Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 15:12 - ಕನ್ನಡ ಸತ್ಯವೇದವು J.V. (BSI)

12 ಮಹಾಸಾಗರದ ತೀರವೇ ಪಶ್ಚಿಮ ಮೇರೆಯು. ಯೆಹೂದ ಗೋತ್ರಗಳ ದೇಶದ ಸುತ್ತಣ ಮೇರೆಗಳು ಇವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಮಹಾಸಾಗರದ ತೀರವೇ ಪಶ್ಚಿಮ ಮೇರೆಯು. ಯೆಹೂದಾ ಗೋತ್ರಗಳ ದೇಶದ ಸುತ್ತಣ ಮೇರೆಗಳು ಇವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಮಹಾಸಾಗರದ ತೀರವೇ ಪಶ್ಚಿಮ ಎಲ್ಲೆ, ಯೆಹೂದ ಗೋತ್ರಗಳ ನಾಡಿನ ಸುತ್ತಣ ಎಲ್ಲೆಗಳು ಇವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಮೆಡಿಟರೆನಿಯನ್ ಸಮುದ್ರತೀರವೇ ಯೆಹೂದ್ಯರ ಸ್ವಾಸ್ತ್ಯದ ಪಶ್ಚಿಮ ಸೀಮೆಯಾಗಿತ್ತು. ಹೀಗೆ ಯೆಹೂದ್ಯರ ಸ್ವಾಸ್ತ್ಯವು ಈ ನಾಲ್ಕು ಸೀಮೆಯ ಒಳಗಡೆ ಇತ್ತು. ಯೆಹೂದ್ಯರ ಗೋತ್ರಗಳು ಈ ಪ್ರದೇಶದಲ್ಲಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಅದು ಪಶ್ಚಿಮದ ಮೇರೆಯ ಮೆಡಿಟರೇನಿಯನ್ ಮಹಾಸಾಗರವಾಗಿದೆ. ಇದೇ ಯೆಹೂದ ಗೋತ್ರದವರಿಗೆ ಅವರ ಕುಟುಂಬಗಳ ಪ್ರಕಾರ ಉಂಟಾದ ಸುತ್ತಲಿರುವ ಮೇರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 15:12
7 ತಿಳಿವುಗಳ ಹೋಲಿಕೆ  

ಪಡುವಲಲ್ಲಿ [ತೆಂಕಣ] ಮೇರೆಯಿಂದ ಹಮಾತಿನ ದಾರಿಗೆ ಎದುರಿನ [ಕರಾವಳಿಯ] ತನಕ ದೊಡ್ಡ ಸಮುದ್ರವು ಎಲ್ಲೆಯಾಗಿರುವದು. ಇದು ಪಡುವಣ ಮೇರೆ.


ಅಷ್ಡೋದ್ ಸಂಸ್ಥಾನವೂ ಅದರ ಗ್ರಾಮನಗರಗಳೂ; ಗಾಜಾ ಸಂಸ್ಥಾನವೂ ಐಗುಪ್ತಹಳ್ಳದ ಉತ್ತರದಲ್ಲಿ ಮತ್ತು ಮಹಾಸಾಗರತೀರದಲ್ಲಿ ಇರುವ ಅದರ ಎಲ್ಲಾ ಗ್ರಾಮ ನಗರಗಳೂ;


ನೀವು ಹೆಜ್ಜೆಯಿಡುವ ಎಲ್ಲಾ ಸ್ಥಳಗಳೂ ನಿಮಗಾಗುವವು; ಅರಣ್ಯ ಮೊದಲುಗೊಂಡು ಲೆಬನೋನ್ ಪರ್ವತದವರೆಗೂ ಮತ್ತು ಯೂಫ್ರೇಟೀಸ್ ನದಿಯಿಂದ ಪಶ್ಚಿಮ ಸಮುದ್ರದವರೆಗೂ ನಿಮ್ಮ ಸೀಮೆ ವ್ಯಾಪಿಸುವದು.


ಅಲ್ಲಿಂದ ಉತ್ತರದಿಕ್ಕಿನಲ್ಲಿರುವ ಎಕ್ರೋನ್ ಗುಡ್ಡಕ್ಕೆ ಹೋಗಿ ಶಿಕ್ಕೆರೋನಿಗೆ ತಿರುಗಿಕೊಂಡು ಬಾಲಾ ಗುಡ್ಡದ ಮೇಲೆ ಯಬ್ನೇಲಿಗೆ ಹೋಗಿ ಸಮುದ್ರತೀರದಲ್ಲಿ ಮುಗಿಯುವದು.


ತರುವಾಯ ಅವರು ಏಳು ಪಾಲುಗಳನ್ನು ಮಾಡಿ ತಮ್ಮ ತಮ್ಮೊಳಗೆ ಹಂಚಿಕೊಳ್ಳಲಿ. ದಕ್ಷಿಣದಲ್ಲಿ ಯೆಹೂದಕುಲದವರಿಗೂ ಉತ್ತರದಲ್ಲಿ ಯೋಸೇಫನ ಕುಲದವರಿಗೂ ಸ್ವಾಸ್ತ್ಯವು ಸಿಕ್ಕಿರುತ್ತದೆ. ಅದು ಅವರಿಗೇ ಇರಲಿ.


ರೂಬೇನಿನ ಸರಹದ್ದಿನ ಪಕ್ಕದಲ್ಲಿ ಪೂರ್ವದಿಂದ ಪಶ್ಚಿಮದ ತನಕ ಯೆಹೂದಕ್ಕೆ ಒಂದು ಪಾಲು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು