Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 7:6 - ಕನ್ನಡ ಸತ್ಯವೇದವು J.V. (BSI)

6 ಪ್ರಳಯವು ಬಂತು, ಪೂರ್ಣಪ್ರಳಯವು ಬಂತು, ನಿನ್ನನ್ನು ಚಚ್ಚುವದಕ್ಕೆ ಚಚ್ಚರಗೊಂಡಿದೆ, ಇಗೋ ಬಂದೇ ಬಂತು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅಂತ್ಯವು ಬಂತು, ಅಂತ್ಯವು ಬಂದುಬಿಟ್ಟಿತು, ನಿನ್ನನ್ನು ಚಚ್ಚುವುದಕ್ಕೆ ಎಚ್ಚರಗೊಂಡಿದೆ, ಇಗೋ, ಬಂದೇ ಬಂತು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಪ್ರಳಯ ಬಂದಿತು, ಪೂರ್ಣಪ್ರಳಯ ಬಂದಿತು, ನಿನ್ನನ್ನು ಚಚ್ಚುವುದಕ್ಕೆ ಚಚ್ಚರಗೊಂಡಿದೆ, ಇಗೋ ಬಂದೇ ಬಂತು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಅಂತ್ಯವು ಬರುವುದು. ಅದು ಬೇಗನೆ ಬರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅಂತ್ಯವು ಬಂದಿತು, ಅಂತ್ಯವು ಬಂದುಬಿಟ್ಟಿತು, ನಿನ್ನನ್ನು ಚಚ್ಚುವುದಕ್ಕೆ ಎಚ್ಚರಗೊಂಡಿದೆ, ಇಗೋ ಬಂದೇ ಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 7:6
11 ತಿಳಿವುಗಳ ಹೋಲಿಕೆ  

ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಖಡ್ಗವೇ, ನಾನು ನೇವಿುಸಿದ ಕುರುಬನೂ ನನ್ನ ಸಂಗಡಿಗನೂ ಆಗಿರುವವನಿಗೆ ವಿರುದ್ಧವಾಗಿ ಎಚ್ಚರಗೊಳ್ಳು; ಕುರುಬನನ್ನು ಹೊಡೆ, ಕುರಿಗಳು ಚದರಿಹೋಗುವವು; ಮರಿಗಳ ಮೇಲೂ ಕೈಮಾಡಬೇಕೆಂದಿದ್ದೇನೆ.


ಆತನು ಭಕ್ತಿಹೀನರಾದ ಪುರಾತನರ ಲೋಕವನ್ನು ಸುಮ್ಮನೆ ಬಿಡದೆ ಅವರ ಮೇಲೆ ಜಲಪ್ರಲಯವನ್ನು ಬರಮಾಡಿದನು; ಆದರೆ ಸುನೀತಿಯನ್ನು ಸಾರುವವನಾಗಿದ್ದ ನೋಹನನ್ನೂ ಅವನೊಂದಿಗೆ ಬೇರೆ ಏಳು ಮಂದಿಯನ್ನೂ ಉಳಿಸಿದನು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಇಗೋ ಬಂತು, ಸಂಭವಿಸಿತು; ನಾನು ಮುಂತಿಳಿಸಿದ ದಿನವು ಇದೇ.


ಇಸ್ರಾಯೇಲಿನ ದೊರೆಯೇ, ದುಷ್ಟನೇ, ಭ್ರಷ್ಟನೇ! ನಿನಗೆ ಸಮಯವು ಹತ್ತರಿಸಿದೆ; ಇದೇ ನಿನ್ನ ಅಪರಾಧದ ಕಡೆಗಾಲ.


ಆಹಾ, [ದಂಡನೆಯ] ದಿನವು, ಇಗೋ ಬಂತು! ನಿನಗೆ ದುರ್ಗತಿಯು ಅಂಕುರಿಸಿದೆ, ಕೋಲು ಹೂಬಿಟ್ಟಿದೆ, ಹೆಮ್ಮೆಯು ಚಿಗುರಿದೆ.


ಈಗಲೇ ನಿನಗೆ ಪ್ರಳಯವು ಬಂದುಬಿಟ್ಟಿತು; ನಾನು ನನ್ನ ಕೋಪವನ್ನು ನಿನ್ನ ಮೇಲೆ ಬರಮಾಡಿ ನಿನ್ನ ನಡತೆಗೆ ತಕ್ಕಂತೆ ನ್ಯಾಯತೀರಿಸಿ ನಿನ್ನ ಸಮಸ್ತ ಅಸಹ್ಯಕಾರ್ಯಗಳ ಫಲವನ್ನು ನಿನಗೆ ಉಣ್ಣಿಸುವೆನು.


ಇಗೋ, ಇವರಿಗೆ ಮೇಲನ್ನಲ್ಲ, ಕೇಡನ್ನೇ ಮಾಡಬೇಕೆಂದು ಎಚ್ಚರಗೊಂಡಿದ್ದೇನೆ; ಐಗುಪ್ತದಲ್ಲಿನ ಎಲ್ಲಾ ಯೆಹೂದ್ಯರು ಖಡ್ಗಕ್ಷಾಮಗಳಿಂದ ನಾಶಹೊಂದುತ್ತಾ ನಿರ್ನಾಮವಾಗುವರು.


ದೇಶನಿವಾಸಿಯೇ, ನಿನ್ನ ಗತಿ ಆಯಿತು. ಸಮಯ ಬಂತು, ದಿನ ಹತ್ತರಿಸಿತು; ಬೆಟ್ಟಗಳ ಮೇಲೆ ಕೇಳಿಸುವ ಧ್ವನಿಯು ಉತ್ಸಾಹ ಧ್ವನಿಯಲ್ಲ, ಕಳಕಳವೇ.


ಶತ್ರುಗಳು ನಮ್ಮ ಹೆಜ್ಜೆಯನ್ನು ಗುರಿ ಮಾಡಿಕೊಂಡಿರುವದರಿಂದ ನಮ್ಮ ಬೀದಿಗಳಲ್ಲೇ ನಾವು ಸಂಚಾರಮಾಡದ ಹಾಗಾಯಿತು; ನಮಗೆ ಅಂತ್ಯವು ಸಮೀಪಿಸಿತು, ನಮ್ಮ ಕಾಲವು ತೀರಿತು, ಹೌದು, ನಮಗೆ ಅಂತ್ಯವು ಬಂದೇ ಬಂತು.


ಅವರಿಗೆ ಹೀಗೆ ಹೇಳು - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನಾನು ಈ ಗಾದೆಯನ್ನು ನಿಲ್ಲಿಸಿ ಬಿಡುವೆನು, ಅದು ಇಸ್ರಾಯೇಲಿನಲ್ಲಿ ಇನ್ನು ಸಲ್ಲದು; ನಾನು ನುಡಿಯುವ ಈ ಮಾತನ್ನು ಕೇಳಿರಿ - ಕ್ಲುಪ್ತಕಾಲವು ಹತ್ತಿರಿಸಿದೆ, ದಿವ್ಯದರ್ಶನಗಳೆಲ್ಲಾ ಸಾರ್ಥಕವಾಗುವದು ಸಮೀಪ.


ಆತನು ನನ್ನನ್ನು - ಆಮೋಸನೇ, ನಿನ್ನ ಕಣ್ಣಿಗೆ ಕಾಣಿಸುವದೇನು ಎಂದು ಕೇಳಲು ಮಾಗಿದ ಹಣ್ಣಿನ ಪುಟ್ಟಿ ಅಂದೆನು. ಆಗ ಯೆಹೋವನು ನನಗೆ ಹೀಗೆ ಹೇಳಿದನು - ಇಸ್ರಾಯೇಲೆಂಬ ನನ್ನ ಜನರಿಗೆ ಕಡೆಗಾಲವು ಮಾಗುತ್ತಾ ಬಂದಿದೆ; ಇನ್ನು ಅವರನ್ನು ಕಂಡುಕಾಣದ ಹಾಗಿರೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು