Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 10:1 - ಕನ್ನಡ ಸತ್ಯವೇದವು J.V. (BSI)

1 ಯೆಹೋಶುವನು ಯೆರಿಕೋವನ್ನೂ ಅದರ ಅರಸನನ್ನೂ ಹೇಗೋ ಹಾಗೆಯೇ ಆಯಿ ಎಂಬ ಪಟ್ಟಣವನ್ನೂ ಅದರ ಅರಸನನ್ನೂ ತೆಗೆದುಕೊಂಡು ಸಂಹರಿಸಿ ಬಿಟ್ಟನೆಂಬದನ್ನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋಶುವನು ಆಯಿ ನಗರವನ್ನು, ಅದರ ಅರಸನನ್ನು ಹಿಡಿದು ಯೆರಿಕೋವನ್ನೂ ಅದರ ಅರಸನನ್ನೂ ಹೇಗೆ ಸಂಹರಿಸಿದನೆಂದು ಯೆರೂಸಲೇಮಿನ ಅರಸ ಅದೋನೀಚೆದೆಕನು ತಿಳಿದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಯೆಹೋಶುವನು ಆಯಿ ನಗರವನ್ನು ಅದರ ಅರಸನನ್ನು ಹಿಡಿದು ಜೆರಿಕೋವನ್ನೂ ಅದರ ಅರಸನನ್ನೂ ಹೇಗೋ ಹಾಗೆ ಸಂಹರಿಸಿಬಿಟ್ಟನೆಂದು ಜೆರುಸಲೇಮಿನ ಅರಸ ಅದೋನೀಚೆದೆಕನು ತಿಳಿದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಈ ಸಮಯದಲ್ಲಿ ಅದೋನೀಚೆದೆಕನು ಜೆರುಸಲೇಮಿನ ಅರಸನಾಗಿದ್ದನು. ಯೆಹೋಶುವನು ಆಯಿ ಪಟ್ಟಣವನ್ನು ಸ್ವಾಧೀನಪಡಿಸಿಕೊಂಡ ಮತ್ತು ಅದನ್ನು ಸಂಪೂರ್ಣವಾಗಿ ನಾಶಮಾಡಿದ ಸಂಗತಿಯನ್ನು ಅವನು ಕೇಳಿದ್ದನು. ಜೆರಿಕೊ ಪಟ್ಟಣಕ್ಕೂ ಅದರ ರಾಜನಿಗೂ ಯೆಹೋಶುವನು ಹಾಗೆಯೇ ಮಾಡಿದ್ದನೆಂಬುದನ್ನೂ ಗಿಬ್ಯೋನಿನ ಜನರು ಇಸ್ರೇಲರೊಂದಿಗೆ ಶಾಂತಿ ಒಪ್ಪಂದ ಮಾಡಿಕೊಂಡಿದ್ದಾರೆಂಬುದನ್ನೂ ಅವನು ಕೇಳಿದ್ದನು. ಅವರು ಜೆರುಸಲೇಮಿಗೆ ಅತೀಸಮೀಪದಲ್ಲಿ ವಾಸವಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಈ ಸಮಯದಲ್ಲಿ ಯೆರೂಸಲೇಮಿನ ಅರಸನಾದ ಅದೋನೀಚೆದೆಕನು ಯೆಹೋಶುವನು ಯೆರಿಕೋವನ್ನೂ ಅದರ ಅರಸನನ್ನೂ ಹೇಗೋ ಹಾಗೆಯೇ ಆಯಿ ಎಂಬ ಪಟ್ಟಣವನ್ನು ಸ್ವಾಧೀನಪಡಿಸಿಕೊಂಡು, ಅದರ ಅರಸನನ್ನು ಸಂಹರಿಸಿಬಿಟ್ಟು ಸಂಪೂರ್ಣ ನಾಶಮಾಡಿದನೆಂಬ ಸಂಗತಿಯನ್ನು ಅವನು ಕೇಳಿದ್ದನು. ಹಾಗೆಯೇ ಗಿಬ್ಯೋನಿನ ನಿವಾಸಿಗಳು ಇಸ್ರಾಯೇಲಿನ ಸಂಗಡ ಸಮಾಧಾನ ಮಾಡಿಕೊಂಡು ಅವರಲ್ಲಿ ಇದ್ದರೆಂದೂ ಕೇಳಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 10:1
10 ತಿಳಿವುಗಳ ಹೋಲಿಕೆ  

ಈ ಮೆಲ್ಕಿಜೆದೇಕನು ಸಾಲೇವಿುನ ಅರಸನೂ ಪರಾತ್ಪರನಾದ ದೇವರ ಯಾಜಕನೂ ಆಗಿದ್ದನು; ರಾಜರನ್ನು ಹೊಡೆದು ಹಿಂತಿರುಗಿ ಬರುತ್ತಿದ್ದ ಅಬ್ರಹಾಮನನ್ನು ಎದುರುಗೊಂಡು ಅವನನ್ನು ಆಶೀರ್ವದಿಸಿದನು;


ನೋಡು, ಆಯಿ ಎಂಬ ಊರಿನ ರಾಜ, ಪ್ರಜೆ, ನಗರ, ದೇಶ ಇವುಗಳನ್ನೆಲ್ಲಾ ನಿನಗೆ ಕೊಟ್ಟಿದ್ದೇನೆ. ಯೆರಿಕೋವಿಗೂ ಅದರ ಅರಸನಿಗೂ ಮಾಡಿದಂತೆಯೇ ಆಯಿಗೂ ಅದರ ಅರಸನಿಗೂ ಮಾಡು.


ಅವರು ಪಟ್ಟಣದಲ್ಲಿದ್ದ ಗಂಡಸರನ್ನೂ ಹೆಂಗಸರನ್ನೂ ಹುಡುಗರನ್ನೂ ಮುದುಕರನ್ನೂ ದನಕುರಿಕತ್ತೆಗಳನ್ನೂ ನಿಶ್ಶೇಷವಾಗಿ ಕತ್ತಿಯಿಂದ ಸಂಹರಿಸಿಬಿಟ್ಟರು.


ಸಾಲೇವಿುನ ಅರಸನಾದ ಮೆಲ್ಕೀಚೆದೆಕನು ಸಹ ಬಂದು ರೊಟ್ಟಿಯನ್ನೂ ದ್ರಾಕ್ಷಾರಸವನ್ನೂ ಕೊಟ್ಟನು. ಇವನು ಪರಾತ್ಪರನಾದ ದೇವರ ಯಾಜಕನಾಗಿದ್ದು ಅಬ್ರಾಮನನ್ನು ಆಶೀರ್ವದಿಸಿ -


ಯೆಹೋಶುವನೂ ಇಸ್ರಾಯೇಲ್ಯರೂ ಪಟ್ಟಣವು ಹೊಂಚಿ ನೋಡುತ್ತಿದ್ದವರಿಗೆ ಸ್ವಾಧೀನವಾದದ್ದನ್ನೂ ಹೊಗೆಯು ಆಕಾಶಕ್ಕೆ ಏರಿಹೋಗುತ್ತಿದ್ದದ್ದನ್ನೂ ಕಂಡು ಹಿಂದಿರುಗಿ ಆಯಿ ಎಂಬ ಊರಿನ ಜನರನ್ನು ಹೊಡೆದರು.


ಹೆಬ್ರೋನಿನ ಅರಸನಾದ ಹೋಹಾಮ್, ಯರ್ಮೂತಿನ ಅರಸನಾದ ಪಿರಾಮ್, ಲಾಕೀಷಿನ ಅರಸನಾದ ಯಾಫೀಯ, ಎಗ್ಲೋನಿನ ಅರಸನಾದ ದೆಬೀರ್ ಇವರ ಬಳಿಗೆ ದೂತರನ್ನು ಕಳುಹಿಸಿ -


ಯೆರಿಕೋವಿನವರನ್ನೂ ಆಯಿ ಎಂಬ ಊರಿನವರನ್ನೂ ಯೆಹೋಶುವನು ಸಂಹರಿಸಿದ ಸುದ್ದಿಯನ್ನು ಗಿಬ್ಯೋನಿನ ನಿವಾಸಿಗಳು ಕೇಳಿ ಅವರೂ ಒಂದು ಯುಕ್ತಿಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು