ಯೆಹೆಜ್ಕೇಲನು 8:17 - ಕನ್ನಡ ಸತ್ಯವೇದವು J.V. (BSI)17 ಆಗ ಆತನು ನನಗೆ - ನರಪುತ್ರನೇ, ನೋಡಿದಿಯಾ? ಯೆಹೂದವಂಶದವರು ತಾವು ಇಲ್ಲಿ ನಡಿಸುವ ಅಸಹ್ಯಕಾರ್ಯಗಳು ಅಲ್ಪವೆಂದು ಭಾವಿಸಿಕಂಡರೇನೋ? ದೇಶವನ್ನು ಹಿಂಸೆಯಿಂದ ತುಂಬಿಸಿಬಿಟ್ಟದ್ದಲ್ಲದೆ ನನ್ನನ್ನು ಕೆಣಕಬೇಕೆಂದೇ ಮತ್ತೆ ಯತ್ನಿಸುತ್ತಿದ್ದಾರೆ; ನೋಡು, ಪತ್ರೆಯನ್ನು ಮೂಗಿಗೆ ಒತ್ತಿಕೊಳ್ಳುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಆಗ ಆತನು ನನಗೆ, “ನರಪುತ್ರನೇ, ಇದನ್ನು ನೋಡಿದೆಯಾ? ಯೆಹೂದ ವಂಶದವರು ತಾವು ಇಲ್ಲಿ ನಡೆಸುವ ಅಸಹ್ಯಕಾರ್ಯಗಳು ಅಲ್ಪವೆಂದು ಭಾವಿಸಿದ್ದಾರೋ? ದೇಶವನ್ನು ಹಿಂಸೆಯಿಂದ ತುಂಬಿಸಿದ್ದಲ್ಲದೆ, ನನ್ನನ್ನು ಕೆಣಕಬೇಕೆಂದೇ ಮತ್ತೆ ಯತ್ನಿಸುತ್ತಿದ್ದಾರೆ; ನೋಡು, ಕೊಂಬೆಗಳನ್ನು ಮೂಗಿಗೆ ಒತ್ತಿಕೊಳ್ಳುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಆಗ ದೇವರು ನನಗೆ, “ನರಪುತ್ರನೇ, ನೋಡಿದೆಯಾ? ಯೆಹೂದವಂಶದವರು ತಾವು ಇಲ್ಲಿ ನಡೆಸುವ ಅಸಹ್ಯಕಾರ್ಯಗಳು ಅಲ್ಪವೆಂದು ಭಾವಿಸಿದ್ದಾರೋ? ನಾಡನ್ನು ಹಿಂಸಾಕೃತ್ಯಗಳಿಂದ ತುಂಬಿಸಿದ್ದಲ್ಲದೆ ನನ್ನನ್ನು ಕೆಣಕಬೇಕೆಂದೇ ಮತ್ತೆ ಯತ್ನಿಸುತ್ತಿದ್ದಾರೆ; ನೋಡು, ಪತ್ರೆಯನ್ನು ಮೂಗಿಗೆ ಒತ್ತಿಕೊಳ್ಳುತ್ತಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಆಗ ದೇವರು ನನಗೆ, “ನರಪುತ್ರನೇ, ಅವರು ಮಾಡುತ್ತಿರುವುದು ನಿನಗೆ ಕಾಣುತ್ತಿದೆಯೋ? ಯೆಹೂದದ ಜನರಿಗೆ ತಾವು ಮಾಡುತ್ತಿರುವ ಈ ಭಯಂಕರ ಕೃತ್ಯಗಳು ಸಾಕಾಗಿಲ್ಲ. ಇಡೀ ದೇಶವು ದುಷ್ಟತನದಿಂದ ತುಂಬಿಹೋಗಿದೆ. ಅವರು ನನ್ನನ್ನು ಇನ್ನೂ ಹೆಚ್ಚಿಗೆ ಕೋಪಗೊಳಿಸುತ್ತಿದ್ದಾರೆ. ವಿಗ್ರಹಾರಾಧನೆಯ ಪ್ರತೀಕವಾಗಿ ತಮ್ಮ ಮೂಗುಗಳಿಗೆ ಎಳೆಯ ಕೊಂಬೆಗಳನ್ನು ಸೋಕಿಸುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಆಗ ಅವರು ನನಗೆ, “ಮನುಷ್ಯಪುತ್ರನೇ, ನೋಡಿದೆಯಾ? ಅವರು ಇಲ್ಲಿ ಮಾಡುವ ಅಸಹ್ಯವಾದವುಗಳು ಯೆಹೂದ ಮನೆತನದವರಿಗಲ್ಲವೇ? ಏಕೆಂದರೆ ಅವರು ದೇಶವನ್ನು ಹಿಂಸೆಯಿಂದ ತುಂಬಿಸಿದ್ದಲ್ಲದೆ, ನನ್ನನ್ನು ಕೆಣಕಬೇಕೆಂದು ಮತ್ತೆ ಯತ್ನಿಸುತ್ತಿದ್ದಾರಲ್ಲವೇ? ನೋಡು, ಅವರ ಮೂಗಿಗೆ ಕೊಂಬೆಗಳನ್ನಿಟ್ಟುಕೊಳ್ಳುತ್ತಾರೆ. ಅಧ್ಯಾಯವನ್ನು ನೋಡಿ |