ಯೆಹೋಶುವ 1:7 - ಕನ್ನಡ ಸತ್ಯವೇದವು J.V. (BSI)7 ನನ್ನ ಸೇವಕನಾದ ಮೋಶೆ ನಿನಗೆ ಬೋಧಿಸಿದ ಧರ್ಮೋಪದೇಶವನ್ನೆಲ್ಲಾ ಕೈಕೊಂಡು ನಡೆಯುವದರಲ್ಲಿ ಸ್ಥಿರಚಿತ್ತನಾಗಿರು, ಪೂರ್ಣಧೈರ್ಯದಿಂದಿರು. ಅದನ್ನು ಬಿಟ್ಟು ಎಡಕ್ಕಾದರೂ ಬಲಕ್ಕಾದರೂ ಹೋಗಬೇಡ. ಆಗ ನೀನು ಎಲ್ಲಿ ಹೋದರೂ ಕೃತಾರ್ಥನಾಗುವಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ನನ್ನ ಸೇವಕನಾದ ಮೋಶೆಯು ನಿನಗೆ ಬೋಧಿಸಿ ಆಜ್ಞಾಪಿಸಿದ ಧರ್ಮೋಪದೇಶವನ್ನೆಲ್ಲಾ ಕೈಕೊಂಡು ನಡೆಯುವುದರಲ್ಲಿ ಸ್ಥಿರಚಿತ್ತನಾಗಿರು, ಪೂರ್ಣಧೈರ್ಯದಿಂದಿರು. ಅದನ್ನು ಬಿಟ್ಟು ಎಡಕ್ಕಾಗಲಿ ಬಲಕ್ಕಾಗಲಿ ತಿರುಗಬೇಡ, ಆಗ ನೀನು ಸಫಲನಾಗುವಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ನನ್ನ ದಾಸನಾದ ಮೋಶೆ ನಿನಗೆ ಬೋಧಿಸಿದ ಧರ್ಮೋಪದೇಶವನ್ನು ಮಾತ್ರ ಧೈರ್ಯಸ್ಥೈರ್ಯದಿಂದ ಪರಿಪಾಲಿಸು. ಅದನ್ನು ಬಿಟ್ಟು ಎಡಕ್ಕಾಗಲಿ, ಬಲಕ್ಕಾಗಲಿ ಹೋಗಬೇಡ. ಆಗ ನೀನು ಎಲ್ಲಿಹೋದರೂ ಕೃತಾರ್ಥನಾಗುವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಆದರೆ ನೀನು ಇನ್ನೊಂದು ವಿಷಯದಲ್ಲಿಯೂ ಸ್ಥಿರಚಿತ್ತನಾಗಿರಬೇಕು; ಧೈರ್ಯವಂತನಾಗಿರಬೇಕು. ನನ್ನ ಸೇವಕನಾಗಿದ್ದ ಮೋಶೆಯು ನಿನಗೆ ಕೊಟ್ಟ ಆಜ್ಞೆಗಳನ್ನು ನೀನು ನಿಶ್ಚಿತವಾಗಿ ಪಾಲಿಸಬೇಕು. ಅವನ ಧರ್ಮೋಪದೇಶವನ್ನೆಲ್ಲಾ ಚಾಚೂತಪ್ಪದೆ ಅನುಸರಿಸಿದ್ದೇ ಆದರೆ ನೀನು ಮಾಡುವ ಎಲ್ಲ ಕಾರ್ಯಗಳಲ್ಲಿ ನಿನಗೆ ಜಯಸಿಗುವುದು ಖಂಡಿತ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 “ನನ್ನ ಸೇವಕನಾದ ಮೋಶೆಯು ನಿನಗೆ ಆಜ್ಞಾಪಿಸಿದ ದೇವರ ನಿಯಮದ ಪ್ರಕಾರ ನೀನು ಕೈಗೊಂಡು ನಡೆಯುವ ಹಾಗೆ ಬಲಿಷ್ಠನಾಗಿರು, ಧೈರ್ಯದಿಂದಿರು. ನೀನು ಹೋಗುವ ಸ್ಥಳದಲ್ಲೆಲ್ಲಾ ಸಫಲವಾಗುವ ಹಾಗೆ, ಅದನ್ನು ಬಿಟ್ಟು ಬಲಕ್ಕಾದರೂ, ಎಡಕ್ಕಾದರೂ ತಿರುಗಬೇಡ. ಅಧ್ಯಾಯವನ್ನು ನೋಡಿ |