ಯೆಹೋಶುವ 10:5 - ಕನ್ನಡ ಸತ್ಯವೇದವು J.V. (BSI)5 ಆಗ ಯೆರೂಸಲೇಮ್, ಹೆಬ್ರೋನ್, ಯರ್ಮೂತ್, ಲಾಕೀಷ್, ಎಗ್ಲೋನ್ ಎಂಬ ಪಟ್ಟಣಗಳ ಐದು ಮಂದಿ ಅಮೋರಿಯ ರಾಜರು ದಂಡೆತ್ತಿ ಕೂಡಿಬಂದು ಗಿಬ್ಯೋನಿಗೆ ಮುತ್ತಿಗೆಹಾಕಿ ಯುದ್ಧಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಆಗ ಯೆರೂಸಲೇಮ್, ಹೆಬ್ರೋನ್, ಯರ್ಮೂತ್, ಲಾಕೀಷ್, ಎಗ್ಲೋನ್ ಎಂಬ ಪಟ್ಟಣಗಳ ಐದು ಮಂದಿ ಅಮೋರಿಯ ರಾಜರು ಒಟ್ಟಾಗಿ ಸೇರಿ ದಂಡೆತ್ತಿ ಬಂದರು. ಅವರು ಗಿಬ್ಯೋನಿಗೆ ಮುತ್ತಿಗೆಹಾಕಿ ಯುದ್ಧಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಅಂತೆಯೇ ಜೆರುಸಲೇಮ್, ಹೆಬ್ರೋನ್, ಯರ್ಮೂತ್, ಲಾಕೀಷ್, ಎಗ್ಲೋನ್ ಎಂಬ ನಗರಗಳ ಐದುಮಂದಿ ಅಮೋರಿಯ ರಾಜರು ದಂಡೆತ್ತಿ ಕೂಡಿಬಂದರು. ಗಿಬ್ಯೋನಿಗೆ ಮುತ್ತಿಗೆ ಹಾಕಿ ಯುದ್ಧಮಾಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಆಗ ಆ ಐದು ಮಂದಿ ಅಮೋರಿಯರ ಅರಸರು ಸೈನ್ಯವನ್ನು ಸೇರಿಸಿದರು. (ಜೆರುಸಲೇಮಿನ ಅರಸ, ಹೆಬ್ರೋನಿನ ಅರಸ, ಯರ್ಮೂತಿನ ಅರಸ, ಲಾಕೀಷಿನ ಅರಸ ಮತ್ತು ಎಗ್ಲೋನಿನ ಅರಸ; ಇವರೇ ಆ ಐದು ಮಂದಿ ಅರಸರು.) ಆ ಸೈನ್ಯಗಳು ಗಿಬ್ಯೋನಿಗೆ ಹೋಗಿ ಪಟ್ಟಣವನ್ನು ಸುತ್ತುವರಿದು ಅದರ ವಿರುದ್ಧ ಹೋರಾಟ ಪ್ರಾರಂಭಿಸಿದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಹಾಗೆಯೇ ಅಮೋರಿಯರ ಐದು ಮಂದಿ ಅರಸರಾದ, ಯೆರೂಸಲೇಮಿನ ಅರಸನೂ ಹೆಬ್ರೋನಿನ ಅರಸನೂ ಯರ್ಮೂತಿನ ಅರಸನೂ ಲಾಕೀಷಿನ ಅರಸನೂ ಎಗ್ಲೋನಿನ ಅರಸನೂ ಒಟ್ಟುಸೇರಿದರು. ಇವರೂ ಇವರ ಸೈನ್ಯವೂ ಹೊರಟುಹೋಗಿ ಗಿಬ್ಯೋನಿನ ಮುಂದೆ ಪಾಳೆಯ ಮಾಡಿಕೊಂಡು ಅದರ ಮೇಲೆ ಯುದ್ಧಮಾಡಿದರು. ಅಧ್ಯಾಯವನ್ನು ನೋಡಿ |