Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 8:9 - ಕನ್ನಡ ಸತ್ಯವೇದವು J.V. (BSI)

9 ಆತನು ನನಗೆ - ನೀನು ಒಳಹೊಕ್ಕು ಜನರು ಇಲ್ಲಿ ನಡಿಸುವ ಅಸಹ್ಯವಾದ ದುಷ್ಕಾರ್ಯಗಳನ್ನು ನೋಡು ಎಂದು ಹೇಳಿದಾಗ ನಾನು ಹೊಕ್ಕು ನೋಡಿದೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆತನು ನನಗೆ, “ನೀನು ಒಳಕ್ಕೆ ಹೋಗಿ ಜನರು ಇಲ್ಲಿ ನಡೆಸುವ ಅಸಹ್ಯವಾದ ದುಷ್ಕಾರ್ಯಗಳನ್ನು ನೋಡು” ಎಂದು ಹೇಳಿದಾಗ ನಾನು ಹೋಗಿ ನೋಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ದೇವರು ನನಗೆ, “ನೀನು ಒಳಹೊಕ್ಕು ಜನರು ಇಲ್ಲಿ ನಡೆಸುವ ಅಸಹ್ಯ ದುಷ್ಕಾರ್ಯಗಳನ್ನು ನೋಡು,” ಎಂದು ಹೇಳಿದರು. ನಾನು ಹೊಕ್ಕು ನೋಡಿದೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆಗ ದೇವರು ನನಗೆ, “ಜನರು ಇಲ್ಲಿ ಮಾಡುತ್ತಿರುವ ಅಸಹ್ಯವಾದ ದುಷ್ಕೃತ್ಯಗಳನ್ನು ಹೋಗಿ ನೋಡು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆಗ ಆತನು ನನಗೆ, “ನೀನು ಒಳಗೆ ಹೋಗಿ ಜನರು ಇಲ್ಲಿ ನಡೆಸುವ ಅಸಹ್ಯ ದುಷ್ಕಾರ್ಯಗಳನ್ನು ನೋಡು,” ಎಂದನು. ನಾನು ಒಳಗೆ ಹೋಗಿ ನೋಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 8:9
4 ತಿಳಿವುಗಳ ಹೋಲಿಕೆ  

ಅವರಾದರೋ ನನ್ನ ಮಾತನ್ನು ಕೇಳಲೊಲ್ಲದೆ ನನ್ನ ಮೇಲೆ ತಿರುಗಿಬಿದ್ದರು; ತಮ್ಮ ಕಣ್ಣಿಗೆ ಇಷ್ಟವಾದ ಅಸಹ್ಯವಸ್ತುಗಳನ್ನು ಯಾರೂ ಬಿಸಾಟುಬಿಡಲಿಲ್ಲ. ಐಗುಪ್ತದ ವಿಗ್ರಹಗಳನ್ನು ತ್ಯಜಿಸಲಿಲ್ಲ; ಆಗ ನಾನು ಇವರ ಮೇಲೆ ಐಗುಪ್ತದೇಶದೊಳಗೆ ನನ್ನ ರೋಷಾಗ್ನಿಯನ್ನು ಸುರಿಸಿ ನನ್ನ ಕೋಪವನ್ನು ತೀರಿಸಿಕೊಳ್ಳುವೆನು ಅಂದುಕೊಂಡೆನು.


ಆಗ ಆತನು ನನಗೆ - ನರಪುತ್ರನೇ, ಇವರು ಮಾಡುವದನ್ನು ನೋಡಿದಿಯಾ? ಇಸ್ರಾಯೇಲ್ ವಂಶದವರು ಇಲ್ಲಿ ನಡಿಸುವ ಅಧಿಕದುರಾಚಾರಗಳನ್ನು ಕಂಡಿಯಾ? ಇದರಿಂದ ನಾನು ನನ್ನ ಪವಿತ್ರಾಲಯವನ್ನು ಬಿಟ್ಟು ದೂರ ಹೋಗಬೇಕಾಯಿತು. ಬಾ, ಇವುಗಳಿಗಿಂತ ಇನ್ನು ಹೆಚ್ಚಾದ ದುರಾಚಾರಗಳನ್ನು ನೋಡುವಿ ಎಂದು ಹೇಳಿದನು.


ಆಗ ಆತನು ನನಗೆ - ನರಪುತ್ರನೇ, ಗೋಡೆಯನ್ನು ತೋಡು ಎಂದು ಹೇಳಿದನು. ನಾನು ಗೋಡೆಯನ್ನು ತೋಡಲಾಗಿ ಇಗೋ, ಒಂದು ಬಾಗಿಲು ಕಾಣಿಸಿತು.


ಅಕಟಾ, ಎಲ್ಲಾ ಜಾತಿಯ ಕ್ರಿವಿುಕೀಟಗಳೂ ಅಸಹ್ಯಮೃಗಗಳೂ ಇಸ್ರಾಯೇಲ್‍ವಂಶದವರು ಪೂಜಿಸುವ ಸಕಲಮೂರ್ತಿಗಳೂ ಸುತ್ತಲೂ ಗೋಡೆಯಲ್ಲಿ ಚಿತ್ರಿಸಲ್ಪಟ್ಟಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು