ಯೆಹೋಶುವ 14:12 - ಕನ್ನಡ ಸತ್ಯವೇದವು J.V. (BSI)12 ಹೀಗಿರಲಾಗಿ ಯೆಹೋವನು ಆ ದಿನದಲ್ಲಿ ಸೂಚಿಸಿದಂಥ ಈ ಪರ್ವತಪ್ರದೇಶವನ್ನು ನನಗೆ ಕೊಡು. ಇದರಲ್ಲಿ ಉನ್ನತ ಪುರುಷರಿರುತ್ತಾರೆಂದೂ ಇದರ ಪಟ್ಟಣಗಳು ದೊಡ್ಡವೂ ಕೋಟೆಕೊತ್ತಲುಳ್ಳವುಗಳೂ ಆಗಿವೆ ಎಂದೂ ಆ ಕಾಲದಲ್ಲಿ ನೀನು ಕೇಳಿದಿಯಲ್ಲಾ. ಅವರೆಲ್ಲರನ್ನೂ ಓಡಿಸಿ ಬಿಡುವದಕ್ಕೋಸ್ಕರ ಯೆಹೋವನು ತನ್ನ ಮಾತಿಗನುಸಾರವಾಗಿ ನನಗೆ ಸಹಾಯ ಮಾಡುವನೆಂದು ನಿರೀಕ್ಷಿಸಿಕೊಂಡಿದ್ದೇನೆ ಅಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಹೀಗಿರಲು ಯೆಹೋವನು ಆ ದಿನದಂದು ಸೂಚಿಸಿದಂತೆ ಈ ಪರ್ವತ ಪ್ರದೇಶವನ್ನು ನನಗೆ ಕೊಡು ಇದರಲ್ಲಿ ಉನ್ನತ ಪುರುಷರು (ಅನಾಕ್ಯರು) ಇರುತ್ತಾರೆ ಎಂದು ಈ ಪಟ್ಟಣಗಳು ದೊಡ್ಡದೂ, ಕೋಟೆಕೊತ್ತಲುಳ್ಳವುಗಳೂ ಆಗಿವೆ ಎಂದೂ ಆ ಕಾಲದಲ್ಲಿ ನೀನೇ ಕೇಳಿದ್ದೀಯಲ್ಲಾ. ಅವರೆಲ್ಲರನ್ನು ಓಡಿಸಿಬಿಡುವುದಕ್ಕೋಸ್ಕರ ಯೆಹೋವನು ತನ್ನ ಮಾತಿಗನುಸಾರವಾಗಿ ನನಗೆ ಸಹಾಯ ಮಾಡುವನೆಂದು ನಂಬಿಕೊಂಡಿದ್ದೇನೆ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಹೀಗಿರಲು ಸರ್ವೇಶ್ವರ ಆ ದಿನದಂದು ಸೂಚಿಸಿದಂತೆ ಈ ಮಲೆನಾಡನ್ನು ನನಗೆ ಕೊಡು. ‘ಇದರಲ್ಲಿ ಎತ್ತರದ ವ್ಯಕ್ತಿಗಳಿದ್ದಾರೆ, ದೊಡ್ಡ ದೊಡ್ಡ ನಗರಗಳಿವೆ, ಕೋಟೆಕೊತ್ತಲಗಳಿವೆ’ ಎಂದು ಆ ಕಾಲದಲ್ಲಿ ನೀನು ಕೇಳಿದ್ದುಂಟು. ಅವರೆಲ್ಲರನ್ನು ಓಡಿಸಿಬಿಡಲು ಸರ್ವೇಶ್ವರ ತಮ್ಮ ಮಾತಿಗನುಸಾರ ನನಗೆ ಸಹಾಯಮಾಡುವರೆಂಬ ನಂಬಿಕೆ ನನಗಿದೆ,” ಎಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಆದ್ದರಿಂದ ಯೆಹೋವನು ನನಗೆ ಬಹಳ ಹಿಂದೆಯೇ ವಾಗ್ದಾನ ಮಾಡಿದ್ದ ಬೆಟ್ಟಪ್ರದೇಶವನ್ನು ಈಗ ನನಗೆ ಕೊಡು. ಬಲಿಷ್ಠರಾದ ಅನಾಕವಂಶಸ್ಥರು ವಾಸವಾಗಿರುವ ಆ ಪಟ್ಟಣಗಳು ಬಹಳ ದೊಡ್ಡದಾಗಿವೆಯೆಂದೂ ಸುಭದ್ರವಾದವುಗಳೆಂದೂ ನೀನು ಕೇಳಿರುವೆ. ಆದರೆ ಯೆಹೋವನು ನನ್ನೊಂದಿಗಿರುವುದರಿಂದ ಆತನು ಹೇಳಿದಂತೆಯೇ ಆ ಪ್ರದೇಶವನ್ನು ನಾನು ತೆಗೆದುಕೊಳ್ಳುತ್ತೇನೆ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಆದ್ದರಿಂದ ಯೆಹೋವ ದೇವರು ಆ ದಿವಸದಲ್ಲಿ ಹೇಳಿದ ಈ ಬೆಟ್ಟವನ್ನು ಈಗ ನನಗೆ ಕೊಡು; ಏಕೆಂದರೆ ಅಲ್ಲಿ ಅನಾಕ್ಯರು ಇದ್ದಾರೆಂದೂ, ಗೋಡೆಗಳುಳ್ಳ ದೊಡ್ಡ ಪಟ್ಟಣಗಳುಂಟೆಂದೂ ನೀನು ಆ ದಿವಸದಲ್ಲಿ ಕೇಳಿದ್ದಿ. ಯೆಹೋವ ದೇವರು ಹೇಳಿದ ಪ್ರಕಾರವೇ ನಾನು ಅವರನ್ನು ಹೊರಡಿಸಲು ಯೆಹೋವ ದೇವರು ನನಗೆ ಸಹಾಯ ಮಾಡುವರೆಂದು ನಂಬಿಕೊಂಡಿದ್ದೇನೆ,” ಎಂದನು. ಅಧ್ಯಾಯವನ್ನು ನೋಡಿ |
ಆಸನು ತನ್ನ ದೇವರಾದ ಯೆಹೋವನಿಗೆ - ಯೆಹೋವನೇ, ಬಲಿಷ್ಠನು ಬಲಹೀನನ ಮೇಲೆ ಬೀಳುವಲ್ಲಿ ನಿನ್ನ ಹೊರತು ರಕ್ಷಕನಿಲ್ಲ. ನಮ್ಮ ದೇವರಾದ ಯೆಹೋವನೇ, ನಮ್ಮನ್ನು ರಕ್ಷಿಸು. ನಿನ್ನಲ್ಲಿ ಭರವಸವಿಟ್ಟು ನಿನ್ನ ಹೆಸರಿನಲ್ಲಿ ಈ ಮಹಾ ಸಮೂಹಕ್ಕೆ ವಿರೋಧವಾಗಿ ಯುದ್ಧಕ್ಕೆ ಬಂದೆವಲ್ಲಾ. ಯೆಹೋವನೇ, ನಮ್ಮ ದೇವರು ನೀನು. ನರರು ನಿನ್ನನ್ನು ಎದುರಿಸಿ ಗೆಲ್ಲಬಾರದು ಎಂದು ಮೊರೆಯಿಡಲು
ಜೀವಸ್ವರೂಪನಾದ ದೇವರನ್ನು ದೂಷಿಸುವದಕ್ಕಾಗಿ ತನ್ನ ಯಜಮಾನನಾದ ಅಶ್ಶೂರದ ಅರಸನಿಂದ ಕಳುಹಿಸಲ್ಪಟ್ಟ ರಬ್ಷಾಕೆಯ ನಿಂದಾವಾಕ್ಯಗಳನ್ನು ನಿನ್ನ ದೇವರಾದ ಯೆಹೋವನು ಕೇಳಿರುವನು; ನಿನ್ನ ದೇವರಾದ ಯೆಹೋವನು ತಾನು ಹೇಳಿದ ವಾಕ್ಯಗಳ ನಿವಿುತ್ತ ಮುಯ್ಯಿತೀರಿಸಾನು. ಆದದರಿಂದ ಉಳಿದಿರುವ ಸ್ವಲ್ಪ ಜನರಿಗೋಸ್ಕರ ಆತನನ್ನು ಪ್ರಾರ್ಥಿಸು ಎಂಬದಾಗಿ ಹಿಜ್ಕೀಯನು ಅನ್ನುತ್ತಾನೆ ಎಂದು ಹೇಳಿರಿ ಎಂಬದೇ.