Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 1:18 - ಕನ್ನಡ ಸತ್ಯವೇದವು J.V. (BSI)

18 ನಿನ್ನ ಆಜ್ಞೆಗಳಲ್ಲಿ ಒಂದನ್ನಾದರೂ ಅಲಕ್ಷ್ಯಮಾಡಿ ನಿನ್ನ ವಿಧಿಗಳನ್ನು ಎದುರಿಸುವವನು ಸಾಯತಕ್ಕವನೇ; ಸ್ಥಿರಚಿತ್ತನಾಗಿರು, ಧೈರ್ಯದಿಂದಿರು ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನಿನ್ನ ಆಜ್ಞೆಗಳಲ್ಲಿ ಒಂದನ್ನಾದರೂ ಅಲಕ್ಷ್ಯ ಮಾಡಿದರೆ ನಿನ್ನ ವಿಧಿಗಳಿಗೆ ವಿರುದ್ಧವಾಗಿ ನಡೆದರೆ ಮರಣದಂಡನೆಗೆ ಗುರಿಯಾಗತಕ್ಕವನು; ಆದುದರಿಂದ ಸ್ಥಿರಚಿತ್ತನಾಗಿರು, ಧೈರ್ಯದಿಂದಿರು” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ನಿಮ್ಮ ಆಜ್ಞೆಗಳಲ್ಲಿ ಒಂದನ್ನಾದರೂ ಅಲಕ್ಷ್ಯಮಾಡಿ ನಿಮ್ಮ ವಿಧಿಗಳನ್ನು ಎದುರಿಸುವವನು ಮರಣ ದಂಡನೆಗೆ ಗುರಿಯಾಗತಕ್ಕವನು. ಆದುದರಿಂದ ಧೈರ್ಯಸ್ಥೈರ್ಯದಿಂದಿರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಯಾರಾದರೂ ನಿನ್ನ ಆಜ್ಞೆಗಳನ್ನು ಉಲ್ಲಂಘಿಸಿದರೆ ಅಥವಾ ಯಾರಾದರೂ ನಿನ್ನನ್ನು ವಿರೋಧಿಸಿದರೆ ಅವನನ್ನು ಕೊಲ್ಲಲಾಗುವುದು. ನೀನು ಮಾತ್ರ ಸ್ಥಿರಚಿತ್ತನಾಗಿರು; ಧೈರ್ಯಶಾಲಿಯಾಗಿರು” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ನೀನು ಆಜ್ಞಾಪಿಸುವ ಎಲ್ಲದರಲ್ಲಿ ಯಾರು ನಿನ್ನ ಮಾತುಗಳನ್ನು ಕೇಳದೆ, ನಿನ್ನ ಬಾಯಿ ಮಾತಿಗೆ ಎದುರು ಬೀಳುವರೋ ಅವರು ಮರಣಕ್ಕೆ ಗುರಿಯಾಗಬೇಕು. ಬಲಿಷ್ಠನಾಗಿರು, ಧೈರ್ಯದಿಂದಿರು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 1:18
14 ತಿಳಿವುಗಳ ಹೋಲಿಕೆ  

ಕಡೇ ಮಾತೇನಂದರೆ, ನೀವು ಕರ್ತನನ್ನೂ ಆತನ ಅತ್ಯಧಿಕವಾದ ಶಕ್ತಿಯನ್ನೂ ಆಶ್ರಯಿಸಿಕೊಂಡವರಾಗಿ ಬಲಗೊಳ್ಳಿರಿ.


ಎಚ್ಚರವಾಗಿರಿ, ಕ್ರಿಸ್ತನಂಬಿಕೆಯಲ್ಲಿ ದೃಢವಾಗಿ ನಿಲ್ಲಿರಿ.


ಏಳು ಕಾರ್ಯವನ್ನು ವಹಿಸತಕ್ಕವನು ನೀನು; ನಾವಾದರೋ ನಿನ್ನ ಸಹಾಯಕರು, ಧೈರ್ಯದಿಂದ ಕೈಹಾಕು ಎಂದು ಹೇಳಿದನು.


ನಾನು ನಿನಗೆ ಆಜ್ಞಾಪಿಸಿದ್ದೇನಲ್ಲಾ; ಸ್ಥಿರಚಿತ್ತನಾಗಿರು, ಧೈರ್ಯದಿಂದಿರು. ಅಂಜಬೇಡ, ಕಳವಳಗೊಳ್ಳಬೇಡ. ನೀನು ಹೋಗುವಲ್ಲೆಲ್ಲಾ ನಿನ್ನ ದೇವರಾದ ಯೆಹೋವನು ನಿನ್ನ ಸಂಗಡ ಇರುತ್ತಾನೆ ಎಂದು ಹೇಳಿದನು.


ನೀವು ಮಾತಾಡುತ್ತಿರುವಾತನ ಮಾತನ್ನು ಕೇಳಲೊಲ್ಲೆವೆಂದು ಹೇಳಬಾರದು. ಭೂವಿುಯ ಮೇಲೆ ದೈವೋಕ್ತಿಗಳನ್ನಾಡಿದವನಿಗೆ ಕಿವಿಗೊಡ ಮನಸ್ಸಿಲ್ಲದೆ ಇದ್ದ ಇಸ್ರಾಯೇಲ್ಯರು ದಂಡನೆಗೆ ತಪ್ಪಿಸಿಕೊಳ್ಳದಿದ್ದರೆ ಪರಲೋಕದಿಂದ ಮಾತಾಡುವವನಿಗೆ ನಾವು ಕಿವಿಗೊಡ ಮನಸ್ಸಿಲ್ಲದೆ ತೊಲಗಿದರೆ ಹೇಗೆ ತಪ್ಪಿಸಿಕೊಂಡೇವು?


ತರುವಾಯ ಜನರು ಸಮುವೇಲನಿಗೆ - ಸೌಲನು ನಮಗೆ ಅರಸನಾಗಬಾರದೆಂದು ಹೇಳಿದವರಾರು? ಅವರನ್ನು ನಮಗೆ ಒಪ್ಪಿಸಿರಿ; ನಾವು ಕೊಂದುಹಾಕುತ್ತೇವೆ ಎನ್ನಲು ಸೌಲನು ಅವರಿಗೆ -


ಮತ್ತು ತಮ್ಮ ಮೇಲೆ ನಾನು ದೊರೆತನ ಮಾಡುವದು ಇಷ್ಟವಿಲ್ಲವೆಂದು ಹೇಳಿದ ಆ ನನ್ನ ವೈರಿಗಳನ್ನು ಇಲ್ಲಿಗೆ ತಂದು ನನ್ನ ಮುಂದೆ ಸಂಹಾರ ಮಾಡಬೇಕು ಅಂದನು.


ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸೇವೆಮಾಡುವ ಯಾಜಕರ ಅಥವಾ ನ್ಯಾಯಾಧಿಪತಿಯ ಮಾತನ್ನು ಯಾವನು ಅಹಂಕಾರದಿಂದ ನಿರಾಕರಿಸುತ್ತಾನೋ ಅವನಿಗೆ ಮರಣಶಿಕ್ಷೆಯಾಗಬೇಕು. ಹೀಗೆ ಮಾಡಿ ನೀವು ಆ ದುಷ್ಟತ್ವವನ್ನು ಇಸ್ರಾಯೇಲ್ಯರ ಮಧ್ಯದಿಂದ ತೆಗೆದುಹಾಕಬೇಕು.


ನಾವು ಮೋಶೆಯ ಎಲ್ಲಾ ಮಾತುಗಳನ್ನು ಕೇಳಿದಂತೆ ನಿನ್ನ ಮಾತುಗಳನ್ನೂ ಕೇಳುವೆವು; ನಿನ್ನ ದೇವರಾದ ಯೆಹೋವನು ಮೋಶೆಯ ಸಂಗಡ ಇದ್ದಹಾಗೆ ನಿನ್ನ ಸಂಗಡಲೂ ಇರಲಿ.


ನೂನನ ಮಗನಾದ ಯೆಹೋಶುವನು [ಕಾನಾನ್] ದೇಶವನ್ನೂ ಯೆರಿಕೋ ಪಟ್ಟಣವನ್ನೂ ನೋಡುವದಕ್ಕೋಸ್ಕರ ಶಿಟ್ಟೀವಿುನಿಂದ ಇಬ್ಬರು ಗೂಢಚಾರರನ್ನು ಕಳುಹಿಸಿದನು. ಅವರು ಹೊರಟು ಹೋಗಿ ರಾಹಾಬಳೆಂಬ ಸೂಳೆಯ ಮನೆಯಲ್ಲಿ ಇಳುಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು