Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 12:3 - ಕನ್ನಡ ಸತ್ಯವೇದವು J.V. (BSI)

3 ಯೊರ್ದನ್ ಹೊಳೆಯ ಪೂರ್ವದಲ್ಲಿ ಕಿನ್ನೆರೋತ್ ಸಮುದ್ರದಿಂದ ಲವಣ ಸಮುದ್ರವೆನಿಸಿಕೊಳ್ಳುವ ಅರಾಬಾ ಸಮುದ್ರದ ಹತ್ತಿರವಿರುವ ಬೇತ್‍ಯೆಷಿಮೋತಿನವರೆಗೂ ದಕ್ಷಿಣದಲ್ಲಿರುವ ಪಿಸ್ಗಾ ಬೆಟ್ಟದ ಬುಡದವರೆಗೂ ಇರುವ ತಗ್ಗಾದ ಪ್ರದೇಶವು ಇವೇ ಅವನ ರಾಜ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಹಾಗೂ ಯೊರ್ದನ್ ನದಿಯ ಪೂರ್ವದಲ್ಲಿ ಕಿನ್ನೆರೋತ್ ಸಮುದ್ರದಿಂದ ಲವಣಸಮುದ್ರವೆನಿಸಿಕೊಳ್ಳುವ ಅರಾಬ್ ಸಮುದ್ರದ ಹತ್ತಿರವಿರುವ ಬೇತಯೆಷಿಮೋತಿನವರೆಗೂ ದಕ್ಷಿಣದಲ್ಲಿರುವ ಪಿಸ್ಗಾ ಬೆಟ್ಟದ ಬುಡದವರೆಗೂ ಇರುವ ಕಣಿವೆ ಪ್ರದೇಶವು ಇವೇ ಅವನ ರಾಜ್ಯ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಹಾಗೂ ಜೋರ್ಡನ್ ನದಿಯ ಪೂರ್ವದಲ್ಲಿ ಕಿನ್ನೆರೋತ್ ಸಮುದ್ರದಿಂದ ಲವಣ ಸಮುದ್ರ (ಮೃತ್ಯುಕಡಲು) ಎಣಿಸಿಕೊಳ್ಳುವ ಅರಾಬಾ ಸಮುದ್ರದ ಹತ್ತಿರವಿರುವ ಬೇತ್ ಯೆಷಿಮೋತಿನವರೆಗೂ ದಕ್ಷಿಣದಲ್ಲಿರುವ ಪಿಸ್ಗಾ ಬೆಟ್ಟದ ಬುಡದವರೆಗೂ ಇರುವ ಕಣಿವೆ ಪ್ರದೇಶ ಇವುಗಳಿಂದ ಕೂಡಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಗಲಿಲಾಯ ಸರೋವರದಿಂದ ಲವಣಸಮುದ್ರದವರೆಗೆ ಹಬ್ಬಿದ ಜೋರ್ಡನ್ ಕಣಿವೆಯ ಪೂರ್ವಭಾಗವು ಕೂಡ ಅವನ ಆಳ್ವಿಕೆಗೆ ಒಳಪಟ್ಟಿತ್ತು. ಬೇತ್‌ಯೆಷಿಮೋತಿನಿಂದ ದಕ್ಷಿಣದಲ್ಲಿ ಪಿಸ್ಗಾ ಬೆಟ್ಟದವರೆಗೆ ಹಬ್ಬಿದ ಪ್ರದೇಶವನ್ನು ಸಹ ಅವನು ಆಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಯೊರ್ದನ್ ನದಿಯ ಪೂರ್ವದಲ್ಲಿ ಕಿನ್ನೆರೆತ್ ಸಮುದ್ರದಿಂದ ಲವಣ ಸಮುದ್ರವೆನಿಸಿಕೊಳ್ಳುವ ಅರಾಬಾ ಸಮುದ್ರದ ಹತ್ತಿರವಿರುವ ಬೇತ್ ಯೆಷೀಮೋತನವರೆಗೂ ದಕ್ಷಿಣದಲ್ಲಿರುವ ಪಿಸ್ಗಾ ಬೆಟ್ಟದ ಬುಡದವರೆಗೂ ಇರುವ ತಗ್ಗಾದ ಪ್ರದೇಶವು ಸಹ ಅವನ ರಾಜ್ಯವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 12:3
15 ತಿಳಿವುಗಳ ಹೋಲಿಕೆ  

ಅದಲ್ಲದೆ ಅರಾಬಾ ಎಂಬ ತಗ್ಗನ್ನೂ ಅವರಿಗೆ ಕೊಟ್ಟೆನು; ಅದರಲ್ಲಿ ಕಿನ್ನೆರೆತ್ ಸಮುದ್ರ ಮೊದಲುಗೊಂಡು ಪಿಸ್ಗಾ ಬೆಟ್ಟದ ಪಶ್ಚಿಮದಲ್ಲಿರುವ ಅರಾಬದ ಸಮುದ್ರವೆನಿಸಿಕೊಳ್ಳುವ ಲವಣ ಸಮುದ್ರದವರೆಗೆ ಯೊರ್ದನ್ ಹೊಳೆಯು ಅವರ [ಪಶ್ಚಿಮ] ಮೇರೆ.


ಬೇತ್ಪೆಗೋರ್ ಎಂಬ ಪಟ್ಟಣಗಳೂ ಪಿಸ್ಗದ ಬುಡದಲ್ಲಿರುವ ಸೀಮೆ, ಬೇತ್‍ಯೆಷಿಮೋತ್ ಪಟ್ಟಣ ಇವುಗಳೂ


ಉತ್ತರದಿಕ್ಕಿನ ಪರ್ವತ ಪ್ರದೇಶ, ಕಿನ್ನೆರೋತ್ ಸಮುದ್ರದ ದಕ್ಷಿಣದಲ್ಲಿನ ತಗ್ಗಾದಪ್ರದೇಶ, ಇಳಕಲಿನ ಪ್ರದೇಶ, ದೋರ್ ಊರಿನ ಪಶ್ಚಿಮದಲ್ಲಿದ್ದ ಬೆಟ್ಟದ ಮೇಲಿನ ಪ್ರದೇಶ ಇವುಗಳ ಅರಸರನ್ನೂ


ಅರಾಬಾ ಎಂಬ ತಗ್ಗಿನಲ್ಲಿ ಪಿಸ್ಗಾ ಬೆಟ್ಟದ ಬುಡದಲ್ಲಿರುವ ಅರಾಬದ ಸಮುದ್ರದವರೆಗೆ ಯೊರ್ದನ್ ಹೊಳೆಯ ಆಚೆ ಇರುವ ಭಾಗವನ್ನೆಲ್ಲಾ ಸ್ವಾಧೀನಮಾಡಿಕೊಂಡಿದ್ದರು.)


ತರುವಾಯ ಯೇಸು ಗಲಿಲಾಯದ ಸಮುದ್ರದ ಆಚೆಗೆ ಹೋದನು; ಅದಕ್ಕೆ ತಿಬೇರಿಯದ ಸಮುದ್ರವೆಂತಲೂ ಹೇಳುತ್ತಾರೆ.


ಯೊರ್ದನ್ ಹೊಳೆಯ ಮುಖದಿಂದ ಲವಣಸಮುದ್ರವೆಲ್ಲಾ ಅದರ ಪೂರ್ವದಿಕ್ಕಿನ ಮೇರೆ. ಅದರ ಉತ್ತರದಿಕ್ಕಿನ ಮೇರೆಯು ಯೊರ್ದನ್ ಹೊಳೆ ಲವಣಸಮುದ್ರವನ್ನು ಕೂಡುವ ಸ್ಥಳದಿಂದ ತೊಡಗಿ


ಅದರ ದಕ್ಷಿಣದ ಮೇರೆಯು ಲವಣ ಸಮುದ್ರದ ತೆಂಕಣ ಕೊನೆಯಿಂದ ತೊಡಗಿ


ಮೇಲಣಿಂದ ಬರುವ ನೀರು ಬಹುದೂರದಲ್ಲಿದ್ದ ಚಾರೆತಾನಿನ ಹತ್ತಿರವಿರುವ ಆದಾಮ್ ಊರಿನ ತನಕ ರಾಶಿಯಾಗಿ ನಿಂತುಕೊಂಡಿತು. ಕೆಳಗಣ ನೀರು ಅರಾಬಾ ತಗ್ಗಿನಲ್ಲಿರುವ ಲವಣ ಸಮುದ್ರಕ್ಕೆ ಹರಿದುಹೋಯಿತು. ಜನರು ಯೆರಿಕೋವಿನ ಎದುರಿನಲ್ಲಿ ಹೊಳೆದಾಟಿದರು.


ಬಾಮೋತಿನಿಂದ ಮೋವಾಬ್ಯರ ಬೈಲಿನ ಪ್ರದೇಶದಲ್ಲಿರುವ ತಗ್ಗಿಗೆ ಅಂದರೆ ಪಿಸ್ಗಾ ಎಂಬ ಬೆಟ್ಟದ ಸೀಮೆಯ ಅಂಚಿಗೆ ಬಂದರು. ಆ ಬೆಟ್ಟದ ಮೇಲಿನಿಂದ ಕೆಳಗಿರುವ ಯೆಷೀಮೋನ್ ಎಂಬ ಅರಣ್ಯ ಪ್ರದೇಶವು ಕಾಣಿಸುತ್ತದೆ.


ಆಕಾಶದಿಂದ ಅಗ್ನಿಗಂಧಕಗಳನ್ನು ಸುರಿಸಿ ಆ ಪಟ್ಟಣಗಳನ್ನೂ ಸುತ್ತಲಿರುವ ಸೀಮೆಯೆಲ್ಲವನ್ನೂ ಊರುಗಳಲ್ಲಿದ್ದ ಜನರೆಲ್ಲರನ್ನೂ ಭೂವಿುಯ ಮೇಲಣ ಎಲ್ಲಾ ಬೆಳೆಯನ್ನೂ ಹಾಳುಮಾಡಿದನು.


ಒಂದಾನೊಂದು ದಿವಸ ಜನರು ಒತ್ತಾಗಿ ಬಂದು ಆತನ ಮೇಲೆ ಬಿದ್ದುಕೊಂಡು ದೇವರ ವಾಕ್ಯವನ್ನು ಕೇಳುತ್ತಿರಲು


ಬೆನ್ಹದದನು ಅರಸನಾದ ಆಸನ ಮಾತನ್ನು ಕೇಳಿ ತನ್ನ ಸೈನ್ಯಾಧಿಪತಿಗಳನ್ನು ಯುದ್ಧಕ್ಕಾಗಿ ಇಸ್ರಾಯೇಲ್ಯರ ಪಟ್ಟಣಗಳಿಗೆ ಕಳುಹಿಸಿದನು. ಇವರು ಇಯ್ಯೋನ್, ದಾನ್, ಆಬೇಲ್ಬೇತ್ಮಾಕಾ, ಕಿನ್ನೆರೋತ್‍ಪ್ರದೇಶ, ನಫ್ತಾಲ್ಯರ ಎಲ್ಲಾ ಪ್ರಾಂತ ಇವುಗಳನ್ನು ಹಾಳುಮಾಡಿದರು.


ಇಗೋ, ದೇಶಭೂಷಣಗಳಾದ ಮೋವಾಬಿನ ಗಡಿಯ ಪಟ್ಟಣಗಳು ಅಂದರೆ ಬೇತ್‍ಯೆಷೀಮೋತ್ ಬಾಳ್‍ಮೆಯೋನ್, ಕಿರ್ಯಾಥಯಿಮ್ ಎಂಬ ಪಟ್ಟಣಗಳು ಇರುವ ಕಡೆಯಲ್ಲಿ ನಾನು ಮೋವಾಬಿನ ಮೇರೆಯನ್ನು ಒಡೆದುಬಿಟ್ಟು


ಅಲ್ಲಿಂದ ಅದು ಅಯಿನಿನ ಮೂಡಲಲ್ಲಿರುವ ರಿಬ್ಲಕ್ಕೆ ಬರಬೇಕು. ತರುವಾಯ ಅದು ಗಟ್ಟಾ ಇಳಿದು ಕಿನ್ನೆರೆತ್ ಸಮುದ್ರದ ಮೂಡಲಲ್ಲಿರುವ ಬೆಟ್ಟಗಳಿಗೆ ಹೋಗಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು