Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 13:7 - ಕನ್ನಡ ಸತ್ಯವೇದವು J.V. (BSI)

7 ಇವುಗಳನ್ನೂ ಸೇರಿಸಿ ದೇಶವನ್ನೆಲ್ಲಾ ಒಂಭತ್ತು ಕುಲಗಳಿಗೂ ಮನಸ್ಸೆಕುಲದ ಅರ್ಧಜನರಿಗೂ ಪಾಲುಮಾಡಿ ಕೊಡು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಒಂಭತ್ತು ಕುಲಗಳಿಗೂ, ಮನಸ್ಸೆ ಕುಲದ ಅರ್ಧ ಜನರಿಗೂ ಪಾಲು ಮಾಡಿ ಕೊಡು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 “ನಾನೇ ಈ ಎಲ್ಲಾ ಜನಾಂಗಗಳನ್ನು ಇಸ್ರಯೇಲರ ಸಮ್ಮುಖದಿಂದ ಹೊರಡಿಸಿಬಿಡುವೆನು. ನೀನಾದರೋ ನಾನು ಮೊದಲೇ ಆಜ್ಞಾಪಿಸಿದಂತೆ ಇಸ್ರಯೇಲರಿಗೆ ನಾಡನ್ನು ಹಂಚಿಕೊಡುವಾಗ ಇವುಗಳನ್ನು ಕೂಡ ಸೇರಿಸಿ ನಾಡನ್ನೆಲ್ಲಾ ಒಂಬತ್ತು ಕುಲಗಳಿಗೂ ಮನಸ್ಸೆ ಕುಲದ ಅರ್ಧಜನರಿಗೂ ಪಾಲುಮಾಡಿಕೊಡು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಒಂಭತ್ತು ಕುಲಗಳಿಗೂ ಮನಸ್ಸೆ ಕುಲದ ಅರ್ಧಜನರಿಗೂ ಪಾಲು ಮಾಡಿಕೊಡು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಈಗ ಈ ದೇಶವನ್ನು ಒಂಬತ್ತು ಗೋತ್ರಗಳಿಗೂ ಮನಸ್ಸೆ ಕುಲದ ಅರ್ಧ ಗೋತ್ರಕ್ಕೆ ಸೊತ್ತಾಗಿ ಪಾಲು ಮಾಡಿಕೊಡು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 13:7
12 ತಿಳಿವುಗಳ ಹೋಲಿಕೆ  

ನೀವು ಚೀಟುಹಾಕಿ ಆ ದೇಶವನ್ನು ನಿಮ್ಮನಿಮ್ಮ ಕುಟುಂಬಗಳಿಗೆ ಹಂಚಿಕೊಳ್ಳಬೇಕು. ಹೆಚ್ಚು ಮಂದಿಯುಳ್ಳ ಕುಟುಂಬಕ್ಕೆ ಹೆಚ್ಚಾಗಿಯೂ ಕಡಿಮೆಯಾದ ಕುಟುಂಬಕ್ಕೆ ಕಡಿಮೆಯಾಗಿಯೂ ಸ್ವಾಸ್ತ್ಯವು ದೊರಕಬೇಕು. ಒಂದೊಂದು ಕುಟುಂಬದ ಚೀಟು ಯಾವ ಯಾವ ಸ್ಥಳವನ್ನು ಸೂಚಿಸುವದೋ ಆ ಸ್ಥಳದಲ್ಲಿಯೇ ಆ ಕುಟುಂಬದ ಸ್ವಾಸ್ತ್ಯವಿರಬೇಕು. ಒಂದೊಂದು ಕುಲದ ಕುಟುಂಬಗಳು ಒಂದೇ ಪ್ರದೇಶದಲ್ಲಿರಬೇಕು.


ಒಟ್ಟಾರೆ ಲೆಬನೋನಿನಿಂದ ವಿುಸ್ರೆಫೋತ್ಮಯಿವಿುನವರೆಗಿರುವ ಚೀದೋನ್ಯರ ಎಲ್ಲಾ ಪರ್ವತ ಪ್ರಾಂತ್ಯಗಳೂ ಇವೇ. ನಾನೇ ಈ ಎಲ್ಲಾ ಜನಾಂಗಗಳನ್ನು ಇಸ್ರಾಯೇಲ್ಯರ ಎದುರಿನಿಂದ ಹೊರಡಿಸಿಬಿಡುವೆನು. ನೀನಾದರೋ ನಾನು ಮೊದಲೇ ಆಜ್ಞಾಪಿಸಿದಂತೆ ಇಸ್ರಾಯೇಲ್ಯರಿಗೆ ದೇಶವನ್ನು ಹಂಚಿಕೊಡುವಾಗ


ಮನಸ್ಸೆಕುಲದ ಉಳಿದ ಅರ್ಧಜನರಿಗೂ ರೂಬೇನ್ಯರಿಗೂ ಗಾದ್ಯರಿಗೂ ಮೋಶೆಯಿಂದ ಯೊರ್ದನಿನ ಆಚೆಯಲ್ಲೇ ಸ್ವಾಸ್ತ್ಯವು ದೊರಕಿತು. ಯೆಹೋವನ ಸೇವಕನಾದ ಮೋಶೆಯು ಅವರಿಗೆ ಕೊಟ್ಟ ಪ್ರಾಂತಗಳು ಯಾವವಂದರೆ -


ಜನಾಂಗಗಳನ್ನು ಅವರ ಮುಂಗಡೆಯಿಂದ ಓಡಿಸಿಬಿಟ್ಟು ಅವರ ದೇಶವನ್ನು ಇಸ್ರಾಯೇಲ್ ಗೋತ್ರಗಳಿಗೆ ಸ್ವಾಸ್ತ್ಯವಾಗಿರುವಂತೆ ಹಂಚಿಕೊಟ್ಟು ಆ ಜನಾಂಗಗಳ ಬೀಡಾರಗಳಲ್ಲಿ ಅವರನ್ನು ನೆಲೆಗೊಳಿಸಿದನು.


ಮತ್ತು ಆತನು ಅವರಿಗೆ ಪರಜನರ ದೇಶಗಳನ್ನು ಕೊಟ್ಟನು; ಅನ್ಯಜನಾಂಗಗಳ ಕಷ್ಟಾರ್ಜಿತವು ಅವರಿಗೆ ಕೈ ಸೇರಿತು.


ನೀವು ದೇಶವನ್ನು ಸ್ವಾಸ್ತ್ಯಸ್ವಾಸ್ತ್ಯವಾಗಿ ಹಂಚುವಾಗ ಒಂದು ಭಾಗವನ್ನು ಮೀಸಲಾಗಿ ಪ್ರತ್ಯೇಕಿಸಿ ಯೆಹೋವನಿಗೆ ಸಮರ್ಪಿಸಬೇಕು; ಅದರ ಉದ್ದವು ಇಪ್ಪತ್ತೈದು ಸಾವಿರ ಮೊಳ, ಅಗಲವು ಇಪ್ಪತ್ತು ಸಾವಿರ ಮೊಳ; ಆ ಪ್ರಾಂತವೆಲ್ಲಾ ಸುತ್ತುಮುತ್ತಲು ಪರಿಶುದ್ಧವಾಗಿರಬೇಕು.


ಅದಕ್ಕನುಸಾರವಾಗಿ ಮೋಶೆಯು ಇಸ್ರಾಯೆಲ್ಯರಿಗೆ - ನೀವು ಚೀಟುಹಾಕಿ ಹಂಚಿಕೊಳ್ಳಬೇಕೆಂದು ಯೆಹೋವನು ಆಜ್ಞಾಪಿಸಿದ ದೇಶವು ಇದೇ; ಒಂಭತ್ತುವರೆ ಕುಲದವರಿಗೆ ಇದನ್ನು ಹಂಚಿಕೊಡಬೇಕು.


ಯೆಹೋವನು ಮೋಶೆಯ ಮೂಲಕ ಆಜ್ಞಾಪಿಸಿದಂತೆ [ಯೊರ್ದನಿನ ಪಶ್ಚಿಮದ] ಕಾನಾನ್ ದೇಶವನ್ನು ಚೀಟುಹಾಕಿ ಇಸ್ರಾಯೇಲ್ಯರ ಒಂಭತ್ತುವರೆ ಕುಲದವರಿಗೆ ಸ್ವಾಸ್ತ್ಯವಾಗಿ ಹಂಚಿಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು