ಯೆಹೋಶುವ 1:11 - ಕನ್ನಡ ಸತ್ಯವೇದವು J.V. (BSI)11 ನೀವು ಪಾಳೆಯದ ಎಲ್ಲಾ ಕಡೆಗೂ ಹೋಗಿ ಜನರಿಗೆ - ನೀವು ಇನ್ನು ಮೂರು ದಿವಸಗಳಲ್ಲಿ ಈ ಯೊರ್ದನ್ ಹೊಳೆಯನ್ನು ದಾಟಿ ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವಾಸ್ತ್ಯವಾಗಿ ಕೊಡುವ ದೇಶವನ್ನು ಸ್ವತಂತ್ರಿಸಿಕೊಳ್ಳುವದಕ್ಕೆ ಹೋಗಬೇಕು. ಆದದರಿಂದ ನಿಮಗೋಸ್ಕರ ಆಹಾರವನ್ನು ಸಿದ್ಧಮಾಡಿಕೊಳ್ಳಿರಿ ಎಂದು ಹೇಳಬೇಕು ಅಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 “ನೀವು ಪಾಳೆಯದ ಎಲ್ಲೆಡೆಗೆ ಹೋಗಿ ನಿಮ್ಮ ಜನರಿಗೆ ‘ನೀವು ಇನ್ನು ಮೂರು ದಿನಗಳಲ್ಲಿ ಈ ಯೊರ್ದನ್ ನದಿಯನ್ನು ದಾಟಿ ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವತ್ತಾಗಿ ಕೊಡುವ ದೇಶವನ್ನು ವಶಪಡಿಸಿಕೊಳ್ಳಲು ಹೋಗಬೇಕು. ಆದುದರಿಂದ ನಿಮಗೆ ಬೇಕಾದ ಆಹಾರವನ್ನು ಸಿದ್ಧಮಾಡಿಕೊಳ್ಳಿರಿ’ ಎಂದು ತಿಳಿಸಿರಿ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 “ನೀವು ಪಾಳೆಯದ ಎಲ್ಲೆಡೆಗೆ ಹೋಗಿ ಜನರಿಗೆ, ‘ನೀವು ಇನ್ನು ಮೂರು ದಿನಗಳಲ್ಲಿ ಈ ಜೋರ್ಡನ್ ನದಿಯನ್ನು ದಾಟಿ ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಸ್ವಂತ ಸೊತ್ತಾಗಿ ಕೊಡುವ ನಾಡನ್ನು ವಶಪಡಿಸಿಕೊಳ್ಳಲು ಹೋಗಬೇಕು. ಆದುದರಿಂದ ನಿಮಗೆ ಬೇಕಾದ ಆಹಾರ ಪದಾರ್ಥಗಳನ್ನು ಸಿದ್ಧಮಾಡಿಕೊಳ್ಳಿ’ ಎಂದು ತಿಳಿಸಿರಿ,” ಎಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 “ನೀವು ಪಾಳೆಯದ ಎಲ್ಲಾ ಕಡೆಗೆ ಹೋಗಿ ಜನರಿಗೆ ಸಿದ್ಧವಾಗಿರಲು ತಿಳಿಸಿರಿ; ಸ್ವಲ್ಪ ಆಹಾರವನ್ನು ಸಿದ್ಧಪಡಿಸಿಕೊಳ್ಳಲು ಹೇಳಿರಿ. ಇನ್ನು ಮೂರು ದಿವಸಗಳಲ್ಲಿ ನಾವು ಈ ಜೋರ್ಡನ್ ನದಿಯನ್ನು ದಾಟಿ ಹೋಗುವೆವು. ನಾನು ಹೋಗಿ ಯೆಹೋವನಾದ ನಮ್ಮ ದೇವರು ನಮಗೆ ಕೊಡುವ ದೇಶವನ್ನು ವಶಪಡಿಸಿಕೊಳ್ಳುವೆವು ಎಂದು ಹೇಳಿರಿ” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 “ನೀವು ಪಾಳೆಯದ ಮಧ್ಯದಲ್ಲಿ ನಡೆದುಹೋಗಿ ಜನರಿಗೆ, ‘ನಿಮಗೋಸ್ಕರ ಆಹಾರವನ್ನು ಸಿದ್ಧಮಾಡಿಕೊಳ್ಳಿರಿ, ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಸೊತ್ತಾಗಿ ಕೊಟ್ಟಿರುವ ದೇಶವನ್ನು ನೀವು ಸ್ವಾಧೀನಮಾಡಿಕೊಳ್ಳಲು ಇನ್ನು ಮೂರು ದಿವಸಗಳಲ್ಲಿ ಯೊರ್ದನ್ ನದಿಯನ್ನು ದಾಟಿ ಹೋಗಬೇಕು,’ ಎಂದು ತಿಳಿಸಿರಿ,” ಎಂದನು. ಅಧ್ಯಾಯವನ್ನು ನೋಡಿ |