Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 12:2 - ಕನ್ನಡ ಸತ್ಯವೇದವು J.V. (BSI)

2 [ಅವರಲ್ಲಿ ಮೊದಲನೆಯವನು] ಹೆಷ್ಬೋನಿನಲ್ಲಿದ್ದ ಅಮೋರಿಯರ ಅರಸನಾದ ಸೀಹೋನ್ ಎಂಬವನು. ಅರ್ನೋನ್ ತಗ್ಗಿನ ಅಂಚಿನಲ್ಲಿರುವ ಅರೋಯೇರ್ ಪಟ್ಟಣವು ಮತ್ತು ತಗ್ಗಿನಲ್ಲಿಯೇ ಇರುವ ಪಟ್ಟಣವು ಇವುಗಳು ಮೊದಲುಗೊಂಡು ಅಮ್ಮೋನಿಯರ ಮೇರೆಯಾಗಿರುವ ಯಬ್ಬೋಕ್ ಹೊಳೆಯವರೆಗಿರುವ ಗಿಲ್ಯಾದಿನ ಅರ್ಧ ಪ್ರಾಂತವು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅವರಲ್ಲಿ ಮೊದಲನೆಯವನು ಹೆಷ್ಬೋನಿನಲ್ಲಿದ್ದ ಅಮೋರಿಯರ ಅರಸನಾಗಿದ್ದವನು ಸೀಹೋನ್. ಇವನು ಅರ್ನೋನ್ ಕಣಿವೆಯ ಅಂಚಿನಲ್ಲಿರುವ ಅರೋಯೇರ್ ಪಟ್ಟಣವು ಮತ್ತು ಕಣಿವೆಯಲ್ಲಿಯೇ ಇದ್ದ ಪಟ್ಟಣಗಳು ಇವುಗಳು ಮೊದಲುಗೊಂಡು ಅಮ್ಮೋನಿಯರ ಮೇರೆಯಾಗಿರುವ ಯಬ್ಬೋಕ್ ಹೊಳೆಯವರೆಗಿರುವ ಗಿಲ್ಯಾದಿನ ಅರ್ಧಪ್ರಾಂತ್ಯವು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅವರಲ್ಲಿ ಮೊದಲನೆಯವನು ಹೆಷ್ಬೋನಿನಲ್ಲಿದ್ದ ಅಮೋರಿಯರ ಅರಸ ಸೀಹೋನ್ ಎಂಬವನು. ಇವನ ರಾಜ್ಯ, ಅರ್ನೋನ್ ಕಣಿವೆಯ ಅಂಚಿನಲ್ಲಿ ಇರುವ ಅರೋಯೇರ್ ನಗರವನ್ನು ಮತ್ತು ಆ ಕಣಿವೆಯಲ್ಲೇ ಇರುವ ನಗರವನ್ನು ಮೊದಲುಗೊಂಡು ಅಮ್ಮೋನಿಯರ ಮೇರೆಯಾಗಿರುವ ಯಬ್ಬೋಕ್ ನದಿಯ ತನಕವಿರುವ ಗಿಲ್ಯಾದಿನ ಅರ್ಧಪ್ರಾಂತ್ಯ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಅವರು ಹೆಷ್ಬೋನಿನಲ್ಲಿದ್ದ ಅಮೋರಿಯರ ಅರಸನಾದ ಸೀಹೋನನನ್ನು ಸೋಲಿಸಿದರು. ಅವನು ಅರ್ನೋನ್ ನದಿಯ ತೀರದಲ್ಲಿದ್ದ ಅರೋಯೇರ್‌ನಿಂದ ಯಬ್ಬೋಕ್ ನದಿಯವರೆಗಿರುವ ಪ್ರದೇಶವನ್ನು ಆಳುತ್ತಿದ್ದನು. ಅವನ ರಾಜ್ಯವು ಆ ತಗ್ಗು ಪ್ರದೇಶದ ಮಧ್ಯದಿಂದ ಪ್ರಾರಂಭವಾಗುತ್ತಿತ್ತು. ಇದು ಅಮ್ಮೋನಿಯರ ಪ್ರದೇಶಕ್ಕೂ ಮೇರೆಯಾಗಿತ್ತು. ಗಿಲ್ಯಾದಿನ ಅರ್ಧ ಪ್ರದೇಶವು ಸೀಹೋನನ ಆಳ್ವಿಕೆಗೆ ಒಳಗಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅವರಲ್ಲಿ ಮೊದಲನೆಯವನು ಹೆಷ್ಬೋನಿನಲ್ಲಿದ್ದ ಅಮೋರಿಯರ ಅರಸ ಸೀಹೋನ್ ಎಂಬವನು. ಅವನು ಅರ್ನೋನ್ ಕಣಿವೆಯ ಮಧ್ಯಭಾಗದ ದಾರಿಯ ಬಳಿಯಲ್ಲಿ ಇರುವ ಅರೋಯೇರ್ ನಗರದಿಂದ, ಅರ್ಧ ಗಿಲ್ಯಾದಿನಿಂದಲೂ ಅಮ್ಮೋನಿಯರ ಮೇರೆಯಾದ ಯಬ್ಬೋಕ್ ನದಿಯವರೆಗೆ ಆಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 12:2
12 ತಿಳಿವುಗಳ ಹೋಲಿಕೆ  

ಆ ರಾತ್ರಿ ಅವನು ತನ್ನ ಇಬ್ಬರು ಹೆಂಡರನ್ನೂ ಇಬ್ಬರು ದಾಸಿಯರನ್ನೂ ಹನ್ನೊಂದು ಮಂದಿ ಮಕ್ಕಳನ್ನೂ ಕರೆದುಕೊಂಡು ಯಬ್ಬೋಕ್ ಹೊಳೆಯನ್ನು ದಾಟುವ ಸ್ಥಳದಲ್ಲಿ ದಾಟಿದನು.


ಅವರಲ್ಲಿ ಅಮೋರಿಯರ ಅರಸನಾದ ಸೀಹೋನನೂ ಬಾಷಾನಿನ ಅರಸನಾದ ಓಗನೂ ಇದ್ದರು. ಕಾನಾನ್‍ದೇಶದ ಎಲ್ಲಾ ರಾಜ್ಯಗಳನ್ನು ನಿರ್ಮೂಲ ಮಾಡಿದನು.


ರಾಜ್ಯಜನಾಂಗಗಳನ್ನು ಅವರಿಗೆ ವಶಪಡಿಸಿ ಆ ರಾಜ್ಯಗಳನ್ನು ಅವರಿಗೆ ಸ್ವಾಸ್ತ್ಯವನ್ನಾಗಿ ಹಂಚಿಕೊಟ್ಟಿ. ಹೀಗೆ ಅವರು ಹೆಷ್ಬೋನಿನ ಅರಸನಾದ ಸೀಹೋನ್, ಬಾಷಾನಿನ ಅರಸನಾದ ಓಗ್ ಇವರ ಪ್ರಾಂತಗಳನ್ನು ಸ್ವಾಧೀನಪಡಿಸಿಕೊಂಡರು.


ಹೀಗೆ ಇಸ್ರಾಯೇಲ್ಯರು ಅರ್ನೋನಿನಿಂದ ಯಬ್ಬೋಕಿನವರೆಗೂ ಅರಣ್ಯದಿಂದ ಯೊರ್ದನಿನವರೆಗೂ ಇದ್ದ ಅಮೋರಿಯರ ಪ್ರಾಂತವನ್ನೆಲ್ಲಾ ವಶಮಾಡಿಕೊಂಡರು.


ಆ ಅರಸನು ದೂತರಿಗೆ - ಇಸ್ರಾಯೇಲ್ಯರು ಐಗುಪ್ತದಿಂದ ಬಂದಾಗ ಅರ್ನೋನಿನಿಂದ ಯಬ್ಬೋಕ್, ಯೊರ್ದನ್ ಹೊಳೆಗಳವರೆಗೂ ಇದ್ದ ನನ್ನ ದೇಶವನ್ನು ಕಸಕೊಂಡರಲ್ಲಾ; ನೀನು ಈಗ ಅದನ್ನು ಸಮಾಧಾನದಿಂದ ಹಿಂದಕ್ಕೆ ಕೊಡು ಎಂದು ಹೇಳಿ ಕಳುಹಿಸಿದನು.


ಬೆಳನು ಆಜಾಜನ ಮಗನು; ಇವನು ಶೆಮಯನ ಮಗನು; ಇವನು ಯೋವೇಲನ ಮಗನು. ಯೋವೇಲ್ಯರು ಅರೋಯೇರಿನಿಂದ ನೆಬೋ, ಬಾಳ್ಮೆಯೋನ್ ಎಂಬ ಸ್ಥಳಗಳವರೆಗೂ ವಾಸಿಸುತ್ತಿದ್ದರು.


ಅರೋಯೇರಿನವರೇ, ದಾರಿಯ ಮಗ್ಗುಲಲ್ಲಿ ನಿಂತುಕೊಂಡು ನೋಡಿರಿ; ಓಡಿಹೋಗುವವನನ್ನೂ ತಪ್ಪಿಸಿಕೊಳ್ಳುವವಳನ್ನೂ ಏನಾಯಿತು ಎಂದು ವಿಚಾರಿಸಿರಿ.


ಅಂದರೆ [ಇಸ್ರಾಯೇಲ್ಯರು ಐಗುಪ್ತದೇಶವನ್ನು ಬಿಟ್ಟ] ನಾಲ್ವತ್ತನೆಯ ವರುಷದ ಹನ್ನೊಂದನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಯೆಹೋವನು ತನಗೆ ಆಜ್ಞಾಪಿಸಿದ್ದನ್ನೆಲ್ಲಾ ಇಸ್ರಾಯೇಲ್ಯರಿಗೆ ತಿಳಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು