಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅವರಲ್ಲಿ ಪಲಾಯನ ಮಾಡಿದವರು ತಪ್ಪಿಸಿಕೊಂಡು, ತಮ್ಮ ಅಧರ್ಮದಲ್ಲಿಯೇ ಇದ್ದು, ಡೊಂಗರಗಳಲ್ಲಿನ ಪಾರಿವಾಳಗಳಂತೆ ಬೆಟ್ಟಗಳ ಮೇಲೆ ಗೋಳಾಡುತ್ತಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಅವರಲ್ಲಿ ಪಲಾಯನ ಮಾಡಿದವರು ತಪ್ಪಿಸಿಕೊಂಡು, ತಮ್ಮ ಅಧರ್ಮದಲ್ಲಿಯೇ ಇದ್ದು, ಡೊಂಗರಗಳಲ್ಲಿನ ಪಾರಿವಾಳಗಳಂತೆ ಬೆಟ್ಟಗಳ ಮೇಲೆ ಗೋಳಿಡುತ್ತಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 “ಆದರೂ ಕೆಲವರು ತಪ್ಪಿಸಿಕೊಳ್ಳುವರು. ಅವರು ಬೆಟ್ಟಕ್ಕೆ ಓಡುವರು. ಆದರೆ ಅವರು ಸಂತೋಷಪಡುವುದಿಲ್ಲ. ತಮ್ಮ ಪಾಪಗಳಿಗಾಗಿ ಅವರು ದುಃಖಿತರಾಗುವರು. ಪಾರಿವಾಳಗಳಂತೆ ಮೂಲುಗುವರು, ಅಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆದರೆ ಅವರಲ್ಲಿ ಪಲಾಯನ ಮಾಡಿದವರು ತಪ್ಪಿಸಿಕೊಳ್ಳುವರು. ಪ್ರತಿಯೊಬ್ಬರೂ ತಮ್ಮ ತಮ್ಮ ಅಕ್ರಮಗಳ ನಿಮಿತ್ತ ಕಣಿವೆಯಲ್ಲಿರುವ ಪಾರಿವಾಳದ ಹಾಗೆ ಗೋಳಾಡಿ, ಪರ್ವತಗಳ ಮೇಲೆ ಇರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 7:16
22 ತಿಳಿವುಗಳ ಹೋಲಿಕೆ  

ನಾವೆಲ್ಲರೂ ಕರಡಿಗಳಂತೆ ಗುರುಗುಟ್ಟುತ್ತೇವೆ, ಪಾರಿವಾಳಗಳಂತೆ ಮೂಲುಗುತ್ತಲೇ ಇದ್ದೇವೆ; ನಾವು [ಯೆಹೋವನ] ನ್ಯಾಯನಿರ್ಣಯವನ್ನು ಎದುರುನೋಡಿದರೂ ಅದು ಸಿಕ್ಕದು, [ಆತನ] ರಕ್ಷಣಕಾರ್ಯವನ್ನು ನಿರೀಕ್ಷಿಸಿದರೂ ಅದು ನಮಗೆ ದೂರ.


ನಾನು ಬಾನಕ್ಕಿಯಂತೆಯೂ ಬಕದ ಹಾಗೂ ಕೀಚುಗುಟ್ಟಿದೆನು, ಪಾರಿವಾಳದಂತೆ ಮೊರೆಯಿಟ್ಟೆನು, ಯೆಹೋವನೇ, ನಾನು ಬಾಧೆಪಡುತ್ತಿದ್ದೇನೆ, ನನಗೆ ಹೊಣೆಯಾಗು ಎಂದು ಮೇಲೆ ಮೇಲೆ ದೃಷ್ಟಿಸುತ್ತಾ ಕಂಗೆಟ್ಟೆನು.


ಯೆಹೋವನೇ, ಇಸ್ರಾಯೇಲ್‍ದೇವರೇ, ಈಗಿರುವಷ್ಟು ಜನರನ್ನು ನಮ್ಮಲ್ಲಿ ಉಳಿಸಿದ್ದರಿಂದ ನೀನು ಧರ್ಮಸ್ವರೂಪನೆಂದು ಪ್ರಕಟವಾಯಿತು. ನಾವಾದರೋ ನಿನ್ನ ದೃಷ್ಟಿಯಲ್ಲಿ ಅಪರಾಧಿಗಳು. ಈ ನಮ್ಮ ದುಷ್ಕೃತ್ಯದ ನಿವಿುತ್ತವಾಗಿ ನಿನ್ನೆದುರಿನಲ್ಲಿ ನಿಲ್ಲಲಾರೆವು ಎಂಬದೇ.


ತಪ್ಪಿಸಿಕೊಂಡುಳಿದ ಯೆಹೂದ್ಯರು ದೇಶದಲ್ಲಿ ನೆಲೆಗೊಂಡು ಅಭಿವೃದ್ಧಿಯಾಗುವರು.


ಆಗ ನೀವು ನಿಮ್ಮ ದುರ್ಮಾರ್ಗ ದುರಾಚಾರಗಳನ್ನು ಜ್ಞಾಪಕಕ್ಕೆ ತಂದುಕೊಂಡು ನಿಮ್ಮ ಅಪರಾಧಗಳ ಮತ್ತು ಅಸಹ್ಯಕಾರ್ಯಗಳ ನಿವಿುತ್ತ ನಿಮಗೆ ನೀವೇ ಹೇಸಿಕೊಳ್ಳುವಿರಿ.


ಖಡ್ಗಕ್ಕೆ ತಪ್ಪಿಸಿಕೊಂಡವರು ಕೊಂಚ ಜನ ಮಾತ್ರವೇ ಆಗಿ ಐಗುಪ್ತದಿಂದ ಯೆಹೂದಕ್ಕೆ ಹಿಂದಿರುಗುವರು; ಆಗ ಐಗುಪ್ತಕ್ಕೆ ಹೋಗಿ ಪ್ರವಾಸಿಸುತ್ತಿರುವ ಯೆಹೂದ ಜನಶೇಷದವರೆಲ್ಲರೂ ನನ್ನ ಮಾತು ಸಾಗತಕ್ಕದ್ದೋ ತಮ್ಮ ಮಾತು ಸಾಗತಕ್ಕದ್ದೋ ಎಂದು ತಿಳಿದುಕೊಳ್ಳುವರು.


ಐಗುಪ್ತಕ್ಕೆ ಹೋಗಿ ಪ್ರವಾಸಿಸುತ್ತಿರುವ ಯೆಹೂದಜನಶೇಷದವರು ಸ್ವದೇಶಕ್ಕೆ ಹಿಂದಿರುಗಬೇಕೆಂದು ಎಷ್ಟು ಆಶಿಸಿದರೂ ಅವರಲ್ಲಿ ಯಾರೂ ಉಳಿದು ಅಲ್ಲಿಂದ ತಪ್ಪಿಸಿಕೊಂಡು ಯೆಹೂದಕ್ಕೆ ಹಿಂದಿರುಗುವದಿಲ್ಲ; ಓಡಿಬರುವ ಕೊಂಚ ಜನವೇ ಹೊರತು ಯಾವನೂ ಹಿಂದಿರುಗನು.


ಅವರು ಅಳುತ್ತಾ ನಡೆದು ಬರುವರು, ಅವರ ವಿಜ್ಞಾಪನೆಗಳಿಂದಲೇ ಅವರನ್ನು ಮುಂದರಿಸುವೆನು; ಎಡವದ ಸಮಮಾರ್ಗದಲ್ಲಿ ನಡಿಸುತ್ತಾ ತುಂಬಿದ ತೊರೆಗಳ ಬಳಿಗೆ ಬರಮಾಡುವೆನು; ನಾನು ಇಸ್ರಾಯೇಲಿಗೆ ತಂದೆ, ಎಫ್ರಾಯೀಮು ನನ್ನ ಹಿರಿಯ ಮಗನಲ್ಲವೆ.


ಸೇನಾಧೀಶ್ವರನಾದ ಯೆಹೋವನು ನಮಗೆ ಕೊಂಚ ಜನವನ್ನೂ ಉಳಿಸದೆ ಹೋಗಿದ್ದರೆ ಸೊದೋವಿುನ ಗತಿಯೇ ನಮಗಾಗುತ್ತಿತ್ತು. ಗೊಮೋರದ ದುರ್ದಶೆಯೇ ಸಂಭವಿಸುತ್ತಿತ್ತು.


ನನ್ನ ಕಡೆಗೆ ಲಕ್ಷ್ಯಕೊಟ್ಟು ಸದುತ್ತರವನ್ನು ದಯಪಾಲಿಸು.


ಅಯ್ಯೋ, ಹಾಳಾದೆವು, ಭಂಗಪಟ್ಟೆವು; ನಾವು ನಮ್ಮ ದೇಶವನ್ನು ಬಿಟ್ಟೆವಲ್ಲಾ, [ಶತ್ರುಗಳು] ನಮ್ಮ ಮನೆಗಳನ್ನು ಕೆಡವಿದ್ದಾರಲ್ಲಾ ಎಂಬ ಪ್ರಲಾಪಧ್ವನಿಯು ಚೀಯೋನಿನೊಳಗಿಂದ ಕೇಳಿಸುತ್ತದೆ.


ಆದರೂ ಸ್ತ್ರೀಪುರುಷರಲ್ಲಿ ಕೆಲವರು ಹೇಗೋ ತಪ್ಪಿಸಿಕೊಂಡು ಉಳಿದು ಅಲ್ಲಿಂದ ಒಯ್ಯಲ್ಪಡುವರು; ಆಹಾ, ಅವರು ನಿಮ್ಮ ಬಳಿಗೆ ಸೇರಿದಾಗ ನೀವು ಅವರ ದುರ್ಮಾರ್ಗ ದುಷ್ಕೃತ್ಯಗಳನ್ನು ಕಂಡು ನಾನು ಯೆರೂಸಲೇವಿುನ ಮೇಲೆ ಬರಮಾಡಿದ ಕೇಡಿನ ವಿಷಯವಾಗಿ, ಅದಕ್ಕೆ ಉಂಟುಮಾಡಿದ ಎಲ್ಲಾ ಕೇಡುಗಳ ವಿಷಯವಾಗಿಯೂ ಸಮಾಧಾನ ಹೊಂದುವಿರಿ.


ನನ್ನ ಕುರಿಗಳು ಮಲೆನಾಡಿನಲ್ಲೆಲ್ಲಾ ಎತ್ತರವಾದ ಪ್ರತಿಯೊಂದು ಬೆಟ್ಟದ ಮೇಲೆ ಅಲೆದಾಡಿದವು; ಹೌದು, ನನ್ನ ಕುರಿಗಳು ಭೂಮಂಡಲದಲ್ಲೆಲ್ಲಾ ಚದರಿಹೋದವು; ಯಾರೂ ಅವುಗಳ ಹಿಂದೆ ಹೋಗಿ ಹುಡುಕಲಿಲ್ಲ.


ವಸ್ತ್ರವನ್ನು ಕಿತ್ತು ರಾಣಿಯನ್ನು ಬೈಲಿಗೆ ತರಲು ಆಕೆಯ ತೊತ್ತುಗಳು ಎದೆಬಡಿದುಕೊಂಡು ಪಾರಿವಾಳಗಳಂತೆ ಮೂಲುಗುತ್ತಾರೆ.


ಯೆಹೋವನ ಮಹಾದಿನವು ಹತ್ತಿರವಾಯಿತು, ಸಮೀಪಿಸಿತು, ಬಹು ತ್ವರೆಯಾಗಿ ಬರುತ್ತಿದೆ; ಆಹಾ, ಕಿವಿಗೊಡಿರಿ, ಯೆಹೋವನ ದಿನವೇ ಬಂದಿತು; ಇಗೋ, ಅಲ್ಲಿ ಒಬ್ಬ ಶೂರನು ಘೋರವಾಗಿ ಗೋಳಾಡುತ್ತಿದ್ದಾನೆ!


ಏಕೆಂದರೆ ನಮ್ಮ ತಪ್ಪುಗಳು ನಿನ್ನ ದೃಷ್ಟಿಗೆ ಹೆಚ್ಚಾಗಿ ಬಿದ್ದಿವೆ, ನಮ್ಮ ಪಾಪಗಳು ನಮಗೆ ವಿರುದ್ಧವಾಗಿ ಸಾಕ್ಷಿಕೊಡುತ್ತವೆ; ನಮ್ಮ ತಪ್ಪುಗಳು ನಮ್ಮ ಸಂಗಡಲೇ ಇವೆ, ನಮ್ಮ ಅಪರಾಧಗಳನ್ನು ನಾವೇ ಬಲ್ಲೆವು.


ಆಹಾ, ಬೋಳುಗುಡ್ಡಗಳಲ್ಲಿ ಒಂದು ಶಬ್ದ! ತಾವು ಡೊಂಕುದಾರಿಯನ್ನು ಹಿಡಿದು ತಮ್ಮ ದೇವರಾದ ಯೆಹೋವನನ್ನು ಮರೆತು ಬಿಟ್ಟಿದ್ದೇವೆಂದು ಇಸ್ರಾಯೇಲ್ಯರು ಕಣ್ಣೀರು ಸುರಿಸಿ ದೇವರ ಕೃಪೆಯನ್ನು ಬೇಡುತ್ತಿದ್ದಾರಲ್ಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು