Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 14:4 - ಕನ್ನಡ ಸತ್ಯವೇದವು J.V. (BSI)

4 ಲೇವಿಯರಿಗೆ ಮಾತ್ರ ಕೊಡಲಿಲ್ಲ. ಯೋಸೇಫ್ಯರು ಮನಸ್ಸೆ, ಎಫ್ರಾಯೀಮ್ ಎಂಬ ಎರಡು ಕುಲಗಳಾಗಿ ಎಣಿಸಲ್ಪಟ್ಟರಲ್ಲಾ; ಲೇವಿಯರಿಗೆ ಕೆಲವು ಪಟ್ಟಣಗಳೂ ಅವರ ದನಕುರಿಗಳಿಗೋಸ್ಕರ ಅವುಗಳಿಗೆ ಸೇರಿದ ಹುಲ್ಲುಗಾವಲುಗಳೂ ಹೊರತಾಗಿ ಬೇರೇನೂ ಸಿಕ್ಕಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯೋಸೇಫನ ಮಕ್ಕಳಾದ ಮನಸ್ಸೆ ಮತ್ತು ಎಫ್ರಾಯೀಮ್ ಎಂಬ ಎರಡು ಕುಲಗಳಾಗಿ ಅವರು ಎಣಿಸಲ್ಪಟ್ಟಿದ್ದರಲ್ಲಾ; ಲೇವಿಯರಿಗೆ ಕೆಲವು ಪಟ್ಟಣಗಳೂ ಹಾಗೂ ಅವರ ದನಕುರಿಗಳಿಗೋಸ್ಕರ ಅಲ್ಲಿನ ಕೆಲವು ಹುಲ್ಲುಗಾವಲುಗಳನ್ನೂ ಬಿಟ್ಟರೆ ಬೇರೇನೂ ಸಿಕ್ಕಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಜೋಸೆಫ್ಯರರು ಮನಸ್ಸೆ ಮತ್ತು ಎಫ್ರಯಿಮ್ ಎಂಬ ಎರಡು ಕುಲಗಳಾಗಿ ಎಣಿಸಲ್ಪಟ್ಟಿದ್ದರು. ಲೇವಿಯರಿಗೆ, ತಂಗುವುದಕ್ಕೆ ಕೆಲವು ನಗರಗಳು ಹಾಗು ಅವರ ದನಕುರಿಗಳಿಗೆ ಅಲ್ಲಿನ ಕೆಲವು ಹುಲ್ಲುಗಾವಲುಗಳನ್ನು ಬಿಟ್ಟರೆ ಬೇರೇನೂ ಸಿಕ್ಕಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಹನ್ನೆರಡು ಕುಲಗಳಿಗೆ ಅವರವರ ಪ್ರದೇಶಗಳ ಪೂರ್ಣಸ್ವಾಸ್ತ್ಯವನ್ನು ಕೊಡಲಾಯಿತು. ಯೋಸೇಫನ ಮನೆತನದವರು ಮನಸ್ಸೆ ಮತ್ತು ಎಫ್ರಾಯೀಮ್ ಎಂಬ ಎರಡು ಕುಲಗಳಾಗಿ ವಿಂಗಡಿಸಲ್ಪಟ್ಟಿದ್ದರು. ಪ್ರತಿಯೊಂದು ಕುಲಕ್ಕೂ ಸ್ವಲ್ಪಸ್ವಲ್ಪ ಪ್ರದೇಶ ದೊರೆಯಿತು. ಆದರೆ ಲೇವಿ ಕುಲದ ಜನರಿಗೆ ಯಾವ ಪ್ರದೇಶವನ್ನೂ ಕೊಡಲಿಲ್ಲ. ಅವರಿಗೆ ವಾಸಿಸಲು ಕೆಲವು ಊರುಗಳನ್ನು ಮಾತ್ರ ಕೊಡಲಾಯಿತು. ಈ ಊರುಗಳು ಪ್ರತಿಯೊಂದು ಕುಲದ ಜನರ ಪ್ರದೇಶದಲ್ಲಿ ಇದ್ದವು. ಅವರ ಪಶುಗಳಿಗಾಗಿ ಹುಲ್ಲುಗಾವಲುಗಳನ್ನು ಕೊಡಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಯೋಸೇಫನ ಮಕ್ಕಳಾದ ಮನಸ್ಸೆಯೂ, ಎಫ್ರಾಯೀಮನೂ ಎರಡು ಗೋತ್ರಗಳಾಗಿದ್ದರು. ಲೇವಿಯರಿಗೆ ದೇಶದಲ್ಲಿ ಪಾಲುಕೊಡಲಿಲ್ಲ. ಆದರೆ ವಾಸಮಾಡುವ ಪಟ್ಟಣಗಳನ್ನೂ, ದನಕುರಿಗಳಿಗೋಸ್ಕರವಾಗಿ ಹುಲ್ಲುಗಾವಲುಗಳನ್ನೂ, ಪ್ರಾಂತಗಳನ್ನೂ ಮಾಡಿಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 14:4
13 ತಿಳಿವುಗಳ ಹೋಲಿಕೆ  

ನಾನು ಐಗುಪ್ತದೇಶಕ್ಕೆ ನಿನ್ನ ಬಳಿಗೆ ಬರುವದಕ್ಕಿಂತ ಮುಂಚೆ ಇಲ್ಲಿ ಹುಟ್ಟಿದ ನಿನ್ನಿಬ್ಬರು ಮಕ್ಕಳು ನನ್ನ ಮಕ್ಕಳಾಗಿರಬೇಕು. ರೂಬೇನ್ ಸಿಮೆಯೋನರು ನನ್ನ ಮಕ್ಕಳಾಗಿರುವಂತೆಯೇ ಎಫ್ರಾಯೀಮ್ ಮನಸ್ಸೆಯರೂ ನನ್ನ ಮಕ್ಕಳಾಗಿರಲಿ.


ಚೊಚ್ಚಲುಮಗನು ಹುಟ್ಟಿದಾಗ ಯೋಸೇಫನು - ನಾನು ನನ್ನ ಎಲ್ಲಾ ಕಷ್ಟವನ್ನೂ ತಂದೆಯ ಮನೆಯವರನ್ನೂ ಮರೆತುಬಿಡುವಂತೆ ದೇವರು ಮಾಡಿದ್ದಾನಲ್ಲಾ ಎಂದು ಹೇಳಿ ಅವನಿಗೆ ಮನಸ್ಸೆ ಎಂದು ಹೆಸರಿಟ್ಟನು.


ಐಗುಪ್ತದೇಶದಲ್ಲಿ ಯೋಸೇಫನಿಗೆ ಓನ್ ಪಟ್ಟಣದ ಆಚಾರ್ಯನಾದ ಪೋಟೀಫೆರನ ಮಗಳಾದ ಆಸನತ್ ಎಂಬಾಕೆಯಲ್ಲಿ ಹುಟ್ಟಿದ ಮನಸ್ಸೆ ಎಫ್ರಾಯೀಮ್;


ಕೆಲವು ಕಾಲವಾದ ಮೇಲೆ ತಂದೆಯು ಬಹಳ ಬಲಹೀನನಾಗಿ ಬಿದ್ದಿದ್ದಾನೆಂಬ ವರ್ತಮಾನವು ಯೋಸೇಫನಿಗೆ ಬರಲು ಅವನು ಮನಸ್ಸೆ ಎಫ್ರಾಯೀಮರೆಂಬ ತನ್ನಿಬ್ಬರು ಮಕ್ಕಳನ್ನು ಸಂಗಡ ಕರೆದುಕೊಂಡು ಅವನ ಬಳಿಗೆ ಬಂದನು.


ಯೋಸೇಫನ ಮಕ್ಕಳು ಮನಸ್ಸೆ ಎಫ್ರಾಯೀಮ್.


ತರುವಾಯ ಹಿಜ್ಕೀಯನು - ಇಸ್ರಾಯೇಲ್ ದೇವರಾದ ಯೆಹೋವನ ಪಸ್ಕವನ್ನಾಚರಿಸುವದಕ್ಕಾಗಿ ಯೆರೂಸಲೇವಿುನಲ್ಲಿರುವ ಯೆಹೋವನ ಆಲಯಕ್ಕೆ ಬರಬೇಕೆಂದು ಎಲ್ಲಾ ಇಸ್ರಾಯೇಲ್ಯರಿಗೂ ಯೆಹೂದ್ಯರಿಗೂ ಎಫ್ರಾಯೀಮ್ಯರಿಗೂ ಮನಸ್ಸೆಯರಿಗೂ ದೂತರ ಮುಖಾಂತರವಾಗಿ ಮತ್ತು ಪತ್ರಗಳ ಮೂಲಕವಾಗಿ ತಿಳಿಯಪಡಿಸಿದನು.


ಎರಡನೆಯ ಮಗನು ಹುಟ್ಟಿದಾಗ ಅವನು - ನನಗೆ ಸಂಕಟ ಬಂದ ದೇಶದಲ್ಲೇ ದೇವರು ಅಭಿವೃದ್ಧಿಯನ್ನು ದಯಪಾಲಿಸಿದ್ದಾನೆಂದು ಹೇಳಿ ಆ ಮಗನಿಗೆ ಎಫ್ರಾಯೀಮ್ ಎಂದು ಹೆಸರಿಟ್ಟನು.


ಅವರ ತರುವಾಯ ನೀನು ಪಡೆದ ಮಕ್ಕಳು ನಿನ್ನವರಾಗಲಿ, ಅವರು ತಮ್ಮ ಅಣ್ಣಂದಿರ ಸ್ವಾಸ್ತ್ಯದಲ್ಲಿ ಬಾಧ್ಯತೆ ಹೊಂದಿ ಅವರ ಕುಲದ ಹೆಸರನ್ನೇ ಇಟ್ಟುಕೊಳ್ಳಲಿ.


ಇದು ಯೋಸೇಫನ ಮಕ್ಕಳಾದ ಮನಸ್ಸೆ ಎಫ್ರಾಯೀಮ್ ಎಂಬ ಕುಲಗಳಿಗೆ ಸಿಕ್ಕಿದ ಸ್ವಾಸ್ತ್ಯದ ಮೇರೆಯು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು