Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 14:14 - ಕನ್ನಡ ಸತ್ಯವೇದವು J.V. (BSI)

14 ಕೆನಿಜ್ಜೀಯನಾದ ಯೆಫುನ್ನೆಯ ಮಗ ಕಾಲೇಬನು ಇಸ್ರಾಯೇಲ್‍ದೇವರಾದ ಯೆಹೋವನನ್ನು ಸಂಪೂರ್ಣವಾಗಿ ಹೊಂದಿಕೊಂಡದರಿಂದ ಹೆಬ್ರೋನ್ ಅವನಿಗೆ ಸ್ವಾಸ್ತ್ಯವಾಗಿ ಸಿಕ್ಕಿತು. ಅದು ಇಂದಿನವರೆಗೂ ಅವನದೇ ಆಗಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಕೆನಿಜ್ಜೀಯನಾದ ಯೆಫುನ್ನೆಯ ಮಗನು ಕಾಲೇಬ್ ಇಸ್ರಾಯೇಲರ ದೇವರಾದ ಯೆಹೋವನನ್ನು ಸಂಪೂರ್ಣವಾಗಿ ಅನುಸರಿಸಿ ವಿಧೇಯನಾಗಿದ್ದುದರಿಂದ ಹೆಬ್ರೋನ್ ಅವನಿಗೆ ಸ್ವತ್ತಾಗಿ ಸಿಕ್ಕಿತು. ಅದು ಇಂದಿನವರೆಗೂ ಅವನದೇ ಆಗಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಕೆನಿಜ್ಜೀಯನಾದ ಯೆಫುನ್ನೆಯ ಮಗ ಕಾಲೇಬನು ಇಸ್ರಯೇಲಿನ ದೇವರಾದ ಸರ್ವೇಶ್ವರನನ್ನು ಸಂಪೂರ್ಣವಾಗಿ ಶ್ರದ್ಧೆಯಿಂದ ಅನುಸರಿಸಿದ್ದರಿಂದ ಹೆಬ್ರೋನ್ ಅವನಿಗೆ ಸೊತ್ತಾಗಿ ಸಿಕ್ಕಿತು.ಅದು ಇಂದಿನವರೆಗೂ ಅವನದೇ ಆಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆ ನಗರ ಈಗಲೂ ಕೆನಿಜ್ಜೀಯನಾದ ಯೆಫುನ್ನೆಯ ಮಗನಾದ ಕಾಲೇಬನ ವಂಶದವರ ಸ್ವಾಸ್ತ್ಯವಾಗಿದೆ. ಏಕೆಂದರೆ ಅವನು ಇಸ್ರೇಲಿನ ದೇವರಾದ ಯೆಹೋವನನ್ನು ನಂಬಿದ್ದನು ಮತ್ತು ಆತನ ಆಜ್ಞೆಯನ್ನು ಪಾಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಹೀಗೆಯೇ ಕೆನಿಜ್ಜೀಯನಾದ ಯೆಫುನ್ನೆಯ ಮಗ ಕಾಲೇಬನು ಇಸ್ರಾಯೇಲಿನ ದೇವರಾದ ಯೆಹೋವ ದೇವರನ್ನು ಪೂರ್ಣಹೃದಯದಿಂದ ಹಿಂಬಾಲಿಸಿದ ಕಾರಣ, ಹೆಬ್ರೋನು ಇಂದಿನವರೆಗೂ ಅವನ ಸೊತ್ತಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 14:14
9 ತಿಳಿವುಗಳ ಹೋಲಿಕೆ  

ಆದದರಿಂದ, ನನ್ನ ಪ್ರಿಯ ಸಹೋದರರೇ, ಸ್ಥಿರಚಿತ್ತರಾಗಿಯೂ ನಿಶ್ಚಲರಾಗಿಯೂ ಇರ್ರಿ. ನೀವು ಕರ್ತನ ಸೇವೆಯಲ್ಲಿ ಪಡುವ ಪ್ರಯಾಸವು ನಿಷ್ಫಲವಾಗುವದಿಲ್ಲವೆಂದು ತಿಳಿದು ಕರ್ತನ ಕೆಲಸವನ್ನು ಯಾವಾಗಲೂ ಅತ್ಯಾಸಕ್ತಿಯಿಂದ ಮಾಡುವವರಾಗಿರಿ.


ಇಸ್ರಾಯೇಲನು ಅವನಿಗೆ - ನೀನು ಹೋಗಿ ನಿನ್ನ ಅಣ್ಣಂದಿರ ಯೋಗಕ್ಷೇಮವನ್ನೂ ಆಡುಕುರಿಗಳ ಯೋಗಕ್ಷೇಮವನ್ನೂ ವಿಚಾರಿಸಿಕೊಂಡು ಬಾ ಎಂದು ಅಪ್ಪಣೆಕೊಟ್ಟು ಅವನನ್ನು ಹೆಬ್ರೋನಿರುವ ತಗ್ಗಿನಿಂದ ಕಳುಹಿಸಲು ಯೋಸೇಫನು ಹೊರಟನು.


ಯೆಹೂದ ಕುಲದ ಯೆಫುನ್ನೆಯ ಮಗನಾದ ಕಾಲೇಬ್,


ಆಗ ಯೆಹೋಶುವನು ಯೆಫುನ್ನೆಯ ಮಗನಾದ ಕಾಲೇಬನನ್ನು ಆಶೀರ್ವದಿಸಿ ಹೆಬ್ರೋನ್ ಪಟ್ಟಣವನ್ನು ಅವನಿಗೆ ಸ್ವಾಸ್ತ್ಯವಾಗಿ ಕೊಟ್ಟನು.


ಅದರ ಮುಂಚಿನ ಹೆಸರು ಕಿರ್ಯತ್ಅರ್ಬ ಎಂಬದು. ಅರ್ಬ ಎಂಬವನು ಉನ್ನತ ಪುರುಷರಲ್ಲಿ ಪ್ರಮುಖನು. ಯುದ್ಧವು ನಿಂತು ದೇಶದಲ್ಲಿ ಸಮಾಧಾನವುಂಟಾಯಿತು.


ಯೆಹೋವನು ಮೋಶೆಯ ಮೂಲಕ ವಾಗ್ದಾನ ಮಾಡಿದ್ದ ಪ್ರದೇಶವನ್ನೆಲ್ಲಾ ಯೆಹೋಶುವನು ಹಿಡಿದುಕೊಂಡು ಇಸ್ರಾಯೇಲ್ ಕುಲಭಾಗಗಳಿಗನುಸಾರವಾಗಿ ಹಂಚಿಕೊಟ್ಟನು. ಯುದ್ಧವು ನಿಂತು ದೇಶದಲ್ಲೆಲ್ಲಾ ಸಮಾಧಾನವುಂಟಾಯಿತು.


ಇವನು ಎತ್ನಿಯ ಮಗನು; ಇವನು ಜೆರಹನ ಮಗನು;


ನಿಮ್ಮ ಕೈಗಳು ಜೋಲು ಬೀಳದಿರಲಿ. ನಿಮ್ಮ ಪ್ರಯತ್ನಕ್ಕೆ ಫಲತಪ್ಪದು ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು