Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 11:11 - ಕನ್ನಡ ಸತ್ಯವೇದವು J.V. (BSI)

11 ಇಸ್ರಾಯೇಲ್ಯರು ಅದರಲ್ಲಿದ್ದ ಎಲ್ಲಾ ಜನರನ್ನು ಕತ್ತಿಯಿಂದ ಸಂಹರಿಸಿ ಹಾಚೋರ್ ಪಟ್ಟಣವನ್ನು ಸುಟ್ಟುಬಿಟ್ಟರು. ಒಂದು ಪ್ರಾಣಿಯಾದರೂ ಉಳಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಇಸ್ರಾಯೇಲ್ಯರು ಅದರಲ್ಲಿದ್ದ ಎಲ್ಲರನ್ನು ಕತ್ತಿಯಿಂದ ಸಂಹರಿಸಿ ಹಾಚೋರ್ ಪಟ್ಟಣವನ್ನು ಸುಟ್ಟುಬಿಟ್ಟರು. ಒಂದು ಜೀವಿಯಾದರೂ ಉಳಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಇಸ್ರಯೇಲರು ಅದರಲ್ಲಿದ್ದ ಜನರನ್ನೆಲ್ಲಾ ಕತ್ತಿಗೆ ಈಡಾಗಿಸಿ ಹಾಚೋರ್ ನಗರವನ್ನು, ಪ್ರಾಣಿಯೊಂದೂ ಉಳಿಯದಂತೆ ಸುಟ್ಟುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಇಸ್ರೇಲಿನ ಸೈನಿಕರು ಆ ಪಟ್ಟಣದಲ್ಲಿದ್ದವರನ್ನೆಲ್ಲಾ ಕೊಂದುಬಿಟ್ಟರು; ಒಬ್ಬರನ್ನೂ ಜೀವಂತವಾಗಿ ಅಲ್ಲಿ ಉಳಿಸಲಿಲ್ಲ. ಆಮೇಲೆ ಅವರು ಆ ಪಟ್ಟಣವನ್ನು ಸುಟ್ಟುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅವರು ಒಬ್ಬರನ್ನಾದರೂ ಉಳಿಸದೆ, ಅದರಲ್ಲಿದ್ದ ಪ್ರತಿಯೊಬ್ಬರನ್ನೂ ಖಡ್ಗದಿಂದ ಸಂಹರಿಸಿದನು. ಹಾಚೋರನ್ನು ಬೆಂಕಿಯಿಂದ ಸುಟ್ಟುಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 11:11
6 ತಿಳಿವುಗಳ ಹೋಲಿಕೆ  

ಹೀಗೆ ಯೆಹೋಶುವನು ಬೆಟ್ಟದ ಮೇಲಣ ಪ್ರದೇಶ, ದಕ್ಷಿಣಪ್ರಾಂತ್ಯ, ಇಳಕಲಿನ ಪ್ರದೇಶ, ಬೆಟ್ಟಗಳ ಬುಡದ ಪ್ರದೇಶ ಇವುಗಳನ್ನು ಸ್ವತಂತ್ರಿಸಿಕೊಂಡು ಇವುಗಳ ರಾಜಪ್ರಜೆಗಳನ್ನು ಸಂಹರಿಸಿಬಿಟ್ಟನು. ಒಬ್ಬನನ್ನೂ ಉಳಿಸಲಿಲ್ಲ. ಇಸ್ರಾಯೇಲ್ ದೇವರಾದ ಯೆಹೋವನ ಆಜ್ಞೆಯಂತೆ ಜೀವವಿರುವದೆಲ್ಲವನ್ನೂ ಸಂಹರಿಸಿದನು.


ಆದರೆ ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವಂತಕ್ಕಾಗಿ ಕೊಡುವ ಈ ಜನಾಂಗಗಳ ಪಟ್ಟಣಗಳ ವಿಷಯದಲ್ಲಿ ಹಾಗೆ ಮಾಡದೆ ಉಸುರುಬಿಡುವ ಒಬ್ಬರನ್ನಾದರೂ ಉಳಿಸಬಾರದು.


ನಿಮ್ಮ ಎದುರಿನಿಂದ ಹೊರಡಿಸುವವನಾಗಿ ಅವರನ್ನು ನಿಮ್ಮಿಂದ ಪರಾಜಯಪಡಿಸುವಾಗ ನೀವು ಅವರನ್ನು ನಿಶ್ಶೇಷವಾಗಿ ಸಂಹರಿಸಬೇಕು. ಅವರ ಸಂಗಡ ಒಡಂಬಡಿಕೆಮಾಡಿಕೊಳ್ಳಬಾರದು, ಅವರನ್ನು ಕನಿಕರಿಸಬಾರದು.


ಪಶುಗಳನ್ನು ಮಾತ್ರ ಉಳಿಸಿ ಸ್ವಂತಕ್ಕೆ ತೆಗೆದುಕೊಂಡು ಊರುಗಳನ್ನೆಲ್ಲಾ ಸೂರೆಮಾಡಿಬಿಟ್ಟೆವು.


ಅವರು ಪಟ್ಟಣದಲ್ಲಿದ್ದ ಗಂಡಸರನ್ನೂ ಹೆಂಗಸರನ್ನೂ ಹುಡುಗರನ್ನೂ ಮುದುಕರನ್ನೂ ದನಕುರಿಕತ್ತೆಗಳನ್ನೂ ನಿಶ್ಶೇಷವಾಗಿ ಕತ್ತಿಯಿಂದ ಸಂಹರಿಸಿಬಿಟ್ಟರು.


ಇಸ್ರಾಯೇಲ್ಯರು ಪಟ್ಟಣವನ್ನೂ ಅದರಲ್ಲಿರುವದೆಲ್ಲವನ್ನೂ ಬೆಂಕಿಯಿಂದ ಸುಟ್ಟರು. ಆದರೆ ಬೆಳ್ಳಿಬಂಗಾರವನ್ನೂ ತಾಮ್ರ ಕಬ್ಬಿಣಗಳ ಪಾತ್ರೆಗಳನ್ನೂ ಯೆಹೋವನ ಆಲಯದ ಭಂಡಾರಕ್ಕೆ ಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು