ಯೆಹೆಜ್ಕೇಲನು 7:4 - ಕನ್ನಡ ಸತ್ಯವೇದವು J.V. (BSI)4 ನಿನ್ನನ್ನು ಕಟಾಕ್ಷಿಸೆನು, ಉಳಿಸೆನು; ನಿನ್ನ ದುರ್ಮಾರ್ಗಗಳ ಫಲವನ್ನು ನಿನಗೆ ತಿನ್ನಿಸುವೆನು; ನಿನ್ನ ಅಸಹ್ಯ ಕಾರ್ಯಗಳು ನಿನ್ನ ಅನುಭವಕ್ಕೆ ಬರುವವು; ಆಗ ನಾನೇ ಯೆಹೋವನು ಎಂದು ನಿನಗೆ ಗೊತ್ತಾಗುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ನಿನ್ನನ್ನು ಕಟಾಕ್ಷಿಸುವುದಿಲ್ಲ, ಉಳಿಸುವುದಿಲ್ಲ; ನಿನ್ನ ದುರ್ಮಾರ್ಗದ ಫಲವನ್ನು ನಿನಗೆ ತಿನ್ನಿಸುವೆನು; ನಿನ್ನ ಅಸಹ್ಯಕಾರ್ಯಗಳು ನಿನ್ನ ಅನುಭವಕ್ಕೆ ಬರುವವು; ಆಗ ನಾನೇ ಯೆಹೋವನು ಎಂದು ನಿನಗೆ ಗೊತ್ತಾಗುವುದು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ನಿನ್ನನ್ನು ಕಟಾಕ್ಷಿಸೆನು, ಉಳಿಸೆನು; ನಿನ್ನ ದುರ್ಮಾರ್ಗದ ಫಲವನ್ನು ನಿನಗೆ ತಿನ್ನಿಸುವೆನು; ನಿನ್ನ ಅಸಹ್ಯಕಾರ್ಯಗಳು ನಿನ್ನ ಅನುಭವಕ್ಕೆ ಬರುವುವು; ಆಗ ನಾನೇ ಸರ್ವೇಶ್ವರ ಎಂದು ನಿನಗೆ ಗೊತ್ತಾಗುವುದು.” ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ನಿನಗೆ ನಾನು ಇನ್ನು ಕರುಣೆಯನ್ನು ತೋರಿಸೆನು. ನಿನ್ನ ವಿಷಯದಲ್ಲಿ ನಾನು ದುಃಖಿಸುವದಿಲ್ಲ. ನೀನು ಮಾಡಿದ ಕೆಟ್ಟಕಾರ್ಯಗಳಿಗಾಗಿ ನಿನ್ನನ್ನು ಶಿಕ್ಷಿಸುವೆನು. ನೀನು ಅಂಥಾ ಭಯಂಕರ ಕೃತ್ಯಗಳನ್ನು ಮಾಡಿದ್ದೀ. ಈಗ ನಾನೇ ಯೆಹೋವನೆಂದು ನೀನು ತಿಳಿಯುವಿ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ನನ್ನ ಕಣ್ಣುಗಳು ನಿನ್ನನ್ನು ಕನಿಕರಿಸುವುದೂ ಇಲ್ಲ. ನಾನು ನಿನ್ನನ್ನು ಬಿಡುವುದೂ ಇಲ್ಲ. ಆದರೆ ನಿನ್ನ ದುರ್ಮಾರ್ಗಗಳ ಪ್ರಕಾರ, ನಿನ್ನ ಮೇಲೆ ಮುಯ್ಯಿ ತೀರಿಸುತ್ತೇನೆ. ನಿನ್ನ ಅಸಹ್ಯ ಕಾರ್ಯಗಳು ನಿನ್ನ ಮಧ್ಯೆ ಇರುವುವು. ಆಗ ನಾನೇ ಯೆಹೋವ ದೇವರು ಎಂದು ನಿಮಗೆ ತಿಳಿಯುವುದು.’ ಅಧ್ಯಾಯವನ್ನು ನೋಡಿ |