Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 14:3 - ಕನ್ನಡ ಸತ್ಯವೇದವು J.V. (BSI)

3 ಉಳಿದ ಎರಡುವರೆ ಕುಲಗಳ ಜನರಿಗೆ ಯೊರ್ದನಿನ ಆಚೆಯಲ್ಲಿ ಮೋಶೆಯೇ ಸ್ವಾಸ್ತ್ಯವನ್ನು ಕೊಟ್ಟಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಉಳಿದ ಎರಡುವರೆ ಕುಲಗಳ ಜನರಿಗೆ ಯೊರ್ದನಿನ ಆಚೆಯಲ್ಲಿ ಮೋಶೆಯೇ ಸ್ವತ್ತನ್ನು ಕೊಟ್ಟಿದ್ದನು. ಲೇವಿಯರಿಗೆ ಮಾತ್ರ ಕೊಟ್ಟಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಉಳಿದ ಎರಡುವರೆ ಕುಲಗಳ ಜನರಿಗೆ ಜೋರ್ಡನಿನ ಆಚೆಯಲ್ಲಿ ಮೋಶೆಯೇ ಸೊತ್ತನ್ನು ಕೊಟ್ಟಿದ್ದನು. ಲೇವಿಯರಿಗೆ ಮಾತ್ರ ಕೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಎರಡುವರೆ ಕುಲಗಳ ಜನರಿಗೆ ಮೋಶೆಯು ಜೋರ್ಡನ್ ನದಿಯ ಪೂರ್ವದಿಕ್ಕಿನ ಪ್ರದೇಶವನ್ನು ಕೊಟ್ಟಿದ್ದನು. ಆದರೆ ಲೇವಿಯ ಕುಲದವರಿಗೆ ಉಳಿದವರಂತೆ ಯಾವ ಪ್ರದೇಶವನ್ನೂ ಕೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಏಕೆಂದರೆ ಮೋಶೆಯು ಯೊರ್ದನ್ ನದಿ ಆಚೆ ಎರಡೂವರೆ ಗೋತ್ರಗಳಿಗೆ ಸೊತ್ತನ್ನು ಕೊಟ್ಟಿದ್ದನು. ಆದರೆ ಲೇವಿಯರಿಗೆ ಯಾವ ಸೊತ್ತನ್ನೂ ಕೊಡಲಿಲ್ಲ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 14:3
9 ತಿಳಿವುಗಳ ಹೋಲಿಕೆ  

ಲೇವಿ ಕುಲದವರಿಗೆ ಮಾತ್ರ ಪಾಲು ಸಿಕ್ಕಲಿಲ್ಲ. ಇಸ್ರಾಯೇಲ್ ದೇವರಾದ ಯೆಹೋವನು ಆಜ್ಞಾಪಿಸಿದಂತೆ ಆತನ ಯಜ್ಞಶೇಷವೇ ಅವರ ಸ್ವಾಸ್ತ್ಯ.


ಮನಸ್ಸೆಕುಲದ ಉಳಿದ ಅರ್ಧಜನರಿಗೂ ರೂಬೇನ್ಯರಿಗೂ ಗಾದ್ಯರಿಗೂ ಮೋಶೆಯಿಂದ ಯೊರ್ದನಿನ ಆಚೆಯಲ್ಲೇ ಸ್ವಾಸ್ತ್ಯವು ದೊರಕಿತು. ಯೆಹೋವನ ಸೇವಕನಾದ ಮೋಶೆಯು ಅವರಿಗೆ ಕೊಟ್ಟ ಪ್ರಾಂತಗಳು ಯಾವವಂದರೆ -


ನೀವು ದೇಶವನ್ನು ಸ್ವಾಸ್ತ್ಯಸ್ವಾಸ್ತ್ಯವಾಗಿ ಹಂಚುವಾಗ ಒಂದು ಭಾಗವನ್ನು ಮೀಸಲಾಗಿ ಪ್ರತ್ಯೇಕಿಸಿ ಯೆಹೋವನಿಗೆ ಸಮರ್ಪಿಸಬೇಕು; ಅದರ ಉದ್ದವು ಇಪ್ಪತ್ತೈದು ಸಾವಿರ ಮೊಳ, ಅಗಲವು ಇಪ್ಪತ್ತು ಸಾವಿರ ಮೊಳ; ಆ ಪ್ರಾಂತವೆಲ್ಲಾ ಸುತ್ತುಮುತ್ತಲು ಪರಿಶುದ್ಧವಾಗಿರಬೇಕು.


ಯೆಹೋವನ ಸೇವಕನಾದ ಮೋಶೆಯು ಇಸ್ರಾಯೇಲ್ಯರ ಸಹಿತವಾಗಿ ಆ ಇಬ್ಬರನ್ನೂ ಸೋಲಿಸಿ ಅವರ ರಾಜ್ಯಗಳನ್ನು ರೂಬೇನ್ಯರಿಗೂ ಗಾದ್ಯರಿಗೂ ಮನಸ್ಸೆಕುಲದ ಅರ್ಧ ಜನರಿಗೂ ಸ್ವಾಸ್ತ್ಯವಾಗಿ ಕೊಟ್ಟನು.


ಅರ್ನೋನ್ ತಗ್ಗಿನ ಅಂಚಿನಲ್ಲಿದ್ದ ಅರೋಯೇರ್ ಪಟ್ಟಣ, ಆ ತಗ್ಗಿನ ಮಧ್ಯದಲ್ಲಿದ್ದ ಪಟ್ಟಣ ಇವುಗಳೂ


ಮೇದೆಬದ ತಪ್ಪಲಸೀಮೆಗೆ ಸೇರಿದ ಹೆಷ್ಬೋನ್ ಪಟ್ಟಣವೂ ಅದೇ ಎತ್ತರವಾದ ಬೈಲಿನಲ್ಲಿರುವ ದೀಬೋನ್, ಬಾಮೋತ್‍ಬಾಳ್, ಬೇತ್ಬಾಳ್ಮೆಯೋನ್,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು