Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 10:26 - ಕನ್ನಡ ಸತ್ಯವೇದವು J.V. (BSI)

26 ಆ ಅರಸರನ್ನು ಕೊಲ್ಲಿಸಿ ಐದು ಮರಗಳಿಗೆ ನೇತುಹಾಕಿಸಿದನು. ಅವರ ಶವಗಳು ಸಾಯಂಕಾಲದವರೆಗೂ ಅಲ್ಲೇ ತೂಗಾಡುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಅನಂತರ ಆ ಅರಸರನ್ನು ಕೊಲ್ಲಿಸಿ ಐದು ಮರಗಳಿಗೆ ನೇತುಹಾಕಿಸಿದನು. ಅವರ ಶವಗಳು ಸಾಯಂಕಾಲದವರೆಗೂ ಅಲ್ಲೇ ತೂಗಾಡುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಅನಂತರ ಆ ಅರಸರನ್ನು ಕೊಲ್ಲಿಸಿ ಐದು ಮರಗಳಿಗೆ ನೇತುಹಾಕಿಸಿದನು. ಅವರ ಶವಗಳು ಸಾಯಂಕಾಲದವರೆಗೂ ಅಲ್ಲೇ ತೂಗಾಡುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಆಮೇಲೆ ಯೆಹೋಶುವನು ಆ ಐದು ಮಂದಿ ಅರಸರನ್ನು ಕೊಂದುಹಾಕಿದನು. ಅವರ ದೇಹಗಳನ್ನು ಐದು ಮರಗಳಿಗೆ ಸಾಯಂಕಾಲದವರೆಗೂ ನೇತುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಆ ತರುವಾಯ ಯೆಹೋಶುವನು ಅವರನ್ನು ದಂಡಿಸಿ, ಐದು ಮರಗಳಲ್ಲಿ ತೂಗುಹಾಕಿಸಿದನು. ಅವರ ಶವಗಳು ಸಾಯಂಕಾಲದವರೆಗೂ ಮರಗಳಲ್ಲಿ ತೂಗಾಡುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 10:26
14 ತಿಳಿವುಗಳ ಹೋಲಿಕೆ  

ಆಯಿ ಎಂಬ ಊರಿನ ಅರಸನನ್ನು ಸಾಯಂಕಾಲದವರೆಗೂ ಮರದಲ್ಲಿ ನೇತುಹಾಕಿಸಿ ಸೂರ್ಯನು ಅಸ್ತವಿುಸುತ್ತಲೇ ಅವನ ಶವವನ್ನು ಕೆಳಗಿಳಿಸಿ ಅದನ್ನು ಊರು ಬಾಗಲಲ್ಲಿ ಹಾಕಿಸಿಬಿಟ್ಟು ಅದರ ಮೇಲೆ ಕಲ್ಲಿನ ದೊಡ್ಡ ಕುಪ್ಪೆಯನ್ನು ಮಾಡಿಸಿದನು. ಅದು ಇಂದಿನವರೆಗೂ ಹಾಗೆಯೇ ಇದೆ.


ಅಬ್ರಹಾಮನಿಗೆ ಉಂಟಾದ ಆಶೀರ್ವಾದವು ಕ್ರಿಸ್ತ ಯೇಸುವಿನಲ್ಲಿ ಅನ್ಯಜನರಿಗೆ ಉಂಟಾಗುವಂತೆಯೂ ದೇವರು ವಾಗ್ದಾನಮಾಡಿದ ಆತ್ಮನು ನಮಗೆ ನಂಬಿಕೆಯ ಮೂಲಕ ದೊರಕುವಂತೆಯೂ


ಅವನನ್ನು ಕೊಲ್ಲಿಸಿದ್ದಕ್ಕೆ ನಾವೂ ನಮ್ಮ ಮಕ್ಕಳೂ ಉತ್ತರ ಕೊಡುತ್ತೇವೆ ಅಂದರು.


ಈ ವಿಷಯವು ವಿಚಾರಣೆಗೆ ಬಂದಾಗ ಅದು ನಿಜವೆಂದು ಸ್ಥಾಪನೆಯಾದದರಿಂದ ಆ ಇಬ್ಬರನ್ನೂ ಗಲ್ಲಿಗೆ ಹಾಕಿದರು. ಆ ಸಂಗತಿಯು ರಾಜನ ದಿನಚರ್ಯಪುಸ್ತಕದಲ್ಲಿ ಬರೆಯಲ್ಪಟ್ಟಿತು.


ಅವರು ಇವರನ್ನು ಕೊಂದು ಗುಡ್ಡದ ಮೇಲೆ ಯೆಹೋವನ ಸನ್ನಿಧಿಯಲ್ಲಿ ನೇತುಹಾಕಿದರು. ಈ ಏಳು ಮಂದಿಯೂ ಏಕಕಾಲದಲ್ಲಿ ಹತರಾದರು. ಇವರನ್ನು ಕೊಂದಾಗ ಜವೆಗೋದಿ ಸುಗ್ಗಿಯು ಆರಂಭವಾಗಿತ್ತು.


ಆ ಮನುಷ್ಯನ ಮಕ್ಕಳಲ್ಲಿ ಏಳು ಮಂದಿಯನ್ನು ನಮಗೆ ಒಪ್ಪಿಸು. ಯೆಹೋವನಿಂದ ಆರಿಸಲ್ಪಟ್ಟ ಸೌಲನು ವಾಸವಾಗಿದ್ದ ಗಿಬೆಯದಲ್ಲಿ ನಾವು ಅವರನ್ನು ಕೊಂದು ಯೆಹೋವನ ಸನ್ನಿಧಿಯಲ್ಲಿ ನೇತುಹಾಕುವೆವು ಎಂದರು. ಅರಸನು - ಆಗಲಿ, ಒಪ್ಪಿಸುತ್ತೇನೆ ಅಂದನು.


ಆದರೆ ಸಮುವೇಲನು ಅವನಿಗೆ - ನಿನ್ನ ಕತ್ತಿಯು ಅನೇಕ ಸ್ತ್ರೀಯರಿಗೆ ಪುತ್ರ ಶೋಕವನ್ನುಂಟುಮಾಡಿತು; ನಿನ್ನ ತಾಯಿಯು ಎಲ್ಲರಿಗಿಂತಲೂ ಹೆಚ್ಚಾಗಿ ಪುತ್ರಶೋಕವನ್ನು ಅನುಭವಿಸಲಿ ಎಂದು ಹೇಳಿ ಅವನನ್ನು ಗಿಲ್ಗಾಲಿನಲ್ಲಿ ಯೆಹೋವನ ಸನ್ನಿಧಿಯಲ್ಲೇ ಕಡಿದು ಹಾಕಿದನು.


ಆಗ ಜೆಬಹನೂ ಚಲ್ಮುನ್ನನೂ ಗಿದ್ಯೋನನಿಗೆ - ನೀನೇ ಎದ್ದು ಬಂದು ನಮ್ಮ ಮೇಲೆ ಬೀಳು; ಪ್ರಾಯಕ್ಕೆ ತಕ್ಕಂತೆ ಪುರುಷನಿಗೆ ಬಲವಿರುತ್ತದಲ್ಲಾ ಅನ್ನಲು ಅವನೆದ್ದು ಜೆಬಹ, ಚಲ್ಮುನ್ನ ಎಂಬವರನ್ನು ಕೊಂದುಹಾಕಿ, ಅವರ ಒಂಟೆಗಳ ಕೊರಳಲ್ಲಿದ್ದ ಅರ್ಧಚಂದ್ರಾಕಾರದ ಆಭರಣಗಳನ್ನು ತೆಗೆದುಕೊಂಡನು.


ನೀನು ಜನರ ಮುಖಂಡರೆಲ್ಲರನ್ನೂ ಹಿಡಿಸಿ ಅವರಿಗೆ ಯೆಹೋವನಿಗೋಸ್ಕರ ಬಹಿರಂಗವಾಗಿ ಮರಣದಂಡನೆಯನ್ನು ಮಾಡಿಸಬೇಕು; ಹೀಗೆ ಯೆಹೋವನ ಕೋಪಾಗ್ನಿಯನ್ನು ಇಸ್ರಾಯೇಲ್ಯರಿಂದ ತೊಲಗಿಸಬೇಕು ಎಂದು ಹೇಳಿದನು.


ಆ ಹೊತ್ತು ಸೌರಣೆಯ ದಿವಸವಾಗಿದ್ದದರಿಂದ ಯೆಹೂದ್ಯರು - ಸಬ್ಬತ್‍ದಿನದಲ್ಲಿ ಶವಗಳು ಶಿಲುಬೆಯ ಮೇಲೆ ಇರಬಾರದೆಂದು ಪಿಲಾತನನ್ನು - ಅವರ ಕಾಲುಗಳನ್ನು ಮುರಿಸಿ ಅವರನ್ನು ತೆಗೆಸಿಹಾಕಬೇಕೆಂಬದಾಗಿ ಕೇಳಿಕೊಂಡರು; ಯಾಕಂದರೆ ಆ ಸಬ್ಬತ್‍ದಿನವು ಬಹು ವಿಶೇಷವಾದದ್ದು.


ಅವರು ಕೂಗಿಕೊಂಡರೂ ರಕ್ಷಿಸುವವನಿಲ್ಲ; ಯೆಹೋವನಿಗೆ ಮೊರೆಯಿಟ್ಟರೂ ಆತನು ಉತ್ತರವನ್ನು ಕೊಡಲೇ ಇಲ್ಲ.


ಅವರು ಜನಾಂಗಗಳಿಗೆ ಮುಯ್ಯಿತೀರಿಸುವರು; ಅನ್ಯಜನಗಳನ್ನು ದಂಡಿಸುವರು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು