Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 10:41 - ಕನ್ನಡ ಸತ್ಯವೇದವು J.V. (BSI)

41 ಕಾದೇಶ್ ಬರ್ನೇಯದಿಂದ ಗಾಜಾ ಊರಿನವರೆಗೂ ಗೋಷೆನ್ ಪ್ರಾಂತದಿಂದ ಗಿಬ್ಯೋನಿನವರೆಗೂ ಎಲ್ಲರನ್ನೂ ಸೋಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ಕಾದೇಶ್ ಬರ್ನೇಯದಿಂದ ಗಾಜಾ ಊರಿನ ವರೆಗೂ ಗೋಷೆನ್ ಪ್ರಾಂತ್ಯದಿಂದ ಗಿಬ್ಯೋನಿನವರೆಗೂ ಎಲ್ಲರನ್ನೂ ಸೋಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

41 ಕಾದೇಶ್ ಬರ್ನೇಯದಿಂದ ಗಾಜಾ ಊರಿನವರೆಗೂ ಗೋಷೆನ್ ಪ್ರಾಂತ್ಯದಿಂದ ಗಿಬ್ಯೋನಿನವರೆಗೂ ಎಲ್ಲರನ್ನು ಸೋಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

41 ಯೆಹೋಶುವನು ಕಾದೇಶ್‌ಬರ್ನೇಯದಿಂದ ಗಾಜಾದವರೆಗಿನ ಎಲ್ಲ ಪಟ್ಟಣಗಳನ್ನು ಗೆದ್ದುಕೊಂಡನು. ಅವನು ಈಜಿಪ್ಟಿನ ಗೋಷೆನ್ ಪ್ರಾಂತದಿಂದ ಗಿಬ್ಯೋನಿನವರೆಗೆ ಇದ್ದ ಎಲ್ಲ ಪಟ್ಟಣಗಳನ್ನು ಸ್ವಾಧೀನಪಡಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

41 ಯೆಹೋಶುವನು ಕಾದೇಶ್ ಬರ್ನೇಯದಿಂದ ಗಾಜದವರೆಗೂ ಇರುವವರನ್ನೂ, ಗೋಷೆನಿನ ಸಮಸ್ತ ಪ್ರಾಂತವನ್ನೂ ಗಿಬ್ಯೋನಿನವರೆಗೆ ಸೋಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 10:41
19 ತಿಳಿವುಗಳ ಹೋಲಿಕೆ  

ಈ ಪ್ರಕಾರ ಬೆಟ್ಟದ ಮೇಲಿನ ಪ್ರದೇಶ, ದಕ್ಷಿಣ ಪ್ರಾಂತ, ಗೋಷೆನ್ ಸೀಮೆ, ಇಳಕಲಿನ ಪ್ರದೇಶ, ತಗ್ಗಾದ ಪ್ರದೇಶ, ಇಸ್ರಾಯೇಲ್ ಸೀಮೆಯ ಪರ್ವತ ಪ್ರಾಂತ್ಯ, ಅದಕ್ಕೆ ಸೇರಿದ ಇಳಕಲಿನ ಪ್ರದೇಶ ಇವುಗಳೆಲ್ಲಾ ಯೆಹೋಶುವನಿಗೆ ಸ್ವಾಧೀನವಾದವು.


ಅನಾಬ್, ಎಷ್ಟೆಮೋ, ಆನೀಮ್, ಗೋಷೆನ್,


ಅದಲ್ಲದೆ ಕಾದೇಶ್‍ಬರ್ನೇಯದಲ್ಲಿ ಯೆಹೋವನು ನಿಮಗೆ - ಬೆಟ್ಟದ ಸೀಮೆಯನ್ನು ಹತ್ತಿ ನಾನು ನಿಮಗೆ ಕೊಟ್ಟಿರುವ ದೇಶವನ್ನು ಸ್ವಾಧೀನಮಾಡಿಕೊಳ್ಳಿರಿ ಎಂದು ಅಪ್ಪಣೆಕೊಟ್ಟಾಗಲೂ ನೀವು ನಿಮ್ಮ ದೇವರಾದ ಯೆಹೋವನ ಆ ಆಜ್ಞೆಯನ್ನು ಧಿಕ್ಕರಿಸಿ ಆತನನ್ನು ನಂಬದೆ ಆತನ ಮಾತನ್ನು ಅಲಕ್ಷ್ಯಮಾಡಿದಿರಿ.


ಕಾನಾನ್ಯರ ಸೀಮೆಯು ಸೀದೋನ್ ಪಟ್ಟಣದಿಂದ ಗೆರಾರಿಗೆ ಹೋಗುವ ದಾರಿಯಲ್ಲಿರುವ ಗಾಜಾ ಪಟ್ಟಣದವರೆಗೂ ಮತ್ತು ಸೊದೋಮ್, ಗೊಮೋರ, ಅದ್ಮಾ, ಚೆಬೋಯಿಮ್ ಎಂಬ ಪಟ್ಟಣಗಳಿಗೆ ಹೋಗುವ ದಾರಿಯಲ್ಲಿರುವ ಲೆಷಾ ಊರಿನವರೆಗೂ ಇತ್ತು.


ಅಷ್ಟರಲ್ಲಿ ಕರ್ತನ ದೂತನು ಫಿಲಿಪ್ಪನಿಗೆ - ನೀನು ಎದ್ದು ದಕ್ಷಿಣ ಕಡೆಗೆ ಯೆರೂಸಲೇವಿುನಿಂದ ಗಾಜಕ್ಕೆ ಹೋಗುವ ದಾರಿಯಲ್ಲಿ ಹೋಗು, ಅದು ಅಡವಿ ಎಂದು ಹೇಳಿದನು.


ಅಷ್ಕೆಲೋನು ಇದನ್ನು ನೋಡಿ ಹೆದರುವದು; ಗಾಜವು ಸಹ ಅತಿಸಂಕಟಪಡುವದು; ಎಕ್ರೋನು ನಿರೀಕ್ಷೆಗೆಟ್ಟು ಬಹು ವ್ಯಥೆಗೆ ಒಳಗಾಗುವದು; ಗಾಜಕ್ಕೆ ರಾಜನೇ ಇಲ್ಲವಾಗುವನು; ಅಷ್ಕೆಲೋನು ನಿರ್ಜನವಾಗುವದು;


ದೇವರಾದ ಯೆಹೋವನು ಆ ರಾತ್ರಿ ಕನಸಿನಲ್ಲಿ ಅವನಿಗೆ ಕಾಣಿಸಿಕೊಂಡು - ನಿನಗೆ ಯಾವ ವರ ಬೇಕು ಕೇಳಿಕೋ ಎಂದು ಹೇಳಲು ಸೊಲೊಮೋನನು -


ಫಿಲಿಷ್ಟಿಯರು ಯೆಹೋವನಿಗೆ ಸಮರ್ಪಿಸಿದ ಚಿನ್ನದ ಗಡ್ಡೆಗಳು ಅಷ್ಡೋದ್, ಗಾಜಾ, ಅಷ್ಕೆಲೋನ್, ಗತ್ಊರು, ಎಕ್ರೋನ್ ಎಂಬ ಅವರ ಸಂಸ್ಥಾನಗಳ ಸಂಖ್ಯೆಗೂ


ಫಿಲಿಷ್ಟಿಯರು ಅವನನ್ನು ಹಿಡಿದು ಕಣ್ಣುಗಳನ್ನು ಕಿತ್ತು ಗಾಜಕ್ಕೆ ಒಯ್ದು ಕಬ್ಬಿಣದ ಬೇಡಿಗಳನ್ನು ಹಾಕಿ ಸೆರೆಮನೆಯಲ್ಲಿ ಬೀಸುವದಕ್ಕೆ ಹಚ್ಚಿದರು.


ತರುವಾಯ ಸಂಸೋನನು ಗಾಜಕ್ಕೆ ಹೋಗಿ ಅಲ್ಲಿ ಒಬ್ಬ ಸೂಳೆಯನ್ನು ಕಂಡು ಅವಳ ಬಳಿಗೆ ಹೋದನು.


ಯೆಹೋವನು ಅಮೋರಿಯರನ್ನು ಇಸ್ರಾಯೇಲ್ಯರಿಗೆ ಒಪ್ಪಿಸಿದ ದಿನದಲ್ಲಿ ಯೆಹೋಶುವನು ಯೆಹೋವನಿಗೆ ಒಂದು ವಿಜ್ಞಾಪನೆ ಮಾಡಿದನು. ಸೂರ್ಯನೇ, ನೀನು ಗಿಬ್ಯೋನಿನಲ್ಲಿಯೂ ಚಂದ್ರನೇ, ನೀನು ಅಯ್ಯಾಲೋನ್ ತಗ್ಗಿನಲ್ಲಿಯೂ ನಿಲ್ಲಿರಿ! ಎಂದು ಇಸ್ರಾಯೇಲ್ಯರ ಸಮಕ್ಷದಲ್ಲಿ ಆಜ್ಞಾಪಿಸಲು


ಆಯಿ ಎಂಬ ಊರಿಗಿಂತ ದೊಡ್ಡದೂ ಒಂದು ರಾಜಧಾನಿಯಷ್ಟು ಶ್ರೇಷ್ಠವೂ ಆಗಿರುವ ಗಿಬ್ಯೋನ್ ಪಟ್ಟಣದಲ್ಲಿರುವ ಜನರು ತಾವೆಲ್ಲರೂ ಯುದ್ಧವೀರರಾಗಿದ್ದರೂ ಇಸ್ರಾಯೇಲ್ಯರ ಮಧ್ಯದಲ್ಲಿ ಜೀವದಿಂದುಳಿಯುವದಕ್ಕೋಸ್ಕರ ಅವರ ಸಂಗಡ ಒಡಂಬಡಿಕೆ ಮಾಡಿಕೊಂಡರೆಂಬದನ್ನೂ ಯೆರೂಸಲೇವಿುನ ಅರಸನಾದ ಅದೋನೀಚೆದೆಕನು ಕೇಳಿ ಬಹಳವಾಗಿ ಭಯಪಟ್ಟು


ದಕ್ಷಿಣಕ್ಕೆ ತಿರುಗಿಕೊಂಡು ಅಕ್ರಬ್ಬೀಮ್ ಎಂಬ ಕಣಿವೆಯ ಮಾರ್ಗವಾಗಿ ಚಿನಿಗೆ ಬರಬೇಕು. ಅದರ ಮೂಲೆ ಕಾದೇಶ್ ಬರ್ನೇಯದ ದಕ್ಷಿಣ ಕಡೆಯಲ್ಲಿರಬೇಕು.


ಆ ದೇಶವನ್ನು ನೋಡಿಕೊಂಡು ಬರುವದಕ್ಕೆ ನಾನು ಕಾದೇಶ್‍ಬರ್ನೇಯದಿಂದ ನಿಮ್ಮ ತಂದೆಗಳನ್ನು ಕಳುಹಿಸಿದಾಗ ಅವರೂ ಹಾಗೆಯೇ ಮಾಡಿದರಲ್ಲಾ;


ನಾವು ಹೋರೇಬಿನಿಂದ ಹೊರಟು ನಮ್ಮ ದೇವರಾದ ಯೆಹೋವನು ಆಜ್ಞಾಪಿಸಿದಂತೆ ಅಮೋರಿಯರ ಬೆಟ್ಟದ ಸೀಮೆಯ ಮಾರ್ಗವನ್ನು ಹಿಡಿದು ನೀವು ನೋಡಿದ ಆ ಘೋರವಾದ ಮಹಾರಣ್ಯದಲ್ಲಿ ನಡೆದು ಕಾದೇಶ್‍ಬರ್ನೇಯಕ್ಕೆ ಸೇರಿದೆವು.


ಮತ್ತು ಹೇಗೆ ಕಫ್ತೋರಿಂದ ಬಂದ ಕಫ್ತೋರ್ಯರು ಗಾಜಾ ಪಟ್ಟಣದವರೆಗೂ ಹಳ್ಳಿಗಳಲ್ಲಿದ್ದ ಅವ್ವಿಯರನ್ನು ನಾಶಮಾಡಿ ಅವರ ಸ್ಥಳದಲ್ಲಿ ವಾಸಮಾಡಿದರೋ ಹಾಗೆಯೇ ಯೆಹೋವನು ರೆಫಾಯರನ್ನು ಅಮ್ಮೋನಿಯರ ಎದುರಿನಿಂದ ಹೊರಡಿಸಿದನು; ಅಮ್ಮೋನಿಯರು ಆ ದೇಶವನ್ನು ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸಿಸಿದರು.)


ಇಸ್ರಾಯೇಲ್ಯರ ಪ್ರಾಂತ್ಯದಲ್ಲಿ ಅಂಥವರು ಯಾರೂ ಉಳಿಯಲಿಲ್ಲ. ಆದರೆ ಗಾಜಾ, ಗತೂರು, ಅಷ್ಡೋದ್ ಎಂಬ ಊರುಗಳಲ್ಲಿ ಮಾತ್ರ ಕೆಲವರು ಉಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು