Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 11:5 - ಕನ್ನಡ ಸತ್ಯವೇದವು J.V. (BSI)

5 ಈ ಎಲ್ಲಾ ಅರಸರು ಕೂಡಿ ಮೇರೋಮ್ ಜಲಾಶಯದ ಬಳಿಯಲ್ಲಿ ಇಸ್ರಾಯೇಲ್ಯರೊಡನೆ ಯುದ್ಧಮಾಡುವದಕ್ಕೋಸ್ಕರ ಇಳುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಈ ಎಲ್ಲಾ ಅರಸರು ಒಟ್ಟಾಗಿ ಸೇರಿ ಮೇರೋಮ್ ಜಲಾಶಯದ ಬಳಿಯಲ್ಲಿ ಇಸ್ರಾಯೇಲ್ಯರೊಡನೆ ಯುದ್ಧಮಾಡುವುದಕ್ಕಾಗಿ ಇಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಇಸ್ರಯೇಲರೊಡನೆ ಯುದ್ಧಮಾಡಲು ಅರಸರೆಲ್ಲರು ಒಟ್ಟುಗೂಡಿ ಮೇರೋಮ್ ಜಲಾಶಯದ ಬಳಿ ಇಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಈ ಎಲ್ಲ ಅರಸರು ಮೇರೋಮ್ ಸಣ್ಣ ನದಿಯ ಹತ್ತಿರ ಒಟ್ಟುಗೂಡಿ ತಮ್ಮ ಸೈನ್ಯಗಳನ್ನು ಒಂದೇ ಪಾಳೆಯದಲ್ಲಿ ಸೇರಿಸಿದರು. ಅವರು ಇಸ್ರೇಲಿನ ವಿರುದ್ಧ ಯುದ್ಧ ಮಾಡಲು ಯೋಜನೆಗಳನ್ನು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಈ ಎಲ್ಲಾ ಅರಸರು ಇಸ್ರಾಯೇಲಿನ ಸಂಗಡ ಯುದ್ಧಮಾಡಲು ಬಂದು ಒಟ್ಟುಗೂಡಿ ಮೇರೋಮ ಎಂಬ ಜಲಾಶಯದ ಬಳಿಯಲ್ಲಿ ಇಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 11:5
9 ತಿಳಿವುಗಳ ಹೋಲಿಕೆ  

ಇವು ಮಹತ್ಕಾರ್ಯಗಳನ್ನು ಮಾಡುವ ದೆವ್ವಗಳು; ಭೂಲೋಕದಲ್ಲೆಲ್ಲಿಯೂ ಇರುವ ರಾಜರ ಬಳಿಗೆ ಹೋಗಿ ಸರ್ವಶಕ್ತನಾದ ದೇವರ ಮಹಾದಿನದಲ್ಲಾಗುವ ಯುದ್ಧಕ್ಕೆ ಅವರನ್ನು ಕೂಡಿಸುವವು.


ಜನಾಂಗಗಳೇ, ಭಂಗಪಡಿಸಿರಿ, ನೀವೂ ಭಂಗಪಡುವಿರಿ; ದೂರದೇಶೀಯರೇ, ಕಿವಿಗೊಡಿರಿ; ನಡುಕಟ್ಟಿರಿ, ಭಂಗಪಡುವಿರಿ; ಹೌದು ನಡುಕಟ್ಟಿರಿ, ಭಂಗಪಡುವಿರಿ.


ಯೆಹೋವನೇ, ನನ್ನ ವಿರೋಧಿಗಳು ಎಷ್ಟೋ ಹೆಚ್ಚಾಗಿದ್ದಾರೆ; ನನಗೆ ವೈರಿಗಳಾಗಿ ನಿಂತವರು ಬಹಳ ಮಂದಿ.


ಅವರು ಒಡನೆ ಬಹು ರಥಾಶ್ವಗಳಿಂದ ಕೂಡಿರುವ ತಮ್ಮ ಸರ್ವಸೈನ್ಯಗಳನ್ನು ತೆಗೆದುಕೊಂಡು ಹೊರಟರು. ಆ ಸೈನಿಕರು ಸಮುದ್ರತೀರದ ಮರಳಿನಂತೆ ಅಸಂಖ್ಯರಾಗಿದ್ದರು.


ಆಗ ಯೆಹೋವನು ಯೆಹೋಶುವನಿಗೆ - ನೀನು ಅವರಿಗೆ ಹೆದರಬೇಡ; ನಾಳೆ ಇಷ್ಟೇ ಹೊತ್ತಿಗೆ ಅವರನ್ನು ಇಸ್ರಾಯೇಲ್ಯರಿಗೆ ಒಪ್ಪಿಸುವೆನು; ಅವರು ಅವರನ್ನು ಹತಿಸಿಬಿಡುವರು. ನೀನು ಅವರ ಕುದುರೆಗಳ ಹಿಂಗಾಲಿನ ನರಗಳನ್ನು ಕೊಯಿದು ರಥಗಳನ್ನು ಸುಟ್ಟುಬಿಡಬೇಕು ಅಂದನು.


ಒಂದೇ ಮನಸ್ಸಿನಿಂದ ಯೆಹೋಶುವನಿಗೂ ಇಸ್ರಾಯೇಲ್ಯರಿಗೂ ವಿರೋಧವಾಗಿ ಯುದ್ಧಮಾಡುವದಕ್ಕೆ ಕೂಡಿಕೊಂಡರು.


ಅರಾಮ್ಯರಿಗೆ ತಮ್ಮ ಸೈನ್ಯವು ಇಸ್ರಾಯೇಲ್ಯರಿಂದ ಅಪಜಯಹೊಂದಿತೆಂದು ಗೊತ್ತಾದಾಗ ಅವರೆಲ್ಲರೂ ಕೂಡಿಬಂದರು.


ನೋಡಿ ಬೆರಗಾದರು; ತಲ್ಲಣಿಸಿ ಓಡಿ ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು