Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 1:14 - ಕನ್ನಡ ಸತ್ಯವೇದವು J.V. (BSI)

14 ನಿಮ್ಮ ಹೆಂಡರುಮಕ್ಕಳೂ ದನಕುರಿಗಳೂ ಮೋಶೆಯು ನಿಮಗೆ ಯೊರ್ದನಿನ ಆಚೆಯಲ್ಲಿ ಕೊಟ್ಟ ದೇಶದಲ್ಲೇ ಇರಲಿ. ಆದರೆ ನಿಮ್ಮ ಭಟರೆಲ್ಲರೂ ಯುದ್ಧಸನ್ನದ್ಧರಾಗಿ ನಿಮ್ಮ ಸಹೋದರರ ಮುಂದೆ ಹೊರಟು ಹೊಳೆದಾಟಿ ಅವರಿಗೆ ಸಹಾಯಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಿಮ್ಮ ಹೆಂಡತಿ ಮಕ್ಕಳು, ನಿಮ್ಮ ದನಕುರಿಗಳೂ ಮೋಶೆಯು ನಿಮಗೆ ಯೊರ್ದನಿನ ಆಚೆಯಲ್ಲಿ ಕೊಟ್ಟ ದೇಶದಲ್ಲೇ ವಾಸವಾಗಿರಲಿ. ಆದರೆ ನಿಮ್ಮ ಭಟರೆಲ್ಲರೂ ಯುದ್ಧಸನ್ನದ್ಧರಾಗಿ ನಿಮ್ಮ ಸಹೋದರರಿಗೆ ಮುಂದಾಗಿ ಹೊರಟು, ಹೊಳೆದಾಟಿ ಅವರಿಗೆ ಸಹಾಯಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ನಿಮ್ಮ ಮಡದಿಮಕ್ಕಳು ಮತ್ತು ದನಕುರಿಗಳು ಮೋಶೆ ನಿಮಗೆ ಜೋರ್ಡನಿನ ಆಚೆ ಕೊಟ್ಟ ನಾಡಿನಲ್ಲೇ ಇರಲಿ. ಆದರೆ ನಿಮ್ಮ ಯೋಧರೆಲ್ಲರು ಯುದ್ಧಸನ್ನದ್ಧರಾಗಿ ನಿಮ್ಮ ಸಹೋದರರಿಗೆ ಮುಂದಾಗಿ ಹೊರಟು, ನದಿದಾಟಿ, ಅವರಿಗೆ ನೆರವಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಯೆಹೋವನು ಈಗಾಗಲೇ ಜೋರ್ಡನ್ ನದಿಯ ಪೂರ್ವದ ಪ್ರದೇಶವನ್ನು ನಿಮಗೆ ಕೊಟ್ಟಿದ್ದಾನೆ. ನಿಮ್ಮ ಹೆಂಡಂದಿರು, ಮಕ್ಕಳು ಮತ್ತು ನಿಮ್ಮ ದನಕುರಿಗಳು ಈ ಪ್ರದೇಶದಲ್ಲಿಯೇ ಇರಬಹುದು. ಆದರೆ ನಿಮ್ಮ ಯೋಧರು ನಿಮ್ಮ ಸಹೋದರರ ಸಂಗಡ ಜೋರ್ಡನ್ ನದಿಯನ್ನು ದಾಟಬೇಕು. ನೀವು ಯುದ್ಧಸನ್ನದ್ಧರಾಗಿ ನಿಮ್ಮ ಸಹೋದರರಿಗೆ ಅವರ ದೇಶವನ್ನು ಪಡೆಯುವುದರಲ್ಲಿ ಸಹಾಯ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನಿಮ್ಮ ಹೆಂಡತಿಯರೂ ಮಕ್ಕಳೂ ಪಶುಗಳು ಮೋಶೆ ನಿಮಗೆ ಕೊಟ್ಟ ಯೊರ್ದನ್ ನದಿಯ ಈಚೆ ಇರುವ ದೇಶದಲ್ಲೇ ಇರಲಿ. ಆದರೆ ನಿಮ್ಮಲ್ಲಿ ಇರುವ ಪರಾಕ್ರಮಶಾಲಿಗಳೆಲ್ಲಾ ಯುದ್ಧಸನ್ನದ್ಧರಾಗಿ ನಿಮ್ಮ ಸಹೋದರರ ಮುಂದೆ ಹೊರಟು, ನದಿದಾಟಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 1:14
9 ತಿಳಿವುಗಳ ಹೋಲಿಕೆ  

ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಇದ್ದವು. ಆ ಸ್ತ್ರೀಯು ಧೂಮ್ರವರ್ಣದ ವಸ್ತ್ರಗಳನ್ನೂ ರಕ್ತಾಂಬರವನ್ನೂ ಧರಿಸಿಕೊಂಡು ಚಿನ್ನ ರತ್ನ ಮುತ್ತು ಇವುಗಳಿಂದ ಅಲಂಕರಿಸಿಕೊಂಡಿದ್ದಳು; ಅವಳ ಕೈಯಲ್ಲಿ ಒಂದು ಚಿನ್ನದ ಬಟ್ಟಲು ಇತ್ತು; ಅದು ಅಸಹ್ಯವಾದವುಗಳಿಂದ ಅಂದರೆ ಅವಳ ಜಾರತ್ವ ಸಂಬಂಧವಾದ ಅಶುದ್ಧ ವಸ್ತುಗಳಿಂದ ತುಂಬಿತ್ತು.


ಮತ್ತು - ಯಾವನಾದರೂ ಧೈರ್ಯಕಡಿಮೆಯಾಗಿ ಅಂಜಿಕೊಂಡರೆ ಅವನೂ ಮನೆಗೆ ಹೋಗಲಿ; ಅವನು ದಿಗಿಲುಪಡುವದರಿಂದ ಅವನ ಜೊತೆಗಾರರೂ ದಿಗಿಲು ಪಟ್ಟಾರು ಎಂದು ಹೇಳಬೇಕು.


ಆತನು - ಈ ಜನರಿಗೆ ಯುದ್ಧಪ್ರಾಪ್ತವಾದರೆ ಅವರು ಧೈರ್ಯಗೆಟ್ಟು ಐಗುಪ್ತದೇಶಕ್ಕೆ ಹಿಂದಿರುಗಾರು ಅಂದುಕೊಂಡನು. ಇಸ್ರಾಯೇಲ್ಯರು ಯುದ್ಧಸನ್ನದ್ಧರಾಗಿ ಐಗುಪ್ತದೇಶದಿಂದ ಹೊರಟರು.


ನಮ್ಮ ಮನೆಗಳವರೂ ಹೆಂಡತಿಯರೂ ದನಕುರಿಗಳೂ ಇಲ್ಲೇ ಗಿಲ್ಯಾದ್ ದೇಶದ ಊರುಗಳಲ್ಲಿ ಇರಲಿ.


ನಿಮಗೆ ಬಹಳ ದನಕುರಿಗಳುಂಟೆಂಬದನ್ನು ನಾನು ಬಲ್ಲೆ. ನಿಮ್ಮ ದೇವರಾದ ಯೆಹೋವನು ಯೊರ್ದನ್ ಹೊಳೆಯ ಆಚೆ ನಿಮ್ಮ ಸಹೋದರರಿಗೆ ಕೊಡುವ ದೇಶವು ಅವರಿಗೆ ಸ್ವಾಧೀನವಾಗುವವರೆಗೆ ನಿಮ್ಮ ಹೆಂಡರುಮಕ್ಕಳೂ ದನಕುರಿಗಳೂ ನಾನು ನಿಮಗೆ ಕೊಟ್ಟಿರುವ ಪಟ್ಟಣಗಳಲ್ಲೇ ಇರಲಿ.


ಯೆಹೋವನ ಸೇವಕನಾದ ಮೋಶೆಯು ನಿಮಗೆ ಆಜ್ಞಾಪಿಸಿದ್ದನ್ನು ನೆನಪುಮಾಡಿಕೊಳ್ಳಿರಿ. ನಿಮ್ಮ ದೇವರಾದ ಯೆಹೋವನು ನಿಮಗೆ ಈ ದೇಶವನ್ನು ಕೊಟ್ಟು ವಿಶ್ರಾಂತಿಯನ್ನುಂಟುಮಾಡಿದ್ದಾನೆ.


ನಿಮ್ಮ ದೇವರಾದ ಯೆಹೋವನು ಕೊಡುವ ದೇಶವನ್ನು ನಿಮ್ಮ ಸಹೋದರರು ಸ್ವಾಧೀನಮಾಡಿಕೊಂಡು ಅವರೂ ನಿಮ್ಮಂತೆ ವಿಶ್ರಾಂತಿಹೊಂದಿದನಂತರ ಯೆಹೋವನ ಸೇವಕನಾದ ಮೋಶೆಯು ನಿಮಗೆ ಯೊರ್ದನ್ ಹೊಳೆಯ ಪೂರ್ವದಿಕ್ಕಿನಲ್ಲಿ ಸ್ವಾಸ್ತ್ಯವಾಗಿ ಕೊಟ್ಟ ದೇಶಕ್ಕೆ ತಿರಿಗಿ ಬಂದು ಅದನ್ನು ಅನುಭವಿಸಬಹುದು ಎಂಬದೇ.


ಅವರು ದೇಶದ ಮೊದಲನೆಯ ಭಾಗವನ್ನು ತಮಗೋಸ್ಕರ ತೆಗೆದುಕೊಂಡರು; ಅಲ್ಲಿ ಪ್ರಧಾನನಿಗೆ ಯೋಗ್ಯವಾದ ಸ್ವಾಸ್ತ್ಯವು ದೊರಕಿತು. ಅವರು ಜನಾಧಿಪತಿಗಳ ಜೊತೆಯಲ್ಲಿ ಬಂದು ಇಸ್ರಾಯೇಲ್ಯರೊಡನೆ ಯೆಹೋವನ ಆಜ್ಞೆಯನ್ನು ನೆರವೇರಿಸಿ ಆತನ ನ್ಯಾಯವನ್ನು ಸ್ಥಾಪಿಸಿದರು.


ರೂಬೇನ್ಯರೂ ಗಾದ್ಯರೂ ಮನಸ್ಸೆಕುಲದ ಅರ್ಧಜನರೂ ಮೋಶೆಯು ತಮಗೆ ಆಜ್ಞಾಪಿಸಿದಂತೆ ಯುದ್ಧಸನ್ನದ್ಧರಾಗಿ ಇಸ್ರಾಯೇಲ್ಯರ ಮುಂದಾಗಿ ಹೊರಟು ಹೊಳೆದಾಟಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು