Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 10:11 - ಕನ್ನಡ ಸತ್ಯವೇದವು J.V. (BSI)

11 ಅವರು ಇಸ್ರಾಯೇಲ್ಯರಿಗೆ ಬೆಂಗೊಟ್ಟು ಬೇತ್‍ಹೋರೋನಿನ ಇಳಿಜಾರಿನಲ್ಲಿ ಓಡುತ್ತಾ ಅಜೇಕವನ್ನು ಮುಟ್ಟುವವರೆಗೂ ಯೆಹೋವನು ಆಕಾಶದಿಂದ ದೊಡ್ಡ ಕಲ್ಮಳೆಯನ್ನು ಸುರಿಸಿ ಅನೇಕರನ್ನು ಸಾಯಿಸಿದನು. ಇಸ್ರಾಯೇಲ್ಯರ ಕತ್ತಿಯಿಂದ ಸಂಹೃತರಾದವರಿಗಿಂತ ಕಲ್ಮಳೆಯಿಂದ ನಾಶವಾದವರೇ ಹೆಚ್ಚು ಮಂದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅವರು ಇಸ್ರಾಯೇಲ್ಯರಿಗೆ ಬೆಂಗೊಟ್ಟು ಬೇತ್‍ಹೋರೋನಿನ ಇಳಿಜಾರಿನಲ್ಲಿ ಓಡುತ್ತಾ ಅಜೇಕವನ್ನು ತಲುಪುವವರೆಗೂ ಯೆಹೋವನು ಅವರ ಮೇಲೆ ಆಕಾಶದಿಂದ ದೊಡ್ಡ ಆಲಿಕಲ್ಲಿನ ಮಳೆಯನ್ನು ಸುರಿಸಿದನು. ಈ ಕಾರಣದಿಂದ ಅನೇಕರು ಸತ್ತರು ಇಸ್ರಾಯೇಲ್ಯರ ಕತ್ತಿಯಿಂದ ಸಂಹಾರವಾದವರಿಗಿಂತ ಆಲಿಕಲ್ಲಿನ ಮಳೆಯಿಂದ ನಾಶವಾದವರೇ ಹೆಚ್ಚು ಮಂದಿಯಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅವರು ಇಸ್ರಯೇಲರಿಗೆ ಬೆಂಗೊಟ್ಟು ಬೇತ್ ಹೋರೋನಿನ ಇಳಿಜಾರಿನಲ್ಲಿ ಓಡುತ್ತಾ ಅಜೇಕವನ್ನು ಮುಟ್ಟುವವರೆಗೂ ಸರ್ವೇಶ್ವರ ಆಕಾಶದಿಂದ ದೊಡ್ಡ ಕಲ್ಮಳೆಯನ್ನು ಸುರಿಸಿದರು. ಈ ಕಾರಣ ಅನೇಕರು ಸತ್ತರು. ಇಸ್ರಯೇಲರ ಕತ್ತಿಗೆ ಈಡಾದವರಿಗಿಂತ ಕಲ್ಮಳೆಯಿಂದ ನಾಶವಾದವರೇ ಹೆಚ್ಚುಮಂದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಬೇತ್‌ಹೋರೋನ್ ಇಳಿಜಾರಿನಿಂದ ಅಜೇಕದವರೆಗೆ ಅವರನ್ನು ಕೊಂದರು. ಅವರು ಶತ್ರುಗಳನ್ನು ಬೆನ್ನಟ್ಟುತ್ತಿದ್ದಾಗ ಯೆಹೋವನು ಆಕಾಶದಿಂದ ಆಲಿಕಲ್ಲು ಮಳೆ ಸುರಿಯುವಂತೆ ಮಾಡಿದನು. ಬಹಳಷ್ಟು ಮಂದಿ ಶತ್ರುಗಳು ಈ ದೊಡ್ಡ ಆಲಿಕಲ್ಲುಗಳಿಂದಲೇ ಮೃತಪಟ್ಟರು. ಇಸ್ರೇಲರು ತಮ್ಮ ಖಡ್ಗಗಳಿಂದ ಕೊಂದ ಜನರಿಗಿಂತ ಹೆಚ್ಚು ಜನರು ಈ ಆಲಿಕಲ್ಲಿನ ಮಳೆಯಿಂದ ಸತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅವರು ಬೇತ್ ಹೋರೋನಿನಿಂದ ಇಳಿದು ಅಜೇಕದವರೆಗೆ ಇಸ್ರಾಯೇಲಿನ ಮುಂದೆ ಓಡಿ ಹೋಗುವಾಗ, ಅವರ ಮೇಲೆ ಯೆಹೋವ ದೇವರು ಆಕಾಶದಿಂದ ದೊಡ್ಡ ಕಲ್ಮಳೆಯನ್ನು ಸುರಿಸಿದರು. ಇಸ್ರಾಯೇಲರ ಖಡ್ಗದ ದಾಳಿಗಿಂತ ಕಲ್ಮಳೆಯಿಂದ ನಾಶವಾದವರೇ ಹೆಚ್ಚು ಮಂದಿಯಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 10:11
17 ತಿಳಿವುಗಳ ಹೋಲಿಕೆ  

ಆಹಾ, ಕರ್ತನು ಒಬ್ಬ ಮಹಾ ಬಲಿಷ್ಠನನ್ನು ನೇವಿುಸಿದ್ದಾನೆ; ಅವನು ರಭಸವಾಗಿ ಸುರಿಯುವ ಕಲ್ಮಳೆಯಂತೆಯೂ ನಾಶಕವಾದ ಬಿರುಗಾಳಿಯೋಪಾದಿಯಲ್ಲಿಯೂ ಮುಣುಗಿಸುವ ಅತಿಧಾರಾವೃಷ್ಟಿಯ ಹಾಗೂ ಬಲಾತ್ಕಾರದಿಂದ [ಆ ಪಟ್ಟಣವನ್ನು] ನೆಲಕ್ಕೆ ಬೀಳಿಸುವನು.


ನಕ್ಷತ್ರಗಳೂ ಆಕಾಶಪಥದಲ್ಲಿದ್ದು ಸೀಸೆರನೊಡನೆ ಯುದ್ಧಮಾಡಿದವು.


ಮತ್ತು ಆಕಾಶದಿಂದ ಮನುಷ್ಯರ ಮೇಲೆ ದೊಡ್ಡ ಆನೇಕಲ್ಲಿನ ಮಳೆ ಸುರಿಯಿತು; ಒಂದೊಂದು ಕಲ್ಲು ಹೆಚ್ಚುಕಡಿಮೆ ನಾಲ್ಕುಮಣ ತೂಕವಾಗಿತ್ತು. ಆ ಆನೇಕಲ್ಲಿನ ಮಳೆಯ ಕಾಟವು ಬಹಳ ಹೆಚ್ಚಾಗಿದ್ದದರಿಂದ ಆ ಮಳೆಯಲ್ಲಿ ಸಿಕ್ಕಿಕೊಂಡ ಮನುಷ್ಯರು ದೇವರನ್ನು ದೂಷಿಸಿದರು.


ಆಗ ಪರಲೋಕದಲ್ಲಿರುವ ದೇವಾಲಯವು ತೆರೆಯಿತು; ಆತನ ಆಲಯದಲ್ಲಿ ಆತನ ಒಡಂಬಡಿಕೆಯ ಮಂಜೂಷವು ಕಾಣಿಸಿತು; ಇದಲ್ಲದೆ ವಿುಂಚುಗಳೂ ವಾಣಿಗಳೂ ಗುಡುಗುಗಳೂ ಭೂಕಂಪವೂ ದೊಡ್ಡ ಆನೆಕಲ್ಲಿನ ಮಳೆಯೂ ಉಂಟಾದವು.


ಆದಕಾರಣ ನೀನು ಸುಣ್ಣಬಳಿಯುವವರಿಗೆ ಹೀಗೆ ನುಡಿ - ವಿಪರೀತ ಮಳೆಯಾಗಿ ಗೋಡೆಯು ಬಿದ್ದುಹೋಗುವದು, ಆನೆಕಲ್ಲುಗಳು ಸುರಿಯುವವು; ಬಿರುಗಾಳಿಯು ಗೋಡೆಯನ್ನು ಒಡೆದುಹಾಕುವದು;


ಆಗ ಯೆಹೋವನು ತನ್ನ ಗಂಭೀರವಾದ ಧ್ವನಿಯನ್ನು ಕೇಳಮಾಡಿ ತೀವ್ರಕೋಪ, ಕಬಳಿಸುವ ಅಗ್ನಿಜ್ವಾಲೆ, ಬಿರಿದ ಮೋಡ, ಅತಿವೃಷ್ಟಿ, ಕಲ್ಮಳೆ ಇವುಗಳಿಂದ ತನ್ನ ಶಿಕ್ಷಾಹಸ್ತವನ್ನು ತೋರ್ಪಡಿಸುವನು.


ಆತನು ದುಷ್ಟರ ಮೇಲೆ ಪಾಶಗಳನ್ನು ಸುರಿಸಲಿ. ಬೆಂಕಿ ಗಂಧಕ ಉರಿಗಾಳಿ ಇವುಗಳನ್ನು ಅವರ ಪಾನವಾಗಮಾಡಲಿ.


ಆಗ ಯೆಹೋವನು ಸೊದೋಮ್ ಗೊಮೋರಗಳ ಮೇಲೆ


ನಾನು ಇಕ್ಕಟ್ಟಿನ ಕಾಲಕ್ಕಾಗಿಯೂ ಯುದ್ಧಕದನಗಳ ದಿನಕ್ಕಾಗಿಯೂ ಇಟ್ಟುಕೊಂಡಿರುವ


ನಿಮ್ಮ ದೇವರಾದ ಯೆಹೋವನು ತಾನೇ ನಿಮ್ಮ ಸಂಗಡ ಇದ್ದು ಶತ್ರುಗಳೊಡನೆ ನಿಮಗೋಸ್ಕರ ಯುದ್ಧಮಾಡಿ ನಿಮಗೆ ಜಯವನ್ನುಂಟುಮಾಡುವನು ಎಂದು ಹೇಳಬೇಕು.


ಯುದ್ಧವು ಸುತ್ತಣ ಪ್ರದೇಶಗಳಲ್ಲಿ ಹಬ್ಬಿಕೊಂಡಿತು. ಆ ದಿವಸ ಕತ್ತಿಗಿಂತ ಕಾಡೇ ಹೆಚ್ಚಿನ ಸಂಹಾರಕ್ಕೆ ಕಾರಣವಾಯಿತು.


ಹಿಮದ ಭಂಡಾರಗಳನ್ನು ಪ್ರವೇಶಿಸಿದ್ದೆಯೋ? ಕಲ್ಮಳೆಯ ಬೊಕ್ಕಸಗಳನ್ನು ನೋಡಿದ್ದೆಯಾ?


ರೊಟ್ಟೀತುಂಡುಗಳಂತಿರುವ ಆನೆಕಲ್ಲುಗಳನ್ನು ಸುರಿಸುತ್ತಾನೆ; ಆತನು ಚಳಿಯನ್ನು ಬರಮಾಡಲು ಅದನ್ನು ಸಹಿಸುವವರು ಯಾರು?


ಯೆಹೋವನು ಈಗ ಅಪರೂಪವಾದ ತನ್ನ ಕೆಲಸವನ್ನು ನಡಿಸಬೇಕೆಂತಲೂ ಅಪೂರ್ವವಾದ ತನ್ನ ಕಾರ್ಯವನ್ನು ನೆರವೇರಿಸಬೇಕೆಂತಲೂ ಪೆರಾಚೀಮ್ ಬೆಟ್ಟದಲ್ಲಿ ಎದ್ದಂತೆ ಏಳುವನು, ಗಿಬ್ಯೋನ್ ತಗ್ಗಿನಲ್ಲಿ ರೋಷಗೊಂಡಂತೆ ರೋಷಗೊಳ್ಳುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು