Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 11:17 - ಕನ್ನಡ ಸತ್ಯವೇದವು J.V. (BSI)

17 ಅವನು ಸೇಯೀರಿನ ದಾರಿಯಲ್ಲಿದ್ದ ಹಾಲಾಕ್ ಬೆಟ್ಟದಿಂದ ಹೆರ್ಮೋನಿನ ಬುಡದಲ್ಲಿ ಲೆಬನೋನ್ ತಗ್ಗಿನಲ್ಲಿರುವ ಬಾಲ್ಗಾದ್ ಪಟ್ಟಣದವರೆಗೂ ಇರುವ ಪ್ರದೇಶವನ್ನೆಲ್ಲಾ ತೆಗೆದುಕೊಂಡು ಅದರ ಎಲ್ಲಾ ಅರಸರನ್ನು ಹಿಡಿದು ಸಂಹರಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅವನು ಸೇಯೀರಿನ ದಾರಿಯಲ್ಲಿದ್ದ ಹಾಲಾಕ್ ಬೆಟ್ಟದಿಂದ ಹೆರ್ಮೋನಿನ ಬುಡದಲ್ಲಿ ಲೆಬನೋನಿನ ಕಣಿವೆಯಲ್ಲಿರುವ ಬಾಲ್ಗಾದ್ ಪಟ್ಟಣದವರೆಗೂ ಇರುವ ದೇಶವನ್ನೆಲ್ಲಾ ಸೆರೆಹಿಡಿದು ಅದರ ಎಲ್ಲಾ ಅರಸರನ್ನು ಹಿಡಿದು ಸಂಹರಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಅವನು ಸೇಯೀರಿನ ಹಾದಿಯಲ್ಲಿದ್ದ ಹಾಲಾಕ್ ಬೆಟ್ಟದಿಂದ ಹೆರ್ಮೋನಿನ ಬುಡದಲ್ಲಿ ಲೆಬನೋನ್ ಕಣಿವೆಯಲ್ಲಿರುವ ಬಾಲ್ಗಾದ್ ನಗರದವರೆಗೂ ಇರುವ ಪ್ರದೇಶವನ್ನೆಲ್ಲಾ ತೆಗೆದುಕೊಂಡು ಅದರ ಅರಸರನ್ನೆಲ್ಲಾ ಹಿಡಿದು ಸಂಹರಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಸೇಯೀರಿನ ಹತ್ತಿರವಿರುವ ಹಾಲಾಕ್ ಬೆಟ್ಟದಿಂದ ಹೆರ್ಮೋನ್ ಬೆಟ್ಟದ ಬುಡದಲ್ಲಿ ಲೆಬನೋನ್ ಕಣಿವೆಯಲ್ಲಿರುವ ಬಾಲ್ಗಾದ್ ಪಟ್ಟಣದವರೆಗೂ ಇರುವ ಭೂಮಿಯು ಅವನ ಸ್ವಾಧೀನವಾಯಿತು. ಯೆಹೋಶುವನು ಆ ಪ್ರದೇಶದ ಎಲ್ಲ ಅರಸರನ್ನು ಸೆರೆಹಿಡಿದು ಕೊಂದುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಯೆಹೋಶುವನು ಸೇಯೀರಿಗೆ ಏರಿಹೋಗುವ ಹಾಲಾಕ್ ಬೆಟ್ಟ ಮೊದಲುಗೊಂಡು ಬಾಲ್ಗಾದಿನ ಮಟ್ಟಿಗೂ ಇರುವ ಲೆಬನೋನಿನ ಕಣಿವೆಯಲ್ಲಿ ಹೆರ್ಮೋನಿನ ಬೆಟ್ಟದ ಕೆಳಗಿರುವ ಎಲ್ಲಾ ದೇಶವನ್ನೂ ಬೆಟ್ಟಗಳನ್ನೂ ದಕ್ಷಿಣ ದೇಶವೆಲ್ಲವನ್ನೂ ತೆಗೆದುಕೊಂಡು ಅವುಗಳ ಅರಸುಗಳೆಲ್ಲರನ್ನೂ ಹಿಡಿದು ಅವರಿಗೆ ಮರಣದಂಡನೆ ವಿಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 11:17
12 ತಿಳಿವುಗಳ ಹೋಲಿಕೆ  

ಆತನು ಅವರ ಅರಸುಗಳನ್ನು ನಿಮ್ಮ ಕೈಗೆ ಸಿಕ್ಕುವಂತೆ ಮಾಡಲಾಗಿ ನೀವು ಅವರ ಹೆಸರುಗಳೇ ಭೂವಿುಯ ಮೇಲೆ ಉಳಿಯದಂತೆ ಮಾಡಬೇಕು. ಯಾರೂ ನಿಮ್ಮ ಮುಂದೆ ನಿಲ್ಲುವದಿಲ್ಲ; ಎಲ್ಲರನ್ನೂ ನಾಶಮಾಡುವಿರಿ.


ಗೆಬಾಲ್ಯರ ಸೀಮೆ, ಹೆರ್ಮೋನ್ ಬೆಟ್ಟದ ಬುಡದಲ್ಲಿರುವ ಬಾಲ್ಗಾದಿನಿಂದ ಹಾಮಾತಿನ ದಾರಿಯವರೆಗಿರುವ ಲೆಬನೋನಿನ ಪೂರ್ವಪ್ರದೇಶ,


ಪೂರ್ವಪಶ್ಚಿಮಗಳಲ್ಲಿರುವ ಕಾನಾನ್ಯರು, ಅಮೋರಿಯರು, ಹಿತ್ತಿಯರು, ಪೆರಿಜ್ಜೀಯರು, ಬೆಟ್ಟದ ಮೇಲಿನ ಪ್ರದೇಶದಲ್ಲಿದ್ದ ಯೆಬೂಸಿಯರು, ಹೆರ್ಮೋನಿನ ಬುಡದಲ್ಲಿ ವಿುಚ್ಪಾ ದೇಶದಲ್ಲಿದ್ದ ಹಿವ್ವಿಯರು ಇವರನ್ನೂ ಕರೇಕಳುಹಿಸಿದನು.


ಅರಣ್ಯವೂ ಈ ಲೆಬನೋನ್ ಪರ್ವತವೂ ಮೊದಲುಗೊಂಡು ಯೂಫ್ರೇಟೀಸ್ ಮಹಾನದಿಯವರೆಗಿರುವ ಹಿತ್ತಿಯರ ದೇಶವೆಲ್ಲಾ ನಿಮ್ಮದಾಗುವದು; ನಿಮ್ಮ ಸೀಮೆಯು ಪಶ್ಚಿಮ ದಿಕ್ಕಿನ ಮಹಾಸಾಗರದವರೆಗೆ ವಿಸ್ತರಿಸಿಕೊಳ್ಳುವದು.


ಯೆಹೋವನು ಸೀನಾಯಿಬೆಟ್ಟದಿಂದ ಬಂದು ಸೇಯೀರ್ ಎಂಬ ಬೆಟ್ಟದ ಸೀಮೆಯೊಳಗಿಂದ ಪ್ರಕಾಶಿಸಿ ಪಾರಾನ್ ಪರ್ವತದಿಂದ ಹೊಳೆದು ಲಕ್ಷಾಂತರ ಪರಿಶುದ್ಧದೂತರ ಮಧ್ಯದಿಂದ ಅವರಿಗೋಸ್ಕರ ದಯಮಾಡಿದನು; ಆತನ ಬಲಪಾರ್ಶ್ವದಲ್ಲಿ ಅಗ್ನಿಸದೃಶವಾದ ಧರ್ಮಶಾಸ್ತ್ರವಿತ್ತು.


ಆಗ ಯೆಹೋವನು ನನಗೆ ಆಜ್ಞಾಪಿಸಿದಂತೆ ನಾವು ಹಿಂದಿರುಗಿ ಅರಣ್ಯಕ್ಕೆ ಹೊರಟು ಸಮುದ್ರದ ಮಾರ್ಗದಲ್ಲಿ ನಡೆದು ಅನೇಕ ದಿನಗಳು ಸೇಯೀರ್ ಬೆಟ್ಟದ ಸೀಮೆಯನ್ನು ಸುತ್ತುತ್ತಿದ್ದೆವು.


ಬಳಿಕ ಯಾಕೋಬನು ಎದೋಮ್ಯರ ದೇಶವಾಗಿರುವ ಸೇಯೀರ್‍ಸೀಮೆಗೆ ತನ್ನ ಅಣ್ಣನಾದ ಏಸಾವನ ಬಳಿಗೆ ದೂತರನ್ನು ಮುಂದೆ ಕಳುಹಿಸಿದನು.


(ಹೆರ್ಮೋನ್ ಪರ್ವತಕ್ಕೆ ಚೀದೋನ್ಯರು ಸಿರ್ಯೋನೆಂದೂ ಅಮೋರಿಯರು ಸೆನೀರ್ ಎಂದೂ ಹೆಸರಿಟ್ಟುಕೊಂಡಿದ್ದಾರೆ.)


ಯೆಹೋಶುವನು ಈ ಎಲ್ಲಾ ಅರಸರೊಡನೆ ಬಹು ದಿನಗಳವರೆಗೂ ಯುದ್ಧಮಾಡಿದನು.


ದಕ್ಷಿಣೋತ್ತರದಿಕ್ಕುಗಳನ್ನು ಉಂಟುಮಾಡಿದವನು ನೀನು. ತಾಬೋರ್ ಹೆರ್ಮೋನ್ ಪರ್ವತಗಳು ನಿನ್ನ ನಾಮದಲ್ಲಿ ಆನಂದಧ್ವನಿಮಾಡುತ್ತವೆ.


ಈಗ ಹಿಂದಿರುಗಿ ಅಮೋರಿಯರು ಇರುವ ಬೆಟ್ಟದ ಸೀಮೆಗೂ ಅದಕ್ಕೆ ಸೇರಿದ ಪ್ರದೇಶವೆಲ್ಲಕ್ಕೂ ಪ್ರಯಾಣಮಾಡಿರಿ. ಅವು ಯಾವವಂದರೆ - ತಗ್ಗಾದ ಪ್ರದೇಶ, ಬೆಟ್ಟದ ಮೇಲಿನ ಪ್ರದೇಶ, ಇಳಕಲಿನ ಪ್ರದೇಶ, ದಕ್ಷಿಣಸೀಮೆ, ಸಮುದ್ರತೀರ ಎಂಬ ನಾಡುಗಳನ್ನು ಒಳಗೊಂಡಿರುವ ಕಾನಾನ್ಯರ ದೇಶ, ಲೆಬನೋನ್ ಪರ್ವತ ಮತ್ತು ಯೂಫ್ರೇಟೀಸ್ ಎಂಬ ಮಹಾನದಿಯವರೆಗೆ ವಿಸ್ತರಿಸಿಕೊಂಡಿರುವ ಪ್ರದೇಶ ಇವುಗಳೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು