ಯೆಹೋಶುವ 11:8 - ಕನ್ನಡ ಸತ್ಯವೇದವು J.V. (BSI)8 ಯೆಹೋವನು ಅವರನ್ನು ಇಸ್ರಾಯೇಲ್ಯರ ಕೈಗೆ ಒಪ್ಪಿಸಿದನು. ಇವರು ಅವರನ್ನು ದೊಡ್ಡ ಚೀದೋನ್, ವಿುಸ್ರೆಫೋತ್ಮಯಿಮ್ ಎಂಬ ಊರುಗಳವರೆಗೂ ಪೂರ್ವದಿಕ್ಕಿನಲ್ಲಿರುವ ವಿುಚ್ಪೆಯ ಬೈಲಿನವರೆಗೂ ಹಿಂದಟ್ಟಿ ಹೊಡೆದರು. ಒಬ್ಬನಾದರೂ ಉಳಿಯದಂತೆ ಎಲ್ಲರನ್ನೂ ಸಂಹರಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಯೆಹೋವನು ಅವರನ್ನು ಇಸ್ರಾಯೇಲರ ಕೈಗೆ ಒಪ್ಪಿಸಿದನು. ಇವರು ಅವರನ್ನು ದೊಡ್ಡ ಚೀದೋನ್ ಹಾಗೂ ಮಿಸ್ರೆಫೋತ್ಮಯಿಮ್ ಎಂಬ ಊರುಗಳವರೆಗೂ ಪೂರ್ವದಿಕ್ಕಿನಲ್ಲಿರುವ ಮಿಚ್ಪೆಯ ಬೈಲಿನವರೆಗೂ ಅವರನ್ನು ಹಿಂದಟ್ಟಿ ಹೊಡೆದರು. ಒಬ್ಬನಾದರೂ ಉಳಿಯದಂತೆ ಎಲ್ಲರನ್ನೂ ಸಂಹರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಸರ್ವೇಶ್ವರ ಅವರನ್ನು ಇಸ್ರಯೇಲರ ಕೈವಶ ಮಾಡಿದರು. ಇವರು ಅವರನ್ನು ದೊಡ್ಡ ಚೀದೋನ್ ಹಾಗು ಮಿಸ್ರೆಫೋತ್ಮಯಿಮ್ ಎಂಬ ಊರುಗಳವರೆಗೂ ಮತ್ತು ಪೂರ್ವ ದಿಕ್ಕಿನಲ್ಲಿರುವ ಮಿಚ್ಫೆಯ ಬಯಲಿನವರೆಗೂ ಹಿಂದಟ್ಟಿ, ಒಬ್ಬನೂ ಉಳಿಯದಂತೆ ಸದೆಬಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಇಸ್ರೇಲರು ಶತ್ರುಗಳನ್ನು ಸೋಲಿಸುವಂತೆ ಯೆಹೋವನು ಮಾಡಿದನು. ಇಸ್ರೇಲರ ಸೈನ್ಯವು ಶತ್ರುಗಳನ್ನು ಸೋಲಿಸಿ ಅವರನ್ನು ದೊಡ್ಡ ಚೀದೋನ್ ಮತ್ತು ಮಿಸ್ರೆಪೋತ್ಮಯಿಮ್‌ವರೆಗೂ ಪೂರ್ವದಿಕ್ಕಿನಲ್ಲಿ ಮಿಚ್ಛೆಯ ಕಣಿವೆಯವರೆಗೂ ಬೆನ್ನಟ್ಟಿತು. ಶತ್ರುಗಳಲ್ಲಿ ಯಾರೂ ಉಳಿದುಕೊಳ್ಳದಂತೆ ಇಸ್ರೇಲರು ಯುದ್ಧಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಯೆಹೋವ ದೇವರು ಅವರನ್ನು ಇಸ್ರಾಯೇಲರ ಕೈಯಲ್ಲಿ ಒಪ್ಪಿಸಿಕೊಟ್ಟರು. ಇವರು ಅವರನ್ನು ಹೊಡೆದು ದೊಡ್ಡ ಸೀದೋನ್, ಮಿಸ್ರೆಫೋತ್ಮಯಿಮ್ ಎಂಬ ಊರುಗಳವರೆಗೂ ಪೂರ್ವದಿಕ್ಕಿನಲ್ಲಿರುವ ಮಿಚ್ಪೆಯ ಕಣಿವೆಯವರೆಗೂ ಹಿಂದಟ್ಟಿ, ಅವರಲ್ಲಿ ಒಬ್ಬನನ್ನಾದರೂ ಉಳಿಸದೆ ಎಲ್ಲರನ್ನು ಸಂಹರಿಸಿದರು. ಅಧ್ಯಾಯವನ್ನು ನೋಡಿ |