Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 1:9 - ಕನ್ನಡ ಸತ್ಯವೇದವು J.V. (BSI)

9 ನಾನು ನಿನಗೆ ಆಜ್ಞಾಪಿಸಿದ್ದೇನಲ್ಲಾ; ಸ್ಥಿರಚಿತ್ತನಾಗಿರು, ಧೈರ್ಯದಿಂದಿರು. ಅಂಜಬೇಡ, ಕಳವಳಗೊಳ್ಳಬೇಡ. ನೀನು ಹೋಗುವಲ್ಲೆಲ್ಲಾ ನಿನ್ನ ದೇವರಾದ ಯೆಹೋವನು ನಿನ್ನ ಸಂಗಡ ಇರುತ್ತಾನೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನಾನು ನಿನಗೆ ಆಜ್ಞಾಪಿಸಿದಂತೆ ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಅಂಜಬೇಡ, ಕಳವಳಗೊಳ್ಳಬೇಡ. ನೀನು ಹೋಗುವಲ್ಲೆಲ್ಲಾ ನಿನ್ನ ದೇವರಾದ ಯೆಹೋವನು ನಿನ್ನ ಸಂಗಡ ಇರುವನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನಾನು ನಿನಗೆ ಆಜ್ಞಾಪಿಸಿದಂತೆ ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಅಂಜಬೇಡ, ಕಳವಳಗೊಳ್ಳಬೇಡ. ನೀನು ಹೋಗುವ ಎಡೆಗಳಲ್ಲೆಲ್ಲ ನಿನ್ನ ದೇವರೂ ಸರ್ವೇಶ್ವರನೂ ಆದ ನಾನು ನಿನ್ನ ಸಂಗಡ ಇರುತ್ತೇನೆ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನೆನಪಿಡು, ನೀನು ಸ್ಥಿರಚಿತ್ತನಾಗಿರಬೇಕೆಂತಲೂ ಧೈರ್ಯಶಾಲಿಯಾಗಿರಬೇಕೆಂತಲೂ ನಾನು ನಿನಗೆ ಆಜ್ಞಾಪಿಸುತ್ತೇನೆ. ಆದ್ದರಿಂದ ಹೆದರಬೇಡ, ಯಾಕೆಂದರೆ ನೀನು ಹೋಗುವಲ್ಲೆಲ್ಲಾ ನಿನ್ನ ದೇವರಾದ ಯೆಹೋವನೇ ನಿನ್ನ ಸಂಗಡ ಇರುವನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನಾನು ನಿನಗೆ ಆಜ್ಞಾಪಿಸಿದ್ದೇನಲ್ಲಾ, ಬಲಿಷ್ಠನಾಗಿರು. ಧೈರ್ಯದಿಂದಿರು, ಭಯಪಡಬೇಡ, ನಿರುತ್ಸಾಹಗೊಳ್ಳಬೇಡ. ಏಕೆಂದರೆ ನೀನು ಹೋಗುವ ಕಡೆಯೆಲ್ಲಾ ನಿನ್ನ ದೇವರಾದ ಯೆಹೋವ ದೇವರು ನಿನ್ನ ಸಂಗಡ ಇದ್ದಾರೆ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 1:9
33 ತಿಳಿವುಗಳ ಹೋಲಿಕೆ  

ಇದಲ್ಲದೆ ನಾನು ನಿನ್ನ ಸಂಗಡ ಇದ್ದು ನೀನು ಹೋಗುವ ಎಲ್ಲಾ ಸ್ಥಳಗಳಲ್ಲಿ ನಿನ್ನನ್ನು ಕಾಪಾಡಿ ತಿರಿಗಿ ಈ ದೇಶಕ್ಕೆ ಬರಮಾಡುತ್ತೇನೆ. ನಾನು ನಿನಗೆ ಹೇಳಿದ್ದನ್ನೆಲ್ಲಾ ನೆರವೇರಿಸಿದ ಹೊರತು ಬಿಡುವದಿಲ್ಲ ಅಂದನು.


ನೀವು ಶತ್ರುಗಳೊಡನೆ ಯುದ್ಧಕ್ಕೆ ಹೊರಟಾಗ ಅವರ ಕಡೆ ಕುದುರೆಗಳೂ ರಥಗಳೂ ನಿಮಗಿಂತ ಹೆಚ್ಚಾದ ಕಾಲ್ಬಲವೂ ಇರುವದನ್ನು ಕಂಡರೆ ಹೆದರಬಾರದು. ಐಗುಪ್ತದೇಶದಿಂದ ನಿಮ್ಮನ್ನು ಬಿಡಿಸಿದ ನಿಮ್ಮ ದೇವರಾದ ಯೆಹೋವನು ನಿಮ್ಮ ಕಡೆ ಇದ್ದಾನಲ್ಲಾ .


ಸೇನಾಧೀಶ್ವರನಾದ ಯೆಹೋವನು ನಮ್ಮ ಸಂಗಡ ಇದ್ದಾನೆ; ಯಾಕೋಬವಂಶದವರ ದೇವರು ನಮಗೆ ಆಶ್ರಯದುರ್ಗವಾಗಿದ್ದಾನೆ. ಸೆಲಾ.


ಈಗಲಾದರೋ, ಯಾಕೋಬವಂಶವೇ, ಇಸ್ರಾಯೇಲ್ ಸಂತಾನವೇ, ನಿನ್ನನ್ನು ಸೃಷ್ಟಿಸಿ ರೂಪಿಸಿದವನಾದ ಯೆಹೋವನು ಹೀಗನ್ನುತ್ತಾನೆ - ಭಯಪಡಬೇಡ, ನಾನು ನಿನ್ನನ್ನು ವಿಮೋಚಿಸಿದೆನಲ್ಲಾ, ನಿನ್ನ ಹೆಸರುಹಿಡಿದು ಕರೆದೆನಲ್ಲಾ; ನೀನು ನನ್ನವನೇ.


ಭಯಪಡಬೇಡ, ನಾನು ನಿನ್ನ ಸಂಗಡ ಇದ್ದೇನೆ; ನಿನ್ನ ಸಂತತಿಯವರನ್ನು ಮೂಡಲಿಂದ ತರುವೆನು; ನಿನ್ನವರನ್ನು ಪಡುವಲಿಂದ ಕೂಡಿಸುವೆನು;


ಯೆಹೋವನು ಅವನನ್ನು ಚೆನ್ನಾಗಿ ನೋಡಿ - ನಾನು ನಿನ್ನನ್ನು ಕಳುಹಿಸುತ್ತೇನೆ, ಹೋಗು; ಈ ನಿನ್ನ ಬಲದಿಂದ ಇಸ್ರಾಯೇಲ್ಯರನ್ನು ವಿುದ್ಯಾನ್ಯರಿಂದ ಬಿಡಿಸು ಎಂದು ಹೇಳಿದನು.


ಇದಕ್ಕೆ ಮೊದಲೇ ಅಬ್ಷಾಲೋಮನು ತನ್ನ ಆಳುಗಳಿಗೆ - ಕೇಳಿರಿ, ಅಮ್ನೋನನು ದ್ರಾಕ್ಷಾರಸ ಕುಡಿದು ಮತ್ತನಾಗಿರುವಾಗ ನಾನು ಹೊಡೆಯಬೇಕೆಂದು ಹೇಳಿದ ಕೂಡಲೆ ಅವನನ್ನು ಹೊಡೆದು ಕೊಂದುಹಾಕಿರಿ; ಹೆದರಬೇಡಿರಿ, ನಿಮಗೆ ಆಜ್ಞಾಪಿಸಿದವನು ನಾನಲ್ಲವೋ? ಧೈರ್ಯದಿಂದಿರಿ, ಶೂರರಾಗಿರಿ ಎಂದು ಹೇಳಿದ್ದನು.


ಅದಕ್ಕೆ ಪೇತ್ರ ಯೋಹಾನರು ಅವರಿಗೆ - ದೇವರ ಮಾತನ್ನು ಕೇಳುವದಕ್ಕಿಂತಲೂ ನಿಮ್ಮ ಮಾತನ್ನು ಕೇಳುವದು ದೇವರ ಮುಂದೆ ನ್ಯಾಯವೋ ಏನು? ನೀವೇ ತೀರ್ಪುಮಾಡಿಕೊಳ್ಳಿರಿ;


ನಿಮ್ಮ ಕುಲಗಳ ಹಿರಿಯರನ್ನೂ ಅಧಿಪತಿಗಳನ್ನೂ ನನ್ನ ಬಳಿಗೆ ಕೂಡಿಸಿರಿ; ನಾನು ಈ ಮಾತುಗಳನ್ನು ಅವರಿಗೆ ತಿಳಿಸಿ ಅವರಿಗೆ ವಿರೋಧವಾಗಿ ಸಾಕ್ಷಿಗಳಾಗುವದಕ್ಕೆ ಭೂಮ್ಯಾಕಾಶಗಳನ್ನು ಕರೆಯುವೆನು.


ನಿಮ್ಮ ದೇವರಾದ ಯೆಹೋವನು ಆ ದೇಶವನ್ನು ನಿಮಗೇ ಕೊಟ್ಟಿದ್ದಾನೆ; ನಿಮ್ಮ ಪಿತೃಗಳ ದೇವರಾದ ಯೆಹೋವನು ಹೇಳಿದಂತೆ ಅದನ್ನು ಹತ್ತಿ ಸ್ವಾಧೀನಮಾಡಿಕೊಳ್ಳಿರಿ; ನೀವು ದಿಗಿಲುಪಡದೆ ಧೈರ್ಯವಾಗಿಯೇ ಇರಬೇಕೆಂದು ಹೇಳಿದೆನು.


ಆಗ ಯೆಹೋಶುವನು ಜನಾಧಿಪತಿಗಳಿಗೆ -


ನಾವು ಮೋಶೆಯ ಎಲ್ಲಾ ಮಾತುಗಳನ್ನು ಕೇಳಿದಂತೆ ನಿನ್ನ ಮಾತುಗಳನ್ನೂ ಕೇಳುವೆವು; ನಿನ್ನ ದೇವರಾದ ಯೆಹೋವನು ಮೋಶೆಯ ಸಂಗಡ ಇದ್ದಹಾಗೆ ನಿನ್ನ ಸಂಗಡಲೂ ಇರಲಿ.


ಅನಂತರ ಯೆಹೋವನು ಯೆಹೋಶುವನಿಗೆ - ಅಂಜಬೇಡ, ಕಳವಳಗೊಳ್ಳಬೇಡ; ಎದ್ದು ಭಟರೆಲ್ಲರನ್ನೂ ತೆಗೆದುಕೊಂಡು ಆಯಿಗೆ ಹೋಗು.


ಯೆಹೋವನು ಯೆಹೋಶುವನಿಗೆ - ಅವರಿಗೆ ಹೆದರಬೇಡ; ಅವರನ್ನು ನಿನ್ನ ಕೈಗೆ ಒಪ್ಪಿಸಿದ್ದೇನೆ. ಅವರಲ್ಲಿ ಒಬ್ಬನೂ ನಿನ್ನ ಮುಂದೆ ನಿಲ್ಲುವದಿಲ್ಲ ಎಂದು ಹೇಳಿದನು.


ನಿಮ್ಮ ಕೈಗಳು ಜೋಲು ಬೀಳದಿರಲಿ. ನಿಮ್ಮ ಪ್ರಯತ್ನಕ್ಕೆ ಫಲತಪ್ಪದು ಎಂದು ಹೇಳಿದನು.


ನಾನೇ ನಿನ್ನೊಂದಿಗಿದ್ದೇನೆ; ದಿಗ್ಭ್ರಮೆಗೊಳ್ಳದಿರು, ನಾನೇ ನಿನ್ನ ದೇವರು; ನಾನು ನಿನ್ನನ್ನು ಬಲಪಡಿಸುತ್ತೇನೆ; ಹೌದು, ನಿನಗೆ ಸಹಾಯಕೊಡುತ್ತೇನೆ; ನನ್ನ ಧರ್ಮದ ಬಲಗೈಯನ್ನು ನಿನಗೆ ಆಧಾರಮಾಡುತ್ತೇನೆ.


ಯೆಹೋವನು ಯೋಸೇಫನ ಸಂಗಡ ಇದ್ದದರಿಂದ ಅವನು ಏಳಿಗೆಯಾಗಿ ಐಗುಪ್ತ್ಯನಾದ ತನ್ನ ದಣಿಯ ಮನೆಯೊಳಗೆ ಸೇವಕನಾದನು.


ಯೆಹೋವನು ಯೋಸೇಫನ ಸಂಗಡವಿದ್ದು ಅವನು ಮಾಡುವ ಕೆಲಸವನ್ನೆಲ್ಲಾ ಸಫಲವಾಗುವಂತೆ ಮಾಡುತ್ತಾನೆಂದು ಅವನ ದಣಿಯು ತಿಳಿದು


ಆಗ ಯೆಹೋವನು ನೂನನ ಮಗನಾದ ಯೆಹೋಶುವನಿಗೆ - ನಾನು ಇಸ್ರಾಯೇಲ್ಯರಿಗೆ ಪ್ರಮಾಣಮಾಡಿಕೊಟ್ಟ ದೇಶದಲ್ಲಿ ನೀನೇ ಅವರನ್ನು ಸೇರಿಸಬೇಕು; ಆದದರಿಂದ ಶೂರನಾಗಿ ಧೈರ್ಯದಿಂದಿರು; ನಾನೇ ನಿನ್ನ ಸಂಗಡ ಇರುವೆನು ಎಂದು ಆಜ್ಞಾಪಿಸಿದನು.


ನಿನ್ನ ಆಜ್ಞೆಗಳಲ್ಲಿ ಒಂದನ್ನಾದರೂ ಅಲಕ್ಷ್ಯಮಾಡಿ ನಿನ್ನ ವಿಧಿಗಳನ್ನು ಎದುರಿಸುವವನು ಸಾಯತಕ್ಕವನೇ; ಸ್ಥಿರಚಿತ್ತನಾಗಿರು, ಧೈರ್ಯದಿಂದಿರು ಎಂದು ಹೇಳಿದರು.


ಆಗ ಯೆಹೋವನು ಯೆಹೋಶುವನಿಗೆ - ನಾನು ಇಂದಿನಿಂದ ನಿನ್ನನ್ನು ಇಸ್ರಾಯೇಲ್ಯರೆಲ್ಲರ ಮುಂದೆ ಘನಪಡಿಸುವೆನು; ನಾನು ಮೋಶೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡಲೂ ಇರುವೆನೆಂಬದು ಅವರಿಗೆ ಗೊತ್ತಾಗುವದು.


ಯೆಹೋವನು ಯೆಹೋಶುವನ ಸಂಗಡ ಇದ್ದದರಿಂದ ಅವನು ದೇಶದಲ್ಲೆಲ್ಲಾ ಕೀರ್ತಿಗೊಂಡನು.


ಆಗ ಅವನು ಅವರಿಗೆ - ಅಂಜಬೇಡಿರಿ, ಕಳವಳಗೊಳ್ಳಬೇಡಿರಿ; ಸ್ಥಿರಚಿತ್ತರಾಗಿರ್ರಿ, ಧೈರ್ಯದಿಂದಿರ್ರಿ. ನಿಮ್ಮೊಡನೆ ಯುದ್ಧಕ್ಕೆ ಬರುವ ಎಲ್ಲಾ ವೈರಿಗಳಿಗೂ ಯೆಹೋವನು ಹೀಗೆಯೇ ಮಾಡುವನು ಎಂದು ಹೇಳಿದನಂತರ


ಈ ಗುರುತುಗಳೆಲ್ಲಾ ಸಂಭವಿಸಿದಾಗ ನಿನಗೆ ಅನುಕೂಲವಿದ್ದದ್ದನ್ನು ನಡಿಸು; ದೇವರು ನಿನ್ನ ಸಂಗಡ ಇದ್ದಾನೆ.


ಆಮೇಲೆ ದಾವೀದನು ತನ್ನ ಮಗನಾದ ಸೊಲೊಮೋನನಿಗೆ - ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಕೆಲಸಕ್ಕೆ ಕೈಹಾಕು; ಅಂಜಬೇಡ, ಕಳವಳಗೊಳ್ಳಬೇಡ. ನನ್ನ ದೇವರಾಗಿರುವ ಯೆಹೋವದೇವರು ನಿನ್ನ ಸಂಗಡ ಇರುತ್ತಾನೆ; ಆತನು ತನ್ನ ಆಲಯದ ಎಲ್ಲಾ ಕೆಲಸವು ತೀರುವವರೆಗೂ ನಿನ್ನನ್ನು ಕೈ ಬಿಡುವದಿಲ್ಲ, ತೊರೆಯುವದಿಲ್ಲ.


ಇವರು ಯಾವದನ್ನು ಒಪ್ಪಂದವೆನ್ನುತ್ತಾರೋ ನೀವು ಅದನ್ನು ಒಪ್ಪಂದವೆನ್ನಬೇಡಿರಿ; ಇವರು ಯಾವದಕ್ಕೆ ಹೆದರುತ್ತಾರೋ ನೀವು ಅದಕ್ಕೆ ಹೆದರಬೇಡಿರಿ, ನಡುಗಬೇಡಿರಿ.


ಆಮೇಲೆ ಆ ಪುರುಷನು ನನಗೆ - ಅತಿಪ್ರಿಯನೇ, ಭಯಪಡಬೇಡ; ನಿನಗೆ ಸಮಾಧಾನವಿರಲಿ, ಬಲಗೊಳ್ಳು, ಬಲಗೊಳ್ಳು ಎಂದು ಹೇಳಿದನು. ಅವನು ಆ ಮಾತನ್ನು ಹೇಳಿದ ಕೂಡಲೆ ನಾನು ಬಲಗೊಂಡು - ಎನ್ನೊಡೆಯನೇ, ಮಾತಾಡು; ನನ್ನನ್ನು ಬಲಗೊಳಿಸಿದ್ದೀ ಎಂದರಿಕೆಮಾಡಲು


ಯೆಹೋವನು ಇಂತೆನ್ನುತ್ತಾನೆ - ಜೆರುಬ್ಬಾಬೆಲನೇ, ಈಗ ಧೈರ್ಯವಾಗಿರು; ಯೆಹೋಚಾದಾಕನಿಗೆ ಹುಟ್ಟಿದ ಮಹಾಯಾಜಕನಾದ ಯೆಹೋಶುವನೇ, ಧೈರ್ಯವಾಗಿರು; ದೇಶೀಯರೇ, ನೀವೆಲ್ಲರೂ ಧೈರ್ಯಗೊಂಡು ಕೆಲಸ ನಡಿಸಿರಿ; ಇದು ಯೆಹೋವನ ನುಡಿ; ನಾನು ನಿಮ್ಮೊಂದಿಗೆ ಇದ್ದೇನೆಂದು ಸೇನಾಧೀಶ್ವರ ಯೆಹೋವನು ನುಡಿಯುತ್ತಾನೆ.


ನೀವು ಐಗುಪ್ತದಿಂದ ಪಾರಾಗಿ ಬಂದಾಗ ನಾನು ನಿಮಗೆ ಪ್ರಮಾಣವಾಗಿ ಕೊಟ್ಟ ಮಾತನ್ನು [ನೆರವೇರಿಸುವೆನು]; ನನ್ನ ಆತ್ಮನು ನಿಮ್ಮ ಮಧ್ಯದಲ್ಲಿ ನೆಲೆಗೊಂಡಿರುವನು; ಹೆದರಬೇಡಿರಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು