Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 10:4 - ಕನ್ನಡ ಸತ್ಯವೇದವು J.V. (BSI)

4 ನೀವು ಬಂದು ನನಗೆ ಸಹಾಯ ಮಾಡಿರಿ; ನಾವು ಯೆಹೋಶುವನ ಸಂಗಡಲೂ ಇಸ್ರಾಯೇಲ್ಯರ ಸಂಗಡಲೂ ಒಡಂಬಡಿಕೆಮಾಡಿಕೊಂಡ ಗಿಬ್ಯೋನ್ಯರನ್ನು ಸೋಲಿಸೋಣ ಎಂದು ಹೇಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 “ನೀವು ಬಂದು ನನಗೆ ಸಹಾಯಮಾಡಿರಿ, ನಾವು ಯೆಹೋಶುವನ ಸಂಗಡಲೂ ಇಸ್ರಾಯೇಲ್ಯರ ಸಂಗಡಲೂ ಒಡಂಬಡಿಕೆ ಮಾಡಿಕೊಂಡಿರುವ ಗಿಬ್ಯೋನ್ಯರನ್ನು ಸೋಲಿಸೋಣ” ಎಂದು ಹೇಳಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 “ನೀವು ಬಂದು ನನಗೆ ಸಹಾಯಮಾಡಿ, ನಾವು ಯೆಹೋಶುವನೊಂದಿಗೂ ಇಸ್ರಯೇಲರೊಂದಿಗೂ ಒಪ್ಪಂದ ಮಾಡಿಕೊಂಡು ಗಿಬ್ಯೋನ್ಯರನ್ನು ಸೋಲಿಸೋಣ,” ಎಂದು ಹೇಳಿಕಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 “ನನ್ನೊಂದಿಗೆ ಬಂದು ಗಿಬ್ಯೋನಿನ ಮೇಲೆ ಧಾಳಿಮಾಡಲು ಸಹಾಯಮಾಡಿರಿ. ಗಿಬ್ಯೋನ್ ಯೆಹೋಶುವನೊಂದಿಗೂ ಇಸ್ರೇಲರೊಂದಿಗೂ ಶಾಂತಿಒಪ್ಪಂದ ಮಾಡಿಕೊಂಡಿದೆ” ಎಂದು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 “ಗಿಬ್ಯೋನರು ಯೆಹೋಶುವನ ಮತ್ತು ಇಸ್ರಾಯೇಲರ ಸಂಗಡ ಸಮಾಧಾನ ಮಾಡಿಕೊಂಡದ್ದರಿಂದ ನಾವು ಅದನ್ನು ದಾಳಿಮಾಡುವಂತೆ ನೀವು ನನ್ನ ಬಳಿಗೆ ಬಂದು ನನಗೆ ಸಹಾಯಮಾಡಿರಿ,” ಎಂದು ಹೇಳಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 10:4
15 ತಿಳಿವುಗಳ ಹೋಲಿಕೆ  

ಯೆಹೋಶುವನು ಅವರೊಡನೆ - ನಿಮ್ಮನ್ನು ಜೀವದಿಂದುಳಿಸುವೆವೆಂದು ಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಂಡನು. ಸಮೂಹಪ್ರಧಾನರೂ ಪ್ರಮಾಣಮಾಡಿದರು.


ಯೆಹೋಶುವನು ಯೆರಿಕೋವನ್ನೂ ಅದರ ಅರಸನನ್ನೂ ಹೇಗೋ ಹಾಗೆಯೇ ಆಯಿ ಎಂಬ ಪಟ್ಟಣವನ್ನೂ ಅದರ ಅರಸನನ್ನೂ ತೆಗೆದುಕೊಂಡು ಸಂಹರಿಸಿ ಬಿಟ್ಟನೆಂಬದನ್ನೂ


ಇವು ಮಹತ್ಕಾರ್ಯಗಳನ್ನು ಮಾಡುವ ದೆವ್ವಗಳು; ಭೂಲೋಕದಲ್ಲೆಲ್ಲಿಯೂ ಇರುವ ರಾಜರ ಬಳಿಗೆ ಹೋಗಿ ಸರ್ವಶಕ್ತನಾದ ದೇವರ ಮಹಾದಿನದಲ್ಲಾಗುವ ಯುದ್ಧಕ್ಕೆ ಅವರನ್ನು ಕೂಡಿಸುವವು.


ತಾವು ಮಾಡುವ ಅಪರಿವಿುತವಾದ ಪಟಿಂಗತನದಲ್ಲಿ ನೀವು ಸೇರದೆ ಇದ್ದದ್ದಕ್ಕೆ ಅವರು ಆಶ್ಚರ್ಯಪಟ್ಟು ನಿಮ್ಮನ್ನು ದೂಷಿಸುತ್ತಾರೆ.


ವ್ಯಭಿಚಾರಿಗಳು ನೀವು; ಇಹಲೋಕಸ್ನೇಹವು ದೇವವೈರವೆಂದು ನಿಮಗೆ ತಿಳಿಯದೋ? ಲೋಕಕ್ಕೆ ಸ್ನೇಹಿತನಾಗಬೇಕೆಂದಿರುವವನು ತನ್ನನ್ನು ದೇವರಿಗೆ ವಿರೋಧಿಯನ್ನಾಗಿ ಮಾಡಿಕೊಳ್ಳುತ್ತಾನೆ.


ಕ್ರಿಸ್ತ ಯೇಸುವಿನಲ್ಲಿ ಸದ್ಭಕ್ತರಾಗಿ ಜೀವಿಸುವದಕ್ಕೆ ಮನಸ್ಸುಮಾಡುವವರೆಲ್ಲರೂ ಹಿಂಸೆಗೊಳಗಾಗುವರು.


ಇಸ್ರಾಯೇಲ್ ಜನರೇ, ಸಹಾಯಮಾಡಿರಿ, ನಮ್ಮ ಜನರಿಗೂ ಧರ್ಮಶಾಸ್ತ್ರಕ್ಕೂ ಈ ಆಲಯಕ್ಕೂ ವಿರುದ್ಧವಾಗಿ ಎಲ್ಲೆಲ್ಲಿಯೂ ಎಲ್ಲರಿಗೂ ಬೋಧನೆ ಹೇಳುವ ಆ ಮನುಷ್ಯನು ಇವನೇ. ಇದಲ್ಲದೆ ಇವನು ಗ್ರೀಕರನ್ನು ದೇವಾಲಯದೊಳಗೆ ಕರೆದುಕೊಂಡು ಬಂದು ಈ ಪರಿಶುದ್ಧಸ್ಥಳವನ್ನು ಹೊಲೆಮಾಡಿದ್ದಾನೆ ಎಂದು ಕೂಗಿದರು.


ನೀವು ಲೋಕದ ಕಡೆಯವರಾಗಿರುತ್ತಿದ್ದರೆ ಲೋಕವು ನಿಮ್ಮ ಮೇಲೆ ತನ್ನವರೆಂದು ಮಮತೆ ಇಡುತ್ತಿತ್ತು; ಆದರೆ ನೀವು ಲೋಕದ ಕಡೆಯವರಲ್ಲದೆ ಇರುವದರಿಂದಲೂ ನಾನು ನಿಮ್ಮನ್ನು ಲೋಕದೊಳಗಿಂದ ಆರಿಸಿ ತೆಗೆದುಕೊಂಡಿರುವದರಿಂದಲೂ ಲೋಕವು ನಿಮ್ಮ ಮೇಲೆ ದ್ವೇಷ ಮಾಡುತ್ತದೆ.


ಮತ್ತು ಯೇಸು ತನ್ನ ಶಿಷ್ಯರಿಗೆ ಹೇಳಿದ್ದೇನಂದರೆ - ಯಾವನಿಗಾದರೂ ನನ್ನ ಹಿಂದೆ ಬರುವದಕ್ಕೆ ಮನಸ್ಸಿದ್ದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನ ಹಿಂದೆ ಬರಲಿ.


ಆಗ ಯೆರೂಸಲೇಮ್, ಹೆಬ್ರೋನ್, ಯರ್ಮೂತ್, ಲಾಕೀಷ್, ಎಗ್ಲೋನ್ ಎಂಬ ಪಟ್ಟಣಗಳ ಐದು ಮಂದಿ ಅಮೋರಿಯ ರಾಜರು ದಂಡೆತ್ತಿ ಕೂಡಿಬಂದು ಗಿಬ್ಯೋನಿಗೆ ಮುತ್ತಿಗೆಹಾಕಿ ಯುದ್ಧಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು