Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 15:10 - ಕನ್ನಡ ಸತ್ಯವೇದವು J.V. (BSI)

10 ಅಲ್ಲಿಂದ ಪಶ್ಚಿಮದಲ್ಲಿರುವ ಸೇಯೀರ್ ಬೆಟ್ಟದ ಕಡೆಗೆ ತಿರುಗಿಕೊಂಡು ಕೆಸಾಲೋನ್ ಅನ್ನಿಸಿಕೊಳ್ಳುವ ಯಾರೀಮ್ ಬೆಟ್ಟದ ಉತ್ತರ ಮಾರ್ಗವಾಗಿ ಇಳಿಯುತ್ತಾ ಬೇತ್‍ಷೆಮೆಷಿಗೂ ಅಲ್ಲಿಂದ ತಿಮ್ನಾ ಊರಿಗೂ ಬಂದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅಲ್ಲಿಂದ ಪಶ್ಚಿಮದಲ್ಲಿರುವ ಸೇಯೀರ್ ಬೆಟ್ಟದ ಕಡೆಗೆ ತಿರುಗಿಕೊಂಡು ಕೆಸಾಲೋನ್ ಎನ್ನಿಸಿಕೊಳ್ಳುವ ಯಾರೀಮ್ ಬೆಟ್ಟದ ಉತ್ತರಮಾರ್ಗವಾಗಿ ಇಳಿಯುತ್ತಾ ಬೇತ್ ಷೆಮೆಷಿಗೂ ಅಲ್ಲಿಂದ ತಿಮ್ನಾ ಊರಿಗೂ ಬಂದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಅಲ್ಲಿಂದ ಪಶ್ಚಿಮದಲ್ಲಿ ಇರುವ ಸೇಯಿರ್ ಬೆಟ್ಟದ ಕಡೆಗೆ ತಿರುಗಿಕೊಂಡು ಕೆಸಾಲೋನ್ ಎನಿಸಿಕೊಳ್ಳುವ ಯಾರೀಮ್ ಬೆಟ್ಟದ ಉತ್ತರಮಾರ್ಗವಾಗಿ ಇಳಿಯುತ್ತಾ ಬೇತ್ ಷೆಮೆಷಿಗೂ ಅಲ್ಲಿಂದ ತಿಮ್ನಾ ಊರಿಗೂ ಬಂದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಬಾಲಾದಲ್ಲಿ ಆ ಸೀಮೆಯು ಪಶ್ಚಿಮಕ್ಕೆ ತಿರುಗಿಕೊಂಡು ಸೇಯೀರ್ ಬೆಟ್ಟಪ್ರದೇಶಕ್ಕೆ ಹೋಗುತ್ತದೆ; ಅಲ್ಲಿಂದ ಅದು ಕೆಸಾಲೋನ್ ಎಂಬ ಯಾರೀಮ್ ಬೆಟ್ಟದ ಉತ್ತರ ಮಾರ್ಗವಾಗಿ ಇಳಿಯುತ್ತಾ ಬೇತ್‌ಷೆಮೆಷಿಗೂ ಅಲ್ಲಿಂದ ತಿಮ್ನಾ ಊರಿಗೂ ಹೋಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಬಾಲಾದಿಂದ ಪಶ್ಚಿಮಕ್ಕಿರುವ ಸೇಯೀರ್ ಬೆಟ್ಟವನ್ನು ಸುತ್ತಿ, ಅಲ್ಲಿಂದ ಕೆಸಾಲೋನಿನ ಯಾರೀಮ್ ಬೆಟ್ಟದ ಉತ್ತರಕ್ಕೂ ಅಲ್ಲಿಂದ ಬೇತ್ ಷೆಮೆಷ್ ಕಡೆಗೆ ಇಳಿದು ತಿಮ್ನಾಗೆ ಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 15:10
12 ತಿಳಿವುಗಳ ಹೋಲಿಕೆ  

ಸಂಸೋನನು ಗಟ್ಟಾ ಇಳಿದು ತಿಮ್ನಾ ಊರಿಗೆ ಹೋಗಿ ಅಲ್ಲಿನ ಫಿಲಿಷ್ಟಿಯರ ಹೆಣ್ಣುಗಳಲ್ಲಿ ಒಬ್ಬಳನ್ನು ನೋಡಿ


ಸಂಸೋನನು ತನ್ನ ತಂದೆತಾಯಿಗಳ ಸಹಿತವಾಗಿ ತಿಮ್ನಾ ಊರಿಗೆ ಹೊರಟು ಅಲ್ಲಿನ ದ್ರಾಕ್ಷೇತೋಟಗಳ ಬಳಿಗೆ ಬಂದಾಗ ಒಂದು ಪ್ರಾಯದ ಸಿಂಹವು ಗರ್ಜಿಸುತ್ತಾ ಅವನೆದುರಿಗೆ ಬಂದಿತು.


ಅಲ್ಲಿಂದ ಉತ್ತರದಿಕ್ಕಿನಲ್ಲಿರುವ ಎಕ್ರೋನ್ ಗುಡ್ಡಕ್ಕೆ ಹೋಗಿ ಶಿಕ್ಕೆರೋನಿಗೆ ತಿರುಗಿಕೊಂಡು ಬಾಲಾ ಗುಡ್ಡದ ಮೇಲೆ ಯಬ್ನೇಲಿಗೆ ಹೋಗಿ ಸಮುದ್ರತೀರದಲ್ಲಿ ಮುಗಿಯುವದು.


ಅದು ತಾನಾಗಿ ಸ್ವದೇಶದ ದಾರಿ ಹಿಡಿದು ಬೇತ್‍ಷೆಮೆಷಿನ ಕಡೆಗೆ ಹೋದರೆ ಈ ದೊಡ್ಡ ಕೇಡನ್ನು ಬರಮಾಡಿದವನು ಯೆಹೋವನೇ ಎಂದೂ ಆ ಮಾರ್ಗ ಹಿಡಿಯದಿದ್ದರೆ ಆತನ ಹಸ್ತವು ನಮ್ಮನ್ನು ಮುಟ್ಟಲಿಲ್ಲ, ಅದು ನಮ್ಮ ಅದೃಷ್ಟವೇ ಎಂದೂ ತಿಳಿದುಕೊಳ್ಳಿರಿ ಅಂದರು.


ದೇವರ ಮಂಜೂಷವನ್ನು ತರುವದಕ್ಕಾಗಿ ಅವರೆಲ್ಲರ ಸಹಿತ ಯೆಹೂದದೇಶದ ಬಾಳಾ ಎಂಬಲ್ಲಿಗೆ ಹೋದನು. ಆ ಮಂಜೂಷವು ದೇವನಾಮದಿಂದ ಅಂದರೆ ಕೆರೂಬಿಯರ ನಡುವೆ ಆಸೀನನಾಗಿರುವ ಸೇನಾಧೀಶ್ವರನಾದ ಯೆಹೋವನ ನಾಮದಿಂದ ಪ್ರಸಿದ್ಧವಾದದ್ದು.


ಅಮಚ್ಯನು ಇದನ್ನು ಲಕ್ಷಿಸಲಿಲ್ಲವಾದದರಿಂದ ಇಸ್ರಾಯೇಲ್ಯರ ಅರಸನಾದ ಯೋವಾಷನು ಯುದ್ಧಕ್ಕೆ ಹೊರಟನು; ಅವರು ಯೆಹೂದಪ್ರಾಂತದ ಬೇತ್ಷೆಮೆಷಿನಲ್ಲಿ ಒಬ್ಬರನ್ನೊಬ್ಬರು ಎದುರುಗೊಂಡರು.


ಫಿಲಿಷ್ಟಿಯರು ಯೆಹೂದದ ಇಳಕಲಿನ ಪ್ರದೇಶದ ಮತ್ತು ದಕ್ಷಿಣಪ್ರಾಂತದ ಪಟ್ಟಣಗಳ ಮೇಲೆ ಬಿದ್ದು ಬೇತ್ಷೆಮೆಷ್, ಅಯ್ಯಾಲೋನ್, ಗೆದೇರೋತ್ ಇವುಗಳನ್ನೂ ಸೋಕೋ, ತಿಮ್ನಾ, ಗಿಮ್ಜೋ ಇವುಗಳನ್ನೂ ಇವುಗಳಿಗೆ ಸೇರಿದ ಗ್ರಾಮಗಳನ್ನೂ ಸ್ವಾಧೀನಮಾಡಿಕೊಂಡು ಅವುಗಳಲ್ಲಿ ವಾಸವಾಗಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು