ಯೆಹೋಶುವ 1:15 - ಕನ್ನಡ ಸತ್ಯವೇದವು J.V. (BSI)15 ನಿಮ್ಮ ದೇವರಾದ ಯೆಹೋವನು ಕೊಡುವ ದೇಶವನ್ನು ನಿಮ್ಮ ಸಹೋದರರು ಸ್ವಾಧೀನಮಾಡಿಕೊಂಡು ಅವರೂ ನಿಮ್ಮಂತೆ ವಿಶ್ರಾಂತಿಹೊಂದಿದನಂತರ ಯೆಹೋವನ ಸೇವಕನಾದ ಮೋಶೆಯು ನಿಮಗೆ ಯೊರ್ದನ್ ಹೊಳೆಯ ಪೂರ್ವದಿಕ್ಕಿನಲ್ಲಿ ಸ್ವಾಸ್ತ್ಯವಾಗಿ ಕೊಟ್ಟ ದೇಶಕ್ಕೆ ತಿರಿಗಿ ಬಂದು ಅದನ್ನು ಅನುಭವಿಸಬಹುದು ಎಂಬದೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ನಿಮ್ಮ ದೇವರಾದ ಯೆಹೋವನು ಕೊಡುವ ದೇಶವನ್ನು ನಿಮ್ಮ ಸಹೋದರರು ಸ್ವಾಧೀನಮಾಡಿಕೊಂಡು ಅವರೂ ನಿಮ್ಮಂತೆ ವಿಶ್ರಾಂತಿ ಹೊಂದಿದ ನಂತರ ನಿಮ್ಮ ಸ್ವಂತ ದೇಶಕ್ಕೆ ಹಿಂತಿರುಗಿ, ಮೋಶೆಯು ನಿಮಗೆ ಯೊರ್ದನ್ ನದಿಯ ಪೂರ್ವದಿಕ್ಕಿನಲ್ಲಿ ಸ್ವತ್ತಾಗಿ ಕೊಟ್ಟ ದೇಶವನ್ನು ಸ್ವಾಧೀನಪಡಿಸಿಕೊಂಡು ಅದನ್ನು ಅನುಭವಿಸುವಿರಿ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಹಾಗೆಯೇ ನಿಮ್ಮ ಸಹೋದರರನ್ನೂ ನೆಮ್ಮದಿಪಡಿಸಿ, ಸರ್ವೇಶ್ವರನಾದ ದೇವರು ತಮಗೆ ನೀಡುವ ನಾಡನ್ನು ಅವರು ಸ್ವತಂತ್ರಿಸಿಕೊಳ್ಳುವ ವರೆಗೆ ಅವರಿಗೆ ಸಹಾಯ ಮಾಡಲಿ. ತರುವಾಯ ಸರ್ವೇಶ್ವರನ ದಾಸ ಮೋಶೆ ಜೋರ್ಡನ್ನಿಗೆ ಈಚೆ ಸೂರ್ಯೋದಯದ ದಿಕ್ಕಿನಲ್ಲಿ, ನಿಮಗೆ ಕೊಟ್ಟ ಸ್ವಂತ ನಾಡಿಗೆ ಹಿಂದಿರುಗಿ ಬಂದು ಅದನ್ನು ಅನುಭವಿಸಬಹುದು.” ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಯೆಹೋವನು ನಿಮ್ಮ ವಿಶ್ರಾಂತಿಗಾಗಿ ಒಂದು ಸ್ಥಳವನ್ನು ಕೊಟ್ಟಿದ್ದಾನೆ. ಯೆಹೋವನು ನಿಮ್ಮ ಸಹೋದರರಿಗಾಗಿಯೂ ಒಂದು ಸ್ಥಳವನ್ನು ಕೊಡುತ್ತಾನೆ. ಆದರೆ ನಿಮ್ಮ ದೇವರಾದ ಯೆಹೋವನು ಅವರಿಗೆ ಕೊಡುವ ದೇಶವನ್ನು ಅವರು ಪಡೆದುಕೊಳ್ಳುವವರೆಗೆ ನೀವು ನಿಮ್ಮ ಸಹೋದರರಿಗೆ ಸಹಾಯ ಮಾಡಬೇಕು. ಆಮೇಲೆ ನೀವು ಜೋರ್ಡನ್ ನದಿಯ ಪೂರ್ವದಿಕ್ಕಿನಲ್ಲಿರುವ ನಿಮ್ಮ ದೇಶಕ್ಕೆ ಹೋಗಬಹುದು. ಯೆಹೋವನ ಸೇವಕನಾದ ಮೋಶೆಯು ನಿಮಗೆ ಕೊಟ್ಟ ದೇಶವು ಅದೇ ಆಗಿದೆ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಯೆಹೋವ ದೇವರು ನಿಮ್ಮ ಹಾಗೆಯೇ ನಿಮ್ಮ ಸಹೋದರರನ್ನು ವಿಶ್ರಾಂತಿಪಡಿಸಿ, ಅವರು ನಿಮ್ಮ ದೇವರಾದ ಯೆಹೋವ ದೇವರು ತಮಗೆ ಕೊಡುವ ದೇಶವನ್ನು ಸ್ವಾಧೀನಮಾಡಿಕೊಳ್ಳುವವರೆಗೆ ಅವರಿಗೆ ಸಹಾಯಮಾಡಬೇಕು. ತರುವಾಯ ಯೆಹೋವ ದೇವರ ಸೇವಕನಾದ ಮೋಶೆಯು ಯೊರ್ದನ್ ನದಿಯ ಈಚೆಯಲ್ಲಿ ಸೂರ್ಯನು ಉದಯಿಸುವ ದಿಕ್ಕಿನಲ್ಲಿ ನಿಮಗೆ ಕೊಟ್ಟ ನಿಮ್ಮ ಸೊತ್ತಾಗಿರುವ ದೇಶಕ್ಕೆ ತಿರುಗಿಬಂದು, ಅದನ್ನು ಸ್ವಾಧೀನಮಾಡಿಕೊಂಡು, ಅದನ್ನು ಅನುಭವಿಸಿರಿ,” ಎಂದನು. ಅಧ್ಯಾಯವನ್ನು ನೋಡಿ |