ಯೆಹೋಶುವ 13:6 - ಕನ್ನಡ ಸತ್ಯವೇದವು J.V. (BSI)6 ಒಟ್ಟಾರೆ ಲೆಬನೋನಿನಿಂದ ವಿುಸ್ರೆಫೋತ್ಮಯಿವಿುನವರೆಗಿರುವ ಚೀದೋನ್ಯರ ಎಲ್ಲಾ ಪರ್ವತ ಪ್ರಾಂತ್ಯಗಳೂ ಇವೇ. ನಾನೇ ಈ ಎಲ್ಲಾ ಜನಾಂಗಗಳನ್ನು ಇಸ್ರಾಯೇಲ್ಯರ ಎದುರಿನಿಂದ ಹೊರಡಿಸಿಬಿಡುವೆನು. ನೀನಾದರೋ ನಾನು ಮೊದಲೇ ಆಜ್ಞಾಪಿಸಿದಂತೆ ಇಸ್ರಾಯೇಲ್ಯರಿಗೆ ದೇಶವನ್ನು ಹಂಚಿಕೊಡುವಾಗ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಒಟ್ಟಾರೆ ಲೆಬನೋನಿನಿಂದ ಮಿಸ್ರೆಫೋತ್ಮಯಿಮಿನವರೆಗೂ, ಚೀದೋನ್ಯರ ಎಲ್ಲಾ ಪರ್ವತ ಪ್ರಾಂತ್ಯಗಳು. ನಾನೇ ಈ ಎಲ್ಲಾ ಜನಾಂಗಗಳನ್ನು ಇಸ್ರಾಯೇಲ್ಯರ ಸಮ್ಮುಖದಿಂದ ಹೊರಡಿಸಿಬಿಡುವೆನು. ನೀನಾದರೂ ನಾನು ಮೊದಲೇ ಆಜ್ಞಾಪಿಸಿದಂತೆ ಇಸ್ರಾಯೇಲ್ಯರಿಗೆ ದೇಶವನ್ನು ಹಂಚಿಕೊಡುವಾಗ ಇವುಗಳನ್ನು ಸೇರಿಸಿ ದೇಶವನ್ನೆಲ್ಲಾ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಒಟ್ಟಾರೆ ಲೆಬನೋನಿನಿಂದ ಮಿಸ್ರೆಫೋತ್ಮಯಿಮಿನವರೆಗಿರುವ ಸಿದೋನ್ಯರ ಎಲ್ಲ ಪರ್ವತ ಪ್ರಾಂತ್ಯಗಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 “ಲೆಬನೋನಿನಿಂದ ಮಿಸ್ರೆಪೋತ್ಮಯಿಮಿನವರೆಗಿರುವ ಪರ್ವತ ಪ್ರದೇಶದಲ್ಲಿ ಚೀದೋನ್ಯರು ವಾಸವಾಗಿದ್ದಾರೆ. ಆದರೆ ಇಸ್ರೇಲರಿಗಾಗಿ ನಾನು ಅವರನ್ನೆಲ್ಲಾ ಹೊರ ತಳ್ಳುತ್ತೇನೆ. ಇಸ್ರೇಲರಿಗೆ ದೇಶವನ್ನು ಹಂಚುವಾಗ ಈ ಪ್ರದೇಶವನ್ನು ಸೇರಿಸಿ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 “ಒಟ್ಟಾರೆ ಲೆಬನೋನಿನಿಂದ ಮಿಸ್ರೆಫೋತ್ಮಯಿಮಿನವರೆಗೂ ಬೆಟ್ಟದ ದೇಶದ ಎಲ್ಲಾ ನಿವಾಸಿಗಳನ್ನೂ ಎಲ್ಲಾ ಸೀದೋನ್ಯರನ್ನೂ ನಾನು ಇಸ್ರಾಯೇಲರ ಎದುರಿನಿಂದ ಹೊರಡಿಸಿಬಿಡುವೆನು. ಆದರೆ ನಾನು ನಿನಗೆ ಹೇಳಿದ ಹಾಗೆಯೇ ನೀನು ಚೀಟುಗಳನ್ನು ಹಾಕಿ, ಇಸ್ರಾಯೇಲರಿಗೆ ಸೊತ್ತಾಗಿ ಪಾಲು ಕೊಡಬೇಕು. ಅಧ್ಯಾಯವನ್ನು ನೋಡಿ |
ನೀವು ಚೀಟುಹಾಕಿ ಆ ದೇಶವನ್ನು ನಿಮ್ಮನಿಮ್ಮ ಕುಟುಂಬಗಳಿಗೆ ಹಂಚಿಕೊಳ್ಳಬೇಕು. ಹೆಚ್ಚು ಮಂದಿಯುಳ್ಳ ಕುಟುಂಬಕ್ಕೆ ಹೆಚ್ಚಾಗಿಯೂ ಕಡಿಮೆಯಾದ ಕುಟುಂಬಕ್ಕೆ ಕಡಿಮೆಯಾಗಿಯೂ ಸ್ವಾಸ್ತ್ಯವು ದೊರಕಬೇಕು. ಒಂದೊಂದು ಕುಟುಂಬದ ಚೀಟು ಯಾವ ಯಾವ ಸ್ಥಳವನ್ನು ಸೂಚಿಸುವದೋ ಆ ಸ್ಥಳದಲ್ಲಿಯೇ ಆ ಕುಟುಂಬದ ಸ್ವಾಸ್ತ್ಯವಿರಬೇಕು. ಒಂದೊಂದು ಕುಲದ ಕುಟುಂಬಗಳು ಒಂದೇ ಪ್ರದೇಶದಲ್ಲಿರಬೇಕು.