ಯೆಹೋಶುವ 14:11 - ಕನ್ನಡ ಸತ್ಯವೇದವು J.V. (BSI)11 ಮೋಶೆಯು ನನ್ನನ್ನು ಕಳುಹಿಸಿದಾಗ ನನಗೆಷ್ಟು ಬಲವಿತ್ತೋ ಈಗಲೂ ಅಷ್ಟಿದೆ. ಯುದ್ಧಮಾಡುವದಕ್ಕೂ ವಿಶೇಷ ಕಾರ್ಯಗಳನ್ನು ನಿರ್ವಹಿಸುವದಕ್ಕೂ ನನಗೆ ಮುಂಚಿನಂತೆಯೇ ಶಕ್ತಿಯಿರುತ್ತದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಮೋಶೆಯು ನನ್ನನ್ನು ಕಳುಹಿಸಿದಾಗ ನನಗೆಷ್ಟು ಬಲವಿತ್ತೋ ಈಗಲೂ ಅಷ್ಟೇ ಬಲವಿದೆ. ಯುದ್ಧಮಾಡುವುದಕ್ಕೂ ವಿಶೇಷ ಕಾರ್ಯಗಳನ್ನು ನಿರ್ವಹಿಸುವುದಕ್ಕೂ ನನಗೆ ಮೊದಲಿನಂತೆಯೇ ಈಗಲೂ ಬಲವಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಮೋಶೆ ನನ್ನನ್ನು ಕಳಿಸಿದಾಗ ನನಗೆಷ್ಟು ಬಲವಿತ್ತೋ ಈಗಲೂ ಅಷ್ಟೇ ಬಲವಿದೆ. ಯುದ್ಧಮಾಡುವುದಕ್ಕೂ ವಿಶೇಷ ಕಾರ್ಯಗಳನ್ನು ನಿರ್ವಹಿಸುವುದಕ್ಕೂ ನನಗೆ ಮುಂಚಿನಂತೆಯೇ ಶಕ್ತಿಯಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಮೋಶೆಯು ನನ್ನನ್ನು ಕಳುಹಿಸಿ ಕೊಟ್ಟಾಗ ನಾನು ದೃಢಕಾಯನಾಗಿದ್ದಂತೆಯೇ ಈಗಲೂ ಸಹ ದೃಢಕಾಯನಾಗಿದ್ದೇನೆ. ಆಗ ನಾನು ಯುದ್ಧಮಾಡಲು ಹೇಗೆ ಸಿದ್ಧವಾಗಿರುತ್ತಿದ್ದೆನೋ ಅದೇ ರೀತಿ ಈಗಲೂ ಸಿದ್ಧನಾಗಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಮೋಶೆ ನನ್ನನ್ನು ಕಳುಹಿಸಿದ ದಿವಸದಲ್ಲಿ ನಾನು ಹೇಗೆ ಬಲಿಷ್ಠನಾಗಿ ಇದ್ದೆನೋ, ಹಾಗೆಯೇ ಈಗಲೂ ಬಲಿಷ್ಠನಾಗಿದ್ದೇನೆ. ನಾನು ಯುದ್ಧ ಮಾಡುವದಕ್ಕೂ ವಿಶೇಷ ಕಾರ್ಯಗಳನ್ನು ನಿರ್ವಹಿಸುವದಕ್ಕೂ ನನಗೆ ಆಗ ಇದ್ದ ಶಕ್ತಿಯ ಹಾಗೆಯೇ ಈಗಲೂ ಶಕ್ತಿಯುಳ್ಳವನಾಗಿದ್ದೇನೆ. ಅಧ್ಯಾಯವನ್ನು ನೋಡಿ |