ಯೆಹೋಶುವ 1:1 - ಕನ್ನಡ ಸತ್ಯವೇದವು J.V. (BSI)1 ಯೆಹೋವನ ಸೇವಕನಾದ ಮೋಶೆಯು ಸತ್ತ ಮೇಲೆ ಯೆಹೋವನು ಅವನ ಶಿಷ್ಯನಾದ ನೂನನ ಮಗ ಯೆಹೋಶುವನಿಗೆ - ನನ್ನ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೆಹೋವನ ಸೇವಕನಾದ ಮೋಶೆಯ ಮರಣದ ನಂತರ ಯೆಹೋವನು ಮೋಶೆಯ ಸೇವಕನಾದ ನೂನನ ಮಗನಾದ ಯೆಹೋಶುವನಿಗೆ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಸರ್ವೇಶ್ವರಸ್ವಾಮಿ, ತಮ್ಮ ದಾಸ ಮೋಶೆ ಮರಣಹೊಂದಿದ ಮೇಲೆ ಅವನ ಶಿಷ್ಯನಾದ ನೂನನ ಮಗ ಯೆಹೋಶುವನಿಗೆ ಹೀಗೆಂದು ಆಜ್ಞಾಪಿಸಿದರು: ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಮೋಶೆಯು ಯೆಹೋವನ ಸೇವಕನಾಗಿದ್ದನು. ನೂನನ ಮಗನಾದ ಯೆಹೋಶುವನು ಮೋಶೆಯ ಸಹಾಯಕನಾಗಿದ್ದನು. ಮೋಶೆಯ ಮರಣಾನಂತರ ಯೆಹೋವನು ಯೆಹೋಶುವನೊಡನೆ ಮಾತನಾಡಿ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಯೆಹೋವ ದೇವರ ಸೇವಕನಾದ ಮೋಶೆಯ ಮರಣದ ತರುವಾಯ, ನೂನನ ಮಗ ಮತ್ತು ಮೋಶೆಯ ಸೇವಕ ಆಗಿರುವ ಯೆಹೋಶುವನಿಗೆ ಯೆಹೋವ ದೇವರು: ಅಧ್ಯಾಯವನ್ನು ನೋಡಿ |
ದೇವರ ದಾಸನೂ ಯೇಸು ಕ್ರಿಸ್ತನ ಅಪೊಸ್ತಲನೂ ಆಗಿರುವ ಪೌಲನು ನಮ್ಮೆಲ್ಲರಿಗೆ ಹುದುವಾಗಿರುವ ನಂಬಿಕೆಯ ಸಂಬಂಧದಲ್ಲಿ ನನ್ನ ನಿಜಕುಮಾರನಾದ ತೀತನಿಗೆ ಬರೆಯುವದೇನಂದರೆ - ತಂದೆಯಾದ ದೇವರಿಂದಲೂ ನಮ್ಮ ರಕ್ಷಕನಾದ ಕ್ರಿಸ್ತ ಯೇಸುವಿನಿಂದಲೂ ನಿನಗೆ ಕೃಪೆಯೂ ಶಾಂತಿಯೂ ಆಗಲಿ. ದೇವರಾದುಕೊಂಡವರ ನಂಬಿಕೆಯೂ ಭಕ್ತಿಯನ್ನುಂಟುಮಾಡುವ ಸತ್ಯದ ಪರಿಜ್ಞಾನವೂ ವೃದ್ಧಿಯಾಗುವದಕ್ಕೋಸ್ಕರವೇ ಅಪೊಸ್ತಲನಾಗಿದ್ದೇನೆ. ಆ ನಂಬಿಕೆಗೂ ಸತ್ಯದ ಪರಿಜ್ಞಾನಕ್ಕೂ ನಿತ್ಯಜೀವದ ನಿರೀಕ್ಷೆಯೇ ಆಧಾರವಾಗಿದೆ. ಸುಳ್ಳಾಡದ ದೇವರು ಆ ನಿತ್ಯಜೀವವನ್ನು ಕೊಡುತ್ತೇನೆಂದು ಅನಾದಿಕಾಲದಲ್ಲಿ ವಾಗ್ದಾನಮಾಡಿ ತನ್ನ ಕ್ಲುಪ್ತ ಸಮಯದಲ್ಲಿ ವಾಗ್ದಾನ ನೆರವೇರಿಸಿ ಪ್ರಸಂಗದ ಮೂಲಕ ಪ್ರಕಟಿಸಿದನು. ಆ ಪ್ರಸಂಗೋದ್ಯೋಗವು ನಮ್ಮ ರಕ್ಷಕನಾದ ದೇವರ ಅಪ್ಪಣೆಯ ಪ್ರಕಾರ ನನಗೆ ಒಪ್ಪಿಸಲ್ಪಟ್ಟದೆ.