ಯೆಹೆಜ್ಕೇಲನು 7:7 - ಕನ್ನಡ ಸತ್ಯವೇದವು J.V. (BSI)7 ದೇಶನಿವಾಸಿಯೇ, ನಿನ್ನ ಗತಿ ಆಯಿತು. ಸಮಯ ಬಂತು, ದಿನ ಹತ್ತರಿಸಿತು; ಬೆಟ್ಟಗಳ ಮೇಲೆ ಕೇಳಿಸುವ ಧ್ವನಿಯು ಉತ್ಸಾಹ ಧ್ವನಿಯಲ್ಲ, ಕಳಕಳವೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ದೇಶ ನಿವಾಸಿಯೇ, ನಿನ್ನ ಗತಿ ಮುಗಿಯಿತು. ಸಮಯ ಬಂದಿತು, ದಿನ ಸಮೀಪಿಸಿತು; ಬೆಟ್ಟಗಳ ಮೇಲೆ ಕೇಳಿಸುವ ಧ್ವನಿಯು ಉತ್ಸಾಹ ಧ್ವನಿಯಲ್ಲ, ಅದು ಕಳವಳವೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ದೇಶನಿವಾಸಿಯೇ, ನಿನ್ನ ಗತಿ ಮುಗಿಯಿತು, ಸಮಯ ಬಂದಿತು, ದಿನ ಸಮೀಪಿಸಿತು; ಬೆಟ್ಟಗಳ ಮೇಲೆ ಕೇಳಿಸುವ ಧ್ವನಿ ಉತ್ಸಾಹಧ್ವನಿಯಲ್ಲ , ಅದು ಬರೀ ಗೋಳೇ! ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಇಸ್ರೇಲ್ ದೇಶದಲ್ಲಿ ವಾಸಿಸುವ ಜನರೇ, ನಿಮಗೆ ಆಪತ್ತು ಬರುವುದು, ಸಮಯವು ಬರುತ್ತಿದೆ. ದಿನವು ಸಮೀಪಿಸಿದೆ. ಬೆಟ್ಟಗಳ ಮೇಲೆ ಆನಂದ ಬೋಷಗಳ ಬದಲು ಯುದ್ಧದ ಕೂಗಾಟಗಳು ಇರುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಓ ದೇಶ ನಿವಾಸಿಯೇ, ನಿನಗಾಗಿ ವಿನಾಶದ ದಿನ ಬಂದಿತು, ಕಾಲವು ಬಂತು, ತೊಂದರೆಯ ದಿನವು ಹತ್ತಿರವಾಯಿತು. ಪರ್ವತಗಳ ಮೇಲೆ ಸಂತೋಷವಲ್ಲ ಭೀತಿಯಿದೆ. ಅಧ್ಯಾಯವನ್ನು ನೋಡಿ |