ಯೆಹೋಶುವ 1:2 - ಕನ್ನಡ ಸತ್ಯವೇದವು J.V. (BSI)2 ಸೇವಕನಾದ ಮೋಶೆ ಸತ್ತನು; ನೀನು ಈಗ ಎದ್ದು ಸಮಸ್ತ ಪ್ರಜಾಸಹಿತವಾಗಿ ಈ ಯೊರ್ದನ್ ಹೊಳೆಯನ್ನು ದಾಟಿ ನಾನು ಇಸ್ರಾಯೇಲ್ಯರಿಗೆ ಕೊಡುವ ದೇಶಕ್ಕೆ ಹೋಗು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 “ನನ್ನ ಸೇವಕನಾದ ಮೋಶೆ ಸತ್ತನು; ನೀನು ಈಗ ಹೊರಟು ಸಮಸ್ತ ಇಸ್ರಾಯೇಲ್ ಜನರೊಂದಿಗೆ ಈ ಯೊರ್ದನ್ ನದಿಯನ್ನು ದಾಟಿ, ನಾನು ಅವರಿಗೆ ಕೊಡುವ ದೇಶಕ್ಕೆ ಹೋಗು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ನೀನೀಗ ಎದ್ದು ಸಮಸ್ತ ಪ್ರಜೆಯೊಂದಿಗೆ ಜೋರ್ಡನ್ ನದಿಯನ್ನು ದಾಟಿ, ನಾನು ಇಸ್ರಯೇಲರಿಗೆ ಕೊಡುವ ನಾಡಿಗೆ ಹೋಗು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 “ನನ್ನ ಸೇವಕನಾದ ಮೋಶೆಯು ಸತ್ತನು. ಈಗ ನೀನು ಮತ್ತು ಈ ಜನರು ಜೋರ್ಡನ್ ನದಿಯನ್ನು ದಾಟಿಹೋಗಬೇಕು. ಇಸ್ರೇಲಿನ ಜನರಾದ ನಿಮಗೆ ನಾನು ಕೊಡಲಿರುವ ದೇಶಕ್ಕೆ ನೀವು ಹೋಗಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 “ನನ್ನ ಸೇವಕನಾದ ಮೋಶೆಯು ಮರಣಹೊಂದಿದನು. ಈಗ ನೀನು ಇಸ್ರಾಯೇಲರಾದ ಈ ಜನರೆಲ್ಲರ ಸಹಿತವಾಗಿ ಎದ್ದು, ಯೊರ್ದನ್ ನದಿಯನ್ನು ದಾಟಿ, ಇಸ್ರಾಯೇಲರಿಗೆ ನಾನು ಕೊಡುವ ದೇಶಕ್ಕೆ ಹೋಗು. ಅಧ್ಯಾಯವನ್ನು ನೋಡಿ |