Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 9:4 - ಕನ್ನಡ ಸತ್ಯವೇದವು J.V. (BSI)

4 ನೀನು ಯೆರೂಸಲೇಮ್ ಪಟ್ಟಣದಲ್ಲೆಲ್ಲಾ ತಿರುಗಿ ಅದರೊಳಗೆ ನಡೆಯುವ ಸಮಸ್ತ ಅಸಹ್ಯಕಾರ್ಯಗಳಿಗಾಗಿ ನರಳಿ ಗೋಳಾಡುತ್ತಿರುವ ಜನರ ಹಣೆಯ ಮೇಲೆ ಗುರುತುಮಾಡು ಎಂದು ಅಪ್ಪಣೆಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯೆಹೋವನು ಕೂಗಿ ಅವನಿಗೆ, “ನೀನು ಯೆರೂಸಲೇಮ್ ಪಟ್ಟಣದಲ್ಲೆಲ್ಲಾ ತಿರುಗಿ ಅದರೊಳಗೆ ನಡೆಯುವ ಸಮಸ್ತ ಅಸಹ್ಯ ಕಾರ್ಯಗಳಿಗಾಗಿ ನರಳಿ ಗೋಳಾಡುತ್ತಿರುವ ಜನರ ಹಣೆಯ ಮೇಲೆ ಗುರುತುಮಾಡು” ಎಂದು ಅಪ್ಪಣೆಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 “ನೀನು ಜೆರುಸಲೇಮ್ ಪಟ್ಟಣದಲ್ಲೆಲ್ಲಾ ತಿರುಗಾಡಿ, ಅದರೊಳಗೆ ನಡೆಯುವ ಸಮಸ್ತ ಅಸಹ್ಯಕಾರ್ಯಗಳಿಗೆ ನರಳಿ ಗೋಳಾಡುತ್ತಿರುವ ಜನರ ಹಣೆಯ ಮೇಲೆ ಗುರುತುಮಾಡು,” ಎಂದು ಅಪ್ಪಣೆಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆಗ ಯೆಹೋವನು ಅವನಿಗೆ, “ಜೆರುಸಲೇಮ್ ನಗರದಲ್ಲೆಲ್ಲಾ ತಿರುಗಾಡು. ಜೆರುಸಲೇಮಿನಲ್ಲಿ ನಡೆಯುತ್ತಿರುವ ಅಸಹ್ಯವಾದ ದುಷ್ಕೃತ್ಯಗಳ ಬಗ್ಗೆ ನರಳಾಡುತ್ತಿರುವವರ ಮತ್ತು ನಿಟ್ಟುಸಿರುಬಿಡುತ್ತಿರುವವರ ಹಣೆಯ ಮೇಲ್ಗಡೆ ಒಂದು ಗುರುತನ್ನಿಡು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 “ಯೆರೂಸಲೇಮಿನ ಪಟ್ಟಣದ ಮಧ್ಯೆ ಹಾದು ಹೋಗಿ, ಅವರ ಮಧ್ಯೆ ನಡೆಯುವ ಎಲ್ಲಾ ಅಸಹ್ಯವಾದವುಗಳ ನಿಮಿತ್ತ ನಿಟ್ಟುಸಿರು ಬಿಡುತ್ತಾ ಅಳುತ್ತಿರುವವರೆಲ್ಲರ ಹಣೆಯ ಮೇಲೆ ಗುರುತು ಹಾಕು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 9:4
29 ತಿಳಿವುಗಳ ಹೋಲಿಕೆ  

ಭೂವಿುಯ ಮೇಲಿರುವ ಹುಲ್ಲನ್ನಾಗಲಿ ಯಾವ ಪಲ್ಯವನ್ನಾಗಲಿ ಮರವನ್ನಾಗಲಿ ಕೆಡಿಸದೆ ಹಣೆಯ ಮೇಲೆ ದೇವರ ಮುದ್ರೆಯಿಲ್ಲದವರಾದ ಮನುಷ್ಯರನ್ನು ಮಾತ್ರ ಕೆಡಿಸಬಹುದೆಂದು ಅವುಗಳಿಗೆ ಅಪ್ಪಣೆಯಾಯಿತು.


ಆತನು ನಮ್ಮ ಮೇಲೆ ಮುದ್ರೆ ಹಾಕಿ ನಮ್ಮ ಹೃದಯಗಳಲ್ಲಿ ಪವಿತ್ರಾತ್ಮನನ್ನು ಸಂಚಕಾರವಾಗಿ ಅನುಗ್ರಹಿಸಿದ್ದಾನೆ.


ನಾನು ನೋಡಲಾಗಿ ಯಜ್ಞದ ಕುರಿಯಾದಾತನು ಚೀಯೋನ್ ಪರ್ವತದ ಮೇಲೆ ನಿಂತಿರುವದನ್ನು ಕಂಡೆನು. ಆತನ ಜೊತೆಯಲ್ಲಿ ಒಂದು ಲಕ್ಷ ನಾಲ್ವತ್ತು ನಾಲ್ಕು ಸಾವಿರ ಮಂದಿ ಇದ್ದರು; ಅವರವರ ಹಣೆಯ ಮೇಲೆ ಆತನ ಹೆಸರೂ ಆತನ ತಂದೆಯ ಹೆಸರೂ ಬರೆಯಲ್ಪಟ್ಟಿದ್ದವು.


ತರುವಾಯ ಸಿಂಹಾಸನಗಳನ್ನು ಕಂಡೆನು. ಅವುಗಳ ಮೇಲೆ ಜನರು ಕೂತಿದ್ದರು; ನ್ಯಾಯತೀರಿಸುವ ಅಧಿಕಾರವು ಅವರಿಗೆ ಕೊಡಲ್ಪಟ್ಟಿತು. ಇದಲ್ಲದೆ ಯೇಸುವಿನ ವಿಷಯವಾದ ಸಾಕ್ಷಿಯ ನಿವಿುತ್ತವಾಗಿಯೂ ದೇವರ ವಾಕ್ಯದ ನಿವಿುತ್ತವಾಗಿಯೂ ತಲೆಹೊಯಿಸಿಕೊಂಡವರ ಆತ್ಮಗಳನ್ನೂ ಮೃಗಕ್ಕೂ ಅದರ ವಿಗ್ರಹಕ್ಕೂ ನಮಸ್ಕರಿಸದೆ ತಮ್ಮ ಹಣೆಯ ಮೇಲೆ ಮತ್ತು ಕೈಯ ಮೇಲೆ ಗುರುತುಹಾಕಿಸಿಕೊಳ್ಳದೆ ಇರುವವರನ್ನೂ ಕಂಡೆನು. ಅವರು ಜೀವಿತರಾಗಿ ಎದ್ದು ಸಾವಿರ ವರುಷ ಕ್ರಿಸ್ತನೊಂದಿಗೆ ಆಳಿದರು.


ಆದರೂ ದೇವರ ಸ್ಥಿರವಾದ ಅಸ್ತಿವಾರವು ನಿಲ್ಲುತ್ತದೆ. ಅದರ ಮೇಲೆ - ತನ್ನವರು ಯಾರಾರೆಂಬದನ್ನು ಕರ್ತನು ತಿಳಿದಿದ್ದಾನೆಂತಲೂ ಕರ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರು ದುರ್ಮಾರ್ಗತನವನ್ನು ಬಿಟ್ಟುಬಿಡಬೇಕಂತಲೂ ಲಿಪಿಯುಂಟು.


ನಿನ್ನ ಧರ್ಮಶಾಸ್ತ್ರವನ್ನು ಅನುಸರಿಸದವರ ನಿವಿುತ್ತ ನನಗೆ ಕಣ್ಣೀರು ಪ್ರವಾಹವಾಗಿ ಹರಿಯುತ್ತದೆ.


ದೇವರ ಪವಿತ್ರಾತ್ಮನನ್ನು ದುಃಖಪಡಿಸಬೇಡಿರಿ; ಆತನಲ್ಲಿಯೇ ವಿಮೋಚನೆಯ ದಿನಕ್ಕಾಗಿ ಮುದ್ರೆ ಹೊಂದಿದ್ದೀರಲ್ಲಾ.


ನೀವು ಕೇಳದಿದ್ದರೆ ನನ್ನ ಆತ್ಮವು ಗುಟ್ಟಾದ ಸ್ಥಳದಲ್ಲಿ ನಿಮ್ಮ ಗರ್ವದ ನಿವಿುತ್ತ ಗೋಳಾಡುವದು; ಯೆಹೋವನ ಮಂದೆಯು ಸೆರೆಯಾಗಿ ಹೋದದರಿಂದ ಬಹಳವಾಗಿ ಅಳುವೆನು, ನನ್ನ ನೇತ್ರವು ಅಶ್ರುಧಾರೆಯನ್ನು ಸುರಿಸುವದು.


[ನೀವು ಬಾಗಲಿಗೆ ಹಚ್ಚಿದ] ಆ ರಕ್ತವು ನೀವಿರುವ ಮನೆಗಳನ್ನು ಸೂಚಿಸುವದಾದ ಕಾರಣ ನಾನು ಅದನ್ನು ಕಂಡು ನಿಮಗೆ ಯಾವ ನಷ್ಟವನ್ನೂ ಮಾಡದೆ ಮುಂದಕ್ಕೆ ದಾಟಿ ಹೋಗುವೆನು. ನಾನು ಐಗುಪ್ತದವರನ್ನು ಸಂಹರಿಸುವಾಗ ನಿಮಗೆ ಯಾವ ಹಾನಿಯೂ ಉಂಟಾಗುವದಿಲ್ಲ.


ನಿನ್ನ ಧರ್ಮಶಾಸ್ತ್ರಭ್ರಷ್ಟರಾದ ದುಷ್ಟರಿಗಾಗಿ ಉರಿಗೊಂಡಿದ್ದೇನೆ.


ಅವರು ಅವುಗಳ ರಕ್ತದಲ್ಲಿ ಸ್ವಲ್ಪ ತೆಗೆದು ತಾವು ಆ ಭೋಜನವನ್ನು ಮಾಡುವ ಮನೇಬಾಗಲಿನ ಎರಡು ನಿಲುವು ಕಂಬಗಳಿಗೂ ಮೇಲಿನ ಪಟ್ಟಿಗೂ ಹಚ್ಚಬೇಕು.


ಸದಮಲನೆನಿಸಿಕೊಂಡು ಶಾಶ್ವತಲೋಕದಲ್ಲಿ ನಿತ್ಯನಿವಾಸಿಯಾದ ಮಹೋನ್ನತನು ಹೀಗನ್ನುತ್ತಾನೆ - ಉನ್ನತಲೋಕವೆಂಬ ಪವಿತ್ರಾಲಯದಲ್ಲಿ ವಾಸಿಸುವ ನಾನು ಜಜ್ಜಿಹೋದ ದೀನಮನದೊಂದಿಗೆ ಇದ್ದುಕೊಂಡು ದೀನನ ಆತ್ಮವನ್ನೂ ಜಜ್ಜಿಹೋದ ಮನ ಮನಸ್ಸನ್ನೂ ಉಜ್ಜೀವಿಸುವವನಾಗಿದ್ದೇನೆ.


ಇಂಥ ಮಾತುಗಳನ್ನು ಕೇಳಿ ಯೆಹೋವನ ಭಕ್ತರು ಒಬ್ಬರಿಗೊಬ್ಬರು ಮಾತಾಡಿಕೊಳ್ಳಲು ಯೆಹೋವನು ಕಿವಿಗೊಟ್ಟು ಆಲಿಸಿ ಭಯಭಕ್ತಿಯಿಂದ ತನ್ನ ನಾಮಸ್ಮರಣೆ ಮಾಡುವವರ ಹೆಸರುಗಳನ್ನು ತನ್ನ ಮುಂದೆ ಜ್ಞಾಪಕದ ಪುಸ್ತಕದಲ್ಲಿ ಬರೆಯಿಸಿದನು.


ನರಪುತ್ರನೇ, ಮೊರೆಯಿಡು; ಸೊಂಟಮುರಿದಷ್ಟು ದುಃಖದಿಂದ ಜನರ ಮುಂದೆ ನರಳಾಡು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನೀನು ಚಪ್ಪಾಳೆ ಹೊಡೆದು ನೆಲವನ್ನೊದ್ದು ಹೀಗೆ ಹೇಳು - ಹಾ, ಇಸ್ರಾಯೇಲ್ ವಂಶದವರ ಅಸಹ್ಯವಾದ ಕೆಟ್ಟಕೆಲಸಗಳೆಷ್ಟು! ಅವರು ಖಡ್ಗ ಕ್ಷಾಮವ್ಯಾಧಿಗಳಿಂದ ಸತ್ತೇ ಸಾಯುವರು.


ನಾನು ತಿರಿಗಿ ಬಂದಾಗ ನನ್ನ ದೇವರು ನಿಮ್ಮ ವಿಷಯದಲ್ಲಿ ನನ್ನನ್ನು ನಾಚಿಕೆಗೆ ಗುರಿಮಾಡಾನೆಂತಲೂ, ಪೂರ್ವದಲ್ಲಿ ಬಂಡುತನ ಹಾದರತನ ಪೋಕರಿತನಗಳನ್ನು ನಡಿಸಿ ಪಶ್ಚಾತ್ತಾಪ ಪಡದಿರುವ ಅನೇಕರ ವಿಷಯವಾಗಿ ನಾನು ದುಃಖಪಡಬೇಕಾದೀತೆಂತಲೂ ನನಗೆ ಭಯ ಉಂಟು.


ನಮ್ಮ ಪೂರ್ವಿಕರು ನಮಗೆ ಸಿಕ್ಕಿರುವ ಈ ಗ್ರಂಥವಾಕ್ಯಗಳಿಗೆ ಕಿವಿಗೊಡದೆಯೂ ಅವುಗಳನ್ನು ಕೈಕೊಳ್ಳದೆಯೂ ಹೋದದರಿಂದ ನಾವು ಯೆಹೋವನ ಉಗ್ರಕೋಪಕ್ಕೆ ಪಾತ್ರರಾಗಿದ್ದೇವೆ. ಆದದರಿಂದ ನೀವು ನನಗೋಸ್ಕರವೂ ಜನರಿಗೋಸ್ಕರವೂ ಎಲ್ಲಾ ಯೆಹೂದ್ಯರಿಗೋಸ್ಕರವೂ ಯೆಹೋವನ ಬಳಿಗೆ ಹೋಗಿ ಈ ಗ್ರಂಥವಾಕ್ಯಗಳ ವಿಷಯವಾಗಿ ವಿಚಾರಿಸಿರಿ ಎಂದು ಆಜ್ಞಾಪಿಸಿದನು.


ಇನ್ನು ಮೇಲೆ ಯಾರೂ ನನ್ನನ್ನು ತೊಂದರೆಪಡಿಸಬಾರದು, ನನ್ನ ದೇಹದಲ್ಲಿ ಯೇಸುವಿನ ಮುದ್ರೆಗಳು ಹಾಕಿರುತ್ತವಲ್ಲಾ.


ಅದಕ್ಕೆ ಯೆಹೋವನು - ಕಾಯಿನನ ಪ್ರಾಣವನ್ನು ತೆಗೆದವನಿಗೆ ಏಳರಷ್ಟು ಪ್ರತಿದಂಡನೆಯಾಗುವದು ಎಂದು ಹೇಳಿ ಅವನನ್ನು ಕಂಡವರು ಕೊಲ್ಲಕೂಡದಂತೆ ಅವನ ಮೇಲೆ ಒಂದು ಗುರುತಿಟ್ಟನು.


ವಿುಕ್ಕವರಿಗೆ - ನೀವು ಪಟ್ಟಣದಲ್ಲೆಲ್ಲಾ ಇವನ ಹಿಂದೆ ತಿರುಗುತ್ತಾ ಹತಿಸಿರಿ; ಯಾರನ್ನೂ ಕಟಾಕ್ಷಿಸದಿರಿ, ಉಳಿಸದಿರಿ;


ವೃದ್ಧ, ಯುವಕ, ಯುವತಿ, ಸ್ತ್ರೀ, ಬಾಲಕ ಎನ್ನದೆ ಸಕಲರನ್ನೂ ಸಂಹಾರಮಾಡಿಬಿಡಿರಿ; ಆದರೆ ಆ ಗುರುತುಳ್ಳವರಲ್ಲಿ ಯಾರನ್ನೂ ಮುಟ್ಟಬೇಡಿರಿ; ನನ್ನ ಆಲಯದಲ್ಲಿಯೇ ಪ್ರಾರಂಭಮಾಡಿರಿ ಎಂಬದಾಗಿ ಆತನು ನನಗೆ ಕೇಳಿಸುವಂತೆ ಅಪ್ಪಣೆಮಾಡಿದನು. ಆಗ ದೇವಾಲಯದ ಮುಂದೆ ಇದ್ದ ಹಿರಿಯರನ್ನು ಮೊದಲುಗೊಂಡು ಹತಿಸತೊಡಗಿದರು.


ದ್ರಾಕ್ಷಾರಸವನ್ನು ಬೋಗುಣಿಯಲ್ಲಿ ಕುಡಿಯುತ್ತಾರೆ, ಉತ್ತಮೋತ್ತಮ ತೈಲಗಳನ್ನು ಹಚ್ಚಿಕೊಳ್ಳುತ್ತಾರೆ, ಆದರೆ ಯೋಸೇಫಿನ ಗಾಯಕ್ಕೆ ಮರುಗರು.


ಆ ಕಾಲದಲ್ಲಿ ನಾನು ದೀಪಗಳನ್ನು ಹಿಡಿದು ಯೆರೂಸಲೇಮನ್ನೆಲ್ಲಾ ಹುಡುಕಿಬಿಡುವೆನು; ಯೆಹೋವನು ಮೇಲನ್ನಾಗಲಿ ಕೇಡನ್ನಾಗಲಿ ಮಾಡನು ಎಂದು ಮನಸ್ಸಿನೊಳಗೆ ಅಂದುಕೊಳ್ಳುವವರಾಗಿ ಮಡ್ಡಿಯ ಮೇಲೆ ಮಂದವಾಗಿರುವ ದ್ರಾಕ್ಷಾರಸಕ್ಕೆ ಸಮಾನರಾದ ಜನರನ್ನು ದಂಡಿಸುವೆನು.


ಅಯ್ಯೋ, ಅವಮಾನವು ನಮ್ಮ ಪಟ್ಟಣದ ಮೇಲೆ ಹೊರೆಯಾಗಿ ಕೂತಿದೆ ಎಂದು ಮಹೋತ್ಸವಕ್ಕೆ ದೂರವಾಗಿ ಶೋಕಿಸುತ್ತಿರುವ ನಿನ್ನವರನ್ನು ಒಟ್ಟಿಗೆ ಬರಮಾಡುವೆನು.


ಯೆಹೋವನು ಐಗುಪ್ತ್ಯರನ್ನು ಹತಮಾಡುವದಕ್ಕೆ ದೇಶದ ನಡುವೆ ಹಾದುಹೋಗುವಾಗ ನಿಮ್ಮ ನಿಮ್ಮ ಮನೇಬಾಗಲಿನ ಮೇಲಣ ಪಟ್ಟಿಯಲ್ಲಿಯೂ ಎರಡು ನಿಲುವು ಕಂಬಗಳಲ್ಲಿಯೂ ಆ ರಕ್ತವನ್ನು ಕಂಡು ಮುಂದಕ್ಕೆ ದಾಟಿಹೋಗುವನು. ನಿಮ್ಮ ಪ್ರಾಣ ತೆಗೆಯುವದಕ್ಕೆ ಸಂಹಾರಕನನ್ನು ನಿಮ್ಮ ಮನೆಗಳಲ್ಲಿ ಬರಗೊಡಿಸುವದೇ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು