Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 9:6 - ಕನ್ನಡ ಸತ್ಯವೇದವು J.V. (BSI)

6 ವೃದ್ಧ, ಯುವಕ, ಯುವತಿ, ಸ್ತ್ರೀ, ಬಾಲಕ ಎನ್ನದೆ ಸಕಲರನ್ನೂ ಸಂಹಾರಮಾಡಿಬಿಡಿರಿ; ಆದರೆ ಆ ಗುರುತುಳ್ಳವರಲ್ಲಿ ಯಾರನ್ನೂ ಮುಟ್ಟಬೇಡಿರಿ; ನನ್ನ ಆಲಯದಲ್ಲಿಯೇ ಪ್ರಾರಂಭಮಾಡಿರಿ ಎಂಬದಾಗಿ ಆತನು ನನಗೆ ಕೇಳಿಸುವಂತೆ ಅಪ್ಪಣೆಮಾಡಿದನು. ಆಗ ದೇವಾಲಯದ ಮುಂದೆ ಇದ್ದ ಹಿರಿಯರನ್ನು ಮೊದಲುಗೊಂಡು ಹತಿಸತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆಗ ಅವರು ದೇವಾಲಯದ ಮುಂದೆ ಇದ್ದ ಹಿರಿಯರನ್ನು ಮೊದಲುಗೊಂಡು ಹತಿಸತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ವೃದ್ಧ, ಯುವಕ, ಯುವತಿ, ಮಹಿಳೆ, ಬಾಲಕ ಎನ್ನದೆ ಸಕಲರನ್ನೂ ಸಂಹಾರ ಮಾಡಿಬಿಡಿ; ಆದರೆ ಆ ಗುರುತುಳ್ಳವರಲ್ಲಿ ಯಾರನ್ನೂ ಮುಟ್ಟಬೇಡಿ; ನನ್ನ ಆಲಯದಲ್ಲಿಯೇ ಪ್ರಾರಂಭಮಾಡಿ,” ಎಂದು ನನಗೆ ಕೇಳಿಸುವಂತೆ ಅಪ್ಪಣೆಮಾಡಿದರು. ಆಗ ದೇವಾಲಯದ ಮುಂದೆ ಇದ್ದ ಹಿರಿಯರನ್ನು ಮೊದಲುಗೊಂಡು ಹತಿಸತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ವೃದ್ಧ, ಯುವಕ, ಯುವತಿಯರನ್ನು ಮತ್ತು ಎಳೆಗೂಸುಗಳನ್ನು ಮತ್ತು ಹೆಂಗಸರನ್ನು ಕೊಂದುಹಾಕಿರಿ. ಆದರೆ ಗುರುತು ಯಾವನ ಮೇಲೆ ಇದೆಯೋ, ಅವನನ್ನು ಮುಟ್ಟಬೇಡಿರಿ. ನನ್ನ ಪರಿಶುದ್ಧ ಸ್ಥಳದಿಂದಲೇ ಪ್ರಾರಂಭಿಸಿರಿ” ಎಂದಾಗ, ಅವರು ಆಲಯದ ಮುಂದೆ ಇದ್ದ ಹಿರಿಯರಿಂದ ಪ್ರಾರಂಭಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 9:6
27 ತಿಳಿವುಗಳ ಹೋಲಿಕೆ  

ಭೂವಿುಯ ಮೇಲಿರುವ ಹುಲ್ಲನ್ನಾಗಲಿ ಯಾವ ಪಲ್ಯವನ್ನಾಗಲಿ ಮರವನ್ನಾಗಲಿ ಕೆಡಿಸದೆ ಹಣೆಯ ಮೇಲೆ ದೇವರ ಮುದ್ರೆಯಿಲ್ಲದವರಾದ ಮನುಷ್ಯರನ್ನು ಮಾತ್ರ ಕೆಡಿಸಬಹುದೆಂದು ಅವುಗಳಿಗೆ ಅಪ್ಪಣೆಯಾಯಿತು.


ಯೆಹೋವನು ಐಗುಪ್ತ್ಯರನ್ನು ಹತಮಾಡುವದಕ್ಕೆ ದೇಶದ ನಡುವೆ ಹಾದುಹೋಗುವಾಗ ನಿಮ್ಮ ನಿಮ್ಮ ಮನೇಬಾಗಲಿನ ಮೇಲಣ ಪಟ್ಟಿಯಲ್ಲಿಯೂ ಎರಡು ನಿಲುವು ಕಂಬಗಳಲ್ಲಿಯೂ ಆ ರಕ್ತವನ್ನು ಕಂಡು ಮುಂದಕ್ಕೆ ದಾಟಿಹೋಗುವನು. ನಿಮ್ಮ ಪ್ರಾಣ ತೆಗೆಯುವದಕ್ಕೆ ಸಂಹಾರಕನನ್ನು ನಿಮ್ಮ ಮನೆಗಳಲ್ಲಿ ಬರಗೊಡಿಸುವದೇ ಇಲ್ಲ.


ಆದರೂ ದೇವರ ಸ್ಥಿರವಾದ ಅಸ್ತಿವಾರವು ನಿಲ್ಲುತ್ತದೆ. ಅದರ ಮೇಲೆ - ತನ್ನವರು ಯಾರಾರೆಂಬದನ್ನು ಕರ್ತನು ತಿಳಿದಿದ್ದಾನೆಂತಲೂ ಕರ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರು ದುರ್ಮಾರ್ಗತನವನ್ನು ಬಿಟ್ಟುಬಿಡಬೇಕಂತಲೂ ಲಿಪಿಯುಂಟು.


ನಾವು ನಮ್ಮ ದೇವರ ದಾಸರಿಗೆ ಹಣೆಯ ಮೇಲೆ ಮುದ್ರೆ ಒತ್ತುವತನಕ ಭೂವಿುಯನ್ನಾಗಲಿ ಸಮುದ್ರವನ್ನಾಗಲಿ ಮರಗಳನ್ನಾಗಲಿ ಕೆಡಿಸಬೇಡಿರಿ ಎಂದು ಮಹಾ ಶಬ್ದದಿಂದ ಕೂಗಿ ಹೇಳಿದನು.


ಇಗೋ, ನನ್ನ ಹೆಸರುಗೊಂಡಿರುವ ಪಟ್ಟಣದಲ್ಲಿ ಬಾಧಿಸಲು ಪ್ರಾರಂಭಿಸುತ್ತೇನೆ. ನೀವು ಆ ದಂಡನೆಗೆ ತಪ್ಪಿಸಿಕೊಂಡೀರೋ? ಆಗುವದೇ ಇಲ್ಲ. ಖಡ್ಗವೇ, ಭೂನಿವಾಸಿಗಳನ್ನೆಲ್ಲ ಸಂಹರಿಸಲಿಕ್ಕೆ ಬಾ ಎಂದು ಕೂಗುವೆನು. ಇದು ಸೇನಾಧೀಶ್ವರನಾದ ಯೆಹೋವನೆಂಬ ನನ್ನ ನುಡಿ.


ತನ್ನ ಯಜಮಾನನ ಚಿತ್ತವನ್ನು ತಿಳಿದ ಆಳು ಸಿದ್ಧಮಾಡದೆಹೋದರೆ ಅಥವಾ ಅವನ ಚಿತ್ತಕ್ಕನುಸಾರ ನಡೆಯದಿದ್ದರೆ ಅವನು ಬಹಳ ಪೆಟ್ಟು ತಿನ್ನುವನು.


ಆತನು ಕಸ್ದೀಯರ ಅರಸನನ್ನು ಅವರ ಮೇಲೆ ಬರಮಾಡಿ ಎಲ್ಲರನ್ನೂ ಅವನ ಕೈಗೆ ಒಪ್ಪಿಸಿದನು. ಅವನು ಅವರ ಯುವಭಟರನ್ನು ಅವರ ಪವಿತ್ರಾಲಯದಲ್ಲೇ ಕತ್ತಿಯಿಂದ ಸಂಹರಿಸಿ ಯುವಕರನ್ನೂ ಕನ್ಯೆಯರನ್ನೂ ಮುದುಕರನ್ನೂ ಅತಿವೃದ್ಧರನ್ನೂ ಕನಿಕರಿಸದೆ ಎಲ್ಲರನ್ನೂ ಕೊಲ್ಲಿಸಿದನು.


ಈಗ ನೀನು ಹೋಗಿ ಅವರನ್ನು ಸೋಲಿಸಿ ಅವರಿಗಿರುವದನ್ನೆಲ್ಲಾ ಸಂಪೂರ್ಣವಾಗಿ ಹಾಳುಮಾಡು. ಗಂಡಸರನ್ನೂ ಹೆಂಗಸರನ್ನೂ ಮಕ್ಕಳನ್ನೂ ಶಿಶುಗಳನ್ನೂ ಎತ್ತು, ಕುರಿ, ಕತ್ತೆ, ಒಂಟೆ, ಇವುಗಳನ್ನೂ ಕನಿಕರವಿಲ್ಲದೆ ಕೊಂದುಹಾಕು ಎಂದು ಹೇಳುತ್ತಾನೆ ಅಂದನು.


ಆ ಕಾಲದಲ್ಲಿ ನಾವು ಅವನ ಎಲ್ಲಾ ಪಟ್ಟಣಗಳನ್ನೂ ಸ್ವಾಧೀನಮಾಡಿಕೊಂಡು ಅವುಗಳಲ್ಲಿದ್ದ ಗಂಡಸರನ್ನೂ ಹೆಂಗಸರನ್ನೂ ಮಕ್ಕಳನ್ನೂ ನಿಶ್ಶೇಷವಾಗಿ ಹತಮಾಡಿದೆವು; ಒಬ್ಬನನ್ನೂ ಉಳಿಸಲಿಲ್ಲ.


ಸ್ತ್ರೀ ಸಹವಾಸದಿಂದ ಮಲಿನರಾಗದವರು ಇವರೇ; ಇವರು ಕನ್ಯೆಯರಂತೆ ನಿಷ್ಕಳಂಕರು. ಯಜ್ಞದ ಕುರಿಯಾದಾತನು ಎಲ್ಲಿ ಹೋದರೂ ಇವರು ಆತನ ಹಿಂದೆ ಹೋಗುವರು. ಇವರು ಮನುಷ್ಯರೊಳಗಿಂದ ಸ್ವಕೀಯ ಜನರಾಗಿ ಕೊಂಡುಕೊಳ್ಳಲ್ಪಟ್ಟು ದೇವರಿಗೂ ಯಜ್ಞದ ಕುರಿಯಾದಾತನಿಗೂ ಪ್ರಥಮಫಲದಂತಾದರು.


ಭೂವಿುಯ ಸಕಲಕುಲಗಳೊಳಗೆ ನಿಮ್ಮನ್ನು ಮಾತ್ರ ನನ್ನವರೆಂದು ಅರಿತುಕೊಂಡಿದ್ದೇನೆ; ಆದಕಾರಣ ನಿಮ್ಮ ಎಲ್ಲಾ ಪಾಪಗಳ ಫಲವನ್ನು ನಿಮಗೆ ತಿನ್ನಿಸುವೆನು.


ಆಮೇಲೆ ದೇವರಾತ್ಮವು ನನ್ನನ್ನು ಎತ್ತಿ ಪೂರ್ವದಿಕ್ಕಿಗೆ ಅಭಿಮುಖವಾಗಿರುವ ಯೆಹೋವನ ಆಲಯದ ಮೂಡಣ ಬಾಗಿಲಿಗೆ ತಂದುಬಿಟ್ಟಿತು; ಇಗೋ, ಬಾಗಿಲ ಮುಂದೆ ಇಪ್ಪತ್ತೈದು ಜನರು ನಿಂತಿದ್ದರು; ನಾನು ಅವರ ಮಧ್ಯದಲ್ಲಿ ಅಜ್ಜೂರನ ಮಗನಾದ ಯಾಜನ್ಯ, ಬೆನಾಯನ ಮಗನಾದ ಪೆಲತ್ಯ ಎಂಬ ಜನದೊಡೆಯರನ್ನು ನೋಡಿದೆನು.


ನಾವು ಹೆಷ್ಬೋನಿನ ಅರಸನಾದ ಸೀಹೋನನ ಪಟ್ಟಣಗಳಿಗೆ ಮಾಡಿದಂತೆ ಇವುಗಳಿಗೂ ಮಾಡಿದೆವು. ಅವುಗಳಲ್ಲಿದ್ದ ಗಂಡಸರನ್ನೂ ಹೆಂಗಸರನ್ನೂ ಮಕ್ಕಳನ್ನೂ ನಿಶ್ಶೇಷವಾಗಿ ನಾಶಮಾಡಿದೆವು.


ಅದಕ್ಕೆ ಯೆಹೋವನು - ಕಾಯಿನನ ಪ್ರಾಣವನ್ನು ತೆಗೆದವನಿಗೆ ಏಳರಷ್ಟು ಪ್ರತಿದಂಡನೆಯಾಗುವದು ಎಂದು ಹೇಳಿ ಅವನನ್ನು ಕಂಡವರು ಕೊಲ್ಲಕೂಡದಂತೆ ಅವನ ಮೇಲೆ ಒಂದು ಗುರುತಿಟ್ಟನು.


ಏಕಂದರೆ ಬೀದಿಗಳಲ್ಲಿ ಮಕ್ಕಳೂ ಚೌಕಗಳಲ್ಲಿ ಯುವಕರೂ ಇಲ್ಲದ ಹಾಗೆ ಮೃತ್ಯುವು ನಮ್ಮ ಕಿಟಕಿಗಳ ಮೇಲೆ ಹತ್ತಿ ನಮ್ಮ ಉಪ್ಪರಿಗೆಗಳೊಳಗೆ ನುಗ್ಗಿದೆ.


ಈ ದೇಶದಲ್ಲಿನ ದೊಡ್ಡವರೂ ಅಲ್ಪರೂ ಸಾಯುವರು; ಅವರನ್ನು ಯಾರೂ ಹೂಣಿಡರು, ಅವರಿಗಾಗಿ ಯಾರೂ ಗೋಳಾಡರು, ಗಾಯ ಮಾಡಿಕೊಳ್ಳರು, ತಲೆಬೋಳಿಸಿಕೊಳ್ಳರು;


ನೀನು ಯೆರೂಸಲೇಮ್ ಪಟ್ಟಣದಲ್ಲೆಲ್ಲಾ ತಿರುಗಿ ಅದರೊಳಗೆ ನಡೆಯುವ ಸಮಸ್ತ ಅಸಹ್ಯಕಾರ್ಯಗಳಿಗಾಗಿ ನರಳಿ ಗೋಳಾಡುತ್ತಿರುವ ಜನರ ಹಣೆಯ ಮೇಲೆ ಗುರುತುಮಾಡು ಎಂದು ಅಪ್ಪಣೆಕೊಟ್ಟನು.


ವಿುಕ್ಕವರಿಗೆ - ನೀವು ಪಟ್ಟಣದಲ್ಲೆಲ್ಲಾ ಇವನ ಹಿಂದೆ ತಿರುಗುತ್ತಾ ಹತಿಸಿರಿ; ಯಾರನ್ನೂ ಕಟಾಕ್ಷಿಸದಿರಿ, ಉಳಿಸದಿರಿ;


ಅವರಿಗೆ ಒಂದರ ಮೇಲೊಂದಾಗಿ ವಿಪತ್ತುಗಳನ್ನು ಬರಮಾಡುವೆನು; ನನ್ನ ಎಲ್ಲಾ ಬಾಣಗಳನ್ನೂ ಅವರಿಗೆ ವಿರೋಧವಾಗಿ ಪ್ರಯೋಗಿಸುವೆನು.


ಆದಕಾರಣ ಯೆಹೋವನ ರೋಷವು ನನ್ನಲ್ಲಿ ತುಂಬಿತುಳುಕುತ್ತದೆ; ತಡೆದು ತಡೆದು ನನಗೆ ಸಾಕಾಯಿತು; ಬೀದಿಯಲ್ಲಿನ ಮಕ್ಕಳ ಮೇಲೂ ಯುವಕರ ಸಂಘದ ಮೇಲೂ ಅದನ್ನು ಹೊಯ್ದುಬಿಡಬೇಕು; ಗಂಡನೂ ಹೆಂಡತಿಯೂ ಮುದುಕನೂ ಮುಪ್ಪಿನ ಮುದುಕನೂ (ಅಂತು ಎಲ್ಲರೂ) ಅಪಹರಿಸಲ್ಪಡುವರು.


ಹೀಗಿರಲು ಸೇನಾಧೀಶ್ವರಸ್ವಾವಿುಯೂ ಇಸ್ರಾಯೇಲಿನ ದೇವರೂ ಆದ ಯೆಹೋವನು ಈಗ ಇಂತೆನ್ನುತ್ತಾನೆ - ಈ ದೊಡ್ಡ ಕೇಡನ್ನು ನಿಮಗೆ ನೀವೇ ಉಂಟುಮಾಡಿಕೊಳ್ಳುವದೇಕೆ? ಈ ದುರಾಚಾರದ ನಿವಿುತ್ತ ಯೆಹೂದದಲ್ಲಿರುವ ಗಂಡಸರು, ಹೆಂಗಸರು, ಮಕ್ಕಳು, ಮೊಲೆಕೂಸುಗಳು ನಿರ್ಮೂಲವಾಗುವರು, ನಿಮ್ಮಲ್ಲಿ ಯಾರೂ ಉಳಿಯರು.


ಪ್ರವಾಸಿಗಳಾಗಿ ನೀವು ಬಂದಿರುವ ಐಗುಪ್ತದಲ್ಲಿ ಅನ್ಯದೇವತೆಗಳಿಗೆ ಧೂಪಹಾಕುವ ದುಷ್ಕೃತ್ಯವನ್ನು ನಡಿಸುತ್ತಾ ನನ್ನನ್ನು ಕೆಣಕುವದರಿಂದ ನೀವು ನಿರ್ಮೂಲರಾಗಿ ಸಕಲ ಭೂರಾಜ್ಯಗಳ ಶಾಪದೂಷಣೆಗಳಿಗೆ ಗುರಿಯಾಗುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು