Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 8:8 - ಕನ್ನಡ ಸತ್ಯವೇದವು J.V. (BSI)

8 ಆಗ ಆತನು ನನಗೆ - ನರಪುತ್ರನೇ, ಗೋಡೆಯನ್ನು ತೋಡು ಎಂದು ಹೇಳಿದನು. ನಾನು ಗೋಡೆಯನ್ನು ತೋಡಲಾಗಿ ಇಗೋ, ಒಂದು ಬಾಗಿಲು ಕಾಣಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆಗ ಆತನು ನನಗೆ, “ನರಪುತ್ರನೇ, ಗೋಡೆಯನ್ನು ತೋಡು” ಎಂದು ಹೇಳಿದನು. ನಾನು ಗೋಡೆಯನ್ನು ತೋಡಲಾಗಿ ಅಲ್ಲಿ, ಒಂದು ಬಾಗಿಲು ಕಾಣಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆಗ ಅವರು ನನಗೆ, “ನರಪುತ್ರನೇ, ಗೋಡೆಯನ್ನು ತೋಡು,” ಎಂದು ಹೇಳಿದರು. ನಾನು ಗೋಡೆಯನ್ನು ತೋಡಿದೆ. ಆಗ ಇಗೋ, ಒಂದು ಬಾಗಿಲು ಕಾಣಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆಗ ದೇವರು ನನಗೆ, “ನರಪುತ್ರನೇ, ಗೋಡೆಯ ರಂಧ್ರವನ್ನು ಅಗೆದು ದೊಡ್ಡದನ್ನಾಗಿ ಮಾಡು” ಎಂದು ಹೇಳಿದನು. ನಾನು ಗೋಡೆಯನ್ನು ಅಗೆದೆನು. ಆಗ ಬಾಗಿಲೊಂದು ನನಗೆ ಕಾಣಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆಮೇಲೆ ಆತನು ನನಗೆ, “ಮನುಷ್ಯಪುತ್ರನೇ, ಈಗ ಗೋಡೆಯಲ್ಲಿ ಕೊರೆ,” ಎಂದು ಹೇಳಿದನು. ನಾನು ಗೋಡೆಯನ್ನು ಕೊರೆದಾಗ ಒಂದು ಬಾಗಿಲನ್ನು ಕಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 8:8
7 ತಿಳಿವುಗಳ ಹೋಲಿಕೆ  

ತಮ್ಮ ಆಲೋಚನೆಯನ್ನು ಯೆಹೋವನಿಗೆ ಮರೆಮಾಜುವದಕ್ಕೆ ಅಗಾಧೋಪಾಯ ಮಾಡಿ ನಮ್ಮನ್ನು ಯಾರು ನೋಡಿಯಾರು, ಯಾರು ತಿಳಿದಾರು ಅಂದುಕೊಂಡು ಕತ್ತಲಲ್ಲೇ ತಮ್ಮ ಕೆಲಸಗಳನ್ನು ನಡಿಸುವವರ ಗತಿಯನ್ನು ಏನು ಹೇಳಲಿ!


ಅಧರ್ಮಿಗಳು ಅಡಗಿಕೊಳ್ಳುವದಕ್ಕೆ ಅನುಕೂಲವಾದ ಯಾವ ಕತ್ತಲೂ ಯಾವ ಗಾಢಾಂಧಕಾರವೂ ಇರುವದಿಲ್ಲ.


ಇದಲ್ಲದೆ ನಿರ್ದೋಷಿಗಳಾದ ದರಿದ್ರರ ಪ್ರಾಣರಕ್ತವು ನಿನ್ನ ನೆರಿಗೆಯಲ್ಲಿ ಅಂಟಿಕೊಂಡಿದೆ; ಇವರು ಕನ್ನ ಕೊರೆಯುವದನ್ನು ಕಂಡೆನೆಂಬ ನೆವ ನಿನಗಿಲ್ಲ, ನಿನ್ನ ಈ ಎಲ್ಲಾ ದುರಭ್ಯಾಸಗಳ ದೆಸೆಯಿಂದ [ನಿನ್ನನ್ನು ದಂಡಿಸುವೆನು].


ನನ್ನ ಕಣ್ಣಿಗೆ ಬೀಳದಂತೆ ಯಾವನಾದರೂ ಗುಪ್ತಸ್ಥಳಗಳಲ್ಲಿ ತನ್ನನ್ನು ಮರೆಮಾಡಿಕೊಂಡಾನೇ? ನಾನು ಭೂಮ್ಯಾಕಾಶಗಳಲ್ಲಿಯೂ ವ್ಯಾಪಿಸಿರುವವನಲ್ಲವೆ.


ಆಮೇಲೆ ಆತನು ನನ್ನನ್ನು ಪ್ರಾಕಾರದ ಬಾಗಿಲಿಗೆ ಬರಮಾಡಿದನು; ಇಗೋ, ಆ ಗೋಡೆಯಲ್ಲಿ ಒಂದು ರಂಧ್ರವು ನನಗೆ ಕಾಣಿಸಿತು.


ಆತನು ನನಗೆ - ನೀನು ಒಳಹೊಕ್ಕು ಜನರು ಇಲ್ಲಿ ನಡಿಸುವ ಅಸಹ್ಯವಾದ ದುಷ್ಕಾರ್ಯಗಳನ್ನು ನೋಡು ಎಂದು ಹೇಳಿದಾಗ ನಾನು ಹೊಕ್ಕು ನೋಡಿದೆನು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು