Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 8:11 - ಕನ್ನಡ ಸತ್ಯವೇದವು J.V. (BSI)

11 ಇಸ್ರಾಯೇಲ್‍ವಂಶದ ಎಪ್ಪತ್ತು ಮಂದಿ ಹಿರಿಯರೂ ಅವರ ಮಧ್ಯದಲ್ಲಿ ಶಾಫಾನನ ಮಗನಾದ ಯಾಜನ್ಯನೂ ತಮ್ಮ ತಮ್ಮ ಕೈಗಳಲ್ಲಿ ಧೂಪಾರತಿಗಳನ್ನು ಹಿಡಿದುಕೊಂಡು ಆ ಚಿತ್ರಗಳ ಮುಂದೆ ನಿಂತಿದ್ದರು; ಧೂಪದ ಸುವಾಸನೆಯ ಧೂಮವು ಮೇಘವಾಗಿ ಏರುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಇಸ್ರಾಯೇಲ್ ವಂಶದ ಎಪ್ಪತ್ತು ಮಂದಿ ಹಿರಿಯರೂ ಮತ್ತು ಅವರ ಮಧ್ಯದಲ್ಲಿ ಶಾಫಾನನ ಮಗನಾದ ಯಾಜನ್ಯನೂ ತಮ್ಮ ತಮ್ಮ ಕೈಗಳಲ್ಲಿ ಧೂಪಾರತಿಗಳನ್ನು ಹಿಡಿದುಕೊಂಡು ಆ ಚಿತ್ರಗಳ ಮುಂದೆ ನಿಂತಿದ್ದರು; ಧೂಪದ ಸುವಾಸನೆಯ ಧೂಮವು ಮೇಘವಾಗಿ ಏರುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಇಸ್ರಯೇಲ್ ವಂಶದ ಎಪ್ಪತ್ತು ಮಂದಿ ಹಿರಿಯರೂ ಅವರ ಮಧ್ಯದಲ್ಲಿ ಶಾಫಾನನ ಮಗ ಯಾಜನ್ಯನೂ ತಮ್ಮ ತಮ್ಮ ಕೈಗಳಲ್ಲಿ ಧೂಪಾರತಿಗಳನ್ನು ಹಿಡಿದುಕೊಂಡು ಆ ಚಿತ್ರಗಳ ಮುಂದೆ ನಿಂತಿದ್ದರು: ಧೂಪದ ಸುವಾಸನೆಯ ಧೂಮವು ಮೇಘವಾಗಿ ಏರುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನಾನು ಅಲ್ಲಿ ಶಾಫಾನನ ಮಗನಾದ ಯಾಜನ್ಯನು ಮತ್ತು ಇಸ್ರೇಲರ ಎಪ್ಪತ್ತು ಮಂದಿ ಹಿರಿಯರು ಈ ಚಿತ್ರಗಳ ಮತ್ತು ವಿಗ್ರಹಗಳ ಮುಂದೆ ನಿಂತಿರುವುದನ್ನು ಕಂಡೆನು. ಪ್ರತಿಯೊಬ್ಬನು ಒಂದು ಧೂಪಾರತಿಯನ್ನು ಹಿಡಿದುಕೊಂಡಿದ್ದನು. ಆ ಧೂಪದ ಹೊಗೆಯು ಆಕಾಶದವರೆಗೂ ಏರಿ ಹೋಗುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಇಸ್ರಾಯೇಲಿನ ಮನೆತನದವರಲ್ಲಿ ಎಪ್ಪತ್ತು ಮಂದಿ ಹಿರಿಯರೂ, ಅವರ ಮಧ್ಯದಲ್ಲಿ ಶಾಫಾನನ ಮಗನಾದ ಯಾಜನ್ಯನೂ ನಿಂತುಕೊಂಡಿದ್ದರು. ಪ್ರತಿಯೊಬ್ಬನ ಕೈಯಲ್ಲೂ ಅವನವನ ಧೂಪಾರತಿ ಇತ್ತು. ಧೂಪದ ಸುವಾಸನೆಯು ಮೇಘವಾಗಿ ಏರುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 8:11
31 ತಿಳಿವುಗಳ ಹೋಲಿಕೆ  

ಮತ್ತು ಯೆಹೋವನ ಬಳಿಯಿಂದ ಬೆಂಕಿ ಹೊರಟು ಧೂಪವನ್ನು ಅರ್ಪಿಸುತ್ತಿದ್ದ ಆ ಇನ್ನೂರೈವತ್ತು ಮಂದಿಯನ್ನು ಭಸ್ಮ ಮಾಡಿತು.


ಅವರಲ್ಲಿ ಒಬ್ಬೊಬ್ಬನು ತನ್ನ ತನ್ನ ಧೂಪಾರತಿಯನ್ನು, ಅಂದರೆ ಒಟ್ಟಾಗಿ ಇನ್ನೂರೈವತ್ತು ಧೂಪಾರತಿಗಳನ್ನು ತೆಗೆದುಕೊಂಡು ಧೂಪಹಾಕಿ ಯೆಹೋವನ ಸನ್ನಿಧಿಗೆ ಬರಬೇಕು; ಹಾಗೆಯೇ ನೀನೂ ಆರೋನನೂ ನಿಮ್ಮ ನಿಮ್ಮ ಧೂಪಾರತಿಗಳನ್ನು ತೆಗೆದುಕೊಂಡು ಬರಬೇಕು ಎಂದು ಹೇಳಿದನು.


ಆಗ ಯೆಹೋವನು ಮೋಶೆಗೆ ಹೇಳಿದ್ದೇನಂದರೆ - ಇಸ್ರಾಯೇಲ್ಯರಲ್ಲಿ ಹಿರಿಯರೆಂದೂ ಅಧಿಪತಿಗಳೆಂದೂ ನೀನು ತಿಳುಕೊಂಡಿರುವ ಎಪ್ಪತ್ತು ಮಂದಿಯನ್ನು ಕೂಡ ಕರಿಸಿ ದೇವದರ್ಶನದ ಗುಡಾರದ ಬಾಗಲಿಗೆ ಕರತಂದು ಅಲ್ಲೇ ನಿನ್ನೊಡನೆ ನಿಲ್ಲಿಸಿಕೋ.


ಯೆಹೋವನು ನನಗೆ ಹೀಗೆ ಹೇಳಿದನು - ಹೊರಡು, ಕುಂಬಾರನು ಮಾಡಿದ ಮಣ್ಣಿನ ಕೂಜವನ್ನು ಕೊಂಡುಕೊಂಡು ಜನರ ಹಿರಿಯರಲ್ಲಿಯೂ ಯಾಜಕರ ಹಿರಿಯರಲ್ಲಿಯೂ ಕೆಲವರನ್ನು ಕರೆದುಕೊಂಡು


ಯೆಹೋವನು ಆ ಮೇಘದಲ್ಲಿ ಇಳಿದು ಬಂದು ಅವನ ಸಂಗಡ ಮಾತಾಡಿ ಅವನಲ್ಲಿದ್ದ ಆತ್ಮೀಯವರಗಳಲ್ಲಿ ಆ ಎಪ್ಪತ್ತು ಮಂದಿ ಹಿರಿಯರಿಗೂ ಪಾಲುಕೊಟ್ಟನು; ಆ ವರಗಳು ಅವರಿಗೆ ದೊರಕಿದಾಗ ಅವರು ಪರವಶರಾಗಿ ಪ್ರವಾದಿಸಿದರು; ಆಮೇಲೆ ಅವರು ತಿರಿಗಿ ಪ್ರವಾದಿಸಲಿಲ್ಲ.


ಯೆಹೋವನು ಮೋಶೆಗೆ - ನೀನೂ ಆರೋನ ನಾದಾಬ್ ಅಬೀಹೂ ಎಂಬವರೂ ಇಸ್ರಾಯೇಲ್ಯರ ಹಿರಿಯರಲ್ಲಿ ಎಪ್ಪತ್ತು ಮಂದಿಯೂ ಈ ಬೆಟ್ಟವನ್ನು ಹತ್ತಿ ಯೆಹೋವನ ಬಳಿಗೆ ಬಂದು ದೂರದಲ್ಲಿ ನಿಂತು ಅಡ್ಡಬೀಳಬೇಕು.


ಸ್ವಾಮೀ, ನಿನಗೆ ವಿರುದ್ಧವಾಗಿ ಪಾಪಮಾಡಿದ್ದರಿಂದ ನಾವೂ ನಮ್ಮ ಅರಸರೂ ಪ್ರಧಾನರೂ ಹಿರಿಯರೂ ನಾಚಿಕೆಗೆ ಗುರಿಯಾಗಿದ್ದೇವೆ.


ಆಗ ಬಾರೂಕನು ಯೆಹೋವನ ಆಲಯದೊಳಗೆ ಮೇಲಣ ಪ್ರಾಕಾರದಲ್ಲಿ ಹೊಸ ಬಾಗಿಲ ಹತ್ತಿರ ಲೇಖಕನಾದ ಶಾಫಾನನ ಮಗನಾಗಿರುವ ಗೆಮರ್ಯನ ಕೋಣೆಯಲ್ಲಿ ಸುರಳಿಯಲ್ಲಿನ ಯೆರೆಮೀಯನ ಮಾತುಗಳನ್ನು ಎಲ್ಲಾ ಜನರಿಗೂ ಕೇಳಿಸುವಂತೆ ಓದಿದನು.


ಯೆಹೂದದ ಅರಸನಾದ ಚಿದ್ಕೀಯನಿಂದ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಬಳಿಗೆ ರಾಯಭಾರಿಗಳಾಗಿ ಬಾಬೆಲಿಗೆ ಕಳುಹಿಸಲ್ಪಟ್ಟ ಶಾಫಾನನ ಮಗನಾದ ಎಲ್ಲಾಸ, ಹಿಲ್ಕೀಯನ ಮಗನಾದ ಗೆಮರ್ಯ, ಇವರ ಕೈಯಲ್ಲಿ ಯೆರೂಸಲೇವಿುನಿಂದ ಬರೆದು ರವಾನಿಸಿದ ಕಾಗದದ ಮಾತೇನಂದರೆ -


ಇತ್ತ ಯಾಜಕರೂ ಪ್ರವಾದಿಗಳೂ ಯೆರೆಮೀಯನನ್ನು ಜನರ ಕೈಗೆ ಸಿಕ್ಕಿಸಿ ಕೊಲ್ಲಿಸದ ಹಾಗೆ ಶಾಫಾನನ ಮಗನಾದ ಅಹೀಕಾಮನ ಸಹಾಯವು ಅವನಿಗೆ ಒದಗಿತು.


ನೀವು ಕಳವು ಕೊಲೆ ಹಾದರಗಳನ್ನು ಮಾಡಿ ಸುಳ್ಳುಸಾಕ್ಷಿ ಹೇಳಿ ಬಾಳನಿಗೆ ಹೋಮವನ್ನರ್ಪಿಸಿ ಕಂಡುಕೇಳದ ಅನ್ಯದೇವತೆಗಳನ್ನು ಹಿಂಬಾಲಿಸಿದ ಮೇಲೆ


ನಾನು ದೊಡ್ಡ ಮನುಷ್ಯರ ಬಳಿಗೆ ಹೋಗಿ ಅವರ ಸಂಗಡ ಮಾತಾಡುವೆನು; ಯೆಹೋವನ ಮಾರ್ಗವೂ ಅವರ ದೇವರ ನ್ಯಾಯವಿಧಿಗಳೂ ಅವರಿಗೆ ಗೊತ್ತು ಅಂದುಕೊಂಡೆನು. ಆದರೆ ಈ ದೊಡ್ಡ ಮನುಷ್ಯರು ಒಮ್ಮನವಾಗಿ [ತಮ್ಮ ಹೆಗಲ] ನೊಗವನ್ನು ಮುರಿದು ಕಣ್ಣಿಗಳನ್ನು ಕಿತ್ತುಬಿಟ್ಟಿದ್ದಾರೆ.


ಹಿಲ್ಕೀಯ, ಶಾಫಾನನ ಮಗನಾದ ಅಹೀಕಾಮ್, ಮೀಕನ ಮಗನಾದ ಅಬ್ದೋನ್, ಲೇಖಕನಾದ ಶಾಫಾನ್, ಸಹಕಾರಿಯಾದ ಅಸಾಯ ಎಂಬವರಿಗೆ -


ಧೂಪಹಾಕಬೇಕೆಂದು ಕೈಯಲ್ಲಿ ಧೂಪಾರತಿಯನ್ನು ಹಿಡಿದಿದ್ದ ಉಜ್ಜೀಯನು ಕೋಪವುಳ್ಳವನಾದನು. ಅವನು ಯೆಹೋವನ ಆಲಯದ ಧೂಪವೇದಿಯ ಬಳಿಯಲ್ಲಿ ನಿಂತು ಯಾಜಕರೊಡನೆ ಸಿಟ್ಟಿನಿಂದ ಮಾತಾಡುತ್ತಿರುವಾಗ ಯಾಜಕರ ಸಮಕ್ಷದಲ್ಲೇ ಅವನ ಹಣೆಯಲ್ಲಿ ಕುಷ್ಠ ಹುಟ್ಟಿತು.


ಆದರೆ ಅವನು ಬಲಿಷ್ಠನಾದ ಮೇಲೆ ಗರ್ವಿಷ್ಠನಾಗಿ ಭ್ರಷ್ಟನಾದನು; ತನ್ನ ದೇವರಾದ ಯೆಹೋವನಿಗೆ ದ್ರೋಹಿಯಾಗಿ ಧೂಪವೇದಿಯ ಮೇಲೆ ತಾನೇ ಧೂಪ ಹಾಕಬೇಕೆಂದು ಯೆಹೋವನ ಆಲಯದೊಳಕ್ಕೆ ಹೋದನು.


ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ತಾನು ಯೆಹೂದದೇಶದಲ್ಲಿ ಉಳಿಸಿದ ಜನರ ಮೇಲೆ ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯ ಎಂಬವನನ್ನು ಅಧಿಪತಿಯನ್ನಾಗಿ ನೇವಿುಸಿದನು.


ಆಗ ಯಾಜಕನಾದ ಹಿಲ್ಕೀಯನು, ಅಹೀಕಾಮ್, ಅಕ್ಬೋರ್, ಶಾಫಾನ್, ಅಸಾಯ ಎಂಬವರು ಹುಲ್ದ ಎಂಬ ಪ್ರವಾದಿನಿಯ ಬಳಿಗೆ ಹೋಗಿ ಆಕೆಯ ಹತ್ತಿರ ವಿಚಾರಿಸಿದರು. ಹರ್ಹಸನ ಮೊಮ್ಮಗನೂ ತಿಕ್ವನ ಮಗನೂ ರಾಜ ವಸ್ತ್ರಾಗಾರದ ಅಧಿಪತಿಯೂ ಆಗಿದ್ದ ಶಲ್ಲೂಮನು ಈಕೆಯ ಗಂಡನು. ಈಕೆಯು ಯೆರೂಸಲೇವಿುನ ಎರಡನೆಯ ಕೇರಿಯಲ್ಲಿ ವಾಸವಾಗಿದ್ದಳು.


ಬಟ್ಟೆಗಳನ್ನು ಹರಿದುಕೊಂಡು ಯಾಜಕನಾದ ಹಿಲ್ಕೀಯನು, ಶಾಫಾನನ ಮಗನಾದ ಅಹೀಕಾಮ್, ಮೀಕಾಯನ ಮಗನಾದ ಅಕ್ಬೋರ್, ಲೇಖಕನಾದ ಶಾಫಾನ್, ತನ್ನ ಹಸ್ತಕನಾದ ಅಸಾಯ ಎಂಬವರಿಗೆ -


ಮಹಾಯಾಜಕನಾದ ಹಿಲ್ಕೀಯನು ಲೇಖಕನಾದ ಶಾಫಾನನಿಗೆ - ಯೆಹೋವನ ಆಲಯದಲ್ಲಿ ನನಗೆ ಧರ್ಮೋಪದೇಶ ಗ್ರಂಥವು ಸಿಕ್ಕಿರುತ್ತದೆ ಎಂದು ಹೇಳಿ ಅದನ್ನು ಅವನ ಕೈಯಲ್ಲಿ ಕೊಟ್ಟನು; ಶಾಫಾನನು ಓದಿದನು.


ಯೋಷೀಯನು ತನ್ನ ಆಳಿಕೆಯ ಹದಿನೆಂಟನೆಯ ವರುಷದಲ್ಲಿ ಅಚಲ್ಯನ ಮಗನೂ ಮೆಷುಲ್ಲಾಮನ ಮೊಮ್ಮಗನೂ ಆದ ಶಾಫಾನನೆಂಬ ಲೇಖಕನನ್ನು ಕರೆದು ಅವನಿಗೆ -


ಮೋಶೆ ಆರೋನ್ ನಾದಾಬ್ ಅಬೀಹೂ ಎಂಬವರೂ ಇಸ್ರಾಯೇಲ್ಯರ ಹಿರಿಯರಲ್ಲಿ ಎಪ್ಪತ್ತು ಮಂದಿಯೂ ಬೆಟ್ಟವನ್ನು ಹತ್ತಿದರು;


ಇದಾದ ಮೇಲೆ ಸ್ವಾವಿುಯು ಇನ್ನೂ ಎಪ್ಪತ್ತು ಮಂದಿಯನ್ನು ನೇವಿುಸಿ ಅವರನ್ನು ಇಬ್ಬಿಬ್ಬರಾಗಿ


ಧೂಪದ್ರವ್ಯ ತುಂಬಿದ್ದ ಹತ್ತು ತೊಲೆ ತೂಕವುಳ್ಳ ಚಿನ್ನದ ಧೂಪಾರತಿ;


ಬಡಗಿಯು [ಮರಕ್ಕೆ] ನೂಲು ಹಾಕಿ ಮೊಳೆಯಿಂದ ಗೆರೆಯೆಳೆದು ಉಳಿಬಾಚಿಗಳಿಂದ ಕೆತ್ತಿ ಕೈವಾರದಿಂದ ಗುರುತಿಸಿ ಅದು ಮನೆಯಲ್ಲಿ ವಾಸಿಸತಕ್ಕದ್ದಾಗಲೆಂದು ಮನುಷ್ಯನ ಆಕಾರಕ್ಕೆ ತಂದು ನರನ ಅಂದದಂತೆ ರೂಪಿಸುವನು.


ನೀವು, ನಿಮ್ಮ ಪಿತೃಗಳು, ನಿಮ್ಮ ಅರಸರು, ನಿಮ್ಮ ಪ್ರಧಾನರು, ಸಾಮಾನ್ಯ ಜನರು, ನೀವೆಲ್ಲರೂ ಯೆಹೂದದ ಊರುಗಳಲ್ಲಿ ಮತ್ತು ಯೆರೂಸಲೇವಿುನ ಬೀದಿಗಳಲ್ಲಿ ಹಾಕಿದ ಧೂಪವು ಯೆಹೋವನ ನೆನಪಿನಲ್ಲಿ ಇಲ್ಲವೋ, ಅದು ಆತನ ಜ್ಞಾಪಕಕ್ಕೆ ಬರಲಿಲ್ಲವೋ?


ಅವನು ಇವರನ್ನು ಅಲ್ಲಿಯೇ ಕೊಲ್ಲಿಸಿದನು. ಹೀಗೆ ಯೆಹೂದ್ಯರು ಸೆರೆಯವರಾಗಿ ತಮ್ಮ ದೇಶವನ್ನು ಬಿಟ್ಟುಹೋಗಬೇಕಾಯಿತು.


ಅಕಟಾ, ಎಲ್ಲಾ ಜಾತಿಯ ಕ್ರಿವಿುಕೀಟಗಳೂ ಅಸಹ್ಯಮೃಗಗಳೂ ಇಸ್ರಾಯೇಲ್‍ವಂಶದವರು ಪೂಜಿಸುವ ಸಕಲಮೂರ್ತಿಗಳೂ ಸುತ್ತಲೂ ಗೋಡೆಯಲ್ಲಿ ಚಿತ್ರಿಸಲ್ಪಟ್ಟಿದ್ದವು.


[ಯೆಹೋಯಾಖೀನನು ಸೆರೆಯಾದ] ಏಳನೆಯ ವರುಷದ ಐದನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಇಸ್ರಾಯೇಲಿನ ಹಿರಿಯರಲ್ಲಿ ಕೆಲವರು ಯೆಹೋವನನ್ನು ಪ್ರಶ್ನೆಕೇಳುವದಕ್ಕೆ ಬಂದು ನನ್ನ ಮುಂದೆ ಕೂತುಕೊಂಡರು.


ಈ ಜನರು ನನ್ನನ್ನು ತೊರೆದು ತಮಗಾಗಲಿ ತಮ್ಮ ಪಿತೃಗಳಿಗಾಗಲಿ ಯೆಹೂದದ ಅರಸರಿಗಾಗಲಿ ತಿಳಿಯದ ಅನ್ಯದೇವತೆಗಳಿಗೆ ಧೂಪಹಾಕುತ್ತಾ ಈ ಸ್ಥಳವನ್ನು ಅನ್ಯಸ್ಥಾನವಾಗಿ ಮಾಡಿ


ಆಗ ಅರಸನಾದ ಯೆಹೋಯಾಕೀಮನು ಅಕ್ಬೋರನ ಮಗನಾದ ಎಲ್ನಾಥಾನನನ್ನೂ ಅವನ ಸಂಗಡ ಇನ್ನು ಕೆಲವರನ್ನೂ ಐಗುಪ್ತಕ್ಕೆ ಕಳುಹಿಸಿದನು;


ವೃದ್ಧ, ಯುವಕ, ಯುವತಿ, ಸ್ತ್ರೀ, ಬಾಲಕ ಎನ್ನದೆ ಸಕಲರನ್ನೂ ಸಂಹಾರಮಾಡಿಬಿಡಿರಿ; ಆದರೆ ಆ ಗುರುತುಳ್ಳವರಲ್ಲಿ ಯಾರನ್ನೂ ಮುಟ್ಟಬೇಡಿರಿ; ನನ್ನ ಆಲಯದಲ್ಲಿಯೇ ಪ್ರಾರಂಭಮಾಡಿರಿ ಎಂಬದಾಗಿ ಆತನು ನನಗೆ ಕೇಳಿಸುವಂತೆ ಅಪ್ಪಣೆಮಾಡಿದನು. ಆಗ ದೇವಾಲಯದ ಮುಂದೆ ಇದ್ದ ಹಿರಿಯರನ್ನು ಮೊದಲುಗೊಂಡು ಹತಿಸತೊಡಗಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು