Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 10:8 - ಕನ್ನಡ ಸತ್ಯವೇದವು J.V. (BSI)

8 ಯೆಹೋವನು ಯೆಹೋಶುವನಿಗೆ - ಅವರಿಗೆ ಹೆದರಬೇಡ; ಅವರನ್ನು ನಿನ್ನ ಕೈಗೆ ಒಪ್ಪಿಸಿದ್ದೇನೆ. ಅವರಲ್ಲಿ ಒಬ್ಬನೂ ನಿನ್ನ ಮುಂದೆ ನಿಲ್ಲುವದಿಲ್ಲ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯೆಹೋವನು ಯೆಹೋಶುವನಿಗೆ, ಅವರಿಗೆ “ಹೆದರಬೇಡ, ಅವರನ್ನು ನಿನ್ನ ಕೈಗೆ ಒಪ್ಪಿಸಿದ್ದೇನೆ. ಅವರಲ್ಲಿ ಒಬ್ಬನೂ ನಿನ್ನ ಮುಂದೆ ನಿಲ್ಲುವುದಿಲ್ಲ” ಎಂದನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಸರ್ವೇಶ್ವರ ಸ್ವಾಮಿ ಯೆಹೋಶುವನಿಗೆ, “ಹೆದರಬೇಡ, ಅವರನ್ನು ನಿನ್ನ ಕೈಗೆ ಒಪ್ಪಿಸಿದ್ದೇನೆ. ಅವರಲ್ಲಿ ಒಬ್ಬನೂ ನಿನ್ನ ಮುಂದೆ ನಿಲ್ಲುವುದಿಲ್ಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಯೆಹೋವನು ಯೆಹೋಶುವನಿಗೆ, “ಆ ಸೈನ್ಯಗಳಿಗೆ ಹೆದರಬೇಡ, ನೀನು ಅವರನ್ನು ಸೋಲಿಸುವಂತೆ ಮಾಡುತ್ತೇನೆ. ಆ ಸೈನ್ಯದ ಯಾರೊಬ್ಬರೂ ನಿನ್ನನ್ನು ಸೋಲಿಸಲು ಸಾಧ್ಯವಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಯೆಹೋವ ದೇವರು ಯೆಹೋಶುವನಿಗೆ, “ನೀನು ಅವರಿಗೆ ಭಯಪಡಬೇಡ, ನಾನು ನಿನ್ನ ಕೈಯಲ್ಲಿ ಅವರನ್ನು ಒಪ್ಪಿಸಿಕೊಟ್ಟಿದ್ದೇನೆ. ಅವರಲ್ಲಿ ಒಬ್ಬನಾದರೂ ನಿನ್ನ ಎದುರಿನಲ್ಲಿ ನಿಲ್ಲುವುದಿಲ್ಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 10:8
16 ತಿಳಿವುಗಳ ಹೋಲಿಕೆ  

ಹಾಗಾದರೆ ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಕಡೆ ಇದ್ದರೆ ನಮ್ಮನ್ನು ಎದುರಿಸುವವರು ಯಾರು?


ಆಗ ಯೆಹೋವನು ನನಗೆ - ಅವನಿಗೆ ಭಯಪಡಬೇಡ; ನಾನು ಅವನನ್ನೂ ಅವನ ಸಮಸ್ತಜನರನ್ನೂ ದೇಶವನ್ನೂ ನಿನ್ನ ಕೈವಶ ಮಾಡಿದ್ದೇನೆ; ನೀನು ಹೆಷ್ಬೋನಿನಲ್ಲಿದ್ದ ಅಮೋರಿಯರ ಅರಸನಾದ ಸೀಹೋನನಿಗೆ ಮಾಡಿದ ಪ್ರಕಾರವೇ ಇವನಿಗೂ ಮಾಡಬೇಕೆಂದು ಆಜ್ಞಾಪಿಸಿದನು.


ಆಗ ಯೆಹೋವನು ಯೆಹೋಶುವನಿಗೆ - ನೀನು ಅವರಿಗೆ ಹೆದರಬೇಡ; ನಾಳೆ ಇಷ್ಟೇ ಹೊತ್ತಿಗೆ ಅವರನ್ನು ಇಸ್ರಾಯೇಲ್ಯರಿಗೆ ಒಪ್ಪಿಸುವೆನು; ಅವರು ಅವರನ್ನು ಹತಿಸಿಬಿಡುವರು. ನೀನು ಅವರ ಕುದುರೆಗಳ ಹಿಂಗಾಲಿನ ನರಗಳನ್ನು ಕೊಯಿದು ರಥಗಳನ್ನು ಸುಟ್ಟುಬಿಡಬೇಕು ಅಂದನು.


ಅನಂತರ ಯೆಹೋವನು ಯೆಹೋಶುವನಿಗೆ - ಅಂಜಬೇಡ, ಕಳವಳಗೊಳ್ಳಬೇಡ; ಎದ್ದು ಭಟರೆಲ್ಲರನ್ನೂ ತೆಗೆದುಕೊಂಡು ಆಯಿಗೆ ಹೋಗು.


ಆತನು ಅವರ ಅರಸುಗಳನ್ನು ನಿಮ್ಮ ಕೈಗೆ ಸಿಕ್ಕುವಂತೆ ಮಾಡಲಾಗಿ ನೀವು ಅವರ ಹೆಸರುಗಳೇ ಭೂವಿುಯ ಮೇಲೆ ಉಳಿಯದಂತೆ ಮಾಡಬೇಕು. ಯಾರೂ ನಿಮ್ಮ ಮುಂದೆ ನಿಲ್ಲುವದಿಲ್ಲ; ಎಲ್ಲರನ್ನೂ ನಾಶಮಾಡುವಿರಿ.


ಯೆಹೋಶುವನು ಗಿಲ್ಗಾಲ್ ಬಿಟ್ಟು ರಾತ್ರಿಯೆಲ್ಲಾ ಪ್ರಯಾಣಮಾಡಿ ತಟ್ಟನೆ ಅವರ ಮೇಲೆ ಬಿದ್ದನು.


ಆಗ ಅವನು ಅವರಿಗೆ - ಅಂಜಬೇಡಿರಿ, ಕಳವಳಗೊಳ್ಳಬೇಡಿರಿ; ಸ್ಥಿರಚಿತ್ತರಾಗಿರ್ರಿ, ಧೈರ್ಯದಿಂದಿರ್ರಿ. ನಿಮ್ಮೊಡನೆ ಯುದ್ಧಕ್ಕೆ ಬರುವ ಎಲ್ಲಾ ವೈರಿಗಳಿಗೂ ಯೆಹೋವನು ಹೀಗೆಯೇ ಮಾಡುವನು ಎಂದು ಹೇಳಿದನಂತರ


ಅದೇ ದಿವಸ ರಾತ್ರಿಯಲ್ಲಿ ಯೆಹೋವನು ಅವನಿಗೆ - ನೀನು ಎದ್ದು ಹೋಗಿ ಶತ್ರುಗಳ ಪಾಳೆಯದ ಮೇಲೆ ಬೀಳು; ಅದನ್ನು ನಿನಗೆ ಒಪ್ಪಿಸಿಕೊಟ್ಟಿದ್ದೇನೆ.


ಯೆಹೋವನು ಅವನಿಗೆ - ನಾನು ನಿನ್ನ ಸಂಗಡ ಇರುವದರಿಂದ ನೀನು ವಿುದ್ಯಾನ್ಯರೆಲ್ಲರನ್ನೂ ಒಬ್ಬ ಮನುಷ್ಯನನ್ನೋ ಎಂಬಂತೆ ಸಂಹರಿಸಿಬಿಡುವಿ ಅಂದನು.


ಯೆಹೋವನು ಈಟಿ ಕತ್ತಿಗಳಿಲ್ಲದೆ ರಕ್ಷಿಸಬಲ್ಲನೆಂಬದು ಇಲ್ಲಿ ಕೂಡಿರುವವರಿಗೆಲ್ಲಾ ಗೊತ್ತಾಗುವದು; ಯಾಕಂದರೆ ಯುದ್ಧಫಲವು ಯೆಹೋವನ ಕೈಯಲ್ಲಿದೆ; ಆತನು ನಿಮ್ಮನ್ನು ನಮ್ಮ ಕೈಗೆ ಒಪ್ಪಿಸಿಕೊಡುವನು ಅಂದನು.


ಆಗ ಒಬ್ಬ ಪ್ರವಾದಿಯು ಇಸ್ರಾಯೇಲ್ಯರ ಅರಸನಾದ ಅಹಾಬನ ಬಳಿಗೆ ಬಂದು ಅವನಿಗೆ - ಈ ಮಹಾ ಸಮೂಹವನ್ನು ನೋಡಿದಿಯಾ; ನಾನು ಯೆಹೋವನೇ ಎಂಬದು ನಿನಗೆ ಗೊತ್ತಾಗುವಂತೆ ಈಹೊತ್ತೇ ಇವರನ್ನೆಲ್ಲಾ ನಿನ್ನ ಕೈಗೆ ಒಪ್ಪಿಸುವೆನು ಎಂಬದಾಗಿ ಯೆಹೋವನು ಅನ್ನುತ್ತಾನೆ ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು