Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 10:28 - ಕನ್ನಡ ಸತ್ಯವೇದವು J.V. (BSI)

28 ಅದೇ ದಿವಸ ಯೆಹೋಶುವನು ಮಕ್ಕೇದ ಊರನ್ನು ಹಿಡಿದುಕೊಂಡು ಅದನ್ನೂ ಅದರ ರಾಜಪ್ರಜೆಗಳೆಲ್ಲರನ್ನೂ ಕತ್ತಿಯಿಂದ ಸಂಹರಿಸಿದನು. ಒಬ್ಬನನ್ನೂ ಉಳಿಸಲಿಲ್ಲ. ಯೆರಿಕೋವಿನ ಅರಸನಿಗೆ ಮಾಡಿದಂತೆ ಇದರ ಅರಸನಿಗೂ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಅದೇ ದಿನ ಯೆಹೋಶುವನು ಮಕ್ಕೇದವನ್ನು ಸ್ವಾಧೀನಪಡಿಸಿ ಕೊಂಡನು. ಅ ಊರಿನ ರಾಜ ಪ್ರಜೆಗಳೆಲ್ಲರನ್ನೂ ಕತ್ತಿಯಿಂದ ಸಂಹರಿಸಿದನು. ಒಬ್ಬನನ್ನೂ ಉಳಿಸಲಿಲ್ಲ. ಯೆರಿಕೋವಿನ ಅರಸನಿಗೆ ಮಾಡಿದಂತೆ ಈ ಅರಸನಿಗೂ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಅದೇ ದಿನ ಯೆಹೋಶುವನು ಮಕ್ಕೆದವನ್ನು ಸ್ವಾಧೀನಪಡಿಸಿಕೊಂಡನು. ಅದರ ರಾಜನನ್ನೂ ಪ್ರಜೆಗಳೆಲ್ಲರನ್ನೂ ಕತ್ತಿಗೆ ತುತ್ತಾಗಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಆ ದಿನ ಯೆಹೋಶುವನು ಮಕ್ಕೇದವನ್ನು ಸ್ವಾಧೀನಪಡಿಸಿಕೊಂಡು ಆ ಪಟ್ಟಣದ ಅರಸನನ್ನು ಮತ್ತು ಜನರನ್ನು ಸಂಹರಿಸಿದನು. ಒಬ್ಬರೂ ಜೀವಂತವಾಗಿ ಉಳಿಯಲಿಲ್ಲ. ಯೆಹೋಶುವನು ಜೆರಿಕೊವಿನ ಅರಸನಿಗೆ ಮಾಡಿದಂತೆಯೇ ಮಕ್ಕೇದದ ಅರಸನಿಗೂ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಆ ದಿನದಲ್ಲಿ ಯೆಹೋಶುವನು ಮಕ್ಕೇದ ಊರನ್ನು ಸ್ವಾಧೀನಪಡಿಸಿಕೊಂಡನು. ಅದರ ಅರಸನನ್ನೂ ಜನರನ್ನೂ ಖಡ್ಗಕ್ಕೆ ತುತ್ತಾಗುವಂತೆ ಮಾಡಿದನು. ಅದರಲ್ಲಿರುವ ಎಲ್ಲವನ್ನೂ ನಾಶಮಾಡಿದನು. ಅದರಲ್ಲಿ ಒಬ್ಬರನ್ನಾದರೂ ಉಳಿಸದೆ ಸಂಪೂರ್ಣ ನಾಶಮಾಡಿ, ತಾನು ಯೆರಿಕೋವಿನ ಅರಸನಿಗೆ ಮಾಡಿದ ಹಾಗೆಯೇ ಮಕ್ಕೇದದ ಅರಸನಿಗೂ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 10:28
19 ತಿಳಿವುಗಳ ಹೋಲಿಕೆ  

ಅವರು ಪಟ್ಟಣದಲ್ಲಿದ್ದ ಗಂಡಸರನ್ನೂ ಹೆಂಗಸರನ್ನೂ ಹುಡುಗರನ್ನೂ ಮುದುಕರನ್ನೂ ದನಕುರಿಕತ್ತೆಗಳನ್ನೂ ನಿಶ್ಶೇಷವಾಗಿ ಕತ್ತಿಯಿಂದ ಸಂಹರಿಸಿಬಿಟ್ಟರು.


ಯಾಕಂದರೆ ತಾನು ಎಲ್ಲಾ ವಿರೋಧಿಗಳನ್ನು ತನ್ನ ಪಾದಗಳ ಕೆಳಗೆ ಹಾಕಿಕೊಳ್ಳುವ ತನಕ ರಾಜ್ಯವನ್ನಾಳುವದು ಅವಶ್ಯ.


ಮತ್ತು ತಮ್ಮ ಮೇಲೆ ನಾನು ದೊರೆತನ ಮಾಡುವದು ಇಷ್ಟವಿಲ್ಲವೆಂದು ಹೇಳಿದ ಆ ನನ್ನ ವೈರಿಗಳನ್ನು ಇಲ್ಲಿಗೆ ತಂದು ನನ್ನ ಮುಂದೆ ಸಂಹಾರ ಮಾಡಬೇಕು ಅಂದನು.


ಗೆದೇರೋತ್, ಬೇತ್‍ದಾಗೋನ್, ನಾಮಾ, ಮಕ್ಕೇದಾ ಎಂಬ ಹದಿನಾರು ಪಟ್ಟಣಗಳೂ ಅವುಗಳ ಗ್ರಾಮಗಳೂ;


ಅದನ್ನೂ ಅದಕ್ಕೆ ಸೇರಿದ ಊರುಗಳನ್ನೂ ಹಿಡಿದುಕೊಂಡು ಅದರ ರಾಜಪ್ರಜೆಗಳೆಲ್ಲರನ್ನೂ ಕತ್ತಿಯಿಂದ ಸಂಹರಿಸಿದರು. ಒಬ್ಬನನ್ನೂ ಉಳಿಸಲಿಲ್ಲ. ಹೆಬ್ರೋನಿಗೂ ಅದರ ಅರಸನಿಗೂ ಲಿಬ್ನಕ್ಕೂ ಅದರ ಅರಸನಿಗೂ ಆದ ಗತಿಯೇ ದೆಬೀರಿಗೂ ಅದರ ಅರಸನಿಗೂ ಆಯಿತು.


ಅದನ್ನೂ ಅದಕ್ಕೆ ಸೇರಿದ ಊರುಗಳನ್ನೂ ಅದರ ರಾಜಪ್ರಜೆಗಳೆಲ್ಲರನ್ನೂ ಕತ್ತಿಯಿಂದ ಸಂಹರಿಸಿದರು. ಎಗ್ಲೋನಿನಲ್ಲಿ ಹೇಗೋ ಹಾಗೆಯೇ ಇಲ್ಲಿಯೂ ಒಬ್ಬನನ್ನೂ ಉಳಿಸಲಿಲ್ಲ; ಪಟ್ಟಣವನ್ನೂ ಜನರನ್ನೂ ನಾಶಮಾಡಿದರು.


ಅವರು ಅದೇ ದಿನದಲ್ಲಿ ಅದನ್ನು ಹಿಡಿದು ಲಾಕೀಷಿನಲ್ಲಿ ಮಾಡಿದಂತೆಯೇ ಅದನ್ನೂ ಅದರ ಜನರೆಲ್ಲರನ್ನೂ ಕತ್ತಿಯಿಂದ ಸಂಹರಿಸಿಬಿಟ್ಟರು.


ಯೆಹೋವನು ಅದನ್ನು ಇಸ್ರಾಯೇಲ್ಯರ ಕೈಗೆ ಒಪ್ಪಿಸಿದದರಿಂದ ಅವರು ಅದನ್ನು ಎರಡನೆಯ ದಿನದಲ್ಲಿ ಸ್ವಾಧೀನಮಾಡಿಕೊಂಡು ಅದನ್ನೂ ಅದರ ಜನರನ್ನೂ ಸಂಹರಿಸಿಬಿಟ್ಟರು. ಲಿಬ್ನದವರಿಗಾದ ಗತಿಯೇ ಇವರಿಗೂ ಆಯಿತು.


ಯೆಹೋವನು ಅದನ್ನೂ ಅದರ ಅರಸನನ್ನೂ ಇಸ್ರಾಯೇಲ್ಯರ ಕೈಗೆ ಕೊಟ್ಟನು. ಅವರು ಅದರಲ್ಲಿದ್ದ ಜನರಲ್ಲಿ ಒಬ್ಬನನ್ನೂ ಉಳಿಸದೆ ಎಲ್ಲರನ್ನೂ ಕತ್ತಿಯಿಂದ ಸಂಹರಿಸಿದರು. ಯೆರಿಕೋವಿನ ಅರಸನಿಗಾದ ಗತಿಯೇ ಇದರ ಅರಸನಿಗೂ ಆಯಿತು.


ನೋಡು, ಆಯಿ ಎಂಬ ಊರಿನ ರಾಜ, ಪ್ರಜೆ, ನಗರ, ದೇಶ ಇವುಗಳನ್ನೆಲ್ಲಾ ನಿನಗೆ ಕೊಟ್ಟಿದ್ದೇನೆ. ಯೆರಿಕೋವಿಗೂ ಅದರ ಅರಸನಿಗೂ ಮಾಡಿದಂತೆಯೇ ಆಯಿಗೂ ಅದರ ಅರಸನಿಗೂ ಮಾಡು.


ನಿಮ್ಮ ದೇವರಾದ ಯೆಹೋವನು ನಿಮ್ಮಿಂದ ಪರಾಜಯಪಡಿಸುವ ಜನಾಂಗಗಳನ್ನೆಲ್ಲಾ ನೀವು ಕನಿಕರಿಸದೆ ನಾಶಮಾಡಬೇಕು. ಅವರ ದೇವರುಗಳನ್ನು ಪೂಜಿಸಲೇಬಾರದು; ಪೂಜಿಸಿದರೆ ಅವು ನಿಮಗೆ ಉರುಲಾಗುವವು.


ನಿಮ್ಮ ಎದುರಿನಿಂದ ಹೊರಡಿಸುವವನಾಗಿ ಅವರನ್ನು ನಿಮ್ಮಿಂದ ಪರಾಜಯಪಡಿಸುವಾಗ ನೀವು ಅವರನ್ನು ನಿಶ್ಶೇಷವಾಗಿ ಸಂಹರಿಸಬೇಕು. ಅವರ ಸಂಗಡ ಒಡಂಬಡಿಕೆಮಾಡಿಕೊಳ್ಳಬಾರದು, ಅವರನ್ನು ಕನಿಕರಿಸಬಾರದು.


ಯೆಹೋವನು ನನ್ನ ಒಡೆಯನಿಗೆ - ನಾನು ನಿನ್ನ ವಿರೋಧಿಗಳನ್ನು ನಿನಗೆ ಪಾದಪೀಠವಾಗ ಮಾಡುವ ತನಕ ನನ್ನ ಬಲಗಡೆಯಲ್ಲಿ ಕೂತುಕೊಂಡಿರು ಎಂದು ನುಡಿದನು.


ಆ ಕಾಲದಲ್ಲಿ ನಾವು ಅವನ ಎಲ್ಲಾ ಪಟ್ಟಣಗಳನ್ನೂ ಸ್ವಾಧೀನಮಾಡಿಕೊಂಡು ಅವುಗಳಲ್ಲಿದ್ದ ಗಂಡಸರನ್ನೂ ಹೆಂಗಸರನ್ನೂ ಮಕ್ಕಳನ್ನೂ ನಿಶ್ಶೇಷವಾಗಿ ಹತಮಾಡಿದೆವು; ಒಬ್ಬನನ್ನೂ ಉಳಿಸಲಿಲ್ಲ.


ಯೆರಿಕೋವಿನವರನ್ನೂ ಆಯಿ ಎಂಬ ಊರಿನವರನ್ನೂ ಯೆಹೋಶುವನು ಸಂಹರಿಸಿದ ಸುದ್ದಿಯನ್ನು ಗಿಬ್ಯೋನಿನ ನಿವಾಸಿಗಳು ಕೇಳಿ ಅವರೂ ಒಂದು ಯುಕ್ತಿಮಾಡಿದರು.


ಲಿಬ್ನದ ಅರಸನು 1; ಅದುಲ್ಲಾಮದ ಅರಸನು 1;


ಮಕ್ಕೇದದ ಅರಸನು 1; ಬೇತೇಲಿನ ಅರಸನು 1;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು