Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 14:8 - ಕನ್ನಡ ಸತ್ಯವೇದವು J.V. (BSI)

8 ನನ್ನ ಜೊತೆಯಲ್ಲಿ ಬಂದಿದ್ದ ಸಹೋದರರು ಜನರನ್ನು ಎದೆಗೆಡಿಸಿದರು. ನಾನಾದರೋ ನನ್ನ ದೇವರಾದ ಯೆಹೋವನನ್ನೇ ಸಂಪೂರ್ಣವಾಗಿ ನಂಬಿಕೊಂಡು ಯಥಾರ್ಥವನ್ನೇ ಹೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನನ್ನ ಜೊತೆಯಲ್ಲಿ ಬಂದಿದ್ದ ಸಹೋದರರು ಜನರನ್ನು ಎದೆಗುಂದಿಸಿದರು. ನಾನಾದರೋ ನನ್ನ ದೇವರಾದ ಯೆಹೋವನನ್ನೇ ಸಂಪೂರ್ಣವಾಗಿ ನಂಬಿ ಯಥಾರ್ಥವಾಗಿ ಆತನನ್ನೇ ಅನುಸರಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ನನ್ನ ಜೊತೆಯಲ್ಲಿ ಬಂದಿದ್ದ ಸಹೋದರರು ಜನರನ್ನು ಎದೆಗೆಡಿಸಿದರು. ನಾನಾದರೋ ನನ್ನ ದೇವರಾದ ಸರ್ವೇಶ್ವರನನ್ನೇ ಸಂಪೂರ್ಣವಾಗಿ ನಂಬಿ ಶ್ರದ್ಧೆಯಿಂದ ಅನುಸರಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನನ್ನ ಜೊತೆಯಲ್ಲಿ ಬಂದ ಬೇರೆಯವರು ಭಯವನ್ನುಂಟುಮಾಡುವ ಸಂಗತಿಗಳನ್ನು ಹೇಳಿದರು. ಆದರೆ ಯೆಹೋವನು ಆ ಭೂಮಿಯನ್ನು ನಮಗೆ ಕೊಡುತ್ತಾನೆಂದು ನಾನು ನಿಜವಾಗಿ ನಂಬಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆದರೂ ನನ್ನ ಸಂಗಡ ಹೋಗಿ ಬಂದ ನನ್ನ ಸಹೋದರರು ಜನರ ಹೃದಯವನ್ನು ಕರಗಿಸಿದರು. ಆದರೆ ನಾನು ನನ್ನ ದೇವರಾದ ಯೆಹೋವ ದೇವರನ್ನು ಪೂರ್ಣಹೃದಯದಿಂದ ಹಿಂಬಾಲಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 14:8
8 ತಿಳಿವುಗಳ ಹೋಲಿಕೆ  

ನನ್ನ ದಾಸನಾದ ಕಾಲೇಬನು ಅಂಥ ಮನಸ್ಸುಳ್ಳವನಾಗಿರದೆ ಮನಃಪೂರ್ವಕವಾಗಿ ನನ್ನ ಮಾತನ್ನು ಅನುಸರಿಸಿ ನಡೆದದ್ದರಿಂದ ಅವನನ್ನೇ ಅವನು ಸಂಚರಿಸಿದ ಆ ದೇಶದಲ್ಲಿ ಸೇರಿಸುವೆನು; ಅವನ ಸಂತತಿಯವರು ಅದನ್ನು ಸ್ವಾಧೀನಪಡಿಸಿಕೊಳ್ಳುವರು.


ಯೆಫುನ್ನೆಯ ಮಗನಾದ ಕಾಲೇಬನೊಬ್ಬನೇ ಯೆಹೋವನನ್ನು ಮನಃಪೂರ್ವಕವಾಗಿ ಅನುಸರಿಸಿದದರಿಂದ ಅವನೇ ಅದನ್ನು ನೋಡುವನು; ಅವನು ಸಂಚರಿಸಿದ ಪ್ರದೇಶವನ್ನು ಅವನಿಗೂ ಅವನ ಸಂತತಿಯವರಿಗೂ ಕೊಡುವೆನೆಂದು ಹೇಳಿದನು.


ಕೆನಿಜ್ಜೀಯನಾದ ಯೆಫುನ್ನೆಯ ಮಗ ಕಾಲೇಬನು ಇಸ್ರಾಯೇಲ್‍ದೇವರಾದ ಯೆಹೋವನನ್ನು ಸಂಪೂರ್ಣವಾಗಿ ಹೊಂದಿಕೊಂಡದರಿಂದ ಹೆಬ್ರೋನ್ ಅವನಿಗೆ ಸ್ವಾಸ್ತ್ಯವಾಗಿ ಸಿಕ್ಕಿತು. ಅದು ಇಂದಿನವರೆಗೂ ಅವನದೇ ಆಗಿರುತ್ತದೆ.


ಆದರೆ ಅವನ ಜೊತೆಯಲ್ಲಿ ಹೋದವರು - ಆ ಜನರು ನಮಗಿಂತ ಬಲಿಷ್ಠರು; ಅವರ ಮೇಲೆ ಹೋಗುವದಕ್ಕೆ ನಮಗೆ ಶಕ್ತಿಸಾಲದು ಅಂದರು.


ಸ್ತ್ರೀ ಸಹವಾಸದಿಂದ ಮಲಿನರಾಗದವರು ಇವರೇ; ಇವರು ಕನ್ಯೆಯರಂತೆ ನಿಷ್ಕಳಂಕರು. ಯಜ್ಞದ ಕುರಿಯಾದಾತನು ಎಲ್ಲಿ ಹೋದರೂ ಇವರು ಆತನ ಹಿಂದೆ ಹೋಗುವರು. ಇವರು ಮನುಷ್ಯರೊಳಗಿಂದ ಸ್ವಕೀಯ ಜನರಾಗಿ ಕೊಂಡುಕೊಳ್ಳಲ್ಪಟ್ಟು ದೇವರಿಗೂ ಯಜ್ಞದ ಕುರಿಯಾದಾತನಿಗೂ ಪ್ರಥಮಫಲದಂತಾದರು.


ಅದನ್ನು ಕೇಳಿ ಜನಸಮೂಹದವರೆಲ್ಲರೂ ಗುಲ್ಲುಮಾಡಿ ಬಹಳ ಕೂಗಿಕೊಂಡರು; ಆ ರಾತ್ರಿಯೆಲ್ಲಾ ಜನರು ಅಳುತ್ತಿದ್ದರು.


ನಾವು ಹೋಗಬೇಕಾದ ಆ ಸೀಮೆ ಎಂಥದೆಂದು ಆಲೋಚಿಸಿರಿ; ಅಲ್ಲಿ ಹೋಗಿದ್ದ ನಮ್ಮ ಸಹೋದರರು ನಮಗೆ - ಆ ದೇಶದ ಜನರು ನಮಗಿಂತ ಹೆಚ್ಚಾಗಿಯೂ ಉದ್ದವಾಗಿಯೂ ಇದ್ದಾರೆ; ಅವರಿರುವ ಪಟ್ಟಣಗಳು ದೊಡ್ಡವೂ ಆಕಾಶವನ್ನು ಮುಟ್ಟುವ ಕೋಟೆಕೊತ್ತಲುಳ್ಳವೂ ಆಗಿವೆ; ಅಲ್ಲಿ ಉನ್ನತಪುರುಷರನ್ನು ನೋಡಿದೆವೆಂದು ಹೇಳಿ ನಮ್ಮ ಧೈರ್ಯವನ್ನು ಕೆಡಿಸಿದ್ದಾರೆ ಅಂದುಕೊಳ್ಳುತ್ತಿದ್ದಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು