Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 8:5 - ಕನ್ನಡ ಸತ್ಯವೇದವು J.V. (BSI)

5 ಆಗ ಆತನು ನನಗೆ - ನರಪುತ್ರನೇ, ಬಡಗಲಿಗೆ ಕಣ್ಣೆತ್ತಿ ನೋಡು ಎಂದು ಹೇಳಿದನು; ಹಾಗೆ ನಾನು ಬಡಗಲಿಗೆ ಕಣ್ಣೆತ್ತಿ ನೋಡಲು ಇಗೋ, ದೇವರನ್ನು ರೋಷಗೊಳಿಸುವ ಆ ವಿಗ್ರಹವೇ ಯಜ್ಞವೇದಿಯ ಬಾಗಿಲ ಬಡಗಲಲ್ಲಿ ಬಾಗಿಲ ಮುಂದೆ ನಿಂತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆಗ ಆತನು ನನಗೆ, “ನರಪುತ್ರನೇ, ಉತ್ತರ ದಿಕ್ಕಿಗೆ ಕಣ್ಣೆತ್ತಿ ನೋಡು” ಎಂದು ಹೇಳಿದನು; ಹಾಗೆ ನಾನು ಉತ್ತರ ದಿಕ್ಕಿಗೆ ಕಣ್ಣೆತ್ತಿ ನೋಡಲು, ಇಗೋ, ದೇವರನ್ನು ರೋಷಗೊಳಿಸುವ ಆ ವಿಗ್ರಹವು ಯಜ್ಞವೇದಿಯ ಉತ್ತರದಿಕ್ಕಿನ ಬಾಗಿಲಿನ ಪ್ರವೇಶದ್ವಾರದ ಮುಂದೆ ನಿಂತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆಗ ಅವರು ನನಗೆ, “ನರಪುತ್ರನೇ, ಉತ್ತರಕ್ಕೆ ಕಣ್ಣೆತ್ತಿ ನೋಡು,” ಎಂದು ಹೇಳಿದರು; ಅಂತೆಯೇ ನಾನು ಉತ್ತರಕ್ಕೆ ಕಣ್ಣೆತ್ತಿ ನೋಡಿದೆ. ಇಗೋ ದೇವರನ್ನು ರೋಷಗೊಳಿಸುವ ಅದೇ ವಿಗ್ರಹವು ಬಲಿಪೀಠದ ಬಾಗಿಲ ಉತ್ತರದಲ್ಲಿ ಪ್ರವೇಶದ್ವಾರದ ಮುಂದೆ ನಿಂತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ದೇವರು ನನ್ನೊಂದಿಗೆ ಮಾತನಾಡುತ್ತಾ, “ನರಪುತ್ರನೇ, ಉತ್ತರ ದಿಕ್ಕಿಗೆ ನೋಡು” ಎಂದು ಹೇಳಿದನು. ನಾನು ಉತ್ತರ ದಿಕ್ಕಿಗೆ ನೋಡಿದಾಗ, ದೇವರನ್ನು ರೋಷಗೊಳಿಸುವ ವಿಗ್ರಹವು ಯಜ್ಞವೇದಿಕೆಯ ದ್ವಾರದ ಉತ್ತರ ದಿಕ್ಕಿನಲ್ಲಿರುವ ಪ್ರವೇಶದ ಸ್ಥಳದಲ್ಲಿ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆಗ ಅವರು ನನಗೆ, “ಮನುಷ್ಯಪುತ್ರನೇ, ಉತ್ತರಕ್ಕೆ ಕಣ್ಣೆತ್ತಿ ನೋಡು,” ಎಂದು ಹೇಳಿದರು; ಅಂತೆಯೇ ನಾನು ಉತ್ತರಕ್ಕೆ ಕಣ್ಣೆತ್ತಿ ನೋಡಿದೆ. ಇಗೋ ದೇವರನ್ನು ರೋಷಗೊಳಿಸುವ ಅದೇ ವಿಗ್ರಹವು ಬಲಿಪೀಠದ ಬಾಗಿಲ ಉತ್ತರದ ಪ್ರವೇಶದ್ವಾರದ ಮುಂದೆ ನಿಂತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 8:5
8 ತಿಳಿವುಗಳ ಹೋಲಿಕೆ  

ಆಗ ಆ ತೇಜೋರೂಪಿಯು ಮನುಷ್ಯಹಸ್ತದಂಥ ಹಸ್ತವನ್ನು ಚಾಚಿ ನನ್ನ ಚಂಡಿಕೆಯನ್ನು ಹಿಡಿಯಲು ದೇವರಾತ್ಮವು ನನ್ನನ್ನು ಎತ್ತಿಕೊಂಡು ಭೂಮ್ಯಾಕಾಶಗಳ ನಡುವೆ ಯೆರೂಸಲೇವಿುನವರೆಗೆ ಒಯ್ದು ಒಳಗಣ ಪ್ರಾಕಾರದ ಬಡಗಣ ಬಾಗಿಲ ಮುಂದೆ ದೇವರನ್ನು ರೋಷಗೊಳಿಸುವ ವಿಗ್ರಹವು ಮೊದಲಿದ್ದ ಸ್ಥಳದಲ್ಲಿ ನಿಲ್ಲಿಸಿದ ಹಾಗೆ ದೇವರ ದರ್ಶನದಲ್ಲಿ ಕಂಡುಬಂತು;


ಕಣ್ಣೆತ್ತಿ ಬೋಳುಗುಡ್ಡಗಳನ್ನು ನೋಡು, ಯಾವದರಲ್ಲಿ ನಿನ್ನನ್ನು ಕೆಡಿಸಲಿಲ್ಲ? ಅರಬಿಯನು ಅಡವಿಯಲ್ಲಿ ಹೊಂಚುಹಾಕುವ ಹಾಗೆ ನೀನು ದಾರಿಯ ಮಗ್ಗುಲಲ್ಲಿ ಅವರಿಗಾಗಿ ಹೊಂಚುತ್ತಾ ಕೂತಿದ್ದೀ; ನಿನ್ನ ಸೂಳೆತನದಿಂದಲೂ ನಿನ್ನ ಕೆಟ್ಟತನದಿಂದಲೂ ದೇಶವನ್ನು ಅಪವಿತ್ರಮಾಡಿದ್ದೀ.


ನನ್ನ ಹೆಸರಿನಿಂದ ಖ್ಯಾತಿಗೊಂಡ ಆಲಯದಲ್ಲಿ ತಮ್ಮ ಅಸಹ್ಯವಸ್ತುಗಳನ್ನು ಇಟ್ಟು ಹೊಲೆಮಾಡಿದ್ದಾರೆ.


ಅವರು ತಮ್ಮ ಪೂಜಾಸ್ಥಳಗಳಿಂದ ಆತನನ್ನು ಬೇಸರಗೊಳಿಸಿ ವಿಗ್ರಹಗಳಿಂದ ರೇಗಿಸಿದರು.


ರಾಜಾಧಿರಾಜನ ಪಟ್ಟಣವಿರುವ ಚೀಯೋನ್ ಪರ್ವತವು ಉತ್ತರದಿಕ್ಕಿನಲ್ಲಿ ಉನ್ನತವಾಗಿಯೂ ರಮ್ಯವಾಗಿಯೂ ಭೂಲೋಕದಲ್ಲೆಲ್ಲಾ ಕಂಗೊಳಿಸುತ್ತಿರುವದು.


ಯೆಹೋವನು ಹೀಗನ್ನುತ್ತಾನೆ - ಯೆಹೂದ್ಯರು ನನ್ನ ಚಿತ್ತಕ್ಕೆ ವಿರುದ್ಧವಾದದ್ದನ್ನೇ ನಡಿಸಿದ್ದಾರೆ, ನನ್ನ ಹೆಸರಿನಿಂದ ಖ್ಯಾತಿಗೊಂಡ ಆಲಯದಲ್ಲಿ ತಮ್ಮ ಅಸಹ್ಯ ವಸ್ತುಗಳನ್ನು ಇಟ್ಟು ಅದನ್ನು ಹೊಲೆಮಾಡಿದ್ದಾರೆ.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನನ್ನ ಜೀವದಾಣೆ, ನೀನು ನಿನ್ನ ಹೇರಳವಾದ ಹೇಯ ವಿಗ್ರಹಗಳಿಂದಲೂ ಅಸಹ್ಯವಸ್ತುಗಳಿಂದಲೂ ನನ್ನ ಪವಿತ್ರಾಲಯವನ್ನು ಹೊಲಸು ಮಾಡಿದ್ದರಿಂದ ಖಂಡಿತವಾಗಿ ನಾನು ಸಹಿಸೆನು, ಕಟಾಕ್ಷಿಸೆನು, ಕ್ಷವಿುಸೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು