ಯೆಹೋಶುವ 14:9 - ಕನ್ನಡ ಸತ್ಯವೇದವು J.V. (BSI)9 ಮೋಶೆಯು ಆ ದಿವಸ - ನೀನು ಪೂರ್ಣಮನಸ್ಸಿನಿಂದ ನನ್ನ ದೇವರಾದ ಯೆಹೋವನನ್ನು ಹೊಂದಿಕೊಂಡದರಿಂದ ನೀನು ಸಂಚರಿಸಿದ ಪ್ರದೇಶವು ನಿನಗೂ ನಿನ್ನ ಸಂತಾನದವರಿಗೂ ಶಾಶ್ವತ ಸ್ವಾಸ್ತ್ಯವಾಗುವದು ಎಂದು ಪ್ರಮಾಣಮಾಡಿ ನನಗೆ ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಮೋಶೆಯು ಆ ದಿನ ನನಗೆ ‘ನೀನು ಪೂರ್ಣಮನಸ್ಸಿನಿಂದ ನನ್ನ ದೇವರಾದ ಯೆಹೋವನನ್ನು ಅನುಸರಿಸಿದ್ದರಿಂದ ನೀನು ಸಂಚರಿಸಿದ ಪ್ರದೇಶವು ನಿನಗೂ ನಿನ್ನ ಸಂತಾನದವರಿಗೂ ಶಾಶ್ವತ ಸ್ವತ್ತಾಗಿರುವುದು’ ಎಂದು ಪ್ರಮಾಣ ಮಾಡಿ ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಮೋಶೆ ಅಂದು ನನಗೆ, ‘ನೀನು ಪೂರ್ಣ ಮನಸ್ಸಿನಿಂದ ನನ್ನ ದೇವರಾದ ಸರ್ವೇಶ್ವರನನ್ನೇ ಶ್ರದ್ಧೆಯಿಂದ ಅನುಸರಿಸಿದ ಕಾರಣ ನೀನು ಸಂಚರಿಸಿದ ಪ್ರದೇಶ ನಿನಗೂ ನಿನ್ನ ಸಂತಾನದವರಿಗೂ ಶಾಶ್ವತ ಸೊತ್ತಾಗುವುದು,’ ಎಂದು ಪ್ರಮಾಣಮಾಡಿ ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಆದ್ದರಿಂದ ಮೋಶೆಯು ಅಂದು ನನಗೆ, ‘ನೀನು ಸಂಚರಿಸಿ ನೋಡಿದ ಆ ಭೂಮಿಯು ನಿನ್ನ ಸ್ವಂತ ಭೂಮಿಯಾಗುತ್ತದೆ. ನಿನ್ನ ಮಕ್ಕಳು ಶಾಶ್ವತವಾಗಿ ಅದರ ಸ್ವಾಸ್ತ್ಯವನ್ನು ಹೊಂದಿರುತ್ತಾರೆ. ನೀನು ನನ್ನ ದೇವರಾದ ಯೆಹೋವನಲ್ಲಿ ನಿಜವಾದ ನಂಬಿಕೆ ಇಟ್ಟಿದ್ದಕ್ಕಾಗಿ ಆ ಪ್ರದೇಶವನ್ನು ನಿನಗೆ ಕೊಡುತ್ತೇನೆ’ ಎಂದು ವಾಗ್ದಾನ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಆ ದಿವಸದಲ್ಲಿ ಮೋಶೆಯು ನನಗೆ, ‘ನೀನು ನನ್ನ ದೇವರಾದ ಯೆಹೋವ ದೇವರನ್ನು ಪೂರ್ಣಹೃದಯದಿಂದ ಹಿಂಬಾಲಿಸಿದ ಕಾರಣ, ನಿನ್ನ ಪಾದ ಮೆಟ್ಟಿದ ದೇಶವು ನಿನಗೂ, ನಿನ್ನ ಮಕ್ಕಳಿಗೂ ಎಂದೆಂದಿಗೂ ಬಾಧ್ಯತೆಯಾಗಿರುವುದು,’ ಎಂದು ಆಣೆ ಇಟ್ಟು ಹೇಳಿದನು. ಅಧ್ಯಾಯವನ್ನು ನೋಡಿ |