Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 8:15 - ಕನ್ನಡ ಸತ್ಯವೇದವು J.V. (BSI)

15 ಆಮೇಲೆ ಆತನು ನನಗೆ - ನರಪುತ್ರನೇ, ಇದನ್ನು ನೋಡಿದಿಯಾ? ಇವುಗಳಿಗಿಂತ ಮತ್ತೂ ಹೆಚ್ಚಾದ ದುರಾಚಾರಗಳನ್ನು ನೋಡುವಿ ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಇದಾದ ಮೇಲೆ ಆತನು ನನಗೆ, “ನರಪುತ್ರನೇ, ಇದನ್ನು ನೋಡಿದೆಯಾ? ಇವುಗಳಿಗಿಂತ ಇನ್ನೂ ಹೆಚ್ಚಾದ ದುರಾಚಾರಗಳನ್ನು ನೋಡುವೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಇದಾದ ಮೇಲೆ ದೇವರು ನನಗೆ, “ನರಪುತ್ರನೇ, ಇದನ್ನು ನೋಡಿದೆಯಾ? ಇವುಗಳಿಗಿಂತ ಮತ್ತೂ ಹೆಚ್ಚಾದ ದುರಾಚಾರಗಳನ್ನು ನೋಡುವೆ,” ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ದೇವರು ನನಗೆ, “ನರಪುತ್ರನೇ, ಈ ದುರಾಚಾರಗಳನ್ನು ನೋಡಿದ್ದೀಯಾ? ನನ್ನೊಂದಿಗೆ ಬಾ, ಇವುಗಳಿಗಿಂತ ಇನ್ನೂ ಹೆಚ್ಚಿನ ಭಯಂಕರ ಸಂಗತಿಗಳನ್ನು ನಿನಗೆ ತೋರಿಸುವೆನು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆಮೇಲೆ ಅವನು ನನಗೆ, “ಮನುಷ್ಯಪುತ್ರನೇ, ನೋಡಿದೆಯಾ? ಮತ್ತೊಂದು ಸಾರಿ ತಿರುಗಿಕೋ. ಇವುಗಳಿಂದ ಇನ್ನೂ ಅಸಹ್ಯವಾದವುಗಳನ್ನು ಕಾಣುವೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 8:15
7 ತಿಳಿವುಗಳ ಹೋಲಿಕೆ  

ಆದರೆ ದುಷ್ಟರೂ ವಂಚಕರೂ ಇತರರನ್ನು ಮೋಸಮಾಡುತ್ತಾ ತಾವೇ ಮೋಸಹೋಗುತ್ತಾ ಹೆಚ್ಚಾದ ಕೆಟ್ಟತನಕ್ಕೆ ಹೋಗುವರು.


ಆತನು ನನಗೆ - ನೀನು ಒಳಹೊಕ್ಕು ಜನರು ಇಲ್ಲಿ ನಡಿಸುವ ಅಸಹ್ಯವಾದ ದುಷ್ಕಾರ್ಯಗಳನ್ನು ನೋಡು ಎಂದು ಹೇಳಿದಾಗ ನಾನು ಹೊಕ್ಕು ನೋಡಿದೆನು;


ಆಗ ಆತನು ನನಗೆ - ನರಪುತ್ರನೇ, ಇವರು ಮಾಡುವದನ್ನು ನೋಡಿದಿಯಾ? ಇಸ್ರಾಯೇಲ್ ವಂಶದವರು ಇಲ್ಲಿ ನಡಿಸುವ ಅಧಿಕದುರಾಚಾರಗಳನ್ನು ಕಂಡಿಯಾ? ಇದರಿಂದ ನಾನು ನನ್ನ ಪವಿತ್ರಾಲಯವನ್ನು ಬಿಟ್ಟು ದೂರ ಹೋಗಬೇಕಾಯಿತು. ಬಾ, ಇವುಗಳಿಗಿಂತ ಇನ್ನು ಹೆಚ್ಚಾದ ದುರಾಚಾರಗಳನ್ನು ನೋಡುವಿ ಎಂದು ಹೇಳಿದನು.


ನನ್ನನ್ನು ಯೆಹೋವನ ಆಲಯದ ಬಡಗಣ ಬಾಗಿಲ ಮುಂದಕ್ಕೆ ಕರತಂದನು; ಇಗೋ, ಅಲ್ಲಿ ಸ್ತ್ರೀಯರು ತಮ್ಮೂಜ್ ದೇವತೆಗೋಸ್ಕರ ಅಳುತ್ತಾ ಕೂತಿದ್ದರು.


ಯೆಹೋವನ ಆಲಯದ ಒಳಗಣ ಪ್ರಾಕಾರದೊಳಕ್ಕೆ ನನ್ನನ್ನು ಕರತಂದನು; ಆಹಾ, ಯೆಹೋವನ ಗುಡಿಯ ಬಾಗಿಲ ಮುಂದೆ ಮಂಟಪಕ್ಕೂ ಯಜ್ಞವೇದಿಗೂ ನಡುವೆ ಸುಮಾರು ಇಪ್ಪತ್ತೈದು ಜನರು ಯೆಹೋವನ ಗುಡಿಗೆ ಬೆನ್ನುಮಾಡಿ ಮೂಡಲಮುಖವಾಗಿ ಉದಯಕಾಲದ ಸೂರ್ಯನನ್ನು ಪೂಜಿಸುತ್ತಿದ್ದರು .


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನನ್ನ ಜೀವದಾಣೆ, ನೀನು ನಿನ್ನ ಹೇರಳವಾದ ಹೇಯ ವಿಗ್ರಹಗಳಿಂದಲೂ ಅಸಹ್ಯವಸ್ತುಗಳಿಂದಲೂ ನನ್ನ ಪವಿತ್ರಾಲಯವನ್ನು ಹೊಲಸು ಮಾಡಿದ್ದರಿಂದ ಖಂಡಿತವಾಗಿ ನಾನು ಸಹಿಸೆನು, ಕಟಾಕ್ಷಿಸೆನು, ಕ್ಷವಿುಸೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು